ರಾಜ್ಯ ಸಚಿವ ಸಂಪುಟದಲ್ಲಿ ಎಸ್‌ಟಿ ಸಮುದಾಯಕ್ಕೆ ಮತ್ತಷ್ಟು ಹೆಚ್ಚಿನ ಪ್ರಾತಿನಿಧ್ಯ ನೀಡಬೇಕು ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಒತ್ತಾಯಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತಮ್ಮ ಸಮುದಾಯಕ್ಕೆ ಹೆಚ್ಚುವರಿಯಾಗಿ ಇನ್ನೂ ಎರಡು ಸಚಿವ ಸ್ಥಾನಗಳನ್ನು ನೀಡಬೇಕು ಎನ್ನುವುದು ನಮ್ಮ ಪ್ರಮುಖ ಬೇಡಿಕೆಯಾಗಿದೆ ಎಂದು ಸ್ಪಷ್ಟಪಡಿಸಿದರು. ಈ ಹಿಂದೆ ನಮ್ಮ ಎಸ್‌ಟಿ ಸಮುದಾಯದಿಂದ ಮೂವರು ಸಚಿವರಿದ್ದರು. ಆದ್ದರಿಂದ ಈಗ ಕನಿಷ್ಠ ಪಕ್ಷ ಮತ್ತೆರಡು ಖಾತೆಗಳನ್ನು ನಮ್ಮ ಸಮುದಾಯಕ್ಕೆ …
Read More »ಭಾರತದ ಮುಂದಿನ ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಧೀರಜ್ ಸೇಠ್ ನೇಮಕ
ನವದೆಹಲಿ: ಭಾರತದ ಮುಂದಿನ ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಧೀರಜ್ ಸೇಠ್ ಅವರನ್ನ ಕೇಂದ್ರ ಸರ್ಕಾರ ನೇಮಕ ಮಾಡಿದೆ. ಧೀರಜ್ ಸೇಠ್ ಅವರು ಜೂನ್ 30 ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಸೇನೆಯ ಹಾಲಿ ಮುಖ್ಯಸ್ಥರಾದ ಜನರಲ್ ಉಪೇಂದ್ರ ದ್ವಿವೇದಿ ಅವರ ನಿವೃತ್ತಿಯ ಬಳಿಕ ಲೆಫ್ಟಿನೆಂಟ್ ಜನರಲ್ ಧೀರಜ್ ಸೇಠ್ ಅವರು ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ಶನಿವಾರ ಕೇಂದ್ರ ಸರ್ಕಾರ ಹೇಳಿದೆ. ಲೆಫ್ಟಿನೆಂಟ್ ಜನರಲ್ ಧೀರಜ್ ಸೇಠ್ ಪ್ರಸ್ತುತ ಸೇನಾ ಸಿಬ್ಬಂದಿಯ …
Read More »ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳು ದುರ್ಮರಣ
ಚಿಕ್ಕಬಳ್ಳಾಪುರ: ಕೃಷಿ ಹೊಂಡಕ್ಕೆ ಆಕಸ್ಮಿಕವಾಗಿ ಬಿದ್ದು ಇಬ್ಬರು ಮಕ್ಕಳು ಸಾವನ್ನಪ್ಪಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ತೊಗರಿ ಘಟ್ಟ ಗ್ರಾಮದಲ್ಲಿ ನಡೆದಿದೆ. ಸವಿತಾ – ಮುನಿರಾಜು ದಂಪತಿಯ ಮಗಳು ದಕ್ಷ (11) ಹಾಗೂ ಆಶಾ- ಪ್ರದೀಪ್ ದಂಪತಿಯ ಮಗ ಧನುಷ್ (4) ಮೃತ ಮಕ್ಕಳು. ಇಬ್ಬರು ಕೃಷಿ ಹೊಂಡದ ಬಳಿ ಆಟವಾಡಲು ತೆರಳಿದ್ದರು. ಈ ವೇಳೆ ಇಬ್ಬರು ಮಕ್ಕಳು ಆಕಸ್ಮಿಕವಾಗಿ ಕೃಷಿ ಹೊಂಡಕ್ಕೆ ಬಿದ್ದು ಸಾವನ್ನಪ್ಪಿದ್ದಾರೆ. ಕೃಷಿ ಹೊಂಡಕ್ಕೆ …
Read More »ಜ್ಯೂಸಲ್ಲಿ ಮತ್ತು ಬರುವ ಔಷಧಿ ಬೆರೆಸಿಕೊಟ್ಟು ಅತ್ಯಾಚಾರ – ಬೆತ್ತಲೆ ವಿಡಿಯೋ ಚಿತ್ರೀಕರಿಸಿ ವಿವಾಹಿತೆಗೆ ಬ್ಲ್ಯಾಕ್‌ಮೇಲ್
ಚಿಕ್ಕಬಳ್ಳಾಪುರ: ಬೆಂಗಳೂರಿನಲ್ಲಿದ್ದ ತನ್ನ ಚಿಕ್ಕಮ್ಮನ ಮನೆಗೆ ಹೋಗಿ ಬರ್ತಿದ್ದ ಮಹಿಳೆಗೆ ಚಿಕ್ಕಮ್ಮನ ಮನೆಯಲ್ಲಿ ಪರಿಚಿತನಾದ ವ್ಯಕ್ತಿ ಮಸಲತ್ತು ಮಾಡಿ ಅತ್ಯಾಚಾರ ಎಸಗಿದ್ದಾನೆಂಬ ಆರೋಪ ಕೇಳಿಬಂದಿದೆ. ಆಕೆಯನ್ನ ನಂಬಿಸಿ ತನ್ನ ಮನೆಗೆ ಕರೆದೊಯ್ದ ಕಾಮುಕ ಜ್ಯೂಸ್ ನಲ್ಲಿ ಮತ್ತು ಬರುವ ಔಷಧಿ ಬೆರೆಸಿ ಕುಡಿಸಿ, ಆಕೆಯ ಮೇಲೆ ಆತ್ಯಾಚಾರ ಎಸಗಿದ್ದಾನೆಂದು ವಿವಾಹಿತ ಮಹಿಳೆ ಆರೋಪಿಸಿದ್ದಾರೆ. ಇಷ್ಟಕ್ಕೆ ಸುಮ್ಮನಾಗದ ಕಾಮುಕ ಆಕೆಯ ಬೆತ್ತಲೆ ವಿಡಿಯೋ ಚಿತ್ರೀಕರಣ ಮಾಡಿಕೊಂಡು ಬ್ಲ್ಯಾಕ್ ಮೇಲ್ ಮಾಡೋಕೆ ಶುರು …
Read More »ಹಲವೆಡೆ ವರುಣನ ಆರ್ಭಟ – ಮುಂದಿನ 3 ಗಂಟೆ ಭಾರೀ ಮಳೆ ಎಚ್ಚರಿಕೆ
ಬೆಂಗಳೂರು: ನಗರದ ಹಲವೆಡೆ ಧಾರಾಕಾರ ಮಳೆಯಾಗುತ್ತಿದೆ. ಮಳೆಯಿಂದಾಗಿ ವಾಹನ ಸವಾರರು ಪರದಾಡಿದ್ದಾರೆ. ಮಲ್ಲೇಶ್ವರ, ಪೀಣ್ಯ, ಜಾಲಹಳ್ಳಿ, ರಾಜಾಜಿನಗರ, ವಿಜಯನಗರ, ಯಶವಂತಪುರ ಸೇರಿದಂತೆ ಹಲವೆಡೆ ಮಳೆಯಾಗುತ್ತಿದೆ. ಮುಂದಿನ ಮೂರು ಗಂಟೆ ನಗರದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಅಲ್ಲದೇ ನಗರದಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಚಿಕ್ಕಬಳ್ಳಾಪುರ ಸೇರಿದಂತೆ ಬೆಂಗಳೂರು ಸುತ್ತಮುತ್ತಲು ಭಾರಿ ಮಳೆ ಮುನ್ಸೂಚನೆ ನೀಡಲಾಗಿದೆ. ಇದರ …
Read More »ಮಂಜುನಾಥನ ಭಕ್ತರಿಗೆ ಗುಡ್‌ನ್ಯೂಸ್ – 4,450 ರೂ.ಗೆ ವಿಶೇಷ ಪ್ರವಾಸ ಪ್ಯಾಕೇಜ್
ಬೆಂಗಳೂರು: ಕರ್ನಾಟಕದಲ್ಲಿ ಅತೀ ಹೆಚ್ಚು ಶಿವ ಭಕ್ತರು ಭೇಟಿ ನೀಡುವ ದೇವಾಲಯ ಅಂದರೆ ಅದು ಶ್ರೀ ಕ್ಷೇತ್ರ ಧರ್ಮಸ್ಥಳ. ಬೆಂಗಳೂರು ಸೇರಿದಂತೆ ಪ್ರತಿನಿತ್ಯ ಸಾವಿರಾರು ಭಕ್ತರು ಧರ್ಮಸ್ಥಳ ಮಂಜುನಾಥನ ದರ್ಶನಕ್ಕಾಗಿ ಹೋಗ್ತಾರೆ. ಗಂಟೆಗಟ್ಟಲೆ ಕ್ಯೂನಲ್ಲಿ ನಿಂತು ದರ್ಶನ ಮಾಡಿಕೊಂಡು ಬರ್ತಾರೆ. ಇನ್ಮುಂದೆ ಕ್ಯೂನಲ್ಲಿ ನಿಲ್ಲಬೇಕಾದ ಅಗತ್ಯವಿಲ್ಲ. ಅದಕ್ಕಾಗಿಯೇ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ (KSTDC) ಹೊಸ ಪ್ರವಾಸ ಪ್ಯಾಕೇಜ್ ತಂದಿದೆ. ರಾಜಧಾನಿಯಿಂದ ಧರ್ಮಸ್ಥಳಕ್ಕೆತೆರಳೋ ಭಕ್ತಾದಿಗಳಿಗೆ ಕೆಎಸ್‌ಟಿಡಿಸಿ ಬಂಪರ್ ಆಫರ್ …
Read More »ಸಾಲ ಕೊಟ್ಟ 10 ಸಾವಿರ ಮರಳಿ ಬರಲಿಲ್ಲ – ಕಾಲೇಜು ಶುಲ್ಕ ಕಟ್ಟಲಾಗದೇ ವಿದ್ಯಾರ್ಥಿನಿ ಆತ್ಮಹತ್ಯೆ
ಕಾರವಾರ: ಕಾಲೇಜು ಶುಲ್ಕ ಕಟ್ಟಲು ತಂದೆ ನೀಡಿದ್ದ ಹಣವನ್ನು ಪರಿಚಯಸ್ಥನಿಗೆ ಸಾಲವಾಗಿ ನೀಡಿದ್ದ ವಿದ್ಯಾರ್ಥಿನಿಯೊಬ್ಬಳು, ಆ ಹಣ ಮರಳಿ ಸಿಗದ ಕಾರಣ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಬೆಳಕೆ ಗ್ರಾಮದಲ್ಲಿ ನಡೆದಿದೆ. ಭಟ್ಕಳದಲ್ಲಿ ಬಿಸಿಎ ವ್ಯಾಸಂಗ ಮಾಡುತ್ತಿದ್ದ ಗಾಯತ್ರಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಕಾಲೇಜು ಶುಲ್ಕ ಪಾವತಿಸಲು ತಂದೆ ನಾಗರಾಜ ಲಚ್ಚಯ್ಯ ನಾಯ್ಕ ಅವರು ಗಾಯತ್ರಿಗೆ 10 ಸಾವಿರ ರೂಪಾಯಿ ನೀಡಿದ್ದರು. ಇದೇ …
Read More »ಮನೆಯೊಳಗೆ ಮಹಿಳೆ, ಸಾಕು ನಾಯಿಯ ಕೊಳೆತ ಶವ ಪತ್ತೆ
ಶಿವಮೊಗ್ಗ: ಇಲ್ಲಿನ ರವೀಂದ್ರ ನಗರದ ಮನೆಯೊಂದರಲ್ಲಿ ಮಹಿಳೆ ಮತ್ತು ಅವರ ಸಾಕು ನಾಯಿಯ ಮೃತದೇಹಗಳು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿವೆ. ಪ್ರಭಾವತಿ (57) ಸಾವನ್ನಪ್ಪಿದವರು ಎಂದು ತಿಳಿದುಬಂದಿದೆ. ಕೆಲವು ದಿನಗಳ ಹಿಂದೆ ವೃದ್ಧೆ ಮೃತಪಟ್ಟಿದ್ದಾರೆ. ಅವರ ಸಾಕು ನಾಯಿ ಕೂಡ ಮನೆಯ ಒಳಗೆ ಸಾವನ್ನಪ್ಪಿದೆ. ಇಂದು ಅಕ್ಕಪಕ್ಕದ ಮನೆಯವರಿಗೆ ವಾಸನೆ ಬಂದ ಹಿನ್ನೆಲೆ ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಬಂದು ಪೊಲೀಸರು ಪರಿಶೀಲನೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಜಯನಗರ ಠಾಣೆ …
Read More »ಸಂಪ್‌ಗೆ ಬಿದ್ದು ಎರಡು ವರ್ಷದ ಮಗು ದುರ್ಮರಣ
ಮಂಡ್ಯ: ಮನೆಯ ಮುಂದಿನ ನೀರಿನ ಸಂಪ್‌ಗೆ ಬಿದ್ದ ಮಗು ಸಾವನ್ನಪ್ಪಿದ ಘಟನೆ ಪಾಂಡವಪುರ ತಾಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಹರೀಶ್ ಮತ್ತು ಸುಷ್ಮಾ ದಂಪತಿ ಪುತ್ರ ವಿನು (2) ಮೃತ ಬಾಲಕ. ಮನೆಯ ಮುಂದೆ ಆಟವಾಡುತ್ತಿದ್ದ ವೇಳೆ ಮಗು ಸಂಪ್‌ಗೆ ಬಿದ್ದು ಮೃತಪಟ್ಟಿದೆ. ಮಗುವನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಪಾಂಡವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
Read More »ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಉರುಳಿಗೆ ಸಿಕ್ಕು ಗಾಯಗೊಂಡ ಹುಲಿ ಓಡಾಟ – ಪ್ರವಾಸಿಗರಿಗೆ ಎಚ್ಚರಿಕೆ
ಚಿಕ್ಕಮಗಳೂರು: ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಉರುಳಿಗೆ ಸಿಕ್ಕು ಗಾಯಗೊಂಡ ಹುಲಿ ಓಡಾಡುತ್ತಿದ್ದು, ಪ್ರವಾಸಿಗರು ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರಿಗೆ ಜ್ರಾಗ್ರತೆಯಿಂದ ಇರುವಂತೆ ಅರಣ್ಯ ಇಲಾಖೆ ಎಚ್ಚರಿಕೆ ನೀಡಿದೆ. ಹುಲಿಯ ಸೊಂಟದಲ್ಲಿ ಉರುಳು ನೇತಾಡುತ್ತಿದೆ. ಇದರಿಂದ ಗಾಯಗೊಂಡ ಹುಲಿ, ನೋವಿನಿಂದಲೇ ಕಳೆದ ನಾಲ್ಕೈದು ದಿನಗಳಿಂದ ಓಡಾಡುತ್ತಿದೆ. ಆ ನೋವಿನಲ್ಲೂ ಜಿಂಕೆ ಹಾಗೂ ಕಡವೆಯನ್ನು ಹುಲಿ ಬೇಟೆಯಾಡಿದೆ. ಸುತ್ತಮುತ್ತ ಪ್ರಾಣಿಗಳ ಕಳೆಬರಹ ಪತ್ತೆಯಾಗಿವೆ. ಮೂರ್ನಾಲ್ಕು ದಿನದಿಂದ ಹುಲಿ ಸೆರೆಗೆ ಅರಣ್ಯ ಅಧಿಕಾರಿಗಳು ಹರಸಾಹಸ ಪಡುತ್ತಿದ್ದಾರೆ. ಕ್ಯಾಮೆರಾಗಳನ್ನು …
Read More »
Laxmi News 24×7