Breaking News

ಮುಂಗಾರು ಮೊದಲೇ ತುಂಬಿದ ತುಂಗೆ

ಶಿವಮೊಗ್ಗ: ಮುಂಗಾರುಪೂರ್ವ ಮಳೆಗೆ ತುಂಗಾ ಅಣೆಕಟ್ಟು ಭರ್ತಿಯಾಗಿದ್ದು, 5 ಕ್ರಸ್ಟ್ ಗೇಟುಗಳ ಮೂಲಕ ನದಿಗೆ 2 ಸಾವಿರ ಕ್ಯೂಸೆಕ್ ನೀರು ಬಿಡಲಾಗಿದೆ. ಇದು ರಾಜ್ಯದಲ್ಲಿಯೇ ಪ್ರಥಮವಾಗಿ ತುಂಬುವ ಅಣೆಕಟ್ಟಾಗಿದೆ. ಅಣೆಕಟ್ಟೆಗೆ 7,500 ಕ್ಯೂಸೆಕ್ ನೀರು ಒಳ ಹರಿವು ಇರುವ ಕಾರಣ ಐದು ಕ್ರಸ್ಟ್ ಗೇಟ್​ಗಳ ಮೂಲಕ 2 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗುತ್ತಿದೆ. ಇನ್ನೂ ಒಂದು ವಾರದಲ್ಲಿ ಮುಂಗಾರು ಮಳೆ ಪ್ರಾರಂಭವಾಗಲಿದೆ. ಆಗ ಡ್ಯಾಂನಿಂದ ಇನ್ನಷ್ಟು ನೀರು ನದಿಗೆ ಬಿಡುವ …

Read More »

ಶಾಲೆ ಪುನಾರಂಭದಲ್ಲೇಕೊರೊನಾ ಕಂಟಕ: ಆರೋಗ್ಯ ಇಲಾಖೆ ಅಲರ್ಟ್

ಬೆಂಗಳೂರು, ಮೇ 25: ರಾಜ್ಯದಲ್ಲಿ ಕೊರೊನಾ (Karnataka Covid) ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಬಹುಅಂಗಾಗ ವೈಫಲ್ಯದಿಂದ ಬಳಲುತ್ತಿದ್ದ 84 ವರ್ಷದ ಕೊರೊನಾ (Coronavirus) ಸೋಂಕಿತ ವೃದ್ಧರೊಬ್ಬರು ಶನಿವಾರ (ಮೇ.24) ಬೆಂಗಳೂರಿನಲ್ಲಿ ಮೃತಪಟ್ಟಿದ್ದರು. ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ. ಬೆಂಗಳೂರಿನ ಮಲ್ಲೇಶ್ವರಂ ಮತ್ತು ರಾಜಾಜಿನಗರದಲ್ಲಿ ಮತ್ತಿಬ್ಬರಿಗೆ ಕೊರೊನಾ ಸೋಂಕು ತಗುಲಿದೆ. ಮುಂದಿನ ವಾರ ಮೇ.29ರಿಂದ ರಾಜ್ಯದಲ್ಲಿ ಶಾಲಾ-ಕಾಲೇಜುಗಳು ಪುನಾರಂಭವಾಗುತ್ತವೆ. ಮಕ್ಕಳನ್ನು ಶಾಲೆಗೆ ಕಳುಹಿಸುವುದು ಹೇಗೆ ಅಂತ ಪೋಷಕರು ಆತಂಕಗೊಂಡಿದ್ದಾರೆ. ಮಕ್ಕಳಿಗೆ ಮಾಸ್ಕ್ …

Read More »

ಪ್ರೀತಿಸಿ ಮದುವೆಯಾಗಿ ಹಣ, ಚಿನ್ನಾಭರಣ ಪಡೆದು ಪರಾರಿ: ಪೊಲೀಸ್​ ಠಾಣೆ ಮೆಟ್ಟಿಲೇರಿದ ಗರ್ಭಿಣಿ

ಬೆಂಗಳೂರು: ಪ್ರೀತಿಸಿ ಮದುವೆಯಾದವನು ಸಂಸಾರಕ್ಕೆ ಹೊಸ ಮನೆ ಮಾಡುವುದಾಗಿ ಹಣ ಚಿನ್ನ ಪಡೆದುಕೊಂಡು ಪರಾರಿಯಾದ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಹೇಮಂತ್​​ ಎಂಬಾತನ ವಿರುದ್ಧ ಆರೋಪ ಕೇಳಿ ಬಂದಿದ್ದು, ಮೂರೇ ತಿಂಗಳಿಗೆ ತನ್ನನ್ನು ತೊರೆದು ಪರಾರಿಯಾದ ಪತಿಗಾಗಿ ಸಂತ್ರಸ್ತ ಮಹಿಳೆ ಬೆಂಗಳೂರು ಪಶ್ಚಿಮ ವಿಭಾಗದ ಮಹಿಳಾ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾಳೆ. ಕುಣಿಗಲ್​ ಮೂಲದ ಸಂತ್ರಸ್ತೆ, ಬೆಂಗಳೂರಿನಲ್ಲಿ ಮಾಲ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದಾಗ ಹೇಮಂತ್‌ನ ಪರಿಚಯವಾಗುತ್ತದೆ. ಇಬ್ಬರು ಪರಸ್ಪರ ಪ್ರೀತಿಸಿ ಕಳೆದ ಫೆಬ್ರವರಿಯಲ್ಲಿ ದೇವಸ್ಥಾನವೊಂದರಲ್ಲಿ ಮದುವೆಯಾಗಿದ್ದರು. …

Read More »

ಪ್ರೀತಿಸದಿದ್ದರೆ ಮುಖಕ್ಕೆ ಆ್ಯಸಿಡ್ ಎರಚುವ ಬೆದರಿಕೆ ಆರೋಪ: ಹುಬ್ಬಳ್ಳಿಯಲ್ಲಿ ಪ್ರಕರಣ ದಾಖಲು

ಹುಬ್ಬಳ್ಳಿ: ನಗರದ ಕಾಲೇಜೊಂದರಲ್ಲಿ ಡಿಪ್ಲೋಮಾ ಓದುತ್ತಿದ್ದ ವಿದ್ಯಾರ್ಥಿನಿಗೆ ಯುವಕನೊಬ್ಬ ಪ್ರೀತಿಸದಿದ್ದರೆ ಮುಖಕ್ಕೆ ಆ್ಯಸಿಡ್​ ಎರಚುವುದಾಗಿ ಬೆದರಿಸಿ, ಜೀವ ಬೆದರಿಕೆ ಹಾಕಿದ ಪ್ರಕರಣ ವಿದ್ಯಾನಗರ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದೆ. ವಿನೋದರಾಜ್‌ ಎಂಬಾತನ ವಿರುದ್ಧ ವಿದ್ಯಾರ್ಥಿನಿಯ ಪಾಲಕರು ದೂರು ನೀಡಿದ್ದಾರೆ. ಮೂರು–ನಾಲ್ಕು ವರ್ಷಗಳಿಂದ ವಿನೋದರಾಜ ಜೊತೆ ವಿದ್ಯಾರ್ಥಿನಿಗೆ ಸ್ನೇಹವಿತ್ತು. ಕೆಲ ತಿಂಗಳಿನಿಂದ ಅವನ ವರ್ತನೆಯಲ್ಲಿ ಬದಲಾವಣೆ ಕಂಡು ಬಂದ ಕಾರಣ, ಅವನ ಮೊಬೈಲ್​ ನಂಬರ್​ನ್ನು ಬ್ಲಾಕ್​​ ಮಾಡಿದ್ದಳು. ಇದರಿಂದ ಕೋಪಗೊಂಡ ವಿನೋದರಾಜ್​​ “ನಿನ್ನನ್ನು ಪ್ರೀತಿಸುತ್ತಿದ್ದೇನೆ. …

Read More »

ಮಂಗಳೂರಿನಲ್ಲಿ ಭಾರಿ ಮಳೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತವಾಗಿದೆ. ಮಂಗಳೂರು ನಗರ ಸೇರಿದಂತೆ ಕರಾವಳಿ ಪ್ರದೇಶಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ (IMD) ರೆಡ್ ಅಲರ್ಟ್ ಘೋಷಿಸಿದೆ. ಮಂಗಳೂರಿನ ಪಂಪ್​ವೆಲ್ ಸೇರಿ ಹಲವು ಕಡೆಗಳಲ್ಲಿ ರಸ್ತೆಗಳು ಜಲಾವೃತಗೊಂಡಿವೆ. ಕೆಲವೆಡೆ ಮರಗಳು ಧರಾಶಾಹಿಯಾಗಿದ್ದು, ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ. ಮೀನುಗಾರರಿಗೆ ಎಚ್ಚರಿಕೆ: ಭಾರತೀಯ ಹವಾಮಾನ ಇಲಾಖೆಯ ಪ್ರಕಾರ, ಮೇ 26ರವರೆಗೆ ದಕ್ಷಿಣ ಕನ್ನಡ, ಉಡುಪಿಯಲ್ಲಿ ಗುಡುಗು-ಮಿಂಚು ಸಹಿತ …

Read More »

ಮಹಾರಾಷ್ಟ್ರದಲ್ಲಿ ಎಂಬಿಬಿಎಸ್ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ…

ಬೆಳಗಾವಿ :ಮಹಾರಾಷ್ಟ್ರದಲ್ಲಿ ಎಂಬಿಬಿಎಸ್ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ….. ಮೂರು ಜ‌ನ ಆರೋಪಿಗಳನ್ನು ಬಂಧಿಸಿದ ಸಾಂಗ್ಲಿ ಪೊಲೀಸರು…… ಮಹಾರಾಷ್ಟ್ರದಲ್ಲಿ ಎಂಬಿಬಿಎಸ್ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರಗೈದ ನೀಚರು ಕರ್ನಾಟಕ ಮೂಲದ ಎಂಬಿಬಿಎಸ್ 3ನೇ ವರ್ಷದ ವಿದ್ಯಾರ್ಥಿನಿ ಮೂವರು ಆರೋಪಿಗಳನ್ನು ಬಂಧಿಸಿದ ಸಾಂಗ್ಲಿ ಪೊಲೀಸರು ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ್ದು ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಕರ್ನಾಟಕ ಮೂಲದ ಎಂಬಿಬಿಎಸ್ ಮೂರನೇ ವರ್ಷದ ವಿದ್ಯಾರ್ಥಿನಿ ಮೇ 18ರಂದು …

Read More »

ನಾಡ ಪಿಸ್ತೂಲ್ ಮಾರಾಟಕ್ಕೆ ಯತ್ನಿಸುತ್ತಿದ್ದ ರೌಡಿಶೀಟರ್​ ಅರೆಸ್ಟ್​

ಬೆಂಗಳೂರು, ಮೇ 24: ಬೆಂಗಳೂರಿನಲ್ಲಿ (Bengaluru) ನಾಡ ಪಿಸ್ತೂಲ್ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು (CCB Police) ಬಂಧಿಸಿದ್ದಾರೆ. ರೌಡಿಶೀಟರ್ ಸಮೀರ್​ ​ಬಂಧಿತ. ಬಂಧಿತ ಸಮೀರ್​ ಕೆ.ಜಿ.ಹಳ್ಳಿ ಪೊಲೀಸ್​ ಠಾಣಾ ವ್ಯಾಪ್ತಿಯ ರೌಡಿಶೀಟರ್ ಆಗಿದ್ದು, ದೆಹಲಿಯಲ್ಲಿ ಕಡಿಮೆ ಬೆಲೆಗೆ ನಾಡ ಪಿಸ್ತೂಲ್ ಖರೀದಿಸುತ್ತಿದ್ದನು. ನಂತರ, ಬೆಂಗಳೂರಿನಲ್ಲಿ ಹೆಚ್ಚು ಹಣಕ್ಕೆ ಮಾರಾಟ ಮಾಡುತ್ತಿದ್ದನು. ಈ ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಸಿಸಿಬಿ ಪೊಲೀಸರು ರೌಡಿಶೀಟರ್ ಸಮೀರ್​ನನ್ನು ಬಂಧಿಸಿ, ಎರಡು ನಾಡಪಿಸ್ತೂಲ್​ಗಳನ್ನು ವಶಕ್ಕೆ …

Read More »

ವಾಯುರೂಪದಲ್ಲಿ ಮತ್ತೆ ಬಾಧೆ! ಮೇಘಸ್ಫೋಟದ ಬಗ್ಗೆ ಕೋಡಿಮಠ ಸ್ವಾಮೀಜಿ ಭವಿಷ್ಯ

ಬೆಳಗಾವಿ: ಮತ್ತೆ ವಾಯುರೂಪದಲ್ಲಿ ಬಾಧೆ ಅಪ್ಪಳಿಸಲಿದೆ. ಮೇಘಸ್ಫೋಟವೂ ಸಂಭವಿಸಿ, ಸಾವು-ನೋವು ಹೆಚ್ಚಾಗಲಿದೆ. ‘ಅರಸನ ಅರಮನೆಗೆ ಕಾರ್ಮೋಡ ಕವಿದಿದೆ’ ಎನ್ನುವ ಮೂಲಕ‌ ಅನೇಕ ರಾಜಕೀಯ ಮುಖಂಡರು ಸಾವನ್ನಪ್ಪುತ್ತಾರೆ ಎಂದು ಕೋಡಿಮಠದ ಡಾ. ಶಿವಯೋಗಿ ಶಿವಾನಂದ ಸ್ವಾಮೀಜಿ ಮತ್ತೆ ಭವಿಷ್ಯ ನುಡಿದಿದ್ದಾರೆ. ನಗರದಲ್ಲಿಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಐದು ವರ್ಷ ಕೋವಿಡ್ ಮಹಾಮಾರಿ ಬೇರೆ ಬೇರೆ ರೂಪದಲ್ಲಿ ಇರಲಿದೆ. ಜನರು ಹುಷಾರಾಗಿ ಇರುವುದು ಒಳ್ಳೆಯದು. ಉಸಿರಾಟಕ್ಕೆ ತೊಂದರೆಯಾಗಿ ಸಾವು ಬರುವ ಸಾಧ್ಯತೆಗಳಿವೆ ಎಂದರು. …

Read More »

ಮೊದಲ ಹಂತದ ಸುರಂಗ ಮಾರ್ಗಕ್ಕೆ ಶೀಘ್ರದಲ್ಲೇ ಟೆಂಡರ್: ಡಿಸಿಎಂ

ಬೆಂಗಳೂರು: ಸಚಿವ ಸಂಪುಟ ಸಭೆಯಲ್ಲಿ ಬೆಂಗಳೂರಿನ ಎರಡು ಹಂತದ ಸುರಂಗ ರಸ್ತೆ ನಿರ್ಮಾಣಕ್ಕೆ ಅನುಮೋದನೆ ದೊರೆತಿದ್ದು, ಮೊದಲ ಹಂತದ ಯೋಜನೆಗೆ ಶೀಘ್ರವೇ ಟೆಂಡರ್ ಕರೆಯಲಾಗುವುದು ಎಂದು ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ತಿಳಿಸಿದರು. ಬೆಂಗಳೂರಲ್ಲಿ ಸುರಂಗ ರಸ್ತೆ ನಿರ್ಮಾಣ ಹಾಗೂ ಮಂಡ್ಯದ ಕೆಆರ್​ಎಸ್​ನಲ್ಲಿ ಕಾವೇರಿ ಆರತಿ ನಡೆಸುವ ಸಂಬಂಧ ಡಿಸಿಎಂ ಡಿ ಕೆ ಶಿವಕುಮಾರ್ ಅವರು ವಿಧಾನಸೌಧದಲ್ಲಿ ಸಭೆ ನಡೆಸಿದ ನಂತರ ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಅವರು, ಬೆಂಗಳೂರಿನ ಸುರಂಗ ರಸ್ತೆಯ …

Read More »

ಮೂರು ವರ್ಷದ ಬಾಲಕನ ಕೊಲೆ, ಮಲತಂದೆ ಸೇರಿ ನಾಲ್ವರು ವಶಕ್ಕೆ

ಬೆಳಗಾವಿ: ಮಲತಂದೆ ಮತ್ತು ಆತನ ಸ್ನೇಹಿತರು ಸೇರಿ ಮೂರು ವರ್ಷದ ಬಾಲಕನ್ನು ಅಮಾನುಷವಾಗಿ ಹತ್ಯೆ ಮಾಡಿರುವ ಘಟನೆ ಸವದತ್ತಿ ತಾಲೂಕಿನ ಹಾರೂಗೊಪ್ಪ ಗ್ರಾಮದ ಬಳಿ ನಿನ್ನೆ ರಾತ್ರಿ ನಡೆದಿದೆ. ಬಿಹಾರ ಮೂಲದ ಕಾರ್ತಿಕ್​ ಮುಖೇಶ್​ ಮಾಂಜಿ(3) ಕೊಲೆಯಾದ ಬಾಲಕ. ಆತನ‌ ಮಲತಂದೆ ಮಹೇಶ್ವರ ಮಾಂಜಿ ಕೊಲೆ ಮಾಡಿದ ಆರೋಪಿ. ಘಟನಾ ಸ್ಥಳಕ್ಕೆ ಡಿವೈಎಸ್ಪಿ ಡಾ.ವೀರಯ್ಯ ಹಿರೇಮಠ, ಮುರಗೋಡ ಸಿಪಿಐ ಸೇರಿ ಹಿರಿಯ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲಿಸಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ …

Read More »