ಬೆಂಗಳೂರು, ಮಾರ್ಚ್ 4: ಲೋಕಸಭೆ ಚುನಾವಣೆಗೆ (Lok Sabha Elections) ಅಭ್ಯರ್ಥಿಗಳ ಆಯ್ಕೆ ಸಂಬಂಧಪಟ್ಟ ಬಿಜೆಪಿ (BJP) ಮತ್ತು ಕಾಂಗ್ರೆಸ್ (Congress) ಸತತ ಸಭೆಗಳನ್ನು ನಡೆಸುತ್ತಿವೆ. ಅಭ್ಯರ್ಥಿ ಆಯ್ಕೆ ಸಂಬಂಧ ಕಾಂಗ್ರೆಸ್ ಪಕ್ಷವು ಮಂಗಳವಾರ ಬೆಂಗಳೂರಿನಲ್ಲಿ ಸಭೆ ಹಮ್ಮಿಕೊಂಡಿದ್ದರೆ, ಅತ್ತ ಕಿತ್ತೂರು ಕರ್ನಾಟಕದ ನಾಲ್ಕು ಕ್ಷೇತ್ರಗಳ ಮೇಲೆ ಕಣ್ಣಿಟ್ಟಿರುವ ಬಿಜೆಪಿ, ಆ ಭಾಗದಲ್ಲಿ ಸಭೆ ನಡೆಸಲಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರೇ ಖುದ್ದು ಸಭೆಯಲ್ಲಿ ಭಾಗವಹಿಸಲಿದ್ದಾರೆ. ಕಿತ್ತೂರು ಕರ್ನಾಟಕದ …
Read More »ಏಪ್ರಿಲ್ 5ಕ್ಕೆ ಬರ್ತಿದೆ ಶರಣ್ ನಟನೆಯ ಹಾರರ್ ಸಿನಿಮಾ
ಛೂ ಮಂತರ್’ ಸಿನಿಮಾ ರಿಲೀಸ್ಗೆ ಒಂದು ತಿಂಗಳು ಬಾಕಿ ಇದೆ. ಹೀಗಾಗಿ, ಚಿತ್ರಕ್ಕೆ ಭರ್ಜರಿ ಪ್ರಚಾರ ನೀಡುವ ಕೆಲಸವನ್ನು ತಂಡ ಮಾಡುತ್ತಿದೆ. ಟೀಸರ್ ನೋಡಿದವರಿಗೆ ಸಿನಿಮಾದ ಗುಣಮಟ್ಟದ ಬಗ್ಗೆ ನಿರೀಕ್ಷೆ ಮೂಡುವಂತಾಗಿದೆ. ಶೀಘ್ರವೇ ಈ ಸಿನಿಮಾದ ಟ್ರೇಲರ್ ರಿಲೀಸ್ ಆಗಲಿದೆ. ನಟ ಶರಣ್ (Sharan) ಅವರು ಸ್ಯಾಂಡಲ್ವುಡ್ನಲ್ಲಿ ಬೇಡಿಕೆ ಸೃಷ್ಟಿಸಿಕೊಂಡಿದ್ದಾರೆ. ಅವರ ನಟನೆಯ ‘ಅವಾತರ ಪುರುಷ 2’ ಸಿನಿಮಾ ಮಾರ್ಚ್ 22ರಂದು ರಿಲೀಸ್ ಆಗಲಿದೆ ಎಂದು ಘೋಷಣೆ ಆಗಿದೆ. ಈ ಚಿತ್ರದಲ್ಲಿ ಮಾಟ …
Read More »ಬೆಳಗಾವಿಯಲ್ಲೂ ಗುಳೆ ಹೋಗುವವರ ಸಂಖ್ಯೆ ದುಪ್ಪಟ್ಟಾಗಿದೆ. ಕೆಲಸ ಹುಡುಕಿಕೊಂಡು ನಿತ್ಯ ಸಾವಿರಾರು ಜನರು ಗೋವಾ, ಉಡುಪಿ, ಮಂಗಳೂರು ಕಡೆಗೆ ವಲಸೆ
ಬೆಳಗಾವಿಯಲ್ಲೂ ಇದೇ ಸ್ಥಿತಿ: ಜಿಲ್ಲೆಯ 506 ಗ್ರಾಪಂ ವ್ಯಾಪ್ರಿಯ 640ಕ್ಕೂ ಅಧಿಕ ಹಳ್ಳಿಗಳಲ್ಲಿ ರೈತರು, ಕೂಲಿಕಾರರಿಗೆ ನರೇಗಾ ಯೋಜನೆ ಆಶ್ರಯವಾಗಿತ್ತು. ಆದರೆ, ನಾಲ್ಕೈದು ತಿಂಗಳಿನಿಂದ ಸಮಯಕ್ಕೆ ಸರಿಯಾಗಿ ಕೂಲಿ ಪಾವತಿಯಾಗದಿರುವ ಹಿನ್ನೆಲೆಯಲ್ಲಿ ಜನರು ಬೆಂಗಳೂರು, ಹೈದರಾಬಾದ್, ಬೆಳಗಾವಿ, ಮಹಾರಾಷ್ಟ್ರದ ಪುಣೆ, ಮುಂಬೈ, ಕೊಲ್ಲಾಪುರ, ಗೋವಾ ರಾಜ್ಯದ ವಾಸ್ಕೋ, ಪಣಜಿ ಸೇರಿ ಇತರ ನಗರ ಪ್ರದೇಶಗಳಿಗೆ ಗುಳೆ ಹೋಗುತ್ತಿದ್ದಾರೆ. ಈಗಾಗಲೇ ಹಿಂಗಾರು ಹಂಗಾಮಿನ ಜೋಳ, ಕಡಲೆ, ಸೂರ್ಯಕಾಂತಿ ಸುಗ್ಗಿ ಮುಗಿದಿದೆ. ಕಬ್ಬು ಕಟಾವು …
Read More »ಭೀಕರ ಬರದ ಹಿನ್ನೆಲೆಯಲ್ಲಿ ಉತ್ತರ ಕರ್ನಾಟಕದ ಜಿಲ್ಲೆಗಳಿಂದ ಗುಳೆ ಹೋಗುವವರ ಸಂಖ್ಯೆ ದುಪ್ಪಟ್ಟಾಗಿದೆ.
ಈ ವರ್ಷ ಭೀಕರ ಬರದ ಹಿನ್ನೆಲೆಯಲ್ಲಿ ಉತ್ತರ ಕರ್ನಾಟಕದ ಜಿಲ್ಲೆಗಳಿಂದ ಗುಳೆ ಹೋಗುವವರ ಸಂಖ್ಯೆ ದುಪ್ಪಟ್ಟಾಗಿದೆ. ಕೆಲಸ ಹುಡುಕಿಕೊಂಡು ನಿತ್ಯ ಸಾವಿರಾರು ಜನರು ಗೋವಾ, ಉಡುಪಿ, ಮಂಗಳೂರು ಕಡೆಗೆ ವಲಸೆ ಹೋಗುತ್ತಿದ್ದಾರೆ. ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಾಗಲಕೋಟೆ ವಿಭಾಗವೊಂದರಿಂದಲೇ ಪ್ರತಿ ದಿನ ಮಂಗಳೂರಿಗೆ 22 ಬಸ್ಗಳನ್ನು ಬಿಡಲಾಗುತ್ತಿದೆ. ಮಂಗಳೂರು ವಿಭಾಗದಿಂದ 20 ಬಸ್ಗಳು ಸಂಚರಿಸುತ್ತವೆ. ಬಾಗಲಕೋಟೆಯಿಂದ ಗೋವಾಕ್ಕೆ ಪ್ರತಿದಿನ 18 ಬಸ್ ಓಡಾಡುತ್ತಿವೆ. ಹೀಗಾಗಿ ಕೂಲಿ ಕೆಲಸ ಹುಡುಕಿಕೊಂಡು …
Read More »ಭಾರತದ ಮೊದಲ ನೀರೊಳಗಿನ ಮೆಟ್ರೋ ಉದ್ಘಾಟನೆಗೆ ದಿನಾಂಕ ಫಿಕ್ಸ್;
ಕೋಲ್ಕತ್ತಾ: ಮಾರ್ಚ್ 6ರಂದು ಕೋಲ್ಕತ್ತಾದಲ್ಲಿ ನಿರ್ಮಿಸಲಾದ ಭಾರತದ ಮೊದಲ ನದಿಯೊಳಗಿನ ಮೆಟ್ರೋ ಸುರಂಗವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದು, ಹೂಗ್ಲಿ ನದಿಯ ಅಡಿಯಲ್ಲಿ ನಿರ್ಮಿಸಲಾದ ಸುರಂಗವು ಕೋಲ್ಕತ್ತಾ ಮೆಟ್ರೋದ ಪೂರ್ವ-ಪಶ್ಚಿಮ ಮೆಟ್ರೋ ಕಾರಿಡಾರ್‌ನ ಭಾಗವಾಗಿದೆ. ಇದು ಹೌರಾ ಮೈದಾನದಿಂದ ಎಸ್‌ಪ್ಲೇನೇಡ್‌ಗೆ ಸಂಪರ್ಕಿಸುತ್ತದೆ ಎಂದು ವರದಿಯಾಗಿದೆ. ಅದೇ ದಿನ ಕೋಲ್ಕತ್ತಾ ಮೆಟ್ರೋದ ಕವಿ ಸುಭಾಷ್-ಹೇಮಂತ ಮುಖೋಪಾಧ್ಯಾಯ ಮತ್ತು ತಾರಾತಲಾ-ಮಜೆರ್ಹತ್ ವಿಭಾಗಗಳನ್ನು ಪ್ರಧಾನಿ ಮೋದಿ ಉದ್ಘಾಟಿಸಲಿದ್ದಾರೆ. ಈ ವಿಭಾಗಗಳು ರಸ್ತೆ ದಟ್ಟಣೆಯನ್ನು ನಿವಾರಿಸಲು ಮತ್ತು …
Read More »ಸರ್ಕಾರಿ FSL ವರದಿ ಬಂದಿಲ್ಲ, ಖಾಸಗಿ ವರದಿ ಒಪ್ಪಲ್ಲ; ಬಿಜೆಪಿಗೆ ಪರಮೇಶ್ವರ್ ತಿರುಗೇಟು
ಬೆಂಗಳೂರು: ರಾಜ್ಯಸಭಾ ಚುನಾವಣೆಯ (Rajya sabha Election) ಫಲಿತಾಂಶ ಪ್ರಕಟವಾದ ಫೆ. 27ರಂದು ವಿಜಯೋತ್ಸವದ ವೇಳೆ ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಲಾಗಿದೆ ಎಂಬ ವಿದ್ಯಮಾನಕ್ಕೆ ಸಂಬಂಧಿಸಿ ಬಿಜೆಪಿ ಬಿಡುಗಡೆ ಮಾಡಿದ ಖಾಸಗಿ ಎಫ್‌ಎಸ್‌ಎಲ್ ವರದಿಯ (FSL Report) ಬಗ್ಗೆ ರಾಜ್ಯ ಸರ್ಕಾರ ಆಕ್ಷೇಪ ವ್ಯಕ್ತಪಡಿಸಿದೆ. ಕಾಂಗ್ರೆಸ್‌ನ ವಿಜಯೀ ಅಭ್ಯರ್ಥಿ ನಾಸಿರ್ ಹುಸೇನ್ (Nasir Husein) ಅವರ ವಿಜಯೋತ್ಸವದ ಸಂದರ್ಭದಲ್ಲಿ ವಿಧಾನಸೌಧದ (Vidhana Soudha) ಒಳಗೇ ಪಾಕಿಸ್ತಾನ್ ಜಿಂದಾಬಾದ್ (Pakistan …
Read More »ಮೂವರು ವಿದ್ಯಾರ್ಥಿನಿಯರ ಮೇಲೆ ಆಯಸಿಡ್ ದಾಳಿ!
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಡಬದ ಸರಕಾರಿ ಕಾಲೇಜಿನಲ್ಲಿ ಮೂವರು ಹೆಣ್ಮಕ್ಕಳ ಮೇಲೆ ದುಷ್ಟನೊಬ್ಬ ಆಯಸಿಡ್ (Acid attack) ಎರಚಿದ್ದಾನೆ. ಅಲೀನಾ ಸಿಬಿ, ಅರ್ಚನಾ, ಅಮೃತ ಎಂಬ ವಿದ್ಯಾರ್ಥಿನಿಯರ ಮೇಲೆ ದಾಳಿ ಮಾಡಿದ್ದಾನೆ. ಈ ಮೂವರು ವಿದ್ಯಾರ್ಥಿನಿಯರು ಸರ್ಕಾರಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದರು. ಮುಖಕ್ಕೆ ಮಾಸ್ಕ್ ಹಾಗೂ ತಲೆಗೆ ಹ್ಯಾಟ್ ಹಾಕಿದ್ದ ಕಿರಾತಕ ಏಕಾಏಕಿ ವಿದ್ಯಾರ್ಥಿನಿಯರ ಮೇಲೆ ಆಯಸಿಡ್ ಹಾಕಿದ್ದಾನೆ. ಆಯಸಿಡ್ ಮುಖಕ್ಕೆ ಬೀಳುತ್ತಿದ್ದ ವಿದ್ಯಾರ್ಥಿನಿಯರು ಕಿರುಚಾಡಿದ್ದಾರೆ. ಆಯಸಿಡ್ ದಾಳಿಗೆ …
Read More »ರಾಮೇಶ್ವರಂ ಕೆಫೆ ಸ್ಫೋಟದ ಹಿಂದೆ ಶಾರಿಕ್?; ತೀವ್ರ ವಿಚಾರಣೆ, ಯಾರೀ ಕರ್ನಲ್!?
ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ (Rameshwaram Cafe) ಬಾಂಬ್ ಸ್ಫೋಟ (Blast in Bengaluru) ಸಂಭವಿಸಿ 70 ಗಂಟೆಗಳೇ ಕಳೆದಿವೆ. ರಾಜ್ಯ ಪೊಲೀಸರ ಹಲವಾರು ತಂಡಗಳು ಸಿಸಿಟಿವಿ ಫೂಟೇಜ್ ಸೇರಿದಂತೆ ಎಲ್ಲ ದಿಕ್ಕುಗಳಲ್ಲೂ ತನಿಖೆ ನಡೆಯುತ್ತಿದೆ. ಈ ನಡುವೆ ರಾಜ್ಯ ಸರ್ಕಾರ (Karnataka Government) ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ (National Investigation Agency) ವಹಿಸಿದೆ. ಇದರ ನಡುವೆ ಮಾರ್ಚ್ 1ರಂದು ಮಧ್ಯಾಹ್ನ 12.55ರ ಹೊತ್ತಿಗೆ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ …
Read More »ಇನ್ಮುಂದೆ ‘ಆರೋಗ್ಯ ಇಲಾಖೆ’ಯ ಖರೀದಿ ಪಕ್ರಿಯೆ ‘ಇ-ಪ್ರೊಕ್ಯೂರ್ಮೆಂಟ್’ ಮೂಲಕ ನಿರ್ವಹಣೆ ಕಡ್ಡಾಯ – ರಾಜ್ಯ ಸರ್ಕಾರ
ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಅಧೀನ ಸಂಸ್ಥೆಗಳಲ್ಲಿ ಖರೀದಿ ಪ್ರಕ್ರಿಯೆಯನ್ನು ಇ-ಪ್ರೊಕ್ಯೂರ್ಮೆಂಟ್ ಅಥವಾ ಜೆಂ ಪೋರ್ಟಲ್ ಗಳ ಮೂಲಕ ನಿರ್ವಹಣೆ ಮಾಡುವುದನ್ನು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತರು ಸುತ್ತೋಲೆ ಹೊರಡಿಸಿದ್ದು, ಅದರಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಅಧೀನ ಸಂಸ್ಥೆಯ ರೂ. ಒಂದು ಲಕ್ಷಕ್ಕಿಂತ ಹೆಚ್ಚಿನ ಮೌಲ್ಯದ ಖರೀದಿ ಪ್ರಕ್ರಿಯೆಯನ್ನು e-procurement ಅಥವಾ GeM …
Read More »ಬರಿದಾಗುತ್ತಿದೆ ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳ ಜೀವನಾಡಿ ಹಿಡಕಲ್ ಜಲಾಶಯ
ಬೆಳಗಾವಿ, ಮಾರ್ಚ್ 03: ಭೀಕರ ಬರಗಾಲದಿಂದ (Drought) ರಾಜ್ಯದ ಜಲಾಶಯಗಳು ಭಣಗುಡುತ್ತಿವೆ. ಅಂತರ್ಜಲ ಪಾತಾಳಕ್ಕೆ ಕುಸಿದಿದೆ. ಬೇಸಿಗೆ ಆರಂಭದಲ್ಲೇ ಜಲಕ್ಷಾಮದ ಬಿಸಿ ರಾಜ್ಯಕ್ಕೆ ತಟ್ಟಿದೆ. ಹನಿ ನೀರಿಗೂ ಪರದಾಡುವಂತೆ ಪರಿಸ್ಥಿತಿ ಎದುರಾಗಿದೆ. ಇನ್ನು ಬೆಳಗಾವಿ (Belagavi) ಮತ್ತು ಬಾಗಲಕೋಟೆ (Bagalkote) ಜಿಲ್ಲೆಗಳಿಗೆ ಜೀವನಾಡಿಯಾಗಿರುವ ಹುಕ್ಕೇರಿ ತಾಲೂಕಿನ ಹಿಡಕಲ್ ಜಲಾಶಯ (Hidkal Dam) ಬರಿದಾಗುತ್ತಿದೆ. ಬೆಳಗಾವಿ ಜಿಲ್ಲೆಯಲ್ಲಿ ಕುಡಿಯುವ ನೀರಿಗಾಗಿ ಜನ ಪರಿತಪ್ಪಿಸುತ್ತಿದ್ದಾರೆ. ಬೆಳಗಾವಿಯ ಮತ್ತು ಬಾಗಲಕೋಟೆ ಜಿಲ್ಲೆ ಜೀವನಾಡಿ ಆಗಿರುವ ಹಿಡಕಲ್ …
Read More »