ಬೆಂಗಳೂರು : ಬಾಗಲಕೋಟೆಯ ಡಾ. ಮಹಾಂತ ಶಿವಯೋಗಿಗಳ ಜನ್ಮ ದಿನವನ್ನು ರಾಜ್ಯದಲ್ಲಿ ವ್ಯಸನ ಮುಕ್ತ ದಿನಾಚರಣೆಯಾಗಿ ಆಚರಣೆ ಮಾಡಲಾಗುತ್ತದೆ. ದುಶ್ಚಟಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಿ, ಮನಸ್ಸು ಪರಿವರ್ತಿಸಿ, ಜನರಲ್ಲಿನ ದುಶ್ಚಟಗಳನ್ನೇ ತಮ್ಮ ಜೋಳಿಗೆಯಲ್ಲಿ ಭಿಕ್ಷೆಯ ರೂಪದಲ್ಲಿ ಸಂಗ್ರಹಿಸಿ ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಶ್ರಮಿಸಿದವರು ಡಾ. ಮಹಾಂತ ಶಿವಯೋಗಿಗಳು. ಬಾಗಲಕೋಟೆಯ ಜಮಖಂಡಿ ತಾಲೂಕಿನ ಹಿಪ್ಪರಗಿ ಗ್ರಾಮದಲ್ಲಿ 1930 ರ ಆಗಸ್ಟ್ 1 ರಂದು ಜನಿಸಿದ ಅವರು ತಮ್ಮ 10ನೇ ವಯಸ್ಸಿಗೆ …
Read More »‘ಪಾರ್ಟಿ’ ಕೊಟ್ಟ ಗೆಳತಿಯನ್ನೇ ‘ಗ್ಯಾಂಗ್ ರೇಪ್’ ಮಾಡಿದ ಸ್ನೇಹಿತರು..!
24 ವರ್ಷದ ಸಾಫ್ಟ್ವೇರ್ ಉದ್ಯೋಗಿಯ ಮೇಲೆ ಇಬ್ಬರು ವ್ಯಕ್ತಿಗಳು ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. 24 ವರ್ಷದ ಸಂತ್ರಸ್ತ ಯುವತಿ ದೂರು ದಾಖಲಿಸಿದ್ದು, ತಲೆಮರೆಸಿಕೊಂಡಿರುವ ಆರೋಪಿಗಳನ್ನು ಪತ್ತೆಹಚ್ಚಲು ಅವರು ಹುಡುಕಾಟವನ್ನು ಪ್ರಾರಂಭಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸಾಫ್ಟ್ವೇರ್ ಕಂಪನಿಯಲ್ಲಿ ಕೆಲಸ ಸಿಕ್ಕ ಖುಷಿಗೆ ಯುವತಿ ತನ್ನ ಸ್ನೇಹಿತರಿಗೆ ಪಾರ್ಟಿ ಆಯೋಜಿಸಿದ್ದರು. ಅವಳ ಬಾಲ್ಯದ ಸ್ನೇಹಿತ ಸ್ಥಳೀಯ ಪಬ್ ಗೆ ಹೋಗಿ ಮದ್ಯ ಸೇವಿಸಿದ್ದು, ನಂತರ ಕೋಣೆಯೊಂದರಲ್ಲಿ …
Read More »ಭೀಕರ ಭೂಕುಸಿತದಲ್ಲಿ ಚಾಮರಾಜನಗರದ ನಾಲ್ವರು ಮೃತ್ಯು
ಚಾಮರಾಜನಗರ/ಮಂಡ್ಯ: ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೀಕರ ಭೂಕುಸಿತದಲ್ಲಿ ಚಾಮರಾಜನಗರದ ನಾಲ್ವರು ಮೃತಪಟ್ಟಿದ್ದು, ಕೆ.ಆರ್.ಪೇಟೆ ಮೂಲದ ಮಹಿಳೆಯ ಮಗು ಸೇರಿ ಇಬ್ಬರು ನಾಪತ್ತೆಯಾಗಿದ್ದು, ಕುಟುಂಬದ ಮೂವರು ಆಸ್ಪತ್ರೆಯಲ್ಲಿದ್ದಾರೆ. ವಯನಾಡಿನ ಮೇಪ್ಪಾಡಿಯಲ್ಲಿ ನೆಲೆಸಿದ್ದ ಪುಟ್ಟಸಿದ್ದಶೆಟ್ಟಿ (62) ಹಾಗೂ (55), ಚಾಮರಾಜನಗರ ತಾಲೂಕಿನ ಇರಸವಾಡಿ ಮೂಲದ, ವಯ ನಾಡು ಜಿಲ್ಲೆಯಲ್ಲಿ ವಾಸವಿದ್ದ ರಾಜೇಂದ್ರ (50), ರತ್ನಮ್ಮ (45) ಮೃತ ದುರ್ದೈವಿಗಳು. ಈ ಪೈಕಿ ರಾಜೇಂದ್ರ, ರತ್ನಮ್ಮ ಮೃತ ದೇಹ ಪತ್ತೆಯಾಗಿಲ್ಲ. ಘಟನೆ ನಡೆದ ಸ್ಥಳಕ್ಕೆ ಗುಂಡ್ಲುಪೇಟೆ …
Read More »NDA ಮೈತ್ರಿಕೂಟದಲ್ಲಿ ಮೂಡಿದ ಒಡಕು? ಬಿಜೆಪಿ ವಿರುದ್ಧವೇ ಕೇಂದ್ರ ಸಚಿವ HD ಕುಮಾರಸ್ವಾಮಿ ಕಿಡಿ!
NDA ಮೈತ್ರಿಕೂಟದಲ್ಲಿ ಮೂಡಿದ ಒಡಕು? ಬಿಜೆಪಿ ವಿರುದ್ಧವೇ ಕೇಂದ್ರ ಸಚಿವ HD ಕುಮಾರಸ್ವಾಮಿ ಕಿಡಿ! ನವದೆಹಲಿ: ಕೇಂದ್ರದಲ್ಲಿ ನರೇಂದ್ರ ಮೋದಿ (Narendra Modi) ನೇತೃತ್ವದ ಎನ್‌ಡಿಎ ಸರ್ಕಾರ (NDA Govt) ಆಡಳಿತಕ್ಕೆ ಬಂದು ಒಂದು ತಿಂಗಳು ಕಳೆಯುತ್ತಿದೆ. ಕರ್ನಾಟಕದಲ್ಲಿ ಬಿಜೆಪಿ ಜೊತೆ ಜೆಡಿಎಸ್ ಕೂಡ ಮೈತ್ರಿ ಮಾಡಿಕೊಂಡ ಪರಿಣಾಮ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ (HD Kumaraswamy) ಕೇಂದ್ರ ಸಚಿವ ಸ್ಥಾನವನ್ನು ದಕ್ಕಿಸಿಕೊಂಡಿದ್ದಾರೆ. ಆದರೆ ಇದೀಗ ಅಚ್ಚರಿಯ ಸಂಗತಿಯೊಂದು ದಿಢೀರನೇ …
Read More »ಬೀಡಾಡಿ ದನ ತಿವಿದು ವೃದ್ಧ ಸಾವು
ಗದಗ: ಬೀಡಾಡಿ ದನವೊಂದು ತಿವಿದ ಪರಿಣಾಮ ವೃದ್ಧರೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಟಗೇರಿಯ ಹೊಸ ಬನಶಂಕರಿ ಗುಡಿ ಸಮೀಪ ಬುಧವಾರ ಬೆಳಿಗ್ಗೆ ನಡೆದಿದೆ. ಬೆಟಗೇರಿಯಲ್ಲಿರುವ ಸಂಬಂಧಿಕರ ಮನೆಗೆ ಬಂದಿದ್ದ ಲಕ್ಷ್ಮೇಶ್ವರ ತಾಲ್ಲೂಕಿನ ಶಿಗ್ಲಿ ಗ್ರಾಮದ ಶಂಕರಪ್ಪ ಹೊಳೆ (70) ಮೃತಪಟ್ಟವರು. ಬುಧವಾರ ಬೆಳಿಗ್ಗೆ 8ರ ಸುಮಾರಿಗೆ ಬೆಟಗೇರಿಯ ಸರ್ಕಾರಿ ಪ್ರಾಥಮಿಕ ಶಾಲೆ ನಂ.7ರ ಸಮೀಪ ಬೀಡಾಡಿ ದನಗಳು ಕಾದಾಡುತ್ತಿದ್ದವು. ಈ ವೇಳೆ ರಸ್ತೆ ಪಕ್ಕದಲ್ಲಿ ನಡೆದು ಹೋಗುತ್ತಿದ್ದ ಶಂಕಪ್ಪ …
Read More »ಸಿಎಂ ಸೂಚನೆ ಮೇರೆಗೆ ಸಚಿವ ಸಂತೋಷ್ ಲಾಡ್ ವಯನಾಡಿಗೆ
ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಸಚಿವ ಸಂತೋಷ್ ಲಾಡ್ ಅವರು ಪ್ರವಾಹ ಪೀಡಿತ ವಯನಾಡಿಗೆ ತೆರಳಿದ್ದಾರೆ. ಪ್ರವಾಹ ಪೀಡಿತ ಪ್ರದೇಶದಲ್ಲಿ ಪರಿಹಾರ ಕಾರ್ಯಗಳು, ಸಂತ್ರಸ್ಥರ ರಕ್ಷಣೆ ಸೇರಿದಂತೆ ಅಗತ್ಯ ಎಲ್ಲಾ ರೀತಿಯ ನೆರವುಗಳಿಗೆ ಕೇರಳ ಸರ್ಕಾರದ ಜೊತೆ ಕೈ ಜೋಡಿಸಿ ಜನರ ಜೀವ, ಆರೋಗ್ಯ ರಕ್ಷಣೆಗೆ ನೆರವಾಗುವಂತೆ ಮುಖ್ಯಮಂತ್ರಿಗಳು ದೂರವಾಣಿ ಮೂಲಕ ಸೂಚನೆ ನೀಡಿದ್ದಾರೆ. ದೂರವಾಣಿ ಕರೆ ಸ್ವೀಕರಿಸುತ್ತಿದ್ದಂತೆ ವಯನಾಡಿಗೆ ಹೊರಟ ಸಚಿವ ಸಂತೋಷ್ ಲಾಡ್ ಸದ್ಯ …
Read More »BJP, ಕಾಂಗ್ರೆಸ್‌ಗೆ ದಲಿತರು, ಮುಸ್ಲಿಮರ ಬಗ್ಗೆ ಕಾಳಜಿ ಇಲ್ಲ: ಪ್ರಕಾಶ್ ಅಂಬೇಡ್ಕರ್
ಮುಂಬೈ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಪೂರ್ವಭಾವಿಯಾಗಿ ‘ಆರಕ್ಷಣ ಬಚಾವೊ ಯಾತ್ರೆ’ ನಡೆಸುತ್ತಿರುವ ವಂಚಿತ್ ಬಹುಜನ ಅಘಾಡಿ ಸಂಸ್ಥಾಪಕ ಪ್ರಕಾಶ್ ಅಂಬೇಡ್ಕರ್ ಅವರು ಬಿಜೆಪಿ, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ಹಾಗೂ ಕಾಂಗ್ರೆಸ್ ಒಂದೇ ನಾಣ್ಯದ ಎರಡು ಮುಖ ಇದ್ದಂತೆ. ಆ ಎರಡು ಪಕ್ಷಗಳಿಗೂ ದಲಿತರು, ಆದಿವಾಸಿಗಳು, ಮುಸ್ಲಿಮರು ಮತ್ತು ಇತರ ಹಿಂದುಳಿದ ವರ್ಗಗಳ ಬಗ್ಗೆ ಕಾಳಜಿ ಇಲ್ಲ. ಆದರೆ, ಚುನಾವಣೆಗಳಲ್ಲಿ ಅವರ ಮತಗಳ ಪಡೆಯಲು ಬಯಸುತ್ತಾರೆ ಎಂದು ಪ್ರಕಾಶ್ ಟೀಕಿಸಿದ್ದಾರೆ. …
Read More »ಮಹಾರಾಷ್ಟ್ರ, ತೆಲಂಗಾಣ ಮತ್ತು ಆಂಧ್ರಪ್ರದೇಶ , ಕಲ್ಯಾಣ’ದಲ್ಲಿ ‘ದಮ್ ಮಾರೊ ದಮ್’!
ಕಲಬುರಗಿ: ನೆರೆಯ ಮಹಾರಾಷ್ಟ್ರ, ತೆಲಂಗಾಣ ಮತ್ತು ಆಂಧ್ರಪ್ರದೇಶದ ರಾಜ್ಯಗಳಿಗೆ ಗಡಿ ಹಂಚಿಕೊಂಡಿರುವ ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳ ಪೈಕಿ ಕಲಬುರಗಿ ಮತ್ತು ಬಳ್ಳಾರಿಯಲ್ಲಿ ಮಾದಕ ವಸ್ತುಗಳ ಸೇವನೆ ಮತ್ತು ಮಾರಾಟ ಪ್ರಕರಣಗಳು ಹೆಚ್ಚಾಗುತ್ತಿದ್ದು, ‘ಕಲ್ಯಾಣ’ದ ನಾಡಿಗೆ ಅಪಕೀರ್ತಿ ತಟ್ಟುತ್ತಿದೆ. ಕಲ್ಯಾಣದ ಹೆಬ್ಬಾಗಿಲು ಎಂದು ಕರೆಸಿಕೊಳ್ಳುತ್ತಿರುವ ಕಲಬುರಗಿ ಈಗ ಗಾಂಜಾ, ಅಫೀಮು ಸೇರಿದಂತೆ ಮಾದಕ ವಸ್ತುಗಳ ಮಾರಾಟ ಮತ್ತು ಸಾಗಣೆ ಪ್ರಕರಣಗಳ ಹಣೆಪಟ್ಟಿಯನ್ನೂ ಕಟ್ಟಿಕೊಳ್ಳುತ್ತಿದೆ. ಇದಕ್ಕೆ ಬೀದರ್, ವಿಜಯನಗರ ಹಾಗೂ …
Read More »ತಿಂಗಳಲ್ಲೇ ಕಿತ್ತು ಹೋದ ಡಾಂಬರು
ಚಿಂಚೋಳಿ: ಪಟ್ಟಣದ ಹೊರವಲಯದ ಸಿದ್ಧಸಿರಿ ಎಥೆನಾಲ್ ಕಂಪನಿಯಿಂದ ಚಿಮ್ಮಾಈದಲಾಯಿ ಗ್ರಾಮದವರೆಗೆ ಲೋಕೋಪಯೋಗಿ ಇಲಾಖೆ ನಡೆಸಿದ ರಸ್ತೆ ಕಾಮಗಾರಿ ಹಳ್ಳ ಹಿಡಿದಿದೆ. ಮಳೆಯನ್ನೂ ಲೆಕ್ಕಿಸದೇ ರಸ್ತೆಗೆ ಹಾಕಿದ್ದ ಡಾಂಬರು ಒಂದು ವಾರದೊಳಗೆ ಕಿತ್ತುಹೋಗಿದ್ದು,ರಸ್ತೆ ಹದಗೆಟ್ಟಿದೆ. ಹೆದ್ದಾರಿಯ ಅಗಲೀಕರಣ, ಡಾಂಬರೀಕರಣ ಸೇರಿದಂತೆ ಹಲವು ಹೆದ್ದಾರಿ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದೆ. 2023ರ ವಿಧಾನಸಭೆ ಚುನಾವಣೆ ಪೂರ್ವದಲ್ಲಿ ಕಾಮಗಾರಿ ಆರಂಭಿಸಿ ರಸ್ತೆಯ ಎರಡು ಬದಿಯ ಭುಜವನ್ನು ಅಗೆದು ಮುರುಮ್ ಮತ್ತು ಕಾಂಕ್ರಿಟ್ ಭರ್ತಿ ಮಾಡುವುದರ …
Read More »ಬಾಲಕನ ಮೇಲೆ ಬೀದಿ ನಾಯಿ ದಾಳಿ
(ವಿಜಯನಗರ): ನಗರದ ಚಿತ್ತವಾಡ್ಗಿ ಪ್ರದೇಶದಲ್ಲಿ ಬುಧವಾರ ಬೆಳಿಗ್ಗೆ ನಾಲ್ಕು ವರ್ಷದ ಬಾಲಕನ ಮೇಲೆ ಬೀದಿನಾಯಿಯೊಂದು ದಾಳಿ ನಡೆಸಿದ್ದು, ಬಾಲಕನ ಕೆನ್ನೆ, ಬೆನ್ನು, ಕಾಲಿಗೆ ಗಂಭೀರ ಗಾಯವಾಗಿದೆ. ಒಂದನೇ ವಾರ್ಡ್ ಚಿತ್ತವಾಡ್ಗಿ ಕಾಕರ ಓಣಿಯ ಗಂಕಪ್ಪ ಅವರ ಪುತ್ರ ಪರಶುರಾಮ ಮನೆ ಸಮೀಪ ಆಟವಾಡುತ್ತಿದ್ದಾಗ ಒಂದು ನಾಯಿ ದಾಳಿ ನಡೆಸಿ ಆತನ ಕೆನ್ನೆಯ ಮಾಂಸ ಕಚ್ಚಿ ಎಳೆದಿದೆ. ಜತೆಗೆ ಬೆನ್ನು, ಕಾಲಿಗೂ ಗಾಯವಾಗಿದೆ. ತಕ್ಷಣ ಬಾಲಕನನ್ನು ಇಲ್ಲಿನ 100 ಹಾಸಿಗೆ ಆಸ್ಪತ್ರೆಗೆ ದಾಖಲಿಸಲಾಗಿದ್ದು, …
Read More »
Laxmi News 24×7