ಬೆಳಗಾವಿ: ನಗರವನ್ನು ಮಾದಕ ವ್ಯಸನ ಮುಕ್ತವನ್ನಾಗಿ ಮಾಡಲು ಸಂಕಲ್ಪ ಮಾಡಿದ್ದು, ಈ ನಿಟ್ಟಿನಲ್ಲಿ ಮಾದಕ ವಸ್ತುಗಳ ಮಾರಾಟಗಾರರು ಮತ್ತು ವ್ಯಸನಿಗಳ ವಿರುದ್ಧವೂ ನಿರ್ದಾಕ್ಷಿಣ್ಯವಾಗಿ ಕೇಸ್ ದಾಖಲಿಸುತ್ತಿದ್ದೇವೆ ಎಂದು ಪೊಲೀಸ್ ಆಯುಕ್ತ ಭೂಷಣ ಬೋರಸೆ ಹೇಳಿದರು. ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವರ್ಷ ಎನ್‌ಡಿಪಿಎಸ್ ಕಾಯ್ದೆಯಡಿ 200ಕ್ಕೂ ಹೆಚ್ಚು ಕೇಸ್ ಮಾಡಿದ್ದೇವೆ. ಕಳೆದ ವರ್ಷ ಕೇವಲ 50 ಮಾತ್ರ ಇದ್ದವು. ಈ ಕೇಸ್‌ಗಳ ಪೈಕಿ 48 ಪ್ರಕರಣ ಮಾರಾಟಗಾರರ ವಿರುದ್ಧ, …
Read More »ಫೈಲ್‌ಗಳನ್ನು ಹೊಸ ಅಧಿಕಾರಿಗಳಿಗೆ ಕೊಡ್ಬೇಡಿ – ವರ್ಗಾವಣೆಯಾದ್ರೂ ಅಧಿಕಾರಿಗಳಿಗೆ ವರ್ತಿಕಾ ಕರೆ
ಬಳ್ಳಾರಿ: ಬ್ಯಾನರ್ ಗಲಭೆ ಬಳಿಕ ವರ್ಗಾವಣೆ ಆಗಿದ್ದ ಡಿಐಜಿ ಆಗಿದ್ದ ಐಪಿಎಸ್ ಅಧಿಕಾರಿ ವರ್ತಿಕಾ ಕಟಿಯಾರ್ ಹಂತದ ಅಧಿಕಾರಿಗಳಿಗೆ ಕರೆ ಮಾಡಿ ಯಾವುದೇ ಫೈಲ್‌ಗಳನ್ನು ಈಗಿನ ಅಧಿಕಾರಿಗಳಿಗೆ ನೀಡದಂತೆ ಬೆದರಿಕೆ ಹಾಕಿದ್ದಾರೆ. ವರ್ತಿಕಾ ಅವರನ್ನು ಸರ್ಕಾರ ವರ್ಗಾವಣೆ ಮಾಡಿ ಅವರ ಜಾಗಕ್ಕೆ ಐಪಿಎಸ್ ಹರ್ಷ ಅವರನ್ನ ನೇಮಕ ಮಾಡಿತ್ತು. ವರ್ಗಾವಣೆ ಬಳಿಕ ಕೇಂದ್ರೀಯ ಆಡಳಿತಾತ್ಮಕ ನ್ಯಾಯಮಂಡಳಿ ಮೊರೆ ಹೋಗಿರುವ ಕಟಿಯಾರ್ ಅವರು ಮತ್ತೇ ಬಳ್ಳಾರಿಗೆ ಬರುವ ತವಕದಲ್ಲಿದ್ದಾರೆ ಈಗ ಬಳ್ಳಾರಿಯ …
Read More »ʻಕೈʼ ಮುಖಂಡನ ಪುತ್ರರಿಂದ ಪೊಲೀಸರ ಮೇಲೆ ಹಲ್ಲೆ ಕೇಸ್ – ಕಾನೂನು ಎಲ್ಲರಿಗೂ ಒಂದೇ, ಶಿಕ್ಷೆ ಆಗುತ್ತೆ: ನಾಗಲಕ್ಷ್ಮೀ ಚೌಧರಿ
ದಾವಣಗೆರೆ: ಚಿಗಟೀರಿ ಜಿಲ್ಲಾಸ್ಪತ್ರೆ ಬಳಿ ನಡೆದಿದ್ದ ಪೊಲೀಸರ ಮೇಲಿನ ಹಲ್ಲೆ ಪ್ರಕರಣದಲ್ಲಿ ಆರೋಪಿಗಳ ವಿರುದ್ಧ ತನಿಖೆ ನಡೆಯುತ್ತಿದೆ. ಕಾನೂನಿನ ಮುಂದೆ ಯಾರು ದೊಡ್ಡವರಲ್ಲ, ಯಾವ ಪಕ್ಷದವರು ದೊಡ್ಡವರಲ್ಲ. ಶಿಕ್ಷೆ ಆಗುತ್ತದೆ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೇಳಿದರು. ದಾವಣಗೆರೆಯಲ್ಲಿ ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಈ ವೇಳೆ, ಪೊಲೀಸರ ಮೇಲೆ ನಡೆದಿದ್ದ ಹಲ್ಲೆ ಪ್ರಕರಣದ ವಿಚಾರವಾಗಿ ಪ್ರತಿಕ್ರಿಯಿಸಿ, ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ನಾಯಕರು ಎಂಬ ಪ್ರಶ್ನೆ …
Read More »ಬೆಂಗಳೂರು ಮೆಟ್ರೋ ಪ್ರಯಾಣಿಕರಿಗೆ ಬಿಗ್ ರಿಲೀಫ್ – ಮೆಟ್ರೋ ದರ ಏರಿಕೆಗೆ ತಾತ್ಕಾಲಿಕ ತಡೆ
ಬೆಂಗಳೂರು: ‘ನಮ್ಮ ಮೆಟ್ರೋ’ ಪ್ರಯಾಣಿಕರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಮೆಟ್ರೋ ದರ ಏರಿಕೆಗೆ ತಾತ್ಕಾಲಿಕ ತಡೆಬಿದ್ದಿದೆ. ನಾಳೆಯಿಂದ ಮೆಟ್ರೋ ಹೊಸ ದರ ಜಾರಿಗೆ ಬರಲ್ಲ. ದರ ಏರಿಕೆ ಇಲ್ಲ ಎಂದು ಬಿಎಂಆರ್‌ಸಿಎಲ್ ಸ್ಪಷ್ಟಪಡಿಸಿದೆ. ಕೇಂದ್ರ ಸರ್ಕಾರ ಬೋರ್ಡ್ನಿಂದ ಬಿಎಂಆರ್‌ಸಿಎಲ್‌ಗೆ ಇ-ಮೇಲ್ ಸಂದೇಶ ಬಂದಿದೆ. ಮೆಟ್ರೋ ದರ ಏರಿಕೆಗೆ ತಾತ್ಕಾಲಿಕ ತಡೆ ಹೇರಲು ಇ-ಮೇಲ್ ಸಂದೇಶದ ಮೂಲಕ ತಿಳಿಸಲಾಗಿದೆ. ಬೋರ್ಡ್ ಮೀಟಿಂಗ್‌ನಲ್ಲಿ ನಿರ್ಧಾರ ಮಾಡಲು ಸೂಚನೆ ನೀಡಲಾಗಿದೆ. ಹೀಗಾಗಿ, ತಾತ್ಕಾಲಿಕವಾಗಿ ದರ …
Read More »ಸ್ಪಿರಿಟ್ ಕುಡಿದು ಇಬ್ಬರು ಸಾವು, ಓರ್ವನ ಸ್ಥಿತಿ ಚಿಂತಾಜನಕ – ಇಬ್ಬರು ವಶಕ್ಕೆ
ಕೊಪ್ಪಳ: ತಾಲೂಕಿನ ಕೂಕನಪಳ್ಳಿ ಗ್ರಾಮದಲ್ಲಿ ಸ್ಪಿರಿಟ್ ಕುಡಿದು ಇಬ್ಬರು ಯುವಕರು ಮೃತಪಟ್ಟಿದ್ದಾರೆ. ಮತ್ತೊಬ್ಬ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾನೆ. ಕೂಕನಪಳ್ಳಿ ಗ್ರಾಮದ ಅಮರಯ್ಯ ಹಿರೇಮಠ (35) ಹಾಗೂ ರಮೇಶ ಹೊಸಹಳ್ಳಿ (25) ಮೃತಪಟ್ಟಿದ್ದು, ಶರಣಪ್ಪ ಹಂಚಿನಾಳ ಎಂಬವನ ಸ್ಥಿತಿ ಚಿಂತಾಜನಕವಾಗಿದೆ. ಮೃತ ಅಮರಯ್ಯ ಜೆಸ್ಕಾಂ ಹೊರಗುತ್ತಿಗೆ ನೌಕರನಾಗಿ ಕೆಲಸ ಮಾಡುತ್ತಿದ್ದ. ರಮೇಶ ಹೊಸಹಳ್ಳಿ ತಂದೆ – ತಾಯಿಗೆ ಒಬ್ಬನೇ ಮಗನಾಗಿದ್ದ. ಮಕ್ಕಳನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. …
Read More »ವಿಜಯಪುರದ ಮಂಗಳೂರಿನಲ್ಲಿ ಖಾಸಗಿ ವಿಮಾನ ಪತನ
ವಿಜಯಪುರ: ಬಬಲೇಶ್ವರ ತಾಲೂಕಿನ ಮಂಗಳೂರು ಗ್ರಾಮದಲ್ಲಿ ಜೆಟ್ ವಿಮಾನವೊಂದು ಇಂದು ಮಧ್ಯಾಹ್ನ 3 ಗಂಟೆಯ ವೇಳೆಗೆ ಪತನವಾಗಿದೆ. ಕಲಬುರಗಿಯಿಂದ ಬೆಳಗಾವಿಗೆ ತೆರಳುತ್ತಿದ್ದ ಇಂಧನ ಖಾಲಿಯಾದ ಕಾರಣ ವಿಮಾನ ಪತನಗೊಂಡಿದೆ ಎಂಬ ಪ್ರಾಥಮಿಕ ಮಾಹಿಲತಿ ಲಭ್ಯವಾಗಿದೆ. ರೆಡ್ ಬರ್ಡ್ ಕಂಪನಿಯ ಖಾಸಗಿ ಕಂಪನಿಯ ವಿಮಾನ ಪತನಗೊಂಡು ರೈತರ ಜಮೀನಿನ ಮೇಲೆ ಬಿದ್ದಿದೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ, ಜೆಟ್‌ನಲ್ಲಿದ್ದ ಇಬ್ಬರು ತೀವ್ರ ಗಾಯಗೊಂಡಿದ್ದು ಜಿಲ್ಲಾ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿದೆ. ಸ್ಥಳಕ್ಕೆ ದೌಡಾಯಿಸಿರುವ ಬಬಲೇಶ್ವರ …
Read More »ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಕೋಟಿ ಕೋಟಿ ಮೌಲ್ಯದ ಗಾಂಜಾ ವಶ
ಚಿಕ್ಕಬಳ್ಳಾಪುರ: ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಕೋಟಿ ಕೋಟಿ ಮೌಲ್ಯದ ಗಾಂಜಾವನ್ನ ವಶಪಡಿಸಿಕೊಂಡಿದ್ದಾರೆ. ಮಲೇಶಿಯಾದಿಂದ ಬೆಂಗಳೂರಿಗೆ ಬಂದ ಪ್ರಯಾಣಿಕನೊರ್ವನ ಬಳಿ ಒಂದು ಕೋಟಿ 91 ಲಕ್ಷ ರೂ. ಮೌಲ್ಯದ 5.48 ಕೆ.ಜಿ ಗಾಂಜಾ ವಶಕ್ಕೆ ಪಡೆದಿದ್ದಾರೆ. ಇನ್ನೂ ಮತ್ತೊಂದು ಪ್ರಕರಣದಲ್ಲಿ ಪುಕೇಟ್ನಿಂದ ಬಂದ ಇಬ್ಬರು ಪ್ರಯಾಣಿಕರನ್ನು ಪರಿಶೀಲನೆಗೆ ಒಳಪಡಿಸಿದಾಗ ಒಂದು ಕೋಟಿ ಆರು ಲಕ್ಷ ರೂ. ಮೌಲ್ಯದ 3.03 ಕೆಜಿ ಹೈಡ್ರೋಫೋನಿಕ್ ಗಾಂಜಾ ಪತ್ತೆಯಾಗಿದೆ. …
Read More »ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್ – ಮೆಟ್ರೋ ನಿಲ್ದಾಣಗಳ ಹತ್ತಿರದಲ್ಲೇ ಬಸ್ ನಿಲ್ದಾಣ ಓಪನ್
ಬೆಂಗಳೂರು: ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್ ಸಿಕ್ಕಿದೆ. ಮೆಟ್ರೋ ನಿಲ್ದಾಣಗಳ ಹತ್ತಿರದಲ್ಲೇ ಬಸ್ ನಿಲ್ದಾಣಗಳನ್ನು ಒದಗಿಸಲಾಗಿದೆ. ಸಂಚಾರ ಪೊಲೀಸ್ ಇಲಾಖೆ ಸಹಯೋಗದಿಂದ ಬಿಎಂಆರ್‌ಸಿಎಲ್ ನಿಲ್ದಾಣಗಳ ಓಪನ್‌ಗೆ ಸ್ಥಳ ಪರಿಶೀಲನೆ ನಡೆಸಿದೆ. ನೇರಳೆ ಮಾರ್ಗದಲ್ಲಿ 2, ಹಸಿರು ಮಾರ್ಗದಲ್ಲಿ 8 ಮೆಟ್ರೋ ನಿಲ್ದಾಣಗಳ ಬಳಿ ಓಪನ್ ಆಗಲಿವೆ. ಈ ಬಗ್ಗೆ ಬಿಎಂಆರ್‌ಸಿಎಲ್‌ನಿಂದ ಮಾಧ್ಯಮ ಪ್ರಕಟಣೆ ಜಾರಿ ಮಾಡಿದೆ. ಹೊಸದಾಗಿ ಒದಗಿಸಲಾದ ಬಸ್ ನಿಲ್ದಾಣ ಯಾವ್ಯಾವು? ನೇರಳೆ ಮಾರ್ಗ * ಟ್ರಿನಿಟಿ: ಎಂ.ಜಿ.ರಸ್ತೆಯಿಂದ ಹಲಸೂರು …
Read More »ಜನರಿಗೆ, ಶಾಸಕರಿಗೆ ಎಲ್ಲರಿಗೂ ನಾನು ಸಿಎಂ ಆಗಬೇಕು ಅಂತ ಇದೆ: ಡಿಕೆಶಿ
ಮಂಗಳೂರು: ಜನರಿಗೆ, ಶಾಸಕರಿಗೆ ಎಲ್ಲರಿಗೂ ನಾನು ಸಿಎಂ ಆಗಬೇಕು ಅಂತ ಇದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷ ಏನು ಹೇಳುತ್ತೋ ಅದೇ ಆಗೋದು, ಆಗುತ್ತೆ. ಅವರವರ ಅಭಿಮಾನಿಗಳು ಏನ್ ಆಸೆ ಪಡ್ತಾರೋ ಅದರಲ್ಲಿ ತಪ್ಪಿಲ್ಲ ಎಂದು ತಿಳಿಸಿದರು. ಬಜೆಟ್ ಬಳಿಕ ಸಿಎಂ ಆಗ್ತೀರಾ ಅನ್ನೋ ಪ್ರಶ್ನೆಗೆ ಟೈಮ್ ವಿಲ್ ಆನ್ಸರ್ ಎಂದು ಪ್ರತಿಕ್ರಿಯಿಸಿದರು. ಬೆಂಗಳೂರು ಮೆಟ್ರೋ ದರ ಪರಿಷ್ಕರಣೆ ವಿಚಾರವಾಗಿ ಮಾತನಾಡಿ, ಈ ವಿಚಾರದಲ್ಲಿ …
Read More »ಮಹಾ ಶಿವರಾತ್ರಿ | ಮಲೆ ಮಹದೇಶ್ವರ ಬೆಟ್ಟಕ್ಕೆ ಭಕ್ತರ ಪಾದಯಾತ್ರೆ – ಅರಣ್ಯ, ಪೊಲೀಸ್ ಇಲಾಖೆ ಕಣ್ಗಾವಲು
ಚಾಮರಾಜನಗರ: ಮಹಾ ಶಿವರಾತ್ರಿ ಹಿನ್ನೆಲೆ ಏಳು ಮಲೆಯ ಒಡೆಯ ಮಲೆ ಮಾದಪ್ಪನ ದರ್ಶನಕ್ಕೆ ಕಾಲ್ನಡಿಗೆಯಲ್ಲಿ ಲಕ್ಷಾಂತರ ಭಕ್ತರ ದಂಡೇ ಹರಿದು ಬರಲಿದೆ. ಭಕ್ತರ ಸುರಕ್ಷತೆಗೆ ಜಿಲ್ಲಾಡಳಿತ, ಪೊಲೀಸ್ ಇಲಾಖೆ ಹಾಗೂ ಅರಣ್ಯ ಇಲಾಖೆ ಸಜ್ಜಾಗಿದೆ. ಕಾರಣ ಮಲೆಹದೇಶ್ವರ ಬೆಟ್ಟದ ಸುತ್ತಮುತ್ತ ಚಿರತೆ ಆತಂಕ ಮನೆ ಮಾಡಿದೆ. ಚಿರತೆ ಆತಂಕ ಮಧ್ಯೆ ಮಲೆಮಹದೇಶ್ವರ ಬೆಟ್ಟಕ್ಕೆ ಭಕ್ತರು ಪಾದಯಾತ್ರೆ ಕೈಗೊಂಡಿದ್ದಾರೆ. ಇಂದಿನಿಂದ 20ರವರೆಗೆ ನಡೆಯಲಿರುವ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ …
Read More »
Laxmi News 24×7