ಚಿಕ್ಕೋಡಿ: ಉತ್ತರ ಕರ್ನಾಟಕದ ಜೀವನದಿ ಕೃಷ್ಣೆಯಲ್ಲಿ ನೀರಿನ ಪ್ರಮಾಣ ತೀವ್ರ ಕುಸಿತ ಕಂಡಿದೆ. ಇದರಿಂದ ಮನುಷ್ಯರು ಮಾತ್ರವಲ್ಲ; ಜಲಚರಗಳಿಗೂ ಆತಂಕ ಎದುರಾಗಿದೆ. ಚಿಕ್ಕೋಡಿ ಉಪವಿಭಾಗದ ಎಲ್ಲ ಪ್ರದೇಶಗಳಲ್ಲೂ ಕುಡಿಯುವ ನೀರಿಗೆ, ಬಳಕೆಗೆ, ಹೊಲ- ಗದ್ದೆಗಳಿಗೆ, ಜಾನುವಾರುಗಳಿಗೂ ಸಂಕಷ್ಟ ಎದುರಾಗಿದೆ. ಚಿಕ್ಕೋಡಿ, ರಾಯಬಾಗ, ಕಾಗವಾಡ, ಅಥಣಿ ತಾಲ್ಲೂಕು ವ್ಯಾಪ್ತಿಯ ನೂರಾರು ಗ್ರಾಮಗಳು ಕೃಷ್ಣಾ ನದಿಯನ್ನು ಅವಲಂಬಿಸಿವೆ. ಉಪ ವಿಭಾಗ ವ್ಯಾಪ್ತಿಯಲ್ಲಿ 10 ಸಣ್ಣ ಪುಟ್ಟ ಬ್ಯಾರೇಜ್‌ಗಳಿದ್ದು, ಇನ್ನು 10 ದಿನಗಳಲ್ಲಿ ಬ್ಯಾರೇಜ್‌ನಲ್ಲಿ ಸಂಗ್ರಹವಾಗಿರುವ …
Read More »ಹಿರೇಬಾಗೇವಾಡಿ: 25 ವರ್ಷಗಳ ಬಳಿಕ ನಡೆಯುತ್ತಿರುವ ಗ್ರಾಮದೇವಿ ಜಾತ್ರೆ
ಹಿರೇಬಾಗೇವಾಡಿ: 25 ವರ್ಷಗಳ ನಂತರ ನಡೆಯುತ್ತಿರುವ ಗ್ರಾಮದೇವಿ ಜಾತ್ರೆಗೆ ಹಿರೇಬಾಗೇವಾಡಿ ಸಜ್ಜಾಗುತ್ತಿದ್ದು, ಊರಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ. 1998ರ ಮೇ ತಿಂಗಳಲ್ಲಿ ಹಿರೇಬಾಗೇವಾಡಿಯಲ್ಲಿ ಜಾತ್ರೆ ನಡೆದಿತ್ತು. ಈ ಬಾರಿ ಏಪ್ರಿಲ್ 12ರಿಂದ ಮೇ 3ರವರೆಗೆ ಜಾತ್ರೆ ನಡೆಯಲಿದ್ದು, 21 ದಿನಗಳ ಕಾಲ ವಿವಿಧ ಧಾರ್ಮಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಜಾತ್ರೆ ಪ್ರಯುಕ್ತ, ಗ್ರಾಮಸ್ಥರು ತಮ್ಮ ಮನೆಗಳಿಗೆ ಸುಣ್ಣ-ಬಣ್ಣ ಬಳಿದು ಅಲಂಕರಿಸುತ್ತಿದ್ದಾರೆ. ಕಟ್ಟಡ ನಿರ್ಮಾಣ ಕಾಮಗಾರಿ ಕೈಗೆತ್ತಿಕೊಂಡವರು, ತ್ವರಿತವಾಗಿ ಮುಗಿಸುವುದರಲ್ಲಿ ನಿರತವಾಗಿದ್ದಾರೆ. ಇನ್ನೂ ಕೆಲವರು …
Read More »ಯುಗಾದಿ ಬಳಿಕ ರಾಜ್ಯದಲ್ಲಿ ಒಳ್ಳೆ ಬೆಳೆ, ಮಳೆಯಾಗುತ್ತೆ ; ಕೋಡಿಮಠ ಶ್ರೀ ಭವಿಷ್ಯ
ಬೆಂಗಳೂರು: ರಾಜ್ಯದ ಬಗ್ಗೆ ಈ ಹಿಂದೆ ಅನೇಕ ರೀತಿಯ ಭವಿಷ್ಯವನ್ನು ಕೋಡಿಮಠದ ಶ್ರೀಗಳು ಹೇಳಿದ್ದರು. ಇದೀಗ ಮತ್ತೊಂದು ಸ್ಪೋಟಕ ಭವಿಷ್ಯ ನುಡಿದ್ದಾರೆ. ಅದೇ ಯುಗಾದಿ ನಂತ್ರ ಒಳ್ಳೆಯ ಮಳೆಯಾಗಿ ಬೆಳೆ ಬಂದ್ರೇ, ಧಾರ್ಮಿಕ ಮುಖಂಡನ ಸಾವು ಕೂಡ ಆಗಲಿದೆ ಎಂಬುದಾಗಿದೆ. ಯುಗಾದಿ ಕಳೆದ ನಂತರ ರಾಜ್ಯದಲ್ಲಿ ಒಳ್ಳೆ ಬೆಳೆ ಮತ್ತು ಮಳೆಯಾಗುವ ಲಕ್ಷಣಗಳಿವೆ ಎಂದು ಭವಿಷ್ಯ ನುಡಿದರು. ಇನ್ನು ಇದೇ ವೇಳೆ ರಾಜ್ಯ ರಾಜಕೀಯ ಬಗ್ಗೆ ಯುಗಾದಿ ಕಳೆದ ನಂತರ …
Read More »ಸಿಎಂ ತವರಿನಲ್ಲೇ ಚುನಾವಣಾ ಬಹಿಷ್ಕಾರ
ಮೈಸೂರು: ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಮೈಸೂರು ಮತ್ತು ಚಾಮರಾಜನಗರ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬರುವೆ ಎಂದು ಪಣತೊಟ್ಟಿರುವ ಸಿಎಂ ಸಿದ್ದರಾಮಯ್ಯಗೆ ಇದೀಗ ಭಾರೀ ಮುಖಭಂಗ ಉಂಟಾಗಿದ್ದು, ನಮಗೆ ಚುನಾವಣೆಯೇ ಬೇಡ, ಚುನಾವಣೆ ಬಹಿಷ್ಕರಿಸುತ್ತೇವೆ ಎಂದು ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ. ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಸುನಿಲ್ ಬೋಸ್ ಪರ ಮತ ಕೇಳಲು ಹೋದ ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯರನ್ನು ತರಾಟೆಗೆ ತೆಗೆದುಕೊಂಡ ಗ್ರಾಮಸ್ಥರು, ಹೋಗಿ ಹೋಗಿ ನಾವು …
Read More »ಪ್ರಧಾನಿ ಮೋದಿಯವರಿಂದಾಗಿ ಭಾರತಕ್ಕೆ ವಿಶ್ವ ಮನ್ನಣೆ
ಪ್ರಧಾನಿ ಮೋದಿಯವರಿಂದಾಗಿ ಭಾರತಕ್ಕೆ ವಿಶ್ವ ಮನ್ನಣೆ ಮೋದಿಯವರನ್ನು ಸೋಲಿಸಲು ನಮ್ಮ ವಿರೋಧಿಗಳಿಗೆ ಶತ್ರು ರಾಷ್ಟ್ರಗಳ ಬೆಂಬಲ- ಎನ್ಡಿಎ ಅಭ್ಯರ್ಥಿ ಜಗದೀಶ್ ಶೆಟ್ಟರ್ ನಾಗನೂರ ಪಟ್ಟಣದಲ್ಲಿ ಅರಭಾವಿ ಮತಕ್ಷೇತ್ರದ ಬೂತ್ ಮಟ್ಟದ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಶೆಟ್ಟರ್ ಶೆಟ್ಟರ್ ಅವರಿಗೆ ಸಾಥ್ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ, ಸಂಸತ್ ಸದಸ್ಯೆ ಮಂಗಲ ಅಂಗಡಿ ಮೂಡಲಗಿ: ವಿಶ್ವನಾಯಕನಾಗಿರುವ ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಠಿ ಆಡಳಿತದಿಂದ ಭಾರತವು ಪ್ರಪಂಚದಲ್ಲಿಯೇ ಬಲಾಢ್ಯ ರಾಷ್ಟ್ರವಾಗುತ್ತಿದ್ದು, ಕ್ಷಿಪ್ರಗತಿಯಲ್ಲಿ ಸಾಗುತ್ತಿರುವ …
Read More »ಹೆಬ್ಬಾಳಕರ ಲಿಂಗಾಯತ ಪಂಚಮಸಾಲಿ ಅಲ್ಲ..: ಮುರುಗೇಶ್ ನಿರಾಣಿ
ಬೆಳಗಾವಿ: ಕಾಂಗ್ರೆಸ್ ನಾಯಕಿ ಹಾಗೂ ಸಚಿವೆ ಲಕ್ಷ್ಮೀ ಹೆಬ್ಬಾಳಕರ ವೀರಶೈವ ಲಿಂಗಾಯತ ಪಂಚಮಸಾಲಿ ಅಲ್ಲ. ಬದಲಿಗೆ ಬಣಜಿಗ ಸಮಾಜದವರು ಎಂದು ಮಾಜಿ ಸಚಿವ ಮುರುಗೇಶ ನಿರಾಣಿ ಹೇಳಿದರು. ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಖಾನಾಪುರ ತಾಲೂಕಿನ ಹಟ್ಟಿಹೋಳಿ ಗ್ರಾಮದ ಲಕ್ಷ್ಮೀ ಹೆಬ್ಬಾಳಕರ ವಿವಾಹಕ್ಕೆ ಮೊದಲು ಲಕ್ಷ್ಮಿ ಹಟ್ಟಿಹೋಳಿ ಹಾಗೂ ವೀರಶೈವ ಲಿಂಗಾಯತ ಎಂದು ದಾಖಲೆಯಲ್ಲಿದೆ.ಅದರಲ್ಲಿ ಪಂಚಮಸಾಲಿ ಎಂದಿಲ್ಲ. ಮೇಲಾಗಿ ಅವರು ರವೀಂದ್ರ ಹೆಬ್ಬಾಳಕರ ಅವರನ್ನು ವಿವಾಹವಾದ ನಂತರ ಲಿಂಗಾಯತ ಬಣಜಿಗ …
Read More »ಈ ನಂಬರ್ ಪ್ಲೇಟ್ ಅಳವಡಿಸದ ವಾಹನ ಸವಾರರಿಗೆ ದಂಡಾಸ್ತ್ರ ಪ್ರಯೋಗ, ಯಾವಾಗಿನಿಂದ? ಸಾರಿಗೆ ಇಲಾಖೆ ಹೇಳಿದ್ದೇನು?
ಬೆಂಗಳೂರು, ಏಪ್ರಿಲ್, 08: ಈಗಾಗಲೇ ಸಾರಿಗೆ ಇಲಾಖೆ 2019ರ ಹಿಂದಿನ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸುವಂತೆ ಸೂಚನೆ ನೀಡಿತ್ತು. ಆದರೆ ಕೆಲವು ಜನರು ಇದನ್ನು ಪಾಲಿಸಿದರೆ, ಇನ್ನು ಬಹುತೇಕ ಮಂದಿ ಈ ನಂಬರ್ ಪ್ಲೇಟ್ ಅನ್ನು ಅಳವಡಿಕೆ ಮಾಡಿಕೊಂಡಿಲ್ಲ ಎನ್ನುವುದು ಸಾರಿಗೆ ಇಲಾಖೆಯ ವಾದವಾಗಿದೆ. ಆದ್ದರಿಂದ ಯಾರೂ ತಮ್ಮ ವಾಹನಗಳಿಗೆ ಈ ನಂಬರ್ ಪ್ಲೇಟ್ ಅನ್ನು ಹಾಕಿಸಿಲ್ಲವೋ ಅಂತಹವರ ಮೇಳೆ ದಂಡಾಸ್ತ್ರ ಪ್ರಯೋಗ ಮಾಡಲು ಇಲಾಖೆ ಮುಂದಾಗಿದೆ. 2019ಕ್ಕಿಂತ …
Read More »ಬೆಳಗಾವಿ ಲೋಕಸಭೆ: ಸ್ಟಾರ್ ಪ್ರಚಾರಕರತ್ತ ಬಿಜೆಪಿ-ಕಾಂಗ್ರೆಸ್ ಅಭ್ಯರ್ಥಿಗಳ ಚಿತ್ತ
ಬೆಳಗಾವಿ: ಬೆಳಗಾವಿ ಮತ್ತು ಚಿಕ್ಕೋಡಿ ಲೋಕಸಭೆ ಕ್ಷೇತ್ರಗಳಲ್ಲಿ ಪ್ರಚಾರ ಚುರುಕುಗೊಳಿಸಿದ ಬಿಜೆಪಿ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳು, ನಿತ್ಯ ಮತದಾರರ ಮನೆಬಾಗಿಲಿಗೇ ಹೋಗುತ್ತಿದ್ದಾರೆ. ಮಹಿಳಾ ಮಂಡಳಗಳು, ಯುವಕ ಮಂಡಳಗಳು ಮತ್ತು ಇತರೆ ಸಂಘ-ಸಂಸ್ಥೆಗಳನ್ನು ಎಡತಾಕುತ್ತಿದ್ದಾರೆ. ಇದರ ಜತೆಗೆ, ತಮ್ಮ ಪಕ್ಷದ ಪರ ಅಲೆ ಸೃಷ್ಟಿಸಲು ಸ್ಟಾರ್ ಪ್ರಚಾರಕರಿಗಾಗಿ ಕಾಯುತ್ತಿದ್ದಾರೆ. ಅವರ ಭೇಟಿಯ ದಿನಾಂಕಗಳನ್ನು ಆಧರಿಸಿ ದೊಡ್ಡಮಟ್ಟದ ಸಮಾವೇಶಗಳನ್ನು ಸಂಘಟಿಸಿ, ಮತದಾರರನ್ನು ಸೆಳೆಯಲು ತಂತ್ರ ರೂಪಿಸುತ್ತಿದ್ದಾರೆ. ಬೆಳಗಾವಿ ಕ್ಷೇತ್ರದಲ್ಲಿ ಬಿಜೆಪಿಯಿಂದ ಮಾಜಿ ಮುಖ್ಯಮಂತ್ರಿ …
Read More »ಪೊಲೀಸ್ ಠಾಣೆ ಮಕ್ಕಳ ಸ್ನೇಹಿ ಆಗಿರಲಿ
ಬೆಳಗಾವಿ: ‘ವಿಶೇಷ ಮಕ್ಕಳ ಪೊಲೀಸ್ ಘಟಕದಲ್ಲಿ ಕಾರ್ಯನಿರ್ವಹಿಸುವ ಮಕ್ಕಳ ಕಲ್ಯಾಣ ಪೋಲಿಸ್ ಅಧಿಕಾರಿಗಳು ಜವಾಬ್ದಾರಿಯಿಂದ ಕೆಲಸ ಮಾಡಬೇಕು. ತಮ್ಮ ಹತ್ತಿರ ಬರುವ ಮಕ್ಕಳ ಸಮಸ್ಯೆ ಸರಿಯಾಗಿ ಆಲಿಸಿ, ಅವರನ್ನು ಆಪ್ತ ಸಮಾಲೋಚನೆಗೆ ಒಳಪಡಿಸಬೇಕು’ ಎಂದು ನಗರ ಪೊಲೀಸ್ ಕಮಿಷನರ್ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಹೇಳಿದರು. ಇಲ್ಲಿನ ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಬಿಮ್ಸ್) ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪೊಲೀಸ್, ನಗರ ಪೊಲೀಸ್ ಕಮಿಷನರೇಟ್ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ …
Read More »ರೈತರ ಬಾಳು ಬೆಳಗಿದ ಬಾಬೂಜಿ’
ಚಿಕ್ಕೋಡಿ: ‘ಬಾಬು ಜಗಜೀವನ ರಾಮ್ ಅವರು ತಮ್ಮ ಅಧಿಕಾರಾವಧಿಯಲ್ಲಿ ರೈತರಿಗೆ ಅನುಕೂಲವಾಗುವ ಹಲವು ಯೋಜನೆಗಳನ್ನು ಜಾರಿಗೊಳಿಸಿದ್ದರಿಂದ ಹಸಿರು ಕ್ರಾಂತಿಯ ಹರಿಕಾರ ಎಂದೇ ಹೆಸರಾಗಿದ್ದಾರೆ’ ಎಂದು ಚಿಕ್ಕೋಡಿ ತಹಶೀಲ್ದಾರ್ ಚಿದಂಬರ ಕುಲಕರ್ಣಿ ಹೇಳಿದರು. ಪಟ್ಟಣದ ಸಮಾಜ ಕಲ್ಯಾಣ ಇಲಾಖೆ ಸಭಾ ಭವನದಲ್ಲಿ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ, ಪುರಸಭೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಆಶ್ರಯದಲ್ಲಿ ಹಮ್ಮಿಕೊಂಡ ಬಾಬು ಜಗಜೀವನರಾಮ್ ಅವರ ಜನ್ಮ ದಿನಾಚರಣೆ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದರು. ಚಿಕ್ಕೋಡಿಯ …
Read More »