Breaking News

ದಾವಣಗೆರೆಯಲ್ಲಿ ಜಿಹಾದಿ ಸಂಚು ಬಯಲು: ರಾಮಮಂದಿರ ಸ್ಫೋಟಿಸಲು ಸ್ಕೆಚ್, ಶಸ್ತ್ರಾಸ್ತ್ರ ಹಿಡಿದು ಫೋಟೋಶೂಟ್‌ ದಾವಣಗೆರೆ: ಬನ್ನಿಕೋಡು ಗ್ರಾಮದಲ್ಲಿ ಸೆರೆಯಾಗಿದ್ದ ಶಂಕಿತ ಉಗ್ರ ಅಯೋಧ್ಯೆ ರಾಮಮಂದಿರ ಸ್ಫೋಟಿಸಲು ಸ್ಕೆಚ್ ಹಾಕಿದ್ದ ಸ್ಫೋಟಕ ವಿಚಾರ ಈಗ ಬೆಳಕಿಗೆ ಬಂದಿದೆ. ರಾಜ್ಯದಲ್ಲಿ ಭಾರಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದ ಪಾಕಿಸ್ತಾನ ಮೂಲದ ಉಗ್ರ ಸಂಘಟನೆಗಳ ಜೊತೆ ನಂಟು ಹೊಂದಿದ್ದ ಶಂಕಿತ ಉಗ್ರನೊಬ್ಬನನ್ನು ಕೇಂದ್ರ ಗುಪ್ತಚರ ಇಲಾಖೆ ಮತ್ತು ದಾವಣಗೆರೆ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ನಿನ್ನೆ(ಜೂನ್‌ 23) ಯಶಸ್ವಿಯಾಗಿ ಬಂಧಿಸಿದ್ದರು. ಉತ್ತರ ಪ್ರದೇಶ ಮೂಲದ ಸುಹೇಲ್ (20) ಬಂಧಿತ ಆರೋಪಿ. ಈತ ಹರಿಹರದ ಬನ್ನಿಕೋಡು ಗ್ರಾಮದಲ್ಲಿ ಅಡಗಿದ್ದಾಗ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಸದ್ಯ ಈತನ ವಿರುದ್ಧ ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಧಿಕೃತವಾಗಿ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ. ದೇಶದಲ್ಲಿ ದೊಡ್ಡ ಮಟ್ಟದ ಸಮಾಜಘಾತಕ ಚಟುವಟಿಕೆಗಳನ್ನು ಈತನ ಗ್ಯಾಂಗ್ ಯೋಜನೆ ರೂಪಿಸಿದ್ದ ವಿಚಾರ ಲಭ್ಯವಾಗಿದೆ. ನಾನು ಅಯೋಧ್ಯೆಯ ಶ್ರೀರಾಮ ಮಂದಿರವನ್ನು ಬಾಂಬ್ ಇಟ್ಟು ಸ್ಫೋಟಿಸಲು ಬಯಸಿದ್ದೆ ಎಂದು ಆತ ಪೊಲೀಸರ ಮುಂದೆ ಒಪ್ಪಿಕೊಂಡಿರುವ ವಿಚಾರ ಮೂಲಗಳಿಂದ ತಿಳಿದುಬಂದಿದೆ. ಮೂಲತಃ ಉತ್ತರ ಪ್ರದೇಶದವನಾದ ಸುಹೇಲ್, ಕಳೆದ 15 ದಿನಗಳ ಹಿಂದೆಯಷ್ಟೇ ಹರಿಹರಕ್ಕೆ ಬಂದಿದ್ದನು. ಯಾರೂ ತನ್ನನ್ನು ಶಂಕಿಸಬಾರದು ಎಂಬ ಕಾರಣಕ್ಕೆ ಹರಿಹರದ ಪಕ್ಕದಲ್ಲಿರುವ ಫ್ಯಾಕ್ಟರಿಯೊಂದರಲ್ಲಿ ಪೇಂಟಿಂಗ್ ಕೆಲಸ ಮಾಡುತ್ತಾ ಬನ್ನಿಕೋಡು ಗ್ರಾಮದಲ್ಲಿ ತಂಗಿದ್ದನು. ಜೂನ್ 3 ರಂದು ದಾವಣಗೆರೆಯಲ್ಲಿ ಬಂಧನಕ್ಕೊಳಗಾಗಿದ್ದ ಇತರ ಕೆಲವು ಶಂಕಿತ ಉಗ್ರರನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾಗ ಈ ಸುಹೇಲ್ ಹೆಸರು ಬೆಳಕಿಗೆ ಬಂದಿತ್ತು. ತಕ್ಷಣ ಕಾರ್ಯಪ್ರವೃತ್ತರಾದ ಅಧಿಕಾರಿಗಳು ಈತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಸತ್ಯ ಬೆಳಕಿಗೆ ಬಂದಿದೆ. ವಾಟ್ಸಪ್‌ನಲ್ಲಿ ಪಾಕ್ ನಂಟು ಸುಹೇಲ್‌ನ ಮೊಬೈಲ್ ಡೇಟಾವನ್ನು ರಿಟ್ರೀವ್ ಮಾಡಿದಾಗ ಆತನ ಸೋಷಿಯಲ್ ಮೀಡಿಯಾ ಖಾತೆಗಳಲ್ಲಿ ಪಾಕಿಸ್ತಾನದ ಲಿಂಕ್‌ಗಳು ಪತ್ತೆಯಾಗಿವೆ. ಈತ ಇನ್‌ಸ್ಟಾಗ್ರಾಮ್ ಚಾಟ್‌ಗಳ ಮೂಲಕ ಪಾಕಿಸ್ತಾನದ ಉಗ್ರ ಸಂಘಟನೆಗಳ ಜೊತೆ ನಿರಂತರ ಸಂಪರ್ಕದಲ್ಲಿದ್ದನು. ಈತನ ಮೊಬೈಲ್‌ನಲ್ಲಿ ಪಾಕಿಸ್ತಾನದ ಕೋಡ್ (+92) ಇರುವ ನಂಬರ್ ಒಂದನ್ನು ರಾಣಾ ಭಾಯ್ ಎಂದು ಸೇವ್ ಮಾಡಿಕೊಳ್ಳಲಾಗಿತ್ತು. ಇದರ ಜೊತೆಗೆ ದೇಶವಿರೋಧಿ ಚಟುವಟಿಕೆ ನಡೆಸುವ MEMON & JUTTU- 333 ಹಾಗೂ RANABHAI 333’ಎಂಬ ಗ್ರೂಪ್‌ಗಳಲ್ಲಿ ಈತ ಸಕ್ರಿಯ ಸದಸ್ಯನಾಗಿದ್ದನು. ಅಷ್ಟೇ ಅಲ್ಲದೇ ಉಗ್ರರನ್ನು ಹೋಲುವ ರೀತಿಯಲ್ಲಿ, ಕೈಯಲ್ಲಿ ಅಪಾಯಕಾರಿ ಶಸ್ತ್ರಾಸ್ತ್ರಗಳನ್ನು ಹಿಡಿದುಕೊಂಡು ಈತ ತೆಗೆಸಿಕೊಂಡಿದ್ದ ಫೋಟೋಗಳು ಮೊಬೈಲ್‌ನಲ್ಲಿ ಲಭ್ಯವಾಗಿವೆ. ನಿನ್ನೆ ಈತನನ್ನು ಬಂಧಿಸಿದ ಬಳಿಕ ತೀವ್ರ ವಿಚಾರಣೆಗಾಗಿ ತುಮಕೂರು ಪೊಲೀಸರಿಗೆ ಹಸ್ತಾಂತರಿಸಲಾಗಿತ್ತು. ತದನಂತರ ಹೆಚ್ಚಿನ ತನಿಖೆ ಮತ್ತು ಪ್ರಕರಣದ ದಾಖಲಾತಿಗಾಗಿ ಇಂದು ಮತ್ತೆ ಹರಿಹರ ಗ್ರಾಮಾಂತರ ಠಾಣೆಗೆ ವಾಪಸ್ ಕರೆತರಲಾಗಿದ್ದು, ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ತನಿಖೆ ಮುಂದುವರಿದಿದೆ. ಶಂಕಿತ ಉಗ್ರನ ಬಂಧನದ ಕುರಿತು ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಪ್ರಾಥಮಿಕ ಮಾಹಿತಿಯ ಪ್ರಕಾರ, ಉತ್ತರ ಪ್ರದೇಶ ಮೂಲದ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತ ಕೆಲಸ ಹುಡುಕಿಕೊಂಡು ದಾವಣಗೆರೆಗೆ ಬಂದಿದ್ದನು. ಪ್ರಾಥಮಿಕ ತನಿಖೆಯ ಪ್ರಕಾರ ಆತ ಚಾಟ್ ಮೂಲಕ ಪಾಕಿಸ್ತಾನದ ಉಗ್ರ ಸಂಘಟನೆಗಳ ಜೊತೆ ಸಂಪರ್ಕದಲ್ಲಿದ್ದ ಎಂಬುದು ಗೊತ್ತಾಗಿದೆ. ಆತನ ಮೊಬೈಲ್‌ನಲ್ಲಿ ಕೆಲವು ಆಕ್ಷೇಪಾರ್ಹ ವಿಚಾರಗಳು ಪತ್ತೆಯಾಗಿವೆ. ಸದ್ಯ ಆರೋಪಿ ಪೊಲೀಸರ ಕಸ್ಟಡಿಯಲ್ಲಿದ್ದು, ತನಿಖೆ ಮುಂದುವರಿದಿದೆ. ತನಿಖೆಯ ನಂತರ ಮತ್ತಷ್ಟು ಹೆಚ್ಚಿನ ಮಾಹಿತಿ ಹೊರಬರಲಿದೆ ಎಂದು ತಿಳಿಸಿದ್ದಾರೆ.

ದಾವಣಗೆರೆ: ಬನ್ನಿಕೋಡು ಗ್ರಾಮದಲ್ಲಿ ಸೆರೆಯಾಗಿದ್ದ ಶಂಕಿತ ಉಗ್ರ ಅಯೋಧ್ಯೆ ರಾಮಮಂದಿರ ಸ್ಫೋಟಿಸಲು ಸ್ಕೆಚ್ ಹಾಕಿದ್ದ ಸ್ಫೋಟಕ ವಿಚಾರ ಈಗ ಬೆಳಕಿಗೆ ಬಂದಿದೆ. ರಾಜ್ಯದಲ್ಲಿ ಭಾರಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದ ಪಾಕಿಸ್ತಾನ ಮೂಲದ ಉಗ್ರ ಸಂಘಟನೆಗಳ ಜೊತೆ ನಂಟು ಹೊಂದಿದ್ದ ಶಂಕಿತ ಉಗ್ರನೊಬ್ಬನನ್ನು ಕೇಂದ್ರ ಗುಪ್ತಚರ ಇಲಾಖೆ ಮತ್ತು ದಾವಣಗೆರೆ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ನಿನ್ನೆ(ಜೂನ್‌ 23) ಯಶಸ್ವಿಯಾಗಿ ಬಂಧಿಸಿದ್ದರು. ಉತ್ತರ ಪ್ರದೇಶ ಮೂಲದ ಸುಹೇಲ್ (20) …

Read More »

ಡ್ಯೂಟಿಯಲ್ಲಿರುವಾಗಲೇ ಹೃದಯಾಘಾತ – ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು

ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್ ಕರ್ತವ್ಯದ ವೇಳೆಯೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ದೇವದುರ್ಗ ಸಿಪಿಐ ವಾಹನ ಚಾಲಕ ರೇಣುಕಾರಾಜ (38) ಮೃತ ದುರ್ದೈವಿ. ಮೊಹರಂ ಭದ್ರತೆ ಹಿನ್ನೆಲೆ ಮದರಕಲ್ ಬಂದೋಬಸ್ತ್ ಕರ್ತವ್ಯದಲ್ಲಿದ್ದರು. ಜೀಪ್ ಚಾಲನೆ ವೇಳೆಯೇ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಖಾಸಗಿ ಕಾರಿನಲ್ಲಿ ದೇವದುರ್ಗಕ್ಕೆ ರವಾನಿಸಲಾಯಿತಾದರೂ ಮಾರ್ಗ ಮಧ್ಯೆಯೇ ಸಾವನ್ನಪ್ಪಿದ್ದಾರೆ. ಲಿಂಗಸುಗೂರು ತಾಲೂಕಿನ ಅಮದಿಹಾಳ ಗ್ರಾಮದ ರೇಣುಕಾರಾಜ 2008ನೇ ಬ್ಯಾಚ್‌ನ ಪೊಲೀಸ್ ಕಾನ್ಸ್‌ಟೇಬಲ್ ಆಗಿದ್ದು, ಡಿಎಆರ್ …

Read More »

ರಾಷ್ಟ್ರಭಕ್ತಿ, ಸಿದ್ಧಾಂತ ನಿಷ್ಠೆ ಹಾಗೂ ಭಾರತದ ಅಖಂಡತೆ ಪ್ರೇರಣಾದಾಯಕ: ಡಾ. ವೀರಣ್ಣ ಚರಂತಿಮಠ

ಬಾಗಲಕೋಟೆ : ರಾಷ್ಟ್ರಭಕ್ತಿ, ಸಿದ್ಧಾಂತ ನಿಷ್ಠೆ ಹಾಗೂ ಭಾರತದ ಅಖಂಡತೆಯನ್ನು ಕಾಯ್ದುಕೊಳ್ಳಲು ಡಾ. ಶ್ಯಾಮ ಪ್ರಸಾದ್ ಮುಖರ್ಜಿ ತೋರಿದ ಬದ್ಧತೆ ಮತ್ತು ಆದರ್ಶಗಳು ಪ್ರತಿಯೊಬ್ಬರಿಗೂ ನಿರಂತರ ಪ್ರೇರಣೆಯಾಗಿವೆ ಎಂದು ಮಾಜಿ ಶಾಸಕ ಡಾ. ವೀರಣ್ಣ ಚರಂತಿಮಠ ಹೇಳಿದರು. ನಗರದ ಶಿವಾನಂದ ಜಿನದಲ್ಲಿರುವ ಬಿಜೆಪಿ ಕಾರ್ಯಾಲಯದಲ್ಲಿ ಭಾರತೀಯ ಜನತಾ ಪಾರ್ಟಿ ಬಾಗಲಕೋಟೆ ಮತಕ್ಷೇತ್ರದ ವತಿಯಿಂದ ಮಂಗಳವಾರ ಆಯೋಜಿಸಿದ್ದ ಭಾರತೀಯ ಜನಸಂಘದ ಸಂಸ್ಥಾಪಕ ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಅವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ …

Read More »

ಆಸ್ತಿಗಾಗಿ ಮಗನ ಜೊತೆ ಸೇರಿ ಹೆತ್ತ ತಾಯಿಯನ್ನೇ ಕೊಂದ ಮಗಳು

ಬೆಂಗಳೂರು: ಕುಡಿತದ ಚಟಕ್ಕೆ ಒಳಗಾಗಿದ್ದ ಮಹಿಳೆಯೊಬ್ಬಳು ಆಸ್ತಿ ವಿಚಾರಕ್ಕೆ ನಡೆದ ಜಗಳದ ವೇಳೆ ತನ್ನ ಮಗನ ಜೊತೆ ಸೇರಿ ಹೆತ್ತ ತಾಯಿಯನ್ನೇ ಕೊಲೆ ಮಾಡಿದ ಆಘಾತಕಾರಿ ಘಟನೆ ಬೆಂಗಳೂರಿನ ಕೆಂಗೇರಿ ವ್ಯಾಪ್ತಿಯಲ್ಲಿ ನಡೆದಿದೆ. 75 ವರ್ಷದ ಜಯಮ್ಮ ಕೊಲೆಯಾದ ವೃದ್ಧೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಗಳು ಭಾಗ್ಯಲಕ್ಷ್ಮಿ ಹಾಗೂ ಮೊಮ್ಮಗ ಕುಶಾಲ್‌ನನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಕೆಂಗೇರಿಯ ಸುಭಾಷ್ ನಗರದಲ್ಲಿ ಈ ಘಟನೆ ನಡೆದಿದ್ದು, ಭಾನುವಾರ ರಾತ್ರಿ ಕೊಲೆ ನಡೆದಿದ್ದರೂ …

Read More »

ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಎಚ್ಚರಿಕೆ – ಐದು ದಿನ ಆರೆಂಜ್ ಅಲರ್ಟ್‌

ಕಾರವಾರ: ರಾಜ್ಯದಲ್ಲಿ ಮುಂಗಾರು ಕೊರತೆ ನಡುವೆ ಇದೀಗ ಮಳೆಯು ತನ್ನ ವೇಗ ಪಡೆದುಕೊಳ್ಳುವ ಮುನ್ಸೂಚನೆ ದುರೆತಿದೆ. ಉತ್ತರ ಕನ್ನಡ ಜಿಲ್ಲೆಯಾದ್ಯಂತ ಮಳೆ ಹೆಚ್ಚುತಿದ್ದು, ಜಿಲ್ಲೆಯಲ್ಲಿ ಐದು ದಿನ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇಂದಿನಿಂದ ಜಿಲ್ಲೆಯಲ್ಲಿ ಜೂ.27ರ ವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಈ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ತುರ್ತು ಕಾರ್ಯಾಚರಣೆ ಕಚೇರಿ ಪ್ರಾರಂಭ ಸಹ ಮಾಡಲಾಗಿದೆ. ಮಳೆಯ ಬಗ್ಗೆ ಮುನ್ನೆಚ್ಚರಿಕೆ ವಹಿಸುವಂತೆ …

Read More »

ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಕಾರು ಪಲ್ಟಿ – ವೈದ್ಯ ಪಾರು

ಹಾಸನ: ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಕಾರು ಪಲ್ಟಿಯಾದ ಪರಿಣಾಮ ವೈದ್ಯ ಸಣ್ಣಪುಟ್ಟ ಗಾಯಗೊಂಡು ಪಾರಾಗಿರುವ ಘಟನೆ ಹಾಸನ ಜಿಲ್ಲೆ ಆಲೂರು ತಾಲೂಕಿನ ಪಾಳ್ಯ ಬಳಿ ನಡೆದಿದೆ. ಹಾಸನ ನಗರದ ಜನಪ್ರಿಯ ಆಸ್ಪತ್ರೆ ಮಾಲೀಕ ಹಾಗೂ ವೈದ್ಯ ಅಬ್ದುಲ್ ಬಶೀರ್ ಪುತ್ರ ವೈದ್ಯ ಡಾ.ಶಾರುಖ್ ಅಬ್ದುಲ್ಲಾ ಕಾರು ಚಲಾಯಿಸುತ್ತಿದ್ದರು. ಈ ವೇಳೆ ಅತಿವೇಗ ಹಾಗೂ ಅಜಾಗರೂಕತೆಯ ಚಾಲನೆಯಿಂದ ಅಪಘಾತ ಸಂಭವಿಸಿದೆ. ಮೂರು ಪಲ್ಟಿ ಹೊಡೆದು ರಸ್ತೆ ಬದಿಗೆ ಕಾರು ಉರುಳಿದೆ. …

Read More »

LIC ದುಡ್ಡಿನ ಆಸೆಗಾಗಿ ತಮ್ಮನನ್ನೇ ಕೊಂದ ಅಣ್ಣ

ತುಮಕೂರು: ಎಲ್‌ಐಸಿ ಪಾಲಿಸಿಯಿಂದ  ಸಿಗುವ 30 ಲಕ್ಷ ರೂ. ಆಸೆಗೆ ಸ್ವಂತ ತಮ್ಮನನ್ನೇ  ಅಣ್ಣ ಕೊಲೆ ಮಾಡಿದ್ದ ವಿಲಕ್ಷಣ ಘಟನೆ ಬೆಳಕಿಗೆ ಬಂದಿದೆ. ಬೈಕ್ ಅಪಘಾತದ ಪ್ರಕರಣ ಭೇದಿಸಿದ ತುಮಕೂರು  ಜಿಲ್ಲೆ ಪಟ್ಟನಾಯಕನಹಳ್ಳಿ ಪೊಲೀಸರು ಅಸಲಿ ಕಹಾನಿ ಬಿಚ್ಚಿಟ್ಟಿದ್ದಾರೆ. ದುಡ್ಡು ಅಂದರೆ ಹೆಣನೂ ಬಾಯಿ ಬಿಡುತ್ತೆ ಅನ್ನೋ ಗಾದೆ ಮಾತಿದೆ. ಅಂಥ ದುಡ್ಡಿಗಾಗಿ ಎಂಥ ಹೇಯ ಕೃತ್ಯ ಮಾಡಲು ಜನ ಹಿಂದೂ ಮುಂದೂ ನೋಡಲ್ಲ. ಇಲ್ಲೊಬ್ಬ ಅಣ್ಣ, ತಮ್ಮನ ಹೆಸರಲ್ಲಿ …

Read More »

ಸತೀಶ್ ಜಾರಕಿಹೊಳಿ ಸಹೋದರಿಯ ಪತಿಗೆ ಇಡಿ ಶಾಕ್: ಬೆಳಗಾವಿ ಸೇರಿದಂತೆ 6 ಕಡೆ ದಾಳಿ

ಬೆಳಗಾವಿ: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಸಹೋದರಿ ಪತಿಯೂ ಆಗಿರುವ ಅಬಕಾರಿ ಇಲಾಖೆಯ ಉನ್ನತ ಅಧಿಕಾರಿಯ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ  ಅಧಿಕಾರಿಗಳು ಇಂದು ಬೆಳ್ಳಂಬೆಳಗ್ಗೆ ಭಾರಿ ದಾಳಿ ನಡೆಸಿದ್ದಾರೆ. ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತರಾಗಿರುವ ವೈ. ಮಂಜುನಾಥ್  ಅವರಿಗೆ ಸೇರಿದ ಒಟ್ಟು 6 ಸ್ಥಳಗಳ ಮೇಲೆ ಇಡಿ ಅಧಿಕಾರಿಗಳ ತಂಡ ಏಕಕಾಲಕ್ಕೆ ದಾಳಿ ನಡೆಸಿ, ದಾಖಲೆಗಳ ಪರಿಶೀಲನೆ ಕೈಗೊಂಡಿದೆ. ಇಂದು ಬೆಳಿಗ್ಗೆಯೇ ಕಾರ್ಯಪ್ರವೃತ್ತರಾದ ಇಡಿ ಅಧಿಕಾರಿಗಳು, …

Read More »

ಮಹಾರಾಷ್ಟ್ರದಲ್ಲಿಯೂ ನೀರಿನ ಅಭಾವವಿದ್ದು, ರಾಜ್ಯಕ್ಕೆ ನೀರು ಬಿಡುವುದು ಕಷ್ಟಕರ: ಸಚಿವ ಸತೀಶ್‌ ಜಾರಕಿಹೊಳಿ

ಬೆಳಗಾವಿ: ನೆರೆ ರಾಜ್ಯ ಮಹಾರಾಷ್ಟ್ರದಲ್ಲಿಯೂ ತೀವ್ರ ನೀರಿನ ಅಭಾವ ಉಂಟಾಗಿರುವುದರಿಂದ ಅಲ್ಲಿಂದ ನೀರು ಬಿಡುವುದು ಕಷ್ಟಕರ. ಈ ಬಗ್ಗೆ ಮಹಾರಾಷ್ಟ್ರ ರಾಜ್ಯದ ಅಧಿಕಾರಿಗಳು ಈಗಾಗಲೇ ತಮ್ಮ ಅಸಮರ್ಥತೆ ತಿಳಿಸಿರುವುದಾಗಿ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರು ತಿಳಿಸಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಹಾರಾಷ್ಟ್ರದಿಂದ ನೀರು ಬಿಡುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿ, ಈ ವರ್ಷ ಮಾತ್ರವಲ್ಲದೆ ಹಿಂದಿನ ವರ್ಷಗಳಲ್ಲಿಯೂ ರಾಜ್ಯ ಸರ್ಕಾರ ಮನವಿ ಸಲ್ಲಿಸಿದ್ದರೂ ಮಹಾರಾಷ್ಟ್ರದಿಂದ ನಿರೀಕ್ಷಿತ ಪ್ರಮಾಣದಲ್ಲಿ …

Read More »

ಸೆಕೆಂಡ್ ವಿಷನ್ ಕರ್ನಾಟಕ 2026 /3 ದಿನಗಳ ಬೃಹತ ಸಾರ್ವಜನಿಕ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿದ ಸಂಸದ ಜಗದೀಶ್ ಶೆಟ್ಟರು

‘ಸೆಕೆಂಡ್ ಪಿವಿಷನ್ ಕರ್ನಾಟಕ 2026 ‘ಮೂರು ದಿನಗಳ ಕಾಲ ಸಾರ್ವಜನಿಕ ಜಾಗೃತಿ ಅಭಿಯಾನ ವನ್ನು ಜೂನ್ 23 ರಿಂದ ಜೂನ್ 25ರವರೆಗೆ ಕೆ ಎಲ್‌ ಇ ನೆಹರು ನಗರ್ ಕನೆಕ್ಷನ್ ಸೆಂಟರ್ ಡಾ ಬಿ ಎಸ್ ಜಿರಗಿ ಅಟೋರಿಯಂ ದಲ್ಲಿ ಆಯೋಜಿಸಿದ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಮಾಜಿ ಮುಖ್ಯಮಂತ್ರಿ ಹಾಗೂ ಬೆಳಗಾವಿ ಸಂಸದ ಜಗದೀಶ್ ಶೆಟ್ಟರ ಕೇಂದ್ರದ ವಿವಿಧ ಇಲಾಖೆಗಳ ಸಾರ್ವಜನಿಕ ಹಾಗೂ ರೈತರ ಮತ್ತುವಿದ್ಯಾರ್ಥಿಗಳಿಗೆ ಮತ್ತು ಯುವಕರಿಗೆ ಇದೊಂದು …

Read More »