Breaking News

ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಎಡಬಿಡಂಗಿ ಸರ್ಕಾರ: ಆರ್ ಅಶೋಕ

ಬೆಂಗಳೂರು, ಮಾ.8: ಲೋಕಸಭೆ ಚುನಾವಣೆಗೆ ಅಖಾಡಕ್ಕಿಳಿಯುವ ಬಿಜೆಪಿ (BJP) ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿರುವ ಹೈಕಮಾಂಡ್, ಎರಡನೇ ಪಟ್ಟಿಯನ್ನು ಸಿದ್ಧಪಡಿಸುತ್ತಿದೆ. ಇನ್ನೊಂದೆಡೆ, ರಾಜ್ಯ ರಾಜಕಾರಣದಲ್ಲಿ ಭಾರೀ ಕುತೂಹಲ ಮೂಡಿಸುತ್ತಿರುವ ಮಂಡ್ಯ ಕ್ಷೇತ್ರದ ಬಿಜೆಪಿ ಟಿಕೆಟ್​ಗಾಗಿ ಹಾಲಿ ಸಂಸದೆ ಸುಮಲತಾ (Sumalatha) ಅವರು ತೀವ್ರ ಪೈಪೋಟಿ ನಡೆಸುತ್ತಿದ್ದಾರೆ. ಈ ಎಲ್ಲದರ ಬಗ್ಗೆ ಪ್ರತಿಕ್ರಿಯೆ ನೀಡಿದ ವಿಪಕ್ಷ ನಾಯಕ ಆರ್.ಅಶೋಕ (R.Ashoka), ರಾಜ್ಯ ಕಾಂಗ್ರೆಸ್ (Congress) ಸರ್ಕಾರದ ವಿರುದ್ಧ ವಾಗ್ದಾಳಿಯೂ ನಡೆಸಿದರು. ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಎಡಬಿಡಂಗಿ ಸರ್ಕಾರ ಎಂದು ಹೇಳಿದ ಅಶೋಕ, ಮನಸ್ಸಿಗೆ …

Read More »

ಕಲಬುರಗಿಯಿಂದ ಮಲ್ಲಿಕಾರ್ಜುನ ಖರ್ಗೆ ಸ್ಪರ್ಧಿಸುವುದು ಅನುಮಾನ

ಕಾಂಗ್ರೆಸ್​ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಲಬುರಗಿಯಿಂದದಿಂದ ಸ್ಪರ್ಧಿಸುವುದಿಲ್ಲ. ಕಳೆದ ಲೋಕಸಭೆ ಚುನಾವಣೆಯಲ್ಲಿ ಕಲಬುರಗಿ ಕ್ಷೇತ್ರದಿಂದ ಬಿಜೆಪಿಯ ಡಾ.ಉಮೇಶ್ ಜಾಧವ್ ವಿರುದ್ಧ ಖರ್ಗೆ ಸೋಲು ಕಂಡಿದ್ದರು. ಪ್ರಸ್ತುತ ಅವರು ಭಾರತ ಮೈತ್ರಿಕೂಟದಲ್ಲಿ ದೊಡ್ಡ ಪಾತ್ರವನ್ನು ವಹಿಸುತ್ತಿದ್ದಾರೆ. ಖರ್ಗೆ ಅವರ ಅಳಿಯ ರಾಧಾಕೃಷ್ಣ ದೊಡ್ಡಮನಿ ಅವರು ಸ್ಪರ್ಧಿಸಬಹುದು ಎಂದು ಹೇಳಲಾಗುತ್ತಿದೆ.ಕಳೆದ ಲೋಕಸಭೆ ಚುನಾವಣೆಯಲ್ಲಿ ಮೋದಿ ಅಲೆಯ ಮುಂದೆ ನಿಲ್ಲಲಾಗದೆ ಮಲ್ಲಿಕಾರ್ಜುನ ಸೋಲನ್ನು ಎದುರಿಸಬೇಕಾಯಿತು. ಅವರು ಪ್ರಸ್ತುತ ರಾಜ್ಯಸಭೆಯ ಸಂಸದರಾಗಿದ್ದಾರೆ.ಮಲ್ಲಿಕಾರ್ಜುನ ಖರ್ಗೆ ಸಾಂಪ್ರದಾಯಿಕ ಕ್ಷೇತ್ರವಾದ …

Read More »

ರಾಜ್ಯದಲ್ಲಿ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಸಂಚಾರಕ್ಕೆ ಬ್ರೇಕ್

ರಾಜ್ಯದಲ್ಲಿ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಸಂಚಾರಕ್ಕೆ ಬ್ರೇಕ್ ಬಿದ್ದಿದೆ (Karnataka Electric Bike Taxi Scheme). ಕರ್ನಾಟಕ ವಿದ್ಯುತ್ ಬೈಕ್ ಟ್ಯಾಕ್ಸಿ ಯೋಜನೆ-2021 ರದ್ದುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಹಿಂದಿನ ಬಿಜೆಪಿ (BJP) ಸರ್ಕಾರ ಎಲೆಕ್ಟ್ರಿಕ್ ಬೈಕ್, ಟ್ಯಾಕ್ಸಿಗೆ 2021ರ ಜುಲೈ 14ರಂದು ಅನುಮತಿ ನೀಡಿತ್ತು. ಆದರೆ ಇಂದಿನ ಕಾಂಗ್ರೆಸ್ (Congress) ಸರ್ಕಾರ ಹಿಂದಿನ ಸರ್ಕಾರ ನೀಡಿದ್ದ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಅನುಮತಿಯನ್ನು ವಾಪಸ್ಸು ಪಡೆದುಕೊಂಡಿದೆ. ಬಿಎಂಆರ್​ಸಿಎಲ್ (BMRCL) ಎಂಡಿ …

Read More »

ಶಿವರಾತ್ರಿಯಂದು ಜಾಗರಣೆ ಮಾಡುವುದೇಕೆ?

ಇಂದು ದೇಶಾದ್ಯಂತ ಶಿವರಾತ್ರಿ ಸಂಭ್ರಮ ಮನೆ ಮಾಡಿದೆ. ಮಾಘ ಮಾಸ ಕೃಷ್ಣ ಪಕ್ಷದ ಚತುರ್ದಶಿಯಂದು ಬರುವ ಮಹಾಶಿವರಾತ್ರಿ ಪರಮೇಶ್ವರನ ಆರಾಧನೆಗೆ ಅತ್ಯಂತ ವಿಶೇಷ ದಿನ. ಶಾಸ್ತ್ರಗಳ ಪ್ರಕಾರ ದೇವರ ದೇವ ಮಹಾದೇವನ ಒಲುಮೆಗೆ ಪಾತ್ರರಾಗಲು ಇರುವಂತಹ ಒಂದು ಸರಳ ವಿಧಾನವೇನೂ ಅಂದ್ರೆ ಅದುವೇ ಶುದ್ಧ ಭಕ್ತಿಯಿಂದ ಶಿವನನ್ನ ಧ್ಯಾನಿಸುವುದು, ಪೂಜಿಸುವುದು, ಭಜಿಸುವುದು. ಇನ್ನು ಮಹಾಶಿವರಾತ್ರಿಯ ದಿನ ಶಿವನ ಭಕ್ತರು ಉಪವಾಸ ಕೈಗೊಳ್ಳುವ ಮೂಲಕ, ಧ್ಯಾನ, ಜಾಗರಣೆಗಳನ್ನು ಮಾಡುವ ಮೂಲಕ ಶಿವನನ್ನು …

Read More »

ಮೊಬೈಲ್ ನಂಬರ್ ಕೊಡಲು ನಿರಾಕರಿಸಿದಕ್ಕೆ ಯುವಕರಿಂದ ಯುವತಿ ಮೇಲೆ ಹಲ್ಲೆ;

ಬಾಗಲಕೋಟೆ, ಮಾರ್ಚ್​.08: ಯುವಕರ ಗುಂಪೊಂದು ವಿದ್ಯಾರ್ಥಿನಿಯರನ್ನು (Student) ಚುಡಾಯಿಸಿ, ಹಲ್ಲೆ ಮಾಡಿದ್ದು ಹಲ್ಲೆಗೊಳಗಾದ (Assault) ವಿದ್ಯಾರ್ಥಿನಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಬಾಗಲಕೋಟೆ (Bagalkot) ಜಿಲ್ಲೆಯ ರಬಕವಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಹಲ್ಲೆಗೊಳಗಾದ ವಿದ್ಯಾರ್ಥಿನಿ (ಸ್ವಾತಿ ನಡಕಟ್ಟಿ) ಆಸ್ಪತ್ರೆಗೆ ದಾಖಲಾಗಿದ್ದಾಳೆ. ಬುಧವಾರ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಘಟನೆ ಸಂಬಂಧ ಅನ್ವರ್ ಮಕಾಂದಾರ್, ಆಯನ್ ಪಟೇಲ್, ಜಾವೀದ್ ಅಲಿಹ್ಮದ್ ಎಂಬ ಯುವಕರನ್ನು ಪೊಲೀಸರು ಬಂಧಿಸಿದ್ದಾರೆ. ಹಲ್ಲೆಗೊಳಗಾದ ಯುವತಿ ಸ್ವಾತಿ ತನ್ನ ಸ್ನೇಹಿತೆಯರಾದ …

Read More »

ಮದುವೆಯಾಗಿ ಆಗಷ್ಟೇ 7 ತಿಂಗಳ ಗರ್ಭಿಣಿ, ಗಂಡ ವಿಧಿವಶವಾದಾಗ ಬದುಕು ಆಕೆಗೆ ಪಾಠ ಕಲಿಸಿತ್ತು! ಇಂದು ಅಮೆರಿಕನ್ನರ ಮೆಚ್ಚುಗೆ ಗಳಿಸಿದ್ದಾರೆ!

ಆಕೆಗೆ ಮದುವೆಯಾಗಿ ಆಗಷ್ಟೇ ಏಳು ತಿಂಗಳ ಗರ್ಭಿಣಿ ಈ ಸಂದರ್ಭದಲ್ಲಿ ಗಂಡ ಮೃತಪಡುತ್ತಾರೆ. ಇದಾದ ಬಳಿಕ ದಿಕ್ಕೇ ತೋಚದಾದ ಮಹಿಳೆ ಜೀವನವೇ ನಿಂತು ಹೋಯ್ತು ಅಂತಾ ಶಾಕ್ ಗೆ ಒಳಗಾಗಿ ಬಿಡ್ತಾಳೆ. ಆದ್ರೇ ಈ ಶಾಕ್ ನಿಂದ ಹೊರ ಬಂದು ಮೂರನೇ ಕ್ಲಾಸ್ ಪಾಸ್ ಆಗಿದ್ದ ಆಕೆ ಶುರು ಮಾಡಿದ್ದು ತಾನೇ ಕಲ್ತಿದ್ದ ಕಸುಬು. ಕೌದಿ ಹೊಲಿಯಲು ಆರಂಭಿಸಿದ ಆಕೆ ಇದೀಗ ವರ್ಷಕ್ಕೆ 50-60 ಲಕ್ಷ ರೂಪಾಯಿ ದುಡಿಯುವ ಹೆಣ್ಣು …

Read More »

ಅಂಜಲಿ ನಿಂಬಾಳ್ಕರ್ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದ ಅನಂತ್ ಕುಮಾರ್ ಹೆಗಡೆ

ಬೆಳಗಾವಿ, ಮಾ.8: ಉತ್ತರ ಕನ್ನಡದ ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ (Anantkumar Hegde) ಅವರು ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಸಂಪಗಾಂವ ಗ್ರಾಮದಲ್ಲಿ ಸಿದ್ದರಾಮಯ್ಯ (Siddaramaiah) ಮತ್ತು ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು. ಅಲ್ಲದೆ, ಉತ್ತರ ಕನ್ನಡದಲ್ಲಿ ಕಾಂಗ್ರೆಸ್ ಅಭ್ಯರ್ಥಿಯೇ ಇಲ್ಲ. ಚುನಾವಣೆಗೆ ಸ್ಪರ್ಧಿಸಿದರೆ ಎಂದರೆ ಕರಿಮಣಿ ಮಾಲೀಕ ನಾನಲ್ಲಾ ಎನ್ನುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ. ನಮ್ಮ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಇಲ್ಲ. ಕಾಂಗ್ರೆಸ್​ನಲ್ಲಿದ್ದ ಪದಾಧಿಕಾರಿಗಳು ಹೋಗಿ ನೀವು ನಿಲ್ಲಿರಿ ಅಂದರೆ ಕರಿಮನಿ ಮಾಲೀಕ ನಾನಲ್ಲಾ ಎಂದು …

Read More »

ನೀರಾವರಿ ಭರವಸೆ ನೀಡಿದರೆ ಕರ್ನಾಟಕಕ್ಕೆ ಸೇರಲು ಸಿದ್ಧ ಎಂದ ಮಹಾರಾಷ್ಟ್ರದ ಜತ್ತ ತಾಲೂಕಿನ ರೈತ ಮುಖಂಡರ ನಿಯೋಗ

ಬೆಳಗಾವಿ, : ಮಹಾರಾಷ್ಟ್ರದ ಜತ್ತ ತಾಲೂಕಿನ ರೈತ ಮುಖಂಡರ ನಿಯೋಗವು ಬೆಳಗಾವಿಯ (Belagavi) ಅಥಣಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಕಾರ್ಯಕ್ರಮದ ವೇದಿಕೆಯಲ್ಲಿ ಭೇಟಿಯಾಗಿ ನೀರಿನ ಸಮಸ್ಯೆ ಸರಿಪಡಿಸುವಂತೆ ಮನವಿ ಪತ್ರವನ್ನು ಸಲ್ಲಿಸದೆ. ನೀರಾವರಿ ಭರವಸೆ ನೀಡಿದರೆ ಕರ್ನಾಟಕಕ್ಕೆ ಸೇರಲು ಸಿದ್ಧ ಎಂದು ಅವರು ಸಲ್ಲಿಸಿದ ಮನವಿಯಲ್ಲಿ ಉಲ್ಲೇಖಿಸಲಾಗಿದೆ. ಮಹಾರಾಷ್ಟ್ರದ ಗಡಿ ಗ್ರಾಮಗಳ ಹೊಲಗಳಿಗೆ ರಾಜ್ಯದ ನೀರಾವರಿ ಯೋಜನೆಗಳಿಂದ ಸ್ವಲ್ಪ ನೀರು ಬಿಡುವಂತೆ ಮನವಿ ಪತ್ರದಲ್ಲಿ ಒತ್ತಾಯಿಸಲಾಗಿದೆ. ದಯವಿಟ್ಟು ನಮಗೆ ನೀರು ಕೊಡಿ …

Read More »

ಅಸಲಿಗೆ ರಾಜಕೀಯವೆಂದರೆ ಕುತಂತ್ರ, ಒಬ್ಬರು ಮತ್ತೊಬ್ಬರನ್ನು ತುಳಿಯುವುದು ಎಲ್ಲ ಪಕ್ಷಗಳಲ್ಲಿ ನಡೆಯುತ್ತದೆ :ಸತೀಶ್ ಜಾರಕಿಹೊಳಿ,

ಬೆಳಗಾವಿ: ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡುವಾಗ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ಅವರು ದಲಿತ ಮುಖ್ಯಮಂತ್ರಿಗಾಗಿ (Dalit CM) ಬೇಡಿಕೆ ಇಂದು ನಿನ್ನೆಯದಲ್ಲ, ದಶಕಗಳಿಂದ ನಡೆದುಕೊಂಡು ಬಂದಿದೆ ಎಂದು ಹೇಳಿದರು. ಈ ವಿಷಯದಲ್ಲಿ ತಮ್ಮ ಪಕ್ಷ 99 ರವರೆಗೆ ಬಂದು ಔಟಾಗಿಬಿಡುತ್ತದೆ, ಸೆಂಚುರಿ (century) ಬಾರಿಸಲ್ಲ ಎಂದು ನಗುತ್ತಾ ಹೇಳಿದರು. ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗುವ ಆಕಾಂಕ್ಷೆಯನ್ನು ಮತ್ತೊಮ್ಮೆ ತೇಲಿಬಿಟ್ಟಿರುವುದರಿಂದ ದಲಿತ ಸಿಎಂ ವಿಷಯವನ್ನು ಮುನ್ನೆಲೆಗೆ ತರಲಾಗಿದೆಯೇ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ …

Read More »

ರಸ್ತೆ ಅಪಘಾತದಲ್ಲಿ ಮರಿ ಮಂಗ ಸಾವು

ಘಟನೆ ನೋಡಿದ ಇನ್ನಿತರೆ ವಾಹನ ಸವಾರರು ಅಪಘಾತ ಮಾಡಿ, ಮರಿ ಕೋತಿಯ ಸಾವಿಗೆ ಮತ್ತು ತಾಯಿ ಕೋತಿ ಗಾಯಗೊಳ್ಳುವಂತೆ ಮಾಡಿದ ಕಾರು ಚಾಲಕನ ವಿರುದ್ಧ ಆಕ್ರೋಶ ಹೊರ ಹಾಕಿದರು. ಅಪಘಾತವಾದ ಬಳಿಕ ಕಾರು ನಿಲ್ಲಿಸಿ ಕೋತಿಯನ್ನ ಆರೈಕೆ ಮಾಡುವ ಕೆಲಸ ಮಾಡಬೇಕಿತ್ತು. ಮೃತಪಟ್ಟಿದ್ದರೆ ಅಂತ್ಯಸಂಸ್ಕಾರ ಆದ್ರೂ ಮಾಡುವ ಕೆಲಸ ಮಾಡಬೇಕಿತ್ತು ಅಂತಾ ಸ್ಥಳೀಯರು ಆಕ್ರೋಶ ಹೊರ ಹಾಕಿದ್ದಾರೆ. ತಾಯಿ ಮತ್ತು ಮಗು ಇಬ್ಬರೂ ಒಟ್ಟೊಟ್ಟಿಗೆ ಹೊರಟಿದ್ದರು. ಆದರೆ ರಸ್ತೆ ದಾಟುತ್ತಿದ್ದ …

Read More »