ಹಾಸನ, (ಜೂನ್ 23): ಇತ್ತ ಬೆಂಗಳೂರಿನಲ್ಲಿ ಜೆಡಿಎಸ್ ಕಾರ್ಯಕರ್ತನೋರ್ವ, ಸೂರಜ್ ರೇವಣ್ಣ (Suraj Revanna) ವಿರುದ್ಧ ಸಲಿಂಗ ಕಾಮ, ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಿಸುತ್ತಿದ್ದಂತೆಯೇ ಇತ್ತ ಹೊಳೆನರಸೀಪುರದಲ್ಲಿ ಸಂತ್ರಸ್ತನ ವಿರುದ್ಧವೇ ದೂರು ದಾಖಲಾಗಿದೆ. ಸೂರಜ್ ರೇವಣ್ಣ ಆಪ್ತ ಶಿವಕುಮಾರ್ ಎನ್ನುವಾತ ಸಂತ್ರಸ್ತನ ವಿರುದ್ಧ ಹೊಳೆನರಸೀಪುರ ಟೌನ್ ಪೊಲೀಸ್ ಠಾಣೆಯಲ್ಲಿ ಬ್ಲ್ಯಾಕ್ ಮೇಲ್ ದೂರು ನೀಡಿದ್ದಾನೆ. ಆದ್ರೆ, ಇದೀಗ ಸಂತ್ರಸ್ತನ ದೂರಿನ ಅನ್ವಯ ಸೂರಜ್ನನ್ನು ಪೊಲೀಸರು ಅರೆಸ್ಟ್ ಮಾಡುತ್ತಿದ್ದಂತೆಯೇ ಆಪ್ತ ಶಿವಕುಮಾರ್ …
Read More »ಉಪಮುಖ್ಯಮಂತ್ರಿ ಸ್ಥಾನ ಕೇಳುವುದರಲ್ಲಿ ತಪ್ಪೇನಿಲ್ಲ; ಜಮೀರ್ ಅಹ್ಮದ್
ಬೆಂಗಳೂರು: ರಾಜ್ಯದಲ್ಲಿ ಮೂವರು ಉಪ ಮುಖ್ಯಮಂತ್ರಿಗಳ ಸ್ಥಾನ ಸೃಷ್ಟಿ ಬಗ್ಗೆ ಮತ್ತೆ ಚರ್ಚೆ ಆರಂಭವಾಗಿದೆ. ಸಚಿವ ಸತೀಶ ಜಾರಕಿಹೊಳಿ ಅವರು, ಉಪ ಮುಖ್ಯಮಂತ್ರಿ ಹುದ್ದೆ ಕುರಿತಾಗಿ ಹೇಳಿಕೆ ನೀಡಿದ ಬೆನ್ನಲ್ಲೇ ಮತ್ತಿಬ್ಬರು ಪ್ರಭಾವಿ ಸಚಿವರಾದ ಜಮೀರ್ ಅಹ್ಮದ್ ಮತ್ತು ಕೆ.ಎನ್. ರಾಜಣ್ಣ ಕೂಡ ಉಪಮುಖ್ಯಮಂತ್ರಿ ವಿಚಾರವಾಗಿ ಪ್ರಸ್ತಾಪ ಮಾಡಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಸಹಕಾರ ಸಚಿವ ಕೆ.ಎನ್. ರಾಜಣ್ಣ, ಮೂವರು ಡಿಸಿಎಂ ಮಾಡಿದರೆ ತೊಂದರೆ ಏನು? ರಾಜ್ಯದಲ್ಲಿ ಮೂರು ಉಪಮುಖ್ಯಮಂತ್ರಿ ಸ್ಥಾನ ಸೃಷ್ಟಿಸುವಂತೆ …
Read More »ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿ ಲಾಭ, ಅನಗತ್ಯ ಚರ್ಚೆಗೆ ಆಸ್ಪದ ನೀಡದಿರಿ
ಮೇಷ: ಕೆಲಸಕ್ಕೆ ವಿರಾಮವಾಗಿರುವುದರಿಂದ ಮನಸ್ಸಿಗೂ ವಿರಾಮ. ಸಂಸಾರದ ಆವಶ್ಯ ಕತೆಗಳತ್ತ ಗಮನ. ಉದ್ಯಮಿಗಳಿಗೆ ಅಭಿವೃದ್ಧಿಯ ಮಾರ್ಗಗಳ ಚಿಂತೆ. ಕೆಲವು ವರ್ಗದ ವ್ಯಾಪಾರಿಗಳಿಗೆ ಲಾಭ. ಸಂಜೆ ಬಂಧು- ಮಿತ್ರರ ಭೇಟಿ. ವೃಷಭ: ಕೆಲವರಿಗೆ ಅನಿರೀಕ್ಷಿತ ಧನಪ್ರಾಪ್ತಿಯ ಸಾಧ್ಯತೆ. ವ್ಯವಹಾರ ವಿಸ್ತರಣೆಗೆ ವಿವಿಧ ಮೂಲಗಳಿಂದ ಸಹಾಯ. ಧಾರ್ಮಿಕ ಕ್ಷೇತ್ರಕ್ಕೆ ಭೇಟಿ. ಪ್ರಾಪ್ತವಯಸ್ಕರಿಗೆ ವಿವಾಹ ನಿಶ್ಚಯ. ಸಾಮಾಜಿಕ ಸಮಸ್ಯೆಗಳ ಕುರಿತು ಚಿಂತನೆ. ಮಿಥುನ: ಗೃಹೋತ್ಪನ್ನ ತಿನಿಸುಗಳ ಜನಪ್ರಿಯತೆ ವೃದ್ಧಿ. ಬಂಧುಗಳ ಆಗಮನ. ಅನವಶ್ಯ ವೆಚ್ಚಗಳ ಬಗ್ಗೆ ಎಚ್ಚರ. …
Read More »PFʼ ಖಾತೆದಾರರೇ ಗಮನಕ್ಕೆ : ʻUANʼ ಸಂಖ್ಯೆಗೆ ʻಆಧಾರ್ ಕಾರ್ಡ್ʼ ಲಿಂಕ್ ಮಾಡೋದು ಕಡ್ಡಾಯ
ನವದೆಹಲಿ : ಪಿಎಫ್ ಖಾತೆದಾರರು ತಮ್ಮ ಯುಎಎನ್ ಸಂಖ್ಯೆಯನ್ನು ಆಧಾರ್ ನೊಂದಿಗೆ ಲಿಂಕ್ ಮಾಡಬೇಕಾಗುತ್ತದೆ. ಇಲ್ಲದಿದ್ದರೆ, ಪಿಎಫ್ ಮೊತ್ತವನ್ನು ಹಿಂಪಡೆಯುವಾಗ ಸಮಸ್ಯೆಗಳು ಉಂಟಾಗುತ್ತವೆ. ಸಾಮಾಜಿಕ ಭದ್ರತಾ ಸಂಹಿತೆ, 2020 ರ ಸೆಕ್ಷನ್ 142 ರ ಪ್ರಕಾರ, ಸಂಸ್ಥೆಯಲ್ಲಿ ಕೆಲಸ ಮಾಡುವ ನೌಕರರು ಮತ್ತು ಕಾರ್ಮಿಕರು ತಮ್ಮ ಆಧಾರ್ ಖಾತೆಯನ್ನು ಇಪಿಎಫ್ ಖಾತೆಯೊಂದಿಗೆ ಲಿಂಕ್ ಮಾಡುವುದು ಕಡ್ಡಾಯವಾಗಿದೆ. ಲಿಂಕ್ ಪ್ರಕ್ರಿಯೆಯನ್ನು ಆನ್ಲೈನ್ ಅಥವಾ ಆಫ್ಲೈನ್ನಲ್ಲಿ ಮಾಡಬಹುದು. ಆನ್ ಲೈನ್ ನಲ್ಲಿ ಹೇಗೆ …
Read More »‘ಅಕ್ರಮ ಸರ್ಕಾರಿ ಭೂಮಿ’ ಒತ್ತುವರಿದಾರರ ವಿರುದ್ಧ ‘FIR’ ದಾಖಲು
ಬೆಂಗಳೂರು: ನಗರದಲ್ಲಿ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಸರ್ಕಾರಿ ಭೂಮಿ ಒತ್ತುವರಿದಾರರ ವಿರುದ್ಧ ಸಮರ ಸಾರಿದ್ದಾರೆ. ಇಂದು ಅಕ್ರಮ ಸರ್ಕಾರಿ ಭೂ ಒತ್ತುವರಿದಾರರ ವಿರುದ್ಧ ಎಫ್‌ಐಆರ್ ದಾಖಲಿಸಿ, ಬಿಸಿ ಮುಟ್ಟಿಸಿದ್ದಾರೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಅವರು, ಕಂದಾಯ ಇಲಾಖೆಯ ಸಚಿವನಾಗಿ ನಾನು ಜವಾಬ್ದಾರಿ ವಹಿಸುತ್ತಿದ್ದಂತೆ ನಿರ್ಧರಿಸಿದ ಮೊದಲ ಕೆಲಸ ಸರ್ಕಾರಿ ಜಮೀನಿನ ಒತ್ತುವರಿ ತೆರವು. ಕಳೆದ ವರ್ಷ 2023ರ ಜೂನ್ ತಿಂಗಳ ಮೊದಲ ವಾರವೇ …
Read More »ಇಲ್ಲಿದೆ ಇಂದಿನ ’53ನೇ GST ಕೌನ್ಸಿಲ್ ಸಭೆ’ಯ ಪ್ರಮುಖ ಅಂಶಗಳು
ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಅಧ್ಯಕ್ಷತೆಯಲ್ಲಿ ನಡೆದ 53 ನೇ ಜಿಎಸ್ಟಿ ಕೌನ್ಸಿಲ್ ಸಭೆಯಲ್ಲಿ ಜಿಎಸ್ಟಿ ಅನುಸರಣೆಯನ್ನು ಸುವ್ಯವಸ್ಥಿತಗೊಳಿಸುವ ಮತ್ತು ತೆರಿಗೆದಾರರ ಹೊರೆಯನ್ನು ಕಡಿಮೆ ಮಾಡುವ ಗುರಿಯನ್ನು ಹೊಂದಿರುವ ಶಿಫಾರಸುಗಳನ್ನು ತರಲಾಯಿತು. ಹೊಸ ಸರ್ಕಾರ ರಚನೆಯಾದ ನಂತರ ಇದು ಜಿಎಸ್ಟಿ ಮಂಡಳಿಯ ಮೊದಲ ಸಭೆಯಾಗಿದೆ. ಹೀಗಿವೆ ಇಂದಿನ 53ನೇ ಜಿಎಸ್ಟಿ ಕೌನ್ಸಿಲ್ ಸಭೆಯ ಹೈಲೈಟ್ಸ್ ಬಡ್ಡಿ ಮತ್ತು ದಂಡ ಮನ್ನಾ: 2017-18, 2018-19 ಮತ್ತು 2019-20ರ ಹಣಕಾಸು …
Read More »ಜೂನ್ 24 ರಂದು 18ನೇ ಲೋಕಸಭೆಯ ಮೊದಲ ಅಧಿವೇಶನ ಆರಂಭ
ನವದೆಹಲಿ: 18ನೇ ಲೋಕಸಭೆಯ ಮೊದಲ ಅಧಿವೇಶನ ಸೋಮವಾರ ಆರಂಭವಾಗಲಿದೆ. ಅಧಿವೇಶನದಲ್ಲಿ ಹೊಸದಾಗಿ ಆಯ್ಕೆಯಾದ ಸದಸ್ಯರ ಪ್ರಮಾಣ ವಚನ ನಡೆಯಲಿದೆ. ಹಂಗಾಮಿ ಸ್ಪೀಕರ್ ಆಗಿ ನೇಮಕಗೊಂಡಿರುವ ಬಿಜೆಪಿಯ ಹಿರಿಯ ಸಂಸದ ಭರ್ತೃಹರಿ ಮಹತಾಬ್ ಅವರು ಹೊಸದಾಗಿ ಆಯ್ಕೆಯಾದ ಲೋಕಸಭೆ ಸಂಸದರಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ. ನೂತನ ಲೋಕಸಭಾ ಸ್ಪೀಕರ್ ಆಯ್ಕೆ ಇದೇ ತಿಂಗಳ 26 ರಂದು ನಡೆಯಲಿದೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜೂನ್ 27 ರಂದು ಲೋಕಸಭೆ ಮತ್ತು ರಾಜ್ಯಸಭೆಯ ಜಂಟಿ …
Read More »ಜ್ಞಾನವಿದ್ದವರೇ ಶ್ರೀಮಂತರು: ಸಿದ್ಧಗಂಗಾ ಶ್ರೀ
ಬೆಂಗಳೂರು: ‘ಜ್ಞಾನಕ್ಕೆ ಸಮಾನವಾದುದು ಯಾವುದೂ ಇಲ್ಲ. ಜ್ಞಾನ ಯಾರಲ್ಲಿ ಇರುತ್ತದೆಯೋ ಅವರೇ ಶ್ರೀಮಂತರು. ಶಿಕ್ಷಣದಿಂದ ಮಾತ್ರ ಶಕ್ತಿ ಬರುತ್ತದೆ’ ಎಂದು ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ ಹೇಳಿದರು. ಕರ್ನಾಟಕದ ವಿವಿಧ ಶಾಲೆಗಳ 10 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ರಕ್ಷಾ ಫೌಂಡೇಷನ್ ವತಿಯಿಂದ 2 ಲಕ್ಷ ನೋಟ್ ಬುಕ್‌ಗಳನ್ನು ವಿತರಿಸಿದ ಸಮಾರಂಭದಲ್ಲಿ ಶನಿವಾರ ಅವರು ಮಾತನಾಡಿದರು. ಸರ್ಕಾರಿ ಶಾಲೆಯ ಮಕ್ಕಳು ಹೆಚ್ಚು ಪ್ರತಿಭಾವಂತರಾಗಿದ್ದು, ಅವರಿಗೆ ಸರಿಯಾದ ಪ್ರೋತ್ಸಾಹ ದೊರಕಿದರೆ ಸಾಧಕರಾಗಿ …
Read More »ಶಿಷ್ಟಾಚಾರ ಉಲ್ಲಂಘನೆ: ಮುಖ್ಯಶಿಕ್ಷಕ ಅಮಾನತು
ಖಾನಾಪುರ: ಸರ್ಕಾರಿ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘಿಸಿದ ಆರೋಪದಡಿ ತಾಲ್ಲೂಕಿನ ಲಿಂಗನಮಠ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆ ಮುಖ್ಯಶಿಕ್ಷಕ ಎಂ.ಎಂ ಕೋಟೂರ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಬಿಇಒ ರಾಜೇಶ್ವರಿ ಕುಡಚಿ ಶನಿವಾರ ಆದೇಶಿಸಿದ್ದಾರೆ. ಜೂನ್ 19ರಂದು ಲಿಂಗನಮಠ ಸರ್ಕಾರಿ ಶಾಲೆಯಲ್ಲಿ ಗ್ರಾಮ ಪಂಚಾಯ್ತಿ ಅಧ್ಯಕ್ಷ ಕಾಸೀಂ ಹಟ್ಟಿಹೊಳಿ ಮತ್ತು ಎಸ್‌ಡಿಎಂಸಿ ಅಧ್ಯಕ್ಷ ಆನಂದ ಮಾಟೊಳ್ಳಿ ಅವರ ಉಪಸ್ಥಿತಿಯಲ್ಲಿ ನೂತನ ಕೊಠಡಿಗಳ ಉದ್ಘಾಟನಾ ಕಾರ್ಯಕ್ರಮ ಆಯೋಜಿಸಲಾಗಿತ್ತು. ಶಿಷ್ಟಾಚಾರ ಉಲ್ಲಂಘನೆ ಸಂಬಂಧ …
Read More »ಖಾನಾಪುರ: ಲಾರಿ ಚಕ್ರಕ್ಕೆ ಸಿಲುಕಿ ಬೈಕ್ ಸವಾರ ಸಾವು
ಖಾನಾಪುರ: ಪಟ್ಟಣದ ಹೊರವಲಯದ ಬೆಳಗಾವಿ ರಸ್ತೆಯ ಮರೆಮ್ಮ ದೇವಾಲಯದ ಬಳಿ ಶುಕ್ರವಾರ ರಾತ್ರಿ ಲಾರಿ ಹಿಂದಿನ ಚಕ್ರಕ್ಕೆ ಸಿಲುಕಿ ಬೈಕ್ ಸವಾರ ಮೃತಪಟ್ಟಿದ್ದಾರೆ. ತಾಲ್ಲೂಕಿನ ಹಲಕರ್ಣಿ ನಿವಾಸಿ ಸಂಜು ಮಲ್ಲಪ್ಪ ಸತನಾಯ್ಕ (35) ಮೃತರು. ಪಟ್ಟಣದಿಂದ ಬೆಳಗಾವಿ ಕಡೆಗೆ ಬೈಕ್‌ನಲ್ಲಿ ಹೋಗುತ್ತಿದ್ದಾಗ ಲಾರಿಯನ್ನು ಓವರ್‌ಟೇಕ್ ಮಾಡಲು ಹೀಗಿ, ಎದುರಿಗೆ ಬಂದ ಮತ್ತೊಂದು ಬೈಕ್‌ಗೆ ಡಿಕ್ಕಿ ಹೊಡೆದು, ಲಾರಿಯ ಹಿಂದಿನ ಚಕ್ರಕ್ಕೆ ಸಿಲುಕಿ ಮೃತಪಟ್ಟಿದ್ದಾರೆ. ಮತ್ತೊಂದು ಬೈಕ್‌ನಲ್ಲಿದ್ದ ಗಂಗವಾಳಿ ಗ್ರಾಮದ ತುಕಾರಾಮ ಸುತಾರ …
Read More »
Laxmi News 24×7