ಕಿತ್ತೂರು: ಇಲ್ಲಿನ ರಾಷ್ಟ್ರೀಯ ಹೆದ್ದಾರಿಯ ಹಿರೇಹಳ್ಳ ಬಳಿ ಕಾರ್ ಅಡ್ಡಗಟ್ಟಿ ₹10 ಲಕ್ಷ ಕಸಿದ ಕಳ್ಳರು ಪರಾರಿಯಾಗಿದ್ದಾರೆ. ಬೆಳಗಾವಿ ಶಾಸ್ತ್ರೀನಗರದ ಹಾರ್ಡ್‌ವೇರ್ ಅಂಗಡಿ ಮಾಲೀಕ ಅಮಿತ್ ಅಶೋಕ ಪೇರಿವಾಲ ಅವರು ಶಿವಮೊಗ್ಗದ ಮಿತ್ರರಿಗೆ ₹10 ಲಕ್ಷ ಕೊಡಲು, ತಮ್ಮ ಅಂಗಡಿಯ ಕೆಲಸಗಾರ ಚಂದನಾಥ ರಾಮೇಶ್ವರ ಸಿದ್ ಹಾಗೂ ಸುನೀಲ ರಾಜಕುಮಾರ ಪ್ರಜಾಪತ್ ಅವರನ್ನು ಕಳುಹಿಸಿದ್ದರು. ಅವರು ಸಾಗುತ್ತಿದ್ದ ಕಾರ್ ಅಡ್ಡಗಟ್ಟಿದ ಕಳ್ಳರು ಹಣ ಕಸಿದು ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಹೆಚ್ಚುವರಿ …
Read More »ಚೋರ್ಲಾ ಘಾಟ್‌ಗೆ ಕೇಂದ್ರ ‘ಪ್ರವಾಹ’ ತಂಡದ ಸದಸ್ಯರ ಭೇಟಿ
ಬೆಳಗಾವಿ: ಕರ್ನಾಟಕ- ಗೋವಾ ಗಡಿಯ ಚೋರ್ಲಾ ಘಾಟ್‌ಗೆ ಭಾನುವಾರ ಭೇಟಿ ನೀಡಿದ ಕೇಂದ್ರದ ‘ಪ್ರವಾಹ’ ತಂಡದ ಸದಸ್ಯರು, ಮಳೆ ನಡುವೆಯೇ ಮಹದಾಯಿ ಜಲಾನಯನ ಪ್ರದೇಶ ವೀಕ್ಷಿಸಿದರು. ಚೋರ್ಲಾ ಘಾಟ್ ಮತ್ತು ಹರತಾಳ ನಾಲೆ ವೀಕ್ಷಿಸಿದ ಅಧಿಕಾರಿಗಳಿಗೆ ನೀರಾವರಿ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದರು. ‘ಅನುಮತಿ ಇಲ್ಲದೆ ಕರ್ನಾಟಕ ಮಹದಾಯಿ ಯೋಜನೆ ಕಾಮಗಾರಿ ಆರಂಭಿಸಿದೆ’ ಎನ್ನುವ ಗೋವಾ ಸರ್ಕಾರದ ಆರೋಪದ ಹಿನ್ನೆಲೆಯಲ್ಲಿ ಈ ಸದಸ್ಯರು ಪರಿಶೀಲನೆ ನಡೆಸಿದರು. ಆದರೆ, ಇಲ್ಲಿ ಯಾವುದೇ …
Read More »ಕಳಸಾ – ಬಂಡೂರಿ ತಡೆಯಲು ಗೋವಾ ಯತ್ನ: ಶೆಟ್ಟರ್
ಬೆಳಗಾವಿ: ‘ಮಹದಾಯಿ ಜಲಾನಯನ ಪ್ರದೇಶಕ್ಕೆ ‘ಪ್ರವಾಹ’ ಸಂಸ್ಥೆ ಸದಸ್ಯರು ಭೇಟಿ ನೀಡುವುದನ್ನು ಗಂಭೀರವಾಗಿ ಪರಿಗಣಿಸಬೇಕಿಲ್ಲ. ಈಗಾಗಲೇ ನಾವು ಕಾನೂನು ರೀತಿ ಮೇಲುಗೈ ಸಾಧಿಸಿದ್ದೇವೆ. ಅವರು ಬಂದು ನೋಡಿಕೊಂಡು ಹೋಗಲಿ’ ಎಂದು ಸಂಸದ ಜಗದೀಶ ಶೆಟ್ಟರ್ ಹೇಳಿದರು. ನಗರದಲ್ಲಿ ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಕಳಸಾ- ಬಂಡೂರಿ ನಾಲಾ ತಿರುವು ಸಂಬಂಧ ಈಗಾಗಲೇ ಸುಪ್ರೀಂ ಕೋರ್ಟ್ ಆದೇಶ ಬಂದಿದೆ. ಆದರೂ ಗೋವಾ ಸರ್ಕಾರ ಕೇಂದ್ರದ ತಂಡವನ್ನು ಆಹ್ವಾನಿಸಿದೆ. ಯೋಜನೆ ತಡೆಹಿಡಿಯಲು …
Read More »ಮಕ್ಕಳೇ ದೇವರು ಎಂದ ಸ್ಕೂಲ್ ಮಾಸ್ಟರ್: ಒಂದು ಶಾಲೆ, ಒಬ್ಬರೇ ಶಿಕ್ಷಕ, 29 ವರ್ಷ ಸೇವೆ!
ಮಕ್ಕಳ ವಿದ್ಯಾಭ್ಯಾಸ, ಆರೋಗ್ಯ ಸಮಸ್ಯೆ, ಹೆತ್ತವರ ಜವಾಬ್ದಾರಿ… ಇಂಥವೇ ಕಾರಣಗಳನ್ನು ಮುಂದಿಟ್ಟು ನೌಕರರು ಬೇರೆ ಬೇರೆ ಊರುಗಳಿಗೆ ವರ್ಗಾವಣೆ ಬಯಸುವುದನ್ನು ಕೇಳಿದ್ದೇವೆ, ನೋಡಿದ್ದೇವೆ. ಆದರೆ ಇಲ್ಲೊಬ್ಬರು ಶಿಕ್ಷಕರು ಪೂರ್ತಿ 29 ವರ್ಷಗಳನ್ನು ಒಂದೇ ಶಾಲೆಯಲ್ಲಿ ಕಳೆದಿದ್ದಾರೆ. ಸೇವೆ ಆರಂಭಿಸಿದ ಶಾಲೆಯಲ್ಲಿಯೇ ನಿವೃತ್ತಿ ಹೊಂದಿದ್ದಾರೆ! ವೇತನ ಪಡೆದು ಸರ್ಕಾರಿ ಕೆಲಸ ಮಾಡುವವ ರದ್ದು ಸೇವೆಯಲ್ಲ, ಅದು ಕರ್ತವ್ಯ ಅಂತ ಹೆಚ್ಚಿನವರು ಪ್ರತಿಪಾದಿಸುತ್ತಾರೆ. ಇಲ್ಲಿ ಪರಿಚಯಿಸುತ್ತಿರುವ ಶಿಕ್ಷಕರದ್ದು ಸೇವೆಯೋ, ಕರ್ತವ್ಯವೋ ಓದುಗರೇ ನಿರ್ಧರಿಸಬೇಕು. …
Read More »ಬೆಳ್ಳಂಬೆಳಗ್ಗೆ ಮೂವರ ಮೇಲೆ ಚಿರತೆ ದಾಳಿ
ದೇವದುರ್ಗ(ರಾಯಚೂರು): ತಾಲೂಕಿನ ಡಿ.ಕರಡಿಗುಡ್ಡ ಗ್ರಾಮದಲ್ಲಿ ರವಿವಾರ ಮೂವರ ಮೇಲೆ ಚಿರತೆ ದಾಳಿ ನಡೆಸಿದ ಘಟನೆ ಜರುಗಿದ್ದು, ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ. ಮೂವರು ಚಿರತೆ ಬಾಯಿಂದ ತಪ್ಪಿಸಿಕೊಂಡಿದ್ದು, ಸಣ್ಣಪುಟ್ಟ ಗಾಯಗಳಾಗಿವೆ. ಬೆಳಗ್ಗೆ ರಂಗನಾಥ್ ಬಹಿರ್ದೆಸೆಗೆ ಹೋದಾಗ ಚಿರತೆ ಕಂಡಿದೆ. ಹೆದರಿಕೊಂಡು ಓಡಿ ಬಂದು ರಮೇಶ್, ಮಲ್ಲಣ್ಣರಿಗೆ ಎನ್ನುವವರಿಗೆ ಮಾಹಿತಿ ನೀಡಿದ್ದಾರೆ. ಅವರು ಚಿರತೆ ಹೆದರಿಸಲು ಆಯುಧ ಹಿಡಿದು ಹೋದಾಗ ದಾಳಿ ನಡೆಸಿದೆ ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ಪಟ್ಟಣದ ಸರ್ಕಾರಿ ಆಸ್ಪತ್ರೆಗೆ …
Read More »ಲೋಕಾಯುಕ್ತ ಬಲೆಗೆ ಬಿದ್ದ ADLR&R.I.
ಕೋಲಾರ : 30 ಸಾವಿರ ಲಂಚ ಪಡೆಯುವಾಗ ಇಬ್ಬರು ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತರ ಬಲೆಗೆ ಬಿದ್ದ ಘಟನೆ ಜಿಲ್ಲೆಯ ಮಾಲೂರು ತಾಲೂಕು ಕಚೇರಿಯಲ್ಲಿ ನಡೆದಿದೆ. ಭೂ ದಾಖಲೆಗಳ ವಿಭಾಗದ ಸಹಾಯಕ ನಿದೇರ್ಶಕಿ ಅಶ್ವಿನಿ ಹಾಗೂ ಕಂದಾಯ ನಿರೀಕ್ಷಕ ಮಂಜುನಾಥ್ ಎಂಬ ಅಧಿಕಾರಿಗಳು ಲೋಕಾ ಬಲೆಗೆ ಬಿದ್ದಿದ್ದಾರೆ. ಭೂ ಪರಿವರ್ತನೆಗೆ 40 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪಿಗಳನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ.ಹೊಸಕೋಟೆಯ ಮಂಜುನಾಥ್ ಎಂಬುವವರ ಬಳಿ ಲಂಚ …
Read More »ದರ್ಶನ್ ಗ್ಯಾಂಗ್ ವಿರುದ್ಧ 200 ಸಾಕ್ಷಿಗಳ ಸಂಗ್ರಹ
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆಯ ಕೊನೆಯ ಹಂತಕ್ಕೆ ತಲುಪಿರುವ ಪೊಲೀಸರು, ನಟ ದರ್ಶನ್, ಆತನ ಪ್ರೇಯಸಿ ಪವಿತ್ರಾ ಗೌಡ ಹಾಗೂ ಇತರ ಆರೋಪಿಗಳ ವಿರುದ್ಧ 200ಕ್ಕೂ ಹೆಚ್ಚು ಭೌತಿಕ, ತಾಂತ್ರಿಕ ಹಾಗೂ ವೈಜ್ಞಾನಿಕ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದಾರೆ. ಕೊಲೆ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ರಂಗಕ್ಕಿಳಿದ ವಿಜಯನಗರ ಉಪವಿಭಾಗದ ಎಸಿಪಿ ಚಂದನ್ ಕುಮಾರ್ ಮತ್ತು ತಂಡ ಪ್ರಕರಣದಲ್ಲಿ ಆರೋಪಿಗಳಿಗೆ ಕಠಿನ ಶಿಕ್ಷೆಗೆ ಅಗತ್ಯವಿರುವ ಎಲ್ಲ ರೀತಿಯ ಸಾಕ್ಷ್ಯಗಳನ್ನು ಸಂಗ್ರಹಿಸಿದೆ. ಇದುವರೆಗೂ …
Read More »ಡ್ರಗ್ಸ್, ಜೂಜು ಮಟ್ಟಹಾಕಿ: ಸಿಎಂ
ಬೆಂಗಳೂರು: ಇನ್ನು ಮುಂದೆ ಕ್ಲಬ್‌ಗಳಲ್ಲಿ ಇಸ್ಪೀಟ್, ಬೆಟ್ಟಿಂಗ್, ಡ್ರಗ್ಸ್ ವ್ಯವಹಾರಗಳನ್ನು ನಿಲ್ಲಿಸದೆ ಇದ್ದರೆ ಆಯಾ ಎಸ್‌ಪಿ, ಡಿಸಿಪಿ, ಐಜಿಗಳೇ ನೇರ ಹೊಣೆಗಾರರಾಗುತ್ತಾರೆ. ಈ ಅಕ್ರಮಗಳನ್ನು ಮಟ್ಟ ಹಾಕಲು ರವಿವಾರದಿಂದಲೇ ಕಾರ್ಯಪ್ರವೃತ್ತರಾಗಬೇಕು ಎಂದು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ ನೀಡಿದ್ದಾರೆ. ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಕಚೇರಿಯಲ್ಲಿ ಶನಿವಾರ ಹಮ್ಮಿಕೊಂಡಿದ್ದ ಹಿರಿಯ ಪೊಲೀಸ್ ಅಧಿಕಾರಿಗಳ ಸಮಾವೇಶವನ್ನು ಉದ್ಘಾಟಿಸಿದ ಬಳಿಕ ಪೊಲೀಸ್ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ ಸಿಎಂ, ಎಲ್ಲ …
Read More »ಆಗಸ್ಟ್ ನಲ್ಲೇ ʻ7 ನೇ ವೇತನ ಆಯೋಗ ವರದಿʼ ಜಾರಿ
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ನೌಕರರಿಗೆ ಏಳನೇ ವೇತನ ಆಯೋಗದ ಶಿಫಾರಸುಗಳ ಆಗಸ್ಟ್‌ನಲ್ಲಿ ಜಾರಿಗೆ ಬರುವುದು ಖಚಿತವಾಗಿದೆ. ಏಳನೇ ವೇತನ ಆಯೋಗದ ಶಿಫಾರಸುಗಳ ಹಣಕಾಸು ಹೊಂದಾಣಿಕೆ ಕುರಿತಂತೆ ಪರಿಶೀಲನೆ ನಡೆಸಿ ಮಾಹಿತಿ ಕೊಡುವಂತೆ ಸಿಎಂ ಸಿದ್ದರಾಮಯ್ಯ ನೀಡಿದ್ದ ಸೂಚನೆಗೆ ಆರ್ಥಿಕ ಇಲಾಖೆಗೆ ಒಪ್ಪಿಗೆ ನೀಡಿದ್ದು, ಆಗಸ್ಟ್ ನಲ್ಲಿ ಏಳನೇ ವೇತನ ಆಯೋಗ ಜಾರಿಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಏಳನೇ ವೇತನ ಆಯೋಗ ಶೇ.27.5 …
Read More »ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ; ತಪ್ಪಿದ ಭಾರಿ ಅನಾಹುತ
ವಿಜಯಪುರ: ಕಳೆದ ವರ್ಷ ಬಾಯ್ಲರ್ ಸ್ಪೋಟಗೊಂಡು ಕಾರ್ಮಿಕನ ಜೀವ ಪಡೆದ ದುರಂತ ಘಟನೆ ಮಾಸುವ ಮುನ್ನವೇ ಜಿಲ್ಲೆಯ ಕೃಷ್ಣಾನಗರದ ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಭಾನುವಾರ ಬಾಯ್ಲರ್ ಸ್ಫೋಟಗೊಂಡಿದೆ. ಸುದೈವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ. ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಕೃಷ್ಣಾನಗರದಲ್ಲಿರುವ ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಭಾನುವಾರ ನಸುಕಿನಲ್ಲಿ ಬಾಯ್ಲರ್ ಸ್ಫೋಟಗೊಂಡಿದೆ. ಸ್ಫೋಟ ಸಂಭವಿಸುವ ಕೆಲವೇ ಸಮಯಕ್ಕೆ ಮುನ್ನ ಕರ್ತವ್ಯದಲ್ಲಿದ್ದ ಸುಮಾರು 15 ಕಾರ್ಮಿಕರು ಚಹಾ ಕುಡಿಯಲೆಂದು ಹೊರ …
Read More »
Laxmi News 24×7