ಚಿಕ್ಕೋಡಿ: ತಾಲ್ಲೂಕಿನ ಉಮರಾಣಿ ಹೊರವಲಯದಲ್ಲಿರುವ ರಾಮಲಿಂಗ ದೇವಸ್ಥಾನ ಪೌರಾಣಿಕ ಹಾಗೂ ಐತಿಹಾಸಿಕ ಮಹತ್ವ ಹೊಂದಿದೆ. ಇಡೀ ಜಿಲ್ಲೆಯಲ್ಲಿ ಭೀಕರ ಬರದಿಂದ ಜಲಕ್ಷಾಮ ಉಂಟಾಗಿದೆ. ನದಿ, ಹಳ್ಳ, ಕೊಳ್ಳಗಳು ಬತ್ತಿವೆ. ಆದರೆ, ಇಲ್ಲಿನ ರಾಮಲಿಂಗೇಶ್ವರ 20 ಅಡಿ ಬಾವಿಯಲ್ಲಿ ಮಾತ್ರ ನಿರಂತರ ಜಲ ಪೂರಣವಾಗಿದೆ. ಗ್ರಾಮದಿಂದ 3 ಕಿ.ಮೀ ದೂರದಲ್ಲಿರುವ ಈ ಬಾವಿ ಎಂಥದ್ದೇ ಬಿರು ಬೇಸಿಗೆಯಲ್ಲೂ, ಬರದಲ್ಲೂ ಬತ್ತಿದ ಉದಾಹರಣೆ ಇಲ್ಲ. ಬೆಟ್ಟ ಗುಡ್ಡಗಳ ನಡುವೆ ತಲೆ ಎತ್ತಿನಿಂತ ದೇವಸ್ಥಾನದಲ್ಲಿ …
Read More »ಬೆಳಗಾವಿ ಪ್ರದೇಶ ಮಹಾರಾಷ್ಟ್ರಕ್ಕೆ: ಅಂಜಲಿ ಹೇಳಿಕೆಗೆ ಸ್ಪಷ್ಟನೆ ನೀಡಲು BJP ಆಗ್ರಹ
ಬೆಂಗಳೂರು: ‘ಬೆಳಗಾವಿ ಜಿಲ್ಲೆಯ ಕೆಲವು ತಾಲ್ಲೂಕುಗಳು ಮಹಾರಾಷ್ಟ್ರಕ್ಕೆ ಸೇರಬೇಕಾಗಿವೆ ಎಂದು ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್ ಹೇಳಿಕೆ ನೀಡಿದ್ದು, ಈ ಬಗ್ಗೆ ಕಾಂಗ್ರೆಸ್ ಪಕ್ಷ ತನ್ನ ನಿಲುವು ಸ್ಪಷ್ಟಪಡಿಸಬೇಕು’ ಎಂದು ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕ ವಿ.ಸುನಿಲ್‌ಕುಮಾರ್ ಒತ್ತಾಯಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಕರ್ನಾಟಕದ ಹಿತಕ್ಕೆ ವಿರುದ್ಧವಾಗಿ ನಡೆದುಕೊಳ್ಳುತ್ತಿದ್ದಾರೆ. ಪಕ್ಷದ ನಾಯಕರ ಆಶೀರ್ವಾದ ಇಲ್ಲದೇ ಇಂತಹ ಹೇಳಿಕೆಗಳನ್ನು ನೀಡಲು ಸಾಧ್ಯವೇ ಎಂದು ಅವರು ಬುಧವಾರ ಸುದ್ದಿಗೋಷ್ಠಿಯಲ್ಲಿ ಪ್ರಶ್ನಿಸಿದರು. …
Read More »ನಿರಾಶ್ರಿತ ಕನ್ನಡಿಗರಿಗೆ ಪುನರ್ವಸತಿ: ಗೋವಾ CM ಪ್ರಮೋದ ಸಾವಂತ್
ಬೆಳಗಾವಿ: ‘ನ್ಯಾಯಾಲಯದ ಆದೇಶದಂತೆ ಗೋವಾದಲ್ಲಿ ಕನ್ನಡಿಗರ ಮನೆಗಳನ್ನು ತೆರವು ಮಾಡಲಾಗುತ್ತಿದೆ ಹೊರತು ಸರ್ಕಾರದ ಇರಾದೆ ಇಲ್ಲ. ನಿರಾಶ್ರಿತರಿಗೆ ಪ್ರತ್ಯೇಕ ಜಾಗ ಒದಗಿಸಿ, ಪುನರ್ವಸತಿ ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದೆ’ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್ ಹೇಳಿದರು. ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ್ ಅವರು ಬುಧವಾರ ಉಮೇದುವಾರಿಕೆ ಸಲ್ಲಿಸಿದ ಸಂದರ್ಭದಲ್ಲಿ ಜತೆಗಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ‘ನ್ಯಾಯಾಲಯದ ಆದೇಶ ಪಾಲನೆ ಸರ್ಕಾರದ ಕರ್ತವ್ಯ. ನಿರಾಶ್ರಿತ ಕನ್ನಡಿಗರ ಬಗ್ಗೆ ಮುಖ್ಯಮಂತ್ರಿ …
Read More »ಗಾಳಿ ಮಳೆಗೆ ಹಾರಿಹೋದ ಪತ್ರಾಸ್‌ಗಳು
ಕಬ್ಬೂರ (ಚಿಕ್ಕೋಡಿ ತಾಲ್ಲೂಕು): ಗ್ರಾಮದಲ್ಲಿ ಬುಧವಾರ ಗುಡುಗು-ಮಿಂಚು ಸಹಿತವಾಗಿ ಉತ್ತಮ ಮಳೆ ಸುರಿಯಿತು. ಮಳೆಯೊಂದಿಗೆ ಗಾಳಿಯೂ ಜೋರಾಗಿ ಬೀಸಿದ್ದರಿಂದ ನಾಲ್ಕು ಮನೆಗಳ ಪತ್ರಾಸ್, ಹೆಂಚು ಹಾರಿಹೋಗಿದ್ದು, ಒಂದು ಮನೆಯ ಗೋಡೆ ಕುಸಿದಿದೆ. ವಿದ್ಯುತ್ ಪೂರೈಕೆ ಸ್ಥಗಿತವಾದ ಕಾರಣ, ಜನರು ಪರದಾಡಿದರು. ಚಿಕ್ಕೋಡಿ, ಸವದತ್ತಿಯಲ್ಲಿ ಆಲಿಕಲ್ಲು ಸಹಿತ ಮಳೆಯಾದರೆ, ಬೈಲಹೊಂಗಲದಲ್ಲಿ ಕೆಲಕಾಲ ತುಂತುರು ಮಳೆಯಾಯಿತು. ಗೋಕಾಕ ತಾಲ್ಲೂಕಿನ ಅಂಕಲಗಿ, ಮದವಾಲ, ಅಕ್ಕತಂಗೇರಹಾಳ ಮತ್ತು ಬೆಳಗಾವಿ ತಾಲ್ಲೂಕಿನ ಸುಲಧಾಳದಲ್ಲಿ ಸಾಧಾರಣ ಮಳೆಯಾಯಿತು. ಜಿಲ್ಲೆಯ …
Read More »ಚಿಕ್ಕೋಡಿಯಲ್ಲೂ ಬಿಜೆಪಿ ಗೆಲ್ಲುತ್ತದೆ: ಬಾಲಚಂದ್ರ ಜಾರಕಿಹೊಳಿ
ಬೆಳಗಾವಿ: ‘ಬೆಳಗಾವಿ ಹಾಗೂ ಚಿಕ್ಕೋಡಿ ಕ್ಷೇತ್ರಗಳಲ್ಲಿ ಈ ಬಾರಿ ಬಿಜೆಪಿ ಅಭ್ಯರ್ಥಿಗಳು ಗೆಲ್ಲುತ್ತಾರೆ. ಎಲ್ಲೆಡೆ ಪ್ರಧಾನಿ ಮೋದಿ ಅವರ ಗಾಳಿ ಬೀಸುತ್ತಿದೆ’ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ನಗರದಲ್ಲಿ ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಚಿಕ್ಕೋಡಿಯಲ್ಲಿ ಅಣ್ಣಾಸಾಹೇಬ ಜೊಲ್ಲೆ ಗೆಲ್ಲುತ್ತಾರೆ ಎಂಬ ಮಾತು ಎಲ್ಲೆಡೆ ಕೇಳಿಬರುತ್ತಿವೆ. ಅವರು ನನ್ನನ್ನು ಪ್ರಚಾರಕ್ಕೆ ಕರೆದಿಲ್ಲ. ಹಾಗಾಗಿ, ನಾನು ಹೋಗಿಲ್ಲ. ನಮ್ಮ ಕುಟುಂಬದವರೊಬ್ಬರು ಅಣ್ಣಾಸಾಹೇಬ ವಿರುದ್ಧ ನಿಂತಿದ್ದಾರೆ ಎಂಬ ಕಾರಣಕ್ಕೆ ಹೋಗಿಲ್ಲ ಎಂದರ್ಥವಲ್ಲ. ಬೆಳಗಾವಿ …
Read More »ಶ್ರೀ ಶ್ರೀ ಹರಿ ವಿಠಲ ಪಾಂಡುರಂಗ ದೇವರಿಗೆ ತೊಟ್ಟಿಲೋತ್ಸವ ಸೇವೆ !
ಹುಬ್ಬಳ್ಳಿ; ನಗರದ ಎಸ್.ಎಸ್. ಕೆ. ಪಂಚ ಟ್ರಸ್ಟ್, ಶ್ರೀ ದುರ್ಗಾದೇವಿ ದೇವಸ್ಥಾನ, ದಾಜಿಬಾನ ಪೇಟ,ಹುಬ್ಬಳ್ಳಿ ಈ ಸಂಸ್ಥೆಯ , ದಾಜಿಬಾನ ಪೇಟನಲ್ಲಿರುವ ಶ್ರೀ ಶ್ರೀ ಹರಿ ವಿಠಲ ಪಾಂಡುರಂಗ ಶ್ರೀ ರುಕ್ಮಾಯಿ ದೇವಸ್ಥಾನದಲ್ಲಿ ಶ್ರೀ ರಾಮನವಮಿ ನಿಮಿತ್ಯ, ಶ್ರೀ ಶ್ರೀ ಹರಿ ಪಾಂಡುರಂಗ ವಿಠ್ಠಲ ದೇವರಿಗೆ ತೊಟ್ಟಿಲೋತ್ಸವ ಪೂಜೆಯು ನೆರವೇರಿತು. ಶ್ರೀ ರಾಮನವಮಿ ನಿಮಿತ್ಯ, ಶ್ರೀ ವಿಠ್ಠಲ ರುಕ್ಮಾಯಿ ಯರಿಗೆ ವಿಶೇಷ ಅಲಂಕಾರ ಮಾಡಿ,ಸಿಹಿ ನೈವೇದ್ಯ ಅರ್ಪಿಸಿ ಪೂಜೆ ಮಾಡಲಾಯಿತು. ದೇವಸ್ಥಾನದಲ್ಲಿ …
Read More »ಕುಡಿಯುವ ನೀರಿಗೆ ಆಗ್ರಹಿಸಿ ಪ್ರತಿಭಟನೆ
ವಿಜಯಪುರ: ಕುಡಿಯುವ ನೀರಿಗೆ ಆಗ್ರಹಿಸಿ ವಿಜಯಪುರ ಜಿಲ್ಲೆ ದೇವರಹಿಪ್ಪರಗಿ ತಾಲೂಕಿನ ಬಿ ಬಿ ಇಂಗಳಗಿ ಗ್ರಾಮಸ್ಥರು ದೇವರ ಹಿಪ್ಪರಗಿ ತಾಲೂಕ ತಹಸೀಲ್ದಾರ್ ಕಚೇರಿ ಎದುರಿಗೆ ಪ್ರತಿಭಟನೆ ನಡೆಸಿದರು. ಕಚೇರಿ ಮುಂದೆ ಬಿಂದಿಗೆ ಇಟ್ಟುಕೊಂಡು ಪ್ರತಿಭಟನೆ ನಡೆಸಿದ್ದು, ಗ್ರಾಮಕ್ಕೆ ಕುಡಿಯುವ ನೀರು ಟ್ಯಾಂಕರ್ ಮುಕಾಂತರ ವ್ಯವಸ್ಥೆ ಮಾಡುವಂತೆ ಪಟ್ಟು ಹಿಡಿದು ಸಮರ್ಪಕವಾಗಿ ನೀರು ಪೂರೈಸಲು ಆಗ್ರಹಿಸಿದ್ದಾರೆ.
Read More »ಪಂಚಭೂತಗಳಲ್ಲಿ ಲೀನರಾದ ಕನ್ನಡದ ʼʼಪ್ರಚಂಡ ಕುಳ್ಳʼʼ
ಬೆಂಗಳೂರು: ಕನ್ನಡದ ಹಿರಿಯ ನಟ ದ್ವಾರಕೀಶ್ ಅಂತ್ಯಕ್ರಿಯೆ ಇಂದು ಬೆಂಗಳೂರಿನ ಟಿ.ಆರ್ ಮೀಲ್ ನಲ್ಲಿರುವ ಹಿಂದೂ ರುದ್ರಭೂಮಿಯಲ್ಲಿ ನಡೆಯಿತು. ಬ್ರಾಹ್ಮಣರ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಿಸಲಾಯಿತು. ದ್ವಾರಕೀಶ್ ಹಿರಿಯ ಪುತ್ರ ಸಂತೋಷ್ ಅವರು ಚಿತೆಗೆ ಅಗ್ನಿಸ್ಪರ್ಷ ಮಾಡಿದರು. ಅಲ್ಲಿಗೆ ದ್ವಾರಕೀಶ್ ಪಂಚಭೂತಗಳಲ್ಲಿ ಲೀನವಾದರು. ಚಿತೆಗೆ ಅಗ್ನಿಸ್ಪರ್ಷಕ್ಕೂ ಮುನ್ನ ಪೊಲೀಸ್ ಇಲಾಖೆಯು ಪೊಲೀಸ್ ಗೌರವವನ್ನು ಸಲ್ಲಿಸಲಾಯಿತು. ನಂತರ ಬ್ರಾಹ್ಮಣ ವಿಧಿವಿಧಾನದ ಪ್ರಕಾರ ಮೊದಲಿಗೆ ಪ್ರೇತ ಸಂಸ್ಕಾರ. ಆನಂತರ ಕಿವಿಯಲ್ಲಿ ನಾರಾಯಣ ಸ್ಮರಣೆ. ಚಿತಾ ಅಗ್ನಿ …
Read More »ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಿಸುವಂತೆ ಸ್ವಾಮೀಜಿಗಳ ಒತ್ತಾಯ: ತಪ್ಪಾಗಿದ್ದರೆ ಕ್ಷಮೆ ಕೇಳಲು ಸಿದ್ಧ ಎಂದ ಪ್ರಹ್ಲಾದ್ ಜೋಶಿ
ಹುಬ್ಬಳ್ಳಿ: ಮುಂಬರುವ ಲೋಕಸಭೆ ಚುನಾವಣೆಗೆ ಧಾರವಾಡ ಲೋಕಸಭಾ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿ ಶಿವಾನಂದ ಮುತ್ತಣ್ಣನವರ್ ನಿನ್ನೆ ಮಂಗಳವಾರ ಹುಬ್ಬಳ್ಳಿಯಿಂದ ಧಾರವಾಡದವರೆಗೆ ವಿಶಿಷ್ಟ ರ್ಯಾಲಿ ನಡೆಸಿಕೊಂಡು ಹೋಗಿ ಚುನಾವಣಾಧಿಕಾರಿ ಕಚೇರಿಯಲ್ಲಿ ತಮ್ಮ ನಾಮಪತ್ರ ಸಲ್ಲಿಸಿದರು.ಹುಬ್ಬಳ್ಳಿಯ ಮಾಜಿ ವಾರ್ಡ್ ಸದಸ್ಯ ಮುತ್ತಣ್ಣನವರ್ ತಮ್ಮ ಬೆಂಬಲಿಗರೊಂದಿಗೆ ಎತ್ತಿನ ಗಾಡಿಯಲ್ಲಿ 20 ಕಿ.ಮೀ ಮೆರವಣಿಗೆ ಸಾಗಿ ನಾಮಪತ್ರ ಸಲ್ಲಸುವ ಮೂಲಕ ಗಮನ ಸೆಳೆದರು. ಮುತ್ತಣ್ಣನವರ್ ಮತ್ತು ಅವರ ಬೆಂಬಲಿಗರು ಹುಬ್ಬಳ್ಳಿಯ ರಾಣಿ ಚೆನ್ನಮ್ಮ ಮತ್ತು ಸ್ವಾತಂತ್ರ್ಯ ಹೋರಾಟಗಾರ …
Read More »ಕೆಲವು ಊರಿನಲ್ಲಿ ಮತದಾನ ಬಹಿಷ್ಕಾರ !
ತೀರ್ಥಹಳ್ಳಿ : ತಾಲೂಕಿನ ಬೆಜ್ಜವಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಉದಯಪುರ, ಬಚ್ಚಿನ ಕೊಡುಗೆ, ಕಿಕ್ಕೇರಿ ಗ್ರಾಮದ ರಸ್ತೆಯ ಪರಿಸ್ಥಿತಿಯ ಬಗ್ಗೆ ಶಾಸಕರು ಸೇರಿದಂತೆ ಹಲವು ಅಧಿಕಾರಿಗಳ ಗಮನಕ್ಕೆ ತಂದರೂ ಕೂಡ ಇಲ್ಲಿಯವರೆಗೆ ಯಾವುದೇ ರೀತಿಯ ಪರಿಹಾರವನ್ನು ಕೊಡದ ಕಾರಣ ಲೋಕಸಭಾ ಚುನಾವಣೆಗೆ ಮತದಾನ ಬಹಿಷ್ಕಾರ ಮಾಡುವುದಾಗಿ ಸ್ಥಳೀಯರು ತಿಳಿಸಿದ್ದಾರೆ. ಅಕ್ಕಪಕ್ಕದ ಊರಿನ ಗ್ರಾಮದ ರಸ್ತೆಗಳ ನಿರ್ಮಾಣ ಕಾರ್ಯ ನಡೆಯುತ್ತಿದ್ದು ನಮ್ಮ ಊರಿಗೆ ಹೋಗುವ ರಸ್ತೆಯ ಪರಿಸ್ಥಿತಿ ತೀರಾ ಹದಗೆಟ್ಟಿದ್ದು ಮಳೆಗಾಲದಲ್ಲಿ ಗೊಚ್ಚೆಯ ಸಮಸ್ಯೆ …
Read More »