ದೇವನಹಳ್ಳಿ: ಸಮುದಾಯ ವಿರೋಧಿ ಮನಸ್ಥಿತಿಯ ಡಾ.ಕೆ.ಸುಧಾಕರ್ ಅಂಥವರು ಅಧಿಕಾರಕ್ಕೆ ಬಂದರೆ ಹಿಂದುಳಿದ ವರ್ಗಗಳ ಅವನತಿಗೆ ಕಾರಣವಾಗುತ್ತದೆ ಎಂದು ಹೊಸಕೋಟೆ ಬಿಜೆಪಿ ತಾಲ್ಲೂಕು ಅಧ್ಯಕ್ಷ ಜಯರಾಜ್ ಸ್ವಪಕ್ಷೀಯ ಅಭ್ಯರ್ಥಿ ವಿರುದ್ಧವೇ ಬಹಿರಂಗವಾಗಿ ಹರಿಹಾಯ್ದರು. ತಿಗಳ ಸಮುದಾಯಕ್ಕೆ ರಾಜಕೀಯ ಪ್ರಾತಿನಿಧ್ಯ ಸಿಗದಂತೆ ಸುಧಾಕರ್ ಷ್ಯಡಂತ್ರ ರೂಪಿಸಿದ್ದರು. ಅವರದು ಕಿರುಕುಳ ನೀಡುವ ಮನಸ್ಥಿತಿ. ಅವರ ಧೋರಣೆಯಿಂದ ನಿಷ್ಠಾವಂತ ಕಾರ್ಯಕರ್ತರ ರಾಜಕೀಯ ಜೀವನ ಕೊನೆಗೊಳ್ಳುತ್ತದೆ ಎಂದು ದೂರಿದರು. ಕರ್ನಾಟಕ ರಾಜ್ಯ ತಿಗಳರ ವಹ್ನಿಕುಲ ಕ್ಷತ್ರಿಯ ಸಂಘ …
Read More »ಚುನಾವಣೆಗೆ ಸ್ಪರ್ಧಿಸದಂತೆ ದಿಂಗಾಲೇಶ್ವರ ಶ್ರೀಗೆ ಮತ್ತೊಮ್ಮೆ ಮನವಿ ಮಾಡುವೆ: BSY
ಹುಬ್ಬಳ್ಳಿ: ‘ಧಾರವಾಡ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯದಂತೆ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಅವರಿಗೆ ಮತ್ತೊಮ್ಮೆ ಮನವಿ ಮಾಡುತ್ತೇನೆ’ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಹೇಳಿದರು. ಇಲ್ಲಿನ ವಿಮಾನ ನಿಲ್ದಾಣದಲ್ಲಿ ಸೋಮವಾರ ಸುದ್ದಿಗಾರರ ಜೊತೆ ಅವರು ಮಾತನಾಡಿದರು. ‘ಕ್ಷೇತ್ರದ ಜನ ಪಕ್ಷದ ಅಭ್ಯರ್ಥಿ ಪ್ರಲ್ಹಾದ ಜೋಶಿ ಪರವಾಗಿದ್ದಾರೆ. ಅವರ ವಿರುದ್ಧ ಸ್ಪರ್ಧಿಸುವ ದುಸ್ಸಾಹಸಕ್ಕೆ ಸ್ವಾಮೀಜಿ ಕೈ ಹಾಕಬಾರದು. ಯಾವುದೇ ಕಾರಣಕ್ಕೂ ಸ್ಪರ್ಧೆ ಮಾಡಬಾರದೆಂದು ಅವರನ್ನು ಕೋರುವೆ. ಮುಂದೆ ಏನು …
Read More »ಧಾರವಾಡ ಲೋಕಸಭೆ ಚುನಾವಣೆ: ಐವರಿಂದ 11 ನಾಮಪತ್ರ ಸಲ್ಲಿಕೆ
ಧಾರವಾಡ: ಧಾರವಾಡ ಲೋಕಸಭಾ ಚುನಾವಣೆ ಸೋಮವಾರ ಕೇಂದ್ರ ಸಚಿವ ಬಿಜೆಪಿಯ ಪ್ರಲ್ಹಾದ ಜೋಶಿ ಸಹಿತ ಐವರು 11 ನಾಮಪತ್ರ ಸಲ್ಲಿಸಿದ್ದಾರೆ ಎಂದು ಚುನಾವಣಾಧಿಕಾರಿ ದಿವ್ಯ ಪ್ರಭು ತಿಳಿಸಿದ್ದಾರೆ. ಬಿಜಪಿಯ ಪ್ರಲ್ಹಾದ ಜೋಶಿ ಮತ್ತು ರಾಷ್ಟ್ರೀಯ ಜನ ಸಂಭಾವನಾ ಸಮಿತಿ ಪಕ್ಷದ ನಾಗರಾಜ ಶ್ರೀಧರ ಶೇಟ್ ಅವರು ತಲಾ ನಾಲ್ಕು ಪ್ರತಿ ನಾಮಪತ್ರ ಸಲ್ಲಿಸಿದ್ಧಾರೆ. ಬಹುಜನ ಸಮಾಜ ಪಕ್ಷದಿಂದ ಶೋಭಾ ಬಳ್ಳಾರಿ, ಉತ್ತಮ ಪ್ರಜಾಕೀಯ ಪಕ್ಷದಿಂದ ಬಸವಲಿಂಗಪ್ಪ ಈ.ಬುಗಡಿ ಹಾಗೂ ಪಕ್ಷೇತರವಾಗಿ …
Read More »ಪ್ರಲ್ಹಾದ ಜೋಶಿಗೆ ಸ್ವಂತ ವಾಹನ ಇಲ್ಲ: ₹ 13.97 ಕೋಟಿ ಮೌಲ್ಯದ ಆಸ್ತಿ ಒಡೆಯ
ಧಾರವಾಡ: ಬಿಜೆಪಿಯಿಂದ ಲೋಕಸಭಾ ಚುನಾವಣೆಗೆ ಐದನೇ ಬಾರಿಗೆ ಸ್ಪರ್ಧಿಸಿರುವ ಸಚಿವ ಪ್ರಲ್ಹಾದ ಜೋಶಿ ಅವರು ₹ 13.97 ಕೋಟಿ ಮೌಲ್ಯದ ಆಸ್ತಿ ಹೊಂದಿದ್ದಾರೆ. ಸತತ ನಾಲ್ಕು ಬಾರಿ ಆಯ್ಕೆಯಾಗಿರುವ ಅವರಿಗೆ ಸ್ವಂತ ವಾಹನ ಇಲ್ಲ. ಜೋಶಿ ಅವರ ಬಳಿ 184 ಗ್ರಾಂ ಚಿನ್ನ 5 ಕೆ.ಜಿ ಬೆಳ್ಳಿ, ಅವರ ಪತ್ನಿ ಬಳಿ 500 ಗ್ರಾಂ ಚಿನ್ನ, 2 ಕೆ.ಜಿ ಬೆಳ್ಳಿ ಇದೆ. ಜೋಶಿ ಅವರ ಹೆಸರಿನಲ್ಲಿ ₹ 6.63 ಕೋಟಿ …
Read More »ಶಕ್ತಿ ಪ್ರದರ್ಶನ ಮಾಡಿದ ಮೃಣಾಲ್ ಹೆಬ್ಬಾಳಕರ
ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳಕರ ಸೋಮವಾರ, ತಮ್ಮ ಉಮೇದುವಾರಿಕೆ ಸಲ್ಲಿಸಿದರು. ನಂತರ ನಡೆದ ಅದ್ಧೂರಿ ವಿಜಯ ಯಾತ್ರೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜತೆಗೆ ಸೇರಿ ಶಕ್ತಿ ಪ್ರದರ್ಶನ ಮಾಡಿದರು. ಇಲ್ಲಿನ ಸಿ.ಪಿ.ಇಡಿ ಮೈದಾನದಿಂದ ತೆರೆದ ಜೀಪ್‌ನಲ್ಲಿ ಆರಂಭವಾದ ಮೆರವಣಿಗೆ ರಾಣಿ ಚನ್ನಮ್ಮ ವೃತ್ತದವರೆಗೂ ನಡೆಯಿತು. ಕ್ಷೇತ್ರದ ಮೂಲೆಮೂಲೆಯಿಂದ ಬಂದು ಸೇರಿದ ಅಪಾರ ಸಂಖ್ಯೆಯ ಕಾರ್ಯಕರ್ತರು ಉರಿಬಿಸಿಲು ಲೆಕ್ಕಿಸದೇ ಮೆರವಣಿಗೆಯಲ್ಲಿ ಸಾಗಿದರು. ಅಭ್ಯರ್ಥಿ ಮೃಣಾಲ್ ಜೀಪ್ ಏರುತ್ತಿದ್ದಂತೆ …
Read More »ಶೋಷಿತ ವರ್ಗಕ್ಕೆ ನ್ಯಾಯ ನೀಡಿದ ಅಂಬೇಡ್ಕರ್’
ನೇಸರಗಿ: ಅಸ್ಪೃಶ್ಯತೆ ಮತ್ತು ಅಸಮಾನತೆಯ ಆಂದೋಲನ ಪ್ರಾರಂಭಿಸಿ ಶೋಷಿತ ವರ್ಗಕ್ಕೆ ನ್ಯಾಯ ಒದಗಿಸಿದವರು ಬಿ.ಆರ್. ಅಂಬೇಡ್ಕರ್ ಎಂದು ಜೈ ಭೀಮ ಸಂಘರ್ಷ ಸಮಿತಿ ರಾಜ್ಯಾಧ್ಯಕ್ಷ ರಮೇಶ ರಾಯಪ್ಪಗೋಳ ಹೇಳಿದರು. ಗ್ರಾಮದ ದುರ್ಗಾದೇವಿ ದೇವಸ್ಥಾನದಲ್ಲಿ ಆಯೋಜಿಸಿದ ಬಿ.ಆರ್.ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ‘ಅಂಬೇಡ್ಕರ್ ಅವರ ಬದುಕು ಎಲ್ಲರಿಗೂ ಸ್ಫೂರ್ತಿ. ಸಮಾನತೆ, ಪ್ರಗತಿಯ ಕನಸು ಕಂಡ ಮೇರು ನಾಯಕರಾಗಿದ್ದರು’ ಎಂದರು. ಈ ಸಂದರ್ಭದಲ್ಲಿ ರುದ್ರಪ್ಪ ರಾಯಪ್ಪಗೋಳ, ಶ್ರೀನಿವಾಸ ಹಮ್ಮನ್ನವರ, ಯಲ್ಲಪ್ಪ ಹಮ್ಮನ್ನವರ, …
Read More »ಬಾಲಕನ ರಕ್ಷಿಸಲು ಹೋದ ವ್ಯಕ್ತಿ ಸಾವು
ರಾಮದುರ್ಗ: ತಾಲ್ಲೂಕಿನ ಅವರಾದಿ ಗ್ರಾಮದ ಹತ್ತಿರ ಮಲಪ್ರಭಾ ನದಿಯಲ್ಲಿ ಮುಳುಗುತ್ತಿದ್ದ 14 ವರ್ಷದ ಬಾಲಕನ ರಕ್ಷಿಸಲು ಮುಂದಾದ ವ್ಯಕ್ತಿಯೇ ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ. ಶ್ರೀಶೈಲ ಈರಪ್ಪ ಮುದಕನ್ನವರ (45) ಮೃತರು. ‘ಬಾಲಕ ವಿಜಯ ಹೊಳೆನ್ನವರ ನದಿಯಲ್ಲಿ ಮುಳುಗುತ್ತಿದ್ದಾಗ ರಕ್ಷಣೆಗೆ ಶ್ರೀಶೈಲ ಧಾವಿಸಿದ್ದರು. ಬಾಲಕನನ್ನು ರಕ್ಷಿಸಿದ ಬಳಿಕ ನೀರಿನ ಸೆಳೆತಕ್ಕೆ ಸಿಲುಕಿ ಶ್ರೀಶೈಲ ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ. ಸುರೇಬಾನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »ಬೆಳಗಾವಿ: ಕಾಲು- ಬಾಯಿ ಬೇನೆ; ಬೇಕಿದೆ ಅರಿವು
ಬೆಳಗಾವಿ: ಕಾಲು- ಬಾಯಿ ಬೇನೆ; ಬೇಕಿದೆ ಅರಿವು ಬೆಳಗಾವಿ: ಜಿಲ್ಲೆಯ ದನಗಳಿಗೆ ಕಾಲುಬಾಯಿ ರೋಗ ಬಾರದಂತೆ ಮುಂಜಾಗ್ರತಾ ಕ್ರಮವಾಗಿ ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಲಸಿಕಾಕರಣ ನಡೆಸಿದೆ. ಏ.1ರಿಂದ ಲಸಿಕೆ ನೀಡಲು ಶುರು ಮಾಡಿದ್ದು 30 ದಿನಗಳವರೆಗೆ ನೀಡುವ ಗುರಿ ಹೊಂದಲಾಗಿದೆ. ಆದರೆ, ಒಂದೆಡೆ ಇಲಾಖೆಯಲ್ಲಿನ ಸಿಬ್ಬಂದಿ ಕೊರತೆ, ಇನ್ನೊಂದೆಡೆ ಜಿಲ್ಲೆಯ ವ್ಯಾಪ್ತಿ ದೊಡ್ಡದಿರುವುದು ಲಸಿಕಾಕರಣಕ್ಕೆ ತುಸು ಅಡ್ಡಿಯಾಗಿದೆ. ಕೊರತೆಗಳನ್ನು ಮೀರಿಯೂ ಇಲಾಖೆಯಿಂದ ಲಸಿಕಾ ಅಭಿಯಾನ ನಡೆಸಲಾಗಿದೆ. ಪ್ರತಿ …
Read More »ಬೆಳಗಾವಿ ಲೋಕಸಭಾ: ಮೃಣಾಲ್ ಹೆಬ್ಬಾಳಕರ ನಾಮಪತ್ರ ಸಲ್ಲಿಕೆ
ಬೆಳಗಾವಿ: ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬೆಳಗಾವಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಮೃಣಾಲ್ ಹೆಬ್ಬಾಳಕರ ಸೋಮವಾರ ಚುನಾವಣಾಧಿಕಾರಿ ನಿತೇಶ್ ಪಾಟೀಲ ಅವರಿಗೆ ನಾಮಪತ್ರ ಸಲ್ಲಿಸಿದರು. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ, ಶಾಸಕರಾದ ಲಕ್ಷ್ಮಣ ಸವದಿ, ಮಹಾಂತೇಶ ಕೌಜಲಗಿ, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಬಾಗಣ್ಣ ನರೋಟಿ ಇದ್ದರು.
Read More »ಮಿ.ಕುಮಾರಸ್ವಾಮಿ ನೀನು ಚುನಾವಣೆಯಲ್ಲಿ ಗೆಲ್ಲಲ್ಲ : ಏಕವಚನದಲ್ಲೇ ಡಿಸಿಎಂ ಡಿಕೆಶಿ ವಾಗ್ಧಾಳಿ
ಬೆಂಗಳೂರು : ಮಹಿಳೆಯ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆ ಚುನಾವಣೆ ಹೊತ್ತಲ್ಲಿ ವಿರೋಧ ಪಕ್ಷಗಳಿಗೆ ಹೊಸ ಅಸ್ತ್ರಂ ಸಿಕ್ಕಂತಾಗಿದೆ. ಮಿ. ಕುಮಾರಸ್ವಾಮಿ ನೀನು ಚುನಾವಣೆಯಲ್ಲಿ ಗೆಲ್ಲಲ್ಲ ಎಂದು ಏಕವಚನದಲ್ಲೇ ಡಿಸಿಎಂ ಡಿಕೆ ಶಿವಕುಮಾರ್ ವಾಗ್ಧಾಳಿ ನಡೆಸಿದ್ದಾರೆ. ಇಂದು ಸುದ್ದಿಗಾರರ ಜೊತೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್ ಮಿಸ್ಟರ್ ಕುಮಾರಸ್ವಾಮಿ ನೀನು ಚುನಾವಣೆಯಲ್ಲಿ ಗೆಲ್ಲಲ್ಲ, ಹೆದರಿ ಪಕ್ಕದ ಕ್ಷೇತ್ರಕ್ಕೆ ಹೋಗಿದ್ರಿ ಎಂದು ಡಿಕೆಶಿ ವಾಗ್ಧಾಳಿ ನಡೆಸಿದ್ದಾರೆ. ಚರ್ಚೆ ಮಾಡಲು ಸದನಕ್ಕೆ …
Read More »