Breaking News

ಸಾಮೂಹಿಕ ಅತ್ಯಾಚಾರ ಆರೋಪ: ಶಾಸಕ ಮುನಿರತ್ನ ವಿರುದ್ಧ ಬಿ ರಿಪೋರ್ಟ್​ ಸಲ್ಲಿಸಿದ ಎಸ್​ಐಟಿ

ಬೆಂಗಳೂರು: ಶಾಸಕ ಮುನಿರತ್ನ ವಿರುದ್ಧ ಆರ್​ಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಸಾಮೂಹಿಕ ಅತ್ಯಾಚಾರ ಆರೋಪ ಪ್ರಕರಣದಲ್ಲಿ ವಿಶೇಷ ತನಿಖಾ ತಂಡ (ಎಸ್ಐಟಿ) ಬಿ ರಿಪೋರ್ಟ್ ಸಲ್ಲಿಸಿದೆ ಎಂದು ಅರ್ಜಿದಾರರ ಪರ ವಕೀಲರು ಹೈಕೋರ್ಟ್​ಗೆ ಮಾಹಿತಿ ನೀಡಿದ್ದಾರೆ. ತಮ್ಮ ವಿರುದ್ಧ ದಾಖಲಾಗಿದ್ದ ಪ್ರಕರಣ ರದ್ದು ಮಾಡುವಂತೆ ಕೋರಿ ಮುನಿರತ್ನ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಐ. ಅರುಣ್, ಅರ್ಜಿದಾರರ ಪರ ವಕೀಲರು, ಪ್ರಕರಣ ಸಂಬಂಧ ಬಿ ವರದಿ ಸಲ್ಲಿಸಲಾಗಿದೆ. ಆದ್ದರಿಂದ …

Read More »

ನಕಲಿ ದಾಖಲೆ ಸೃಷ್ಟಿಸಿ 40 ಕೋಟಿ ಮೌಲ್ಯದ ಸರ್ಕಾರಿ ಜಮೀನು ಕಬಳಿಕೆ ಯತ್ನ: 6 ಎಕರೆ ಜಾಗವನ್ನು ವಶಕ್ಕೆ ಪಡೆದ ಸರ್ಕಾರ

ನಕಲಿ ದಾಖಲೆ ಸೃಷ್ಟಿಸಿ 40 ಕೋಟಿ ಮೌಲ್ಯದ ಸರ್ಕಾರಿ ಜಮೀನು ಕಬಳಿಕೆ ಯತ್ನ: 6 ಎಕರೆ ಜಾಗವನ್ನು ವಶಕ್ಕೆ ಪಡೆದ ಸರ್ಕಾರ ದೊಡ್ಡಬಳ್ಳಾಪುರ(ಬೆಂ.ಗ್ರಾಮಾಂತರ): ನಗರದಂಚಿನಲ್ಲಿರುವ ಅರೆಹಳ್ಳಿಗುಡ್ಡದಹಳ್ಳಿ ಗ್ರಾಮದಲ್ಲಿ ನಕಲಿ ದಾಖಲೆ ಸೃಷಿಸಿ ಕಬಳಿಸಿದ್ದ ಆರು ಎಕರೆ ಗೋಮಾಳ ಜಮೀನನ್ನು ಸರ್ಕಾರ ವಶಪಡಿಸಿಕೊಂಡಿದೆ. ವಶಕ್ಕೆ ಪಡೆದಿರುವ ಭೂಮಿಯ ಈಗಿನ ಮಾರುಕಟ್ಟೆ ಮೌಲ್ಯ ಸುಮಾರು 40 ಕೋಟಿ ಎಂದು ಅಂದಾಜಿಸಲಾಗಿದೆ. ದೊಡ್ಡಬಳ್ಳಾಪುರ ನಗರದ ಪ್ರಭಾವಿಗಳಾದ ಕೆ.ಬಿ. ಮುದ್ದಪ್ಪ, ಪುರುಷೋತ್ತಮಗೌಡ, ಕೆ.ಬಿ. ಹನುಮಂತರಾಯಪ್ಪ, ಎಂ. ಮುನಿರಾಜು …

Read More »

ಕುಂದಾಪುರದಲ್ಲಿ ಹನಿಟ್ರ್ಯಾಪ್; ಮನೆಗೆ ಕರೆದು ವ್ಯಕ್ತಿಗೆ ಹಲ್ಲೆ ಮಾಡಿ ಹಣ ಸುಲಿಗೆ

ಉಡುಪಿ: ಹನಿಟ್ರ್ಯಾಪ್ ಜಾಲವೊಂದನ್ನು ಭೇದಿಸಿರುವ ಜಿಲ್ಲೆಯ ಕುಂದಾಪುರ ನಗರ ಠಾಣೆ ಪೊಲೀಸರು ಮಹಿಳೆ ಸಹಿತ ಒಟ್ಟು ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ಹಣ ಹಾಗೂ ಕೃತ್ಯಕ್ಕೆ ಬಳಸಿದ ಎರಡು ಕಾರುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ಮಾಹಿತಿ ನೀಡಿದ್ದಾರೆ. ನಾವುಂದ ಬಡಾಕೆರೆಯ ಸವದ್ ಯಾನೆ ಅಚ್ಚು (28), ಗುಲ್ವಾಡಿ ಗಾಂಧಿಕಟ್ಟೆಯ ಸೈಪುಲ್ಲಾ(38), ಹಂಗಳೂರು ಗ್ರಾಮದ ಮೊಹಮ್ಮದ್ ನಾಸೀರ್ ಶರೀಫ್ (36), ಕುಂಭಾಶಿ ಮೂಡುಗೋಪಾಡಿ ಜನತಾ …

Read More »

ಹುಬ್ಬಳ್ಳಿ ನೇಹಾ ಹಿರೇಮಠ ಕೊಲೆ ಪ್ರಕರಣ: ಹಂತಕ ಫಯಾಜ್ ಜಾಮೀನು ಅರ್ಜಿ ವಜಾ

ಧಾರವಾಡ, (ಸೆಪ್ಟೆಂಬರ್ 03): ಹುಬ್ಬಳ್ಳಿಯ ನೇಹಾ ಹಿರೇಮಠ ಕೊಲೆ ಪ್ರಕರಣದ (Neha Hiremath Murder Case) ಆರೋಪಿ ಫಯಾಜ್ ( accused fayaz)ಜಾಮೀನು ಅರ್ಜಿಯನ್ನು ಧಾರವಾಡ ಹೈಕೋರ್ಟ್​ ಪೀಠ ವಜಾಗೊಳಿಸಿದೆ. 2024ರ ಏಪ್ರಿಲ್ 18ರಂದು ನಡೆದಿದ್ದ ನೇಹಾ ಹಿರೇಮಠ ಕೊಲೆ ಪ್ರಕರಣದ ಆರೋಪಿ ಫಯಾಜ್ ಜಾಮೀನು ಅರ್ಜಿಯನ್ನು ಹುಬ್ಬಳ್ಳಿಯ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಸಹ ತಿರಸ್ಕೃತಗೊಳಿಸಿತ್ತು. ಇದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಜಾಮೀನು ಅರ್ಜಿಯನ್ನು ಧಾರವಾಡ ಹೈಕೋರ್ಟ್ (Dharwad High Court) ಸಹ ವಜಾಗೊಳಿಸಿ …

Read More »

ಸ್ವಾತಂತ್ರ್ಯ ಹೋರಾಟಗಾರರ ತಿಂಗಳ ಗೌರವಧನ ₹4.85 ಕೋಟಿ ಬಾಕಿ ಉಳಿಸಿಕೊಂಡ ರಾಜ್ಯ ಸರ್ಕಾರ

ಬೆಂಗಳೂರು: ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಪಡೆದುಕೊಳ್ಳಲು ಹೋರಾಡಿ ಜೈಲು ಶಿಕ್ಷೆ ಅನುಭವಿಸಿದ ರಾಜ್ಯ ಸ್ವಾತಂತ್ರ್ಯ ಹೋರಾಟಗಾರರಿಗೆ ನೀಡಲಾಗುವ ಗೌರವಧನವನ್ನು ಹಲವು ತಿಂಗಳಿಂದ‌ ರಾಜ್ಯ ಸರ್ಕಾರ ಬಾಕಿ ಉಳಿಸಿಕೊಂಡಿದೆ. ಇದರ‌ ಮೊತ್ತವೇ 4.85 ಕೋಟಿ ರೂಪಾಯಿ ದಾಟಿದೆ. ರಾಜ್ಯದಲ್ಲಿ 150 ಮಂದಿ ಸ್ವಾತಂತ್ರ್ಯ ಹೋರಾಟಗಾರರು ಮಾಸಿಕ 10 ಸಾವಿರ ರೂಪಾಯಿ ಗೌರವಧನ ಪಡೆಯುತ್ತಿದ್ದಾರೆ. ಮೃತಪಟ್ಟ ಸ್ವಾತಂತ್ರ್ಯ ಯೋಧರ ಶವ ಸಂಸ್ಕಾರಕ್ಕೆ ಸರ್ಕಾರ 4 ಸಾವಿರ ರೂಪಾಯಿ ನೀಡುತ್ತದೆ. ಧಾರವಾಡದಲ್ಲಿ 34, ಬೆಳಗಾವಿಯಲ್ಲಿ …

Read More »

ದರ್ಶನ್​​ಗೆ ಗಲ್ಲು ಶಿಕ್ಷೆ ವಿಧಿಸಬೇಕೆಂದು ಕೋರ್ಟ್​ ಹಾಲ್​​​ಗೆ ನುಗ್ಗಿದ ಅಪರಿಚಿತ ವ್ಯಕ್ತಿ,

ಬೆಂಗಳೂರು, (ಸೆಪ್ಟೆಂಬರ್ 03): ಚಿತ್ರದುರ್ಗದ  ರೇಣುಕಾಸ್ವಾಮಿ ಕೊಲೆ ಕೇಸಿನ (Renukaswamy Murder Case) ಆರೋಪಿಗಳಾದ ನಟ ದರ್ಶನ್ (Darshan)  ಸೇರಿದಂತೆ 17 ಆರೋಪಿಗಳಿಗೆ ಮರಣದಂಡನೆ ಶಿಕ್ಷೆ ವಿಧಿಸಬೇಕೆಂದು ಕೋರಿ ಅಪರಿಚಿತ ವ್ಯಕ್ತಿಯೊಬ್ಬರು ಅರ್ಜಿ ಹಿಡಿದು ಕೋರ್ಟ್ ಹಾಲ್​ ಗೆ ನುಗ್ಗಿರುವ ಘಟನೆ ನಡೆದಿದೆ.  ಹೌದು… ಬೆಂಗಳೂರಿನ (Bengaluru) ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ದರ್ಶನ್ ನನ್ನು ದರ್ಶನ್​ನನ್ನು ಈ ಹಿಂದೆ ಇದ್ದ ಬಳ್ಳಾರಿ ಜೈಲಿಗೆ ಶಿಫ್ಟ್​ ಮಾಡುವ ಸಂಬಂಧ ಅಧಿಕಾರಿಗಳು ಸಲ್ಲಿಸಿದ್ದ ಅರ್ಜಿಯನ್ನು ಇಂದು (ಸೆಪ್ಟೆಂಬರ್ 03) ಬೆಂಗಳೂರಿನ 64ನೇ …

Read More »

ಹೈಡ್ರಾಲಿಕ್ ಎಲಿವೇಟರ್​ಗೆ ಸಿಲುಕಿ ಯುವಕ ಸಾವು

ಬೆಂಗಳೂರು, ಸೆಪ್ಟೆಂಬರ್​ 03: ಶಾರ್ಟ್​ಸರ್ಕ್ಯೂಟ್​ನಿಂದ ಮನೆಗೆ ಬೆಂಕಿ (fire) ಹೊತ್ತಿಕೊಂಡು ಮಗು ಸಾವನ್ನಪ್ಪಿರುವಂತಹ (death) ಘಟನೆ ನಗರದ ಸ್ಯಾಂಕಿ ರಸ್ತೆಯ ಸಮ್ಮಿಟ್ ಅಪಾರ್ಟ್​ಮೆಂಟ್​ನಲ್ಲಿ ನಡೆದಿದೆ.  ನೇಪಾಳ ಮೂಲದ ಪುಷ್ಕರ್ ಕುಮಾರ್, ಜ್ಯೋತಿಕುಮಾರಿ​ ದಂಪತಿಯ 18 ತಿಂಗಳ ಪುತ್ರಿ ಅನು ಮೃತ ಮಗು. ಹೈಗ್ರೌಂಡ್ಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಪುತ್ರಿ ಅನು ಸೇರಿದಂತೆ ಪುಷ್ಕರ್ ಕುಮಾರ್, ಜ್ಯೋತಿಕುಮಾರಿ​ ದಂಪತಿ ಕಳೆದ 8 ವರ್ಷಗಳಿಂದ ಬೆಂಗಳೂರಿನಲ್ಲಿ ನೆಲೆಸಿದ್ದರು. ಅಪಾರ್ಟ್​ಮೆಂಟ್​ನ 10X10 ಅಳತೆ ರೂಮ್​ನಲ್ಲಿ ವಾಸವಿದ್ದರು. ಮಗುವನ್ನು ಮನೆಯಲ್ಲೇ …

Read More »

ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿಗೆ ಇಡಿ ಮತ್ತೊಂದು ಶಾಕ್: ಅಕೌಂಟ್‌ಗಳಲ್ಲಿದ್ದ 55 ಕೋಟಿ ರೂ. ಜಪ್ತಿ

ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿಗೆ ಇಡಿ ಮತ್ತೊಂದು ಶಾಕ್: ಅಕೌಂಟ್‌ಗಳಲ್ಲಿದ್ದ 55 ಕೋಟಿ ರೂ. ಜಪ್ತಿ ಬೆಂಗಳೂರು/ಚಿತ್ರದುರ್ಗ (ಸೆಪ್ಟೆಂಬರ್ 03): ಅಕ್ರಮ ಬೆಟ್ಟಿಂಗ್‌ ಆರೋಪ ಸಂಬಂಧ ಚಿತ್ರದುರ್ಗದ (Chitradurga) ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ (KC Veerendra Pappi) ಅವರನ್ನು ಇಡಿ ಬಂಧಿಸಿ ತೀವ್ರ ವಿಚಾರಣೆಗೊಳಪಡಿಸಿದೆ. ಮತ್ತೊಂದೆಡೆ ವಿರೇಂದ್ರಗೆ ಸಂಬಂಧಿಸಿದಂತೆ ಆಸ್ತಿಯನ್ನು ಇಡಿ ಅಧಿಕಾರಿಗಳು ಶೋಧ ನಡೆಸಿದ್ದು, ಸದ್ಯ ವೀರೇಂದ್ರಗೆ ಸೇರಿದ ಬ್ಯಾಂಕ್ ಅಕೌಂಟ್‌ಗಳಲ್ಲಿದ್ದ 55 ಕೋಟಿ ರೂಪಾಯಿಯನ್ನು ಜಪ್ತಿ ಮಾಡಿದೆ. …

Read More »

ತೀ ಹೆಚ್ಚು ವಿದ್ಯಾರ್ಥಿಗಳಿರುವ ಎಂಬ ಹೆಗ್ಗಳಿಕೆ ಹೊಂದಿರುವ ಸರ್ಕಾರಿ ಶಾಲೆಗೆ ಇದೆಂಥಾ ದುಸ್ಥಿತಿ

ಗದಗ, ಸೆಪ್ಟೆಂಬರ್​ 03: ಸರ್ಕಾರಿ ಶಾಲೆ (government school) ಅಂದರೆ ಸಾಕು ಮೂಗು ಮುರಿಯುವ ಜನರೇ ಜಾಸ್ತಿ. ಅದೆಷ್ಟೋ ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಲ್ಲದೇ ಬೀಗ ಹಾಕುವ ಹಂತಕ್ಕೆ ತಲುಪಿವೆ. ಆದರೆ ಈ ಶಾಲೆಯಲ್ಲಿ ಭರಪೂರ ವಿದ್ಯಾರ್ಥಿಗಳ (students) ಸಂಖ್ಯೆ ಇದೆ. ರಾಜ್ಯದಲ್ಲೇ ಅತೀ ಹೆಚ್ಚು ಮಕ್ಕಳಿರುವ ಶಾಲೆಗಳಲ್ಲಿ ನಾಲ್ಕನೇ ಸ್ಥಾನದಲ್ಲಿದೆ. ಆದರೆ ಇಲ್ಲಿ ಕನಿಷ್ಠ ಮೂಲಸೌಕರ್ಯ  ಇಲ್ಲದೇ ಬಡ ಮಕ್ಕಳಿಗೆ ಸರಿಯಾದ ಶಿಕ್ಷಣ ಸಿಗುತ್ತಿಲ್ಲ. ಬೀಳುವ ಹಂತದಲ್ಲಿರುವ ಕಟ್ಟಡದ ಕೆಳಗೆ ಜೀವಭಯದಲ್ಲಿ ಮಕ್ಕಳು ಪಾಠ ಕೇಳುವ ದುಸ್ಥಿತಿ …

Read More »

ಭವಿಷ್ಯ ಹೇಳುವ ನೆಪದಲ್ಲಿ ಉಂಗುರ ಕದ್ದು ಪರಾರಿ

ಚಿತ್ರದುರ್ಗ, ಸೆಪ್ಟೆಂಬರ್​ 03: ಭವಿಷ್ಯ ಹೇಳುವ ನೆಪದಲ್ಲಿ ರೈತನ ಉಂಗುರ (ring) ಕದ್ದ ಮಧ್ಯಪ್ರದೇಶ ಮೂಲದ ಐವರು ಸಾಧು ವೇಷಧಾರಿಗಳನ್ನು ಪೊಲೀಸರು ಬಂಧಿಸಿರುವಂತಹ ಘಟನೆ ಚಿತ್ರದುರ್ಗ (Chitradurga) ತಾಲೂಕಿನ ಚಿಕ್ಕಗೊಂಡನಹಳ್ಳಿ ಬಳಿ ನಡೆದಿದೆ. ಕಮಲನಾಥ್, ಸಂತೋಷ್ ನಾಥ್, ಚೈನ್ ನಾಥ್ ಚೌಹಾಣ್, ಶ್ರವಣ್ ಜೋಗಿ, ಚಾಲಕ ಟೋನಿಯಾ ಬಂಧಿತರು. ನಡೆದಿದ್ದೇನು? ರಾಷ್ಟ್ರೀಯ ಹೆದ್ದಾರಿ 50ರ ಬಳಿ ರೈತ ರವಿಕುಮಾರ್ ನಿಂತಿದ್ದರು. ಕಾರಿನಲ್ಲಿ ಕೂರಿಸಿ ಭವಿಷ್ಯ ಹೇಳುವ ನೆಪದಲ್ಲಿ ರವಿಕುಮಾರ್ ಕೈಯಲ್ಲಿದ್ದ ಉಂಗುರ ಕಸಿದು ಬಾಯಲ್ಲಿ ಹಾಕಿಕೊಂಡಿದ್ದರು. ನಂತರ …

Read More »