Breaking News

ಮುಂದಿನ 7 ದಿನ ಭಾರಿ ಮಳೆ ಎಚ್ಚರಿಕೆ!

ಮಳೆ ಅಬ್ಬರಿಸುತ್ತಿದ್ದು, ಎಲ್ಲೆಲ್ಲೂ ಮಳೆರಾಯ ತನ್ನ ರೌದ್ರಾವತಾರ ತೋರಿಸುತ್ತಿದ್ದಾನೆ. ಈ ನಡುವೆ ಕರ್ನಾಟಕದ ಒಳನಾಡು ಪ್ರದೇಶದಲ್ಲಿ ಮಳೆ ಅಬ್ಬರ ಸ್ವಲ್ಪ ಕಡಿಮೆ ಆಗಿದೆ ಅಂತಾ ಕೊರಗುವ ಸಮಯದಲ್ಲೇ ಮತ್ತೊಮ್ಮೆ ಭರ್ಜರಿ ಮಳೆಯ ಬಗ್ಗೆ ಮುನ್ನೆಚ್ಚರಿಕೆ ನೀಡಲಾಗಿದೆ. ಹಾಗಾದ್ರೆ ಯಾವೆಲ್ಲಾ ಜಿಲ್ಲೆಗಳಿಗೆ ಭರ್ಜರಿ ಮಳೆ ಬೀಳಲಿದೆ? ಮುಂದಿನ 7 ದಿನಗಳ ಕಾಲ ಮಳೆ ಅಬ್ಬರಿಸುವ ಕರ್ನಾಟಕದ ಜಿಲ್ಲೆಗಳು ಯಾವುವು? ಬನ್ನಿ ಸಂಪೂರ್ಣ ಮಾಹಿತಿ ತಿಳಿಯೋಣ. ಕರ್ನಾಟಕ ರಾಜ್ಯದಲ್ಲಿ ತುಂತುರು ಮಳೆ, ಗುಡುಗು, …

Read More »

40 ಲಕ್ಷಕ್ಕೆ ನೀಟ್‌ ಪ್ರಶ್ನೆಪತ್ರಿಕೆ ಬಿಕರಿ

ಪಟ್ನಾ: ನೀಟ್‌-ಯುಜಿ ಅಕ್ರಮ ಪ್ರಕರಣ ಈಗ ಹೊಸ ತಿರುವು ಪಡೆದುಕೊಂಡಿದ್ದು, ಪರೀಕ್ಷೆಗೂ ಮುನ್ನ ಪ್ರಶ್ನೆಪತ್ರಿಕೆ ಸೋರಿಕೆಯಾಗಿದ್ದು ನಿಜ ಎಂದು ನಾಲ್ವರು ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ. ಪರೀಕ್ಷೆಯ ಹಿಂದಿನ ದಿನ ರಾತ್ರಿಯೇ ನಮಗೆ ಪ್ರಶ್ನೆಪತ್ರಿಕೆಯನ್ನು ನೀಡಿ, ಉತ್ತರಗಳನ್ನು ನೆನಪಲ್ಲಿಟ್ಟುಕೊಳ್ಳುವಂತೆ ಸೂಚಿಸಲಾಗಿತ್ತು. ಮಾರನೇ ದಿನ ಪರೀಕ್ಷೆ ವೇಳೆ ಅದೇ ಪ್ರಶ್ನೆಗಳನ್ನು ಕೇಳಲಾಗಿತ್ತು ಎಂದು ಬಂಧಿತ ನೀಟ್‌ ಆಕಾಂಕ್ಷಿ ಹೇಳಿದ್ದಾರೆ. ನೀಟ್‌ ಅವ್ಯವಹಾರ ಸಂಬಂಧ ಬಿಹಾರದಲ್ಲಿ ನೀಟ್‌ ಆಕಾಂಕ್ಷಿ ಅನುರಾಗ್‌ ಯಾದವ್‌, ಆತನ ಸಂಬಂಧಿ, ದಾನಾಪುರ ಮುನ್ಸಿಪಲ್‌ …

Read More »

ಕಾನ್‌ಸ್ಟೇಬಲ್‌ ಮೇಲೆಯೂ ನಟ ದರ್ಶನ್‌ ಗ್ಯಾಂಗ್‌ ಹಲ್ಲೆ

ಮದ್ದೂರು: ಕೊಲೆ ಆರೋಪದಲ್ಲಿ ಬಂಧನವಾಗಿರುವ ನಟ ದರ್ಶನ್‌ ಹಾಗೂ ಅವರ ಗ್ಯಾಂಗ್‌ನ ಕೃತ್ಯಗಳು, ಪುಂಡಾಟ ಒಂದೊಂದಾಗಿಯೇ ಬೆಳಕಿಗೆ ಬರುತ್ತಿವೆ. ದರ್ಶನ್‌ ಗ್ಯಾಂಗ್‌ ಕಾನ್‌ಸ್ಟೆಬಲ್‌ ಮೇಲೆಯೂ ಹಲ್ಲೆ ನಡೆಸಿತ್ತು ಎಂಬ ಆರೋಪ ಕೇಳಿಬಂದಿದೆ. ಮದ್ದೂರು ಕ್ಷೇತ್ರದ ಕಾಂಗ್ರೆಸ್‌ ಶಾಸಕ ಕೆ.ಎಂ. ಉದಯ್‌ ಮನೆಯಲ್ಲೇ ಶಾಸಕರ ಗನ್‌ಮ್ಯಾನ್‌ ಆಗಿದ್ದ ಡಿಎಆರ್‌ ಕಾನ್‌ಸ್ಟೆಬಲ್‌ ನಾಗೇಶ್‌ ಮೇಲೆ ದರ್ಶನ್‌ ಕಡೆಯವರು ಹಲ್ಲೆ ನಡೆಸಿದ್ದರು ಎನ್ನಲಾಗಿದೆ. ಎ. 27ರಂದು ಲೋಕಸಭಾ ಚುನಾವಣೆ ಹಿನ್ನೆಲೆ ಮದ್ದೂರು ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ …

Read More »

ಯೋಗ ದಿನಾಚರಣೆ 6 ಸಾವಿರ ಜನರೊಂದಿಗೆ ಯೋಗ ಮಾಡಲಿದ್ದಾರೆ ಪ್ರಧಾನಿ ಮೋದಿ

ಶ್ರೀನಗರ : ಮನಸ್ಸು ಮತ್ತು ದೇಹದ ನಡುವೆ ಏಕತೆಯನ್ನು ಸ್ಥಾಪಿಸುವ ಪ್ರಾಚೀನ ಭಾರತೀಯ ಶಿಸ್ತಾಗಿರುವ ಯೋಗವು ಅಧಿಕೃತವಾಗಿ ವಿಶ್ವ ರಂಗವನ್ನು ಪ್ರವೇಶಿಸಿ ಹತ್ತನೇ ವರ್ಷವಾಗಿದೆ. ಇಂದು ವಿಶ್ವದಾದ್ಯಂತ 10ನೇ ವಿಶ್ವ ಯೋಗ ದಿನವನ್ನು ಆಚರಿಸಲಾಗುತ್ತಿದೆ. ಇಂದು ವಿಶ್ವದಾದ್ಯಂತ 170 ಕ್ಕೂ ಹೆಚ್ಚು ದೇಶಗಳು ಮತ್ತು ದೊಡ್ಡ ಸಂಸ್ಥೆಗಳು ಮತ್ತು ಕಚೇರಿಗಳಲ್ಲಿ ಶತಕೋಟಿ ಜನರು ಯೋಗ ಮಾಡಲಿದ್ದಾರೆ. ಶ್ರೀನಗರದ ದಾಲ್ ಸರೋವರದ ದಡದಲ್ಲಿರುವ ಶೇರ್-ಎ-ಕಾಶ್ಮೀರ್ ಇಂಟರ್ನ್ಯಾಷನಲ್ ಕಾನ್ಫರೆನ್ಸ್ ಸೆಂಟರ್ (ಎಸ್ಕೆಐಸಿಸಿ) ನಲ್ಲಿ …

Read More »

ಬೆಲೆ ಏರಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆ

ಬೆಳಗಾವಿ: ಪೆಟ್ರೋಲ್, ಡೀಸೆಲ್ ದರ ಏರಿಕೆ ಖಂಡಿಸಿ ಇಲ್ಲಿನ ಧರ್ಮವೀರ ಸಂಭಾಜಿ ವೃತ್ತದಲ್ಲಿ ಬಿಜೆಪಿ ಉತ್ತರ ಮಂಡಳದವರು ಗುರುವಾರ ಪ್ರತಿಭಟನೆ ನಡೆಸಿದರು‌. ಮಾನವ ಸರಪಳಿ ನಿರ್ಮಿಸಿ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಕಾರರು, ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು‌. ನೇತೃತ್ವ ವಹಿಸಿದ್ದ ಸಂಸದ ಜಗದೀಶ ಶೆಟ್ಟರ್, ‘ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ರಾಜ್ಯ ಸರ್ಕಾರ ಅಗತ್ಯ ವಸ್ತುಗಳ ದರ ಹೆಚ್ಚಿಸುತ್ತಿದೆ. ಅದರಲ್ಲೂ ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ಎಲ್ಲದರ ಮೇಲೆ ಪರಿಣಾಮ ಬೀರುತ್ತದೆ. …

Read More »

ಸೋರಿಕೆಯಿಲ್ಲದೆ ಪರೀಕ್ಷೆ ನಡೆಸುವುದು ಮೋದಿ ಸರ್ಕಾರಕ್ಕೆ ಅಸಾಧ್ಯ: ಖರ್ಗೆ

ನವದೆಹಲಿ: ಯುಜಿಸಿ-ನೆಟ್ ಪರೀಕ್ಷೆ ರದ್ದಾದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ‘ಪ್ರತಿ ದಿನ ಪ್ರಶ್ನೆ ಪತ್ರಿಕೆ ಸೋರಿಕೆಯಾಗುತ್ತಿದ್ದು, ಇದು ಯಾವ ರೀತಿಯ ಪರೀಕ್ಷಾ ಪೇ ಚರ್ಚಾ?’ ಎಂದು ಕೇಳಿದ್ದಾರೆ. ಈ ಕುರಿತಂತೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಖರ್ಗೆ, ‘ಪ್ರತಿ ವರ್ಷ ‘ಪರೀಕ್ಷಾ ಪೇ ಚರ್ಚಾ’ ಎಂಬ ಹಾಸ್ಯಾಸ್ಪದ ಕಾರ್ಯಕ್ರಮವನ್ನು ನಡೆಸುತ್ತಿದ್ದರೂ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ವಂಚನೆಯಿಲ್ಲದೆ ಯಾವುದೇ ಪರೀಕ್ಷೆಯನ್ನು ನಡೆಸಲು …

Read More »

ಹುಬ್ಬಳ್ಳಿ: ನಗರ ಚಿಕಿತ್ಸಾಲಯ ನಿಷ್ಕ್ರಿಯ

ಹುಬ್ಬಳ್ಳಿ: ಸಾರ್ವಜನಿಕರಿಗೆ ತಕ್ಷಣದ ಆರೋಗ್ಯ ಸೇವೆ ಒದಗಿಸಲು ಅಭಿವೃದ್ಧಿಪಡಿಸಲಾದ ಇಲ್ಲಿನ ಹೊಸ ಮೇದಾರ ಓಣಿಯ ನಗರ ಚಿಕಿತ್ಸಾಲಯ ಇನ್ನೂ ಕಾರ್ಯಾರಂಭ ಮಾಡಿಲ್ಲ. ಸ್ಮಾರ್ಟ್‌ ಸಿಟಿ ಯೋಜನೆಯಡಿ ₹4 ಕೋಟಿಗೂ ಅಧಿಕ ವೆಚ್ಚದಲ್ಲಿ ನಿರ್ಮಿಸಿದ ಕಟ್ಟಡ ಉದ್ಘಾಟನೆಯಾಗಿ ವರ್ಷವಾಗಿದೆ. ಆದರೆ, ಈವರೆಗೆ ಇಲ್ಲಿ ಆರೋಗ್ಯ ಸೇವೆ ಲಭ್ಯವಾಗಿಲ್ಲ. ಇದರಿಂದ ಸುತ್ತಲಿನ ವ್ಯಾಪಾರಸ್ಥರು, ಗ್ರಾಹಕರು, ನಿವಾಸಿಗಳು ಚಿಕ್ಕ-ಪುಟ್ಟ ಚಿಕಿತ್ಸೆಗೂ ಕಿಮ್ಸ್‌ಗೆ ಹೋಗಬೇಕು ಇಲ್ಲವೇ ಖಾಸಗಿ ಆಸ್ಪತ್ರೆಗೆ ತೆರಳಿ ಹೆಚ್ಚು ಹಣ ನೀಡಬೇಕು. ‘ಬಹಳ …

Read More »

ಹದಗೆಟ್ಟ ರಸ್ತೆಗಳು: ಸಂಚಾರಕ್ಕೆ ಸಂಚಕಾರ

ಶಿರಹಟ್ಟಿ: ರಾಜ್ಯದಲ್ಲಿಯೇ ಹಿಂದುಳಿದ ತಾಲ್ಲೂಕು ಎಂಬ ಹಣೆಪಟ್ಟಿ ಕಟ್ಟಿಕೊಂಡಿರುವ ತಾಲ್ಲೂಕು ಕೇಂದ್ರವು ಇಲ್ಲಗಳ ಮಧ್ಯಯೇ ಸಾಗುತ್ತಿದೆ. ಮೂಲ ಸೌಕರ್ಯಗಳಿಂದ ವಂಚಿತವಾದ ತಾಲ್ಲೂಕಿನ ಜನರು ಸುಗಮ ಸಂಚಾರವಿಲ್ಲದೆ ಜೀವ ಕೈಯಲ್ಲಿ ಹಿಡಿದುಕೊಂಡು ಪ್ರಯಾಣಿಸುತ್ತಿದ್ದಾರೆ. ತಾಲ್ಲೂಕಿನ ಬಹುತೇಕ ಗ್ರಾಮೀಣ ಪ್ರದೇಶದ ರಸ್ತೆಗಳು ಹದಗೆಟ್ಟಿದ್ದು, ವಾಹನ ಸವಾರರ ಸಂಚಾರಕ್ಕೆ ಸಂಚಕಾರ ತಂದೊಡ್ಡಿವೆ. ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಈ ಕುರಿತು ನಿರ್ಲಕ್ಷ್ಯ ವಹಿಸುತ್ತಿದ್ದು, ಸಾರ್ವಜನಿಕರ ಶಾಪಕ್ಕೆ ಗುರಿಯಾಗಿದ್ದಾರೆ. ಹದಗೆಟ್ಟ ಗ್ರಾಮೀಣ ರಸ್ತೆಗಳು: ತಾಲ್ಲೂಕಿನ ತಂಗೋಡ, ಕೊಗನೂರು, …

Read More »

ಸಹಾಯಕ ಲೋಕೋ ಪೈಲಟ್ ನೇಮಕಾತಿ: ನೈಋತ್ಯ ರೈಲ್ವೆ ವಲಯಕ್ಕೆ ಎಷ್ಟು ಹುದ್ದೆಗಳು?

ಹುಬ್ಬಳ್ಳಿ, ಜೂನ್ 20: ಭಾರತೀಯ ರೈಲ್ವೆ ಇಲಾಖೆ ಸಹಾಯಕ ಲೋಕೋ ಪೈಲಟ್ ನೇಮಕಾತಿಗೆ ಹೆಚ್ಚಿನ ಆದ್ಯತೆ ನೀಡಿದೆ. ರೈಲು ಪ್ರಯಾಣಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಸಹಾಯಕ ಲೋಕೋ ಪೈಲಟ್ ನೇಮಕಾತಿಯ ಸಂಖ್ಯೆಯನ್ನು ಏರಿಕೆ ಮಾಡಿ ಆದೇಶಿಸಿದೆ. ಶೀಘ್ರದಲ್ಲೇ ನೇಮಕಾತಿ ಆರಂಭವಾಗಲಿದೆ. ಮುಂದಿನ 6-8 ತಿಂಗಳಿನಲ್ಲಿ ಭಾರತೀಯ ರೈಲ್ವೆ 18,799 ಸಹಾಯಕ ಲೋಕೋ ಪೈಲಟ್‌ಗಳ ನೇಮಕಾತಿ ಮಾಡಿಕೊಳ್ಳಲಿದೆ. ಯಾವ ರೈಲು ವಿಭಾಗಕ್ಕೆ ಎಷ್ಟು ಹುದ್ದೆಗಳು? ಎಂದು ಈಗಾಗಲೇ ಸೂಚನೆ ನೀಡಲಾಗಿದ್ದು, ನೇಮಕಾತಿ ಪ್ರಕ್ರಿಯೆ …

Read More »

ಜಿ.ಪಂ, ತಾ.ಪಂ ಚುನಾವಣೆಗೆ ಸಿದ್ಧರಾಗಿ: ಬಾಲರಾಜ್ ಗುತ್ತೇದಾರ

ಕಲಬುರಗಿ: ‘ಮುಂಬರುವ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆ ಎದುರಿಸಲು ಜೆಡಿಎಸ್ ಪಕ್ಷದ ಕಾರ್ಯಕರ್ತರು ಬೂತ್‌ ಮಟ್ಟದಿಂದ ಸಿದ್ಧರಾಗಬೇಕು’ ಎಂದು ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಬಾಲರಾಜ್ ಗುತ್ತೇದಾರ ಹೇಳಿದರು. ನಗರದ ಜೆಡಿಎಸ್ ಕಚೇರಿಯಲ್ಲಿ ಬುಧವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ‘ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ, ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅವರ ಆಡಳಿತದ ಅವಧಿಯಲ್ಲಿ ರೈತರ ಸಾಲಮನ್ನಾ, ಗ್ರಾಮ ವಾಸ್ತವ್ಯ, ನೀರಾವರಿ ಯೋಜನೆ ಸೇರಿದಂತೆ …

Read More »