Breaking News

ಧುಪದಾಳ ಜಲಾಶಯಕ್ಕೆ ಸಚಿವ ಸತೀಶ ಜಾರಕಿಹೊಳಿ ಭೇಟಿ

ಬೆಳಗಾವಿ: ಗೋಕಾಕ ತಾಲೂಕಿನ ಧುಪದಾಳ ಗ್ರಾಮದಲ್ಲಿ ಘಟಪ್ರಭಾ ಹಾಗೂ ಹಿರಣ್ಯಕೇಶಿ‌ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಜಲಾಶಯಕ್ಕೆ ಸಚಿವ ಸತೀಶ ಜಾರಕಿಹೊಳಿ ಭೇಟಿ ನೀಡಿ ನೀರಿನ‌ ಸಂಗ್ರಹದ ಸಾಮರ್ಥ್ಯವನ್ನು ಪರಿಶೀಲಿಸಿದರು.  ಇದೇ ವೇಳೆ  ನೀರಿನ ಸಂಗ್ರಹ ಹೆಚ್ಚಿಗೆ ಮಾಡಲು ಯೋಜನೆ ರೂಪಿಸಲು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ಸಚಿವರು ಶೀಘ್ರದಲ್ಲೇ ಕಾಮಗಾರಿ ಪ್ರಾರಂಭಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ಈ ವೇಳೆ ಮಾತನಾಡಿದ ಸಚಿವ ಸತೀಶ ಜಾರಕಿಹೊಳಿ ಅವರು, ಈ  ಜಲಾಶಯ   ಸಾಮರ್ಥ್ಯವನ್ನು ಹೆಚ್ಚಿಸುವುದರಿಂದ …

Read More »

ಪ್ರಿಯಾಂಕಾ ಪರ ಹೆಬ್ಬಾಳ್ಕರ್ ಭರ್ಜರಿ ಪ್ರಚಾರ

ರಾಯಭಾಗ : ಜಾರಕಿಹೊಳಿ ಕುಟುಂಬಕ್ಕೆ ರಾಜಕಾರಣ ಹೊಸದಲ್ಲ. ಪ್ರಿಯಾಂಕಾ ಜಾರಕಿಹೊಳಿ ಮುಗ್ದ ಹೆಣ್ಣುಮಗಳು, ಆದರೆ ತುಂಬಾ ಬುದ್ದಿವಂತೆ. ಈ ಯುವ ನಾಯಕಿಯನ್ನು ಗೆಲ್ಲಿಸುವ ಮೂಲಕ ಚಿಕ್ಕೋಡಿ ಕ್ಷೇತ್ರದ ಅಭಿವೃದ್ಧಿಗೆ ಸಹಕರಿಸಿ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಚಿಕ್ಕೋಡಿ ಲೋಕಸಭಾ ವ್ಯಾಪ್ತಿಯ ರಾಯಭಾಗದಲ್ಲಿ ಸೋಮವಾರ ಪ್ರಿಯಾಂಕಾ  ಜಾರಕಿಹೊಳಿ ಪರ ಪ್ರಚಾರದ ಸಭೆಯಲ್ಲಿ ಮಾತನಾಡಿದ ಸಚಿವರು,  ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಬಡವರ ಹಸಿವನ್ನ …

Read More »

Dr. C.N. Manjunath: ಬಾವಾನನ್ನು ಗೆಲ್ಲಿಸಲು HDK ಪಣ

ಬೆಂಗಳೂರು: ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಬೆಂಗಳೂರು ಗ್ರಾಮಾಂತರ (Bengaluru Rural) ಲೋಕಸಭಾ ಕ್ಷೇತ್ರವನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದು , ಈ ಬಾರಿ ಇಲ್ಲಿ ಡಾ. ಮಂಜುನಾಥ್‌ (Dr. Manjunath) ಅವರನ್ನು ಗೆಲ್ಲಿಸಲೇಬೇಕೆಂದು ಪಣ ತೊಟ್ಟಿದ್ದಾರೆ. ಹೌದು. 2019ರ ಚುನಾವಣೆಯಲ್ಲಿ ಡಿಕೆ ಸುರೇಶ್‌ (DK Suresh) ಒಬ್ಬರೇ ಕರ್ನಾಟಕದಿಂದ ಕಾಂಗ್ರೆಸ್‌ (Congress) ಸಂಸದರಾಗಿ ಆಯ್ಕೆ ಆಗಿದ್ದರು. ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ನಡೆದ ಪರಿಣಾಮ ಡಿಕೆ ಸುರೇಶ್‌ 2.06 ಲಕ್ಷ ಮತಗಳಿಂದ ಬಿಜೆಪಿ …

Read More »

ಗೀತಾ ಆಯ್ಕೆಯಲ್ಲಿ ಒಳ ಒಪ್ಪಂದ ರಾಜಕಾರಣ ನಡೆದಿಲ್ಲ: ಭಂಡಾರಿ ಸ್ಪಷ್ಟನೆ

ಶಿವಮೊಗ್ಗ: ‘ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ನಿಂದ ಸ್ಪರ್ಧಿಸಿರುವ ಗೀತಾ ಶಿವರಾಜಕುಮಾರ್ ಡಮ್ಮಿ ಅಭ್ಯರ್ಥಿ ಅಲ್ಲ, ಅವರನ್ನು ಆಯ್ಕೆ ಮಾಡುವಲ್ಲಿ ಯಾವುದೇ ಒಳ ಒಪ್ಪಂದ ರಾಜಕಾರಣ ಕಾಂಗ್ರೆಸ್ ಮಾಡಿಲ್ಲ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷರೂ ಆದ ಶಿವಮೊಗ್ಗ ಕ್ಷೇತ್ರದ ಚುನಾವಣಾ ಉಸ್ತುವಾರಿ ಮಂಜುನಾಥ ಭಂಡಾರಿ ಸ್ಪಷ್ಟಪಡಿಸಿದರು. ನಗರದಲ್ಲಿ ಸೋಮವಾರ ಸುದ್ದಿ ಗೋಷ್ಟಿಯಲ್ಲಿ ಮಾತನಾಡಿದ ಮಂಜುನಾಥ ಭಂಡಾರಿ, ‘2014 ರ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ನಾನು ಕಾಂಗ್ರೆಸ್ ಅಭ್ಯರ್ಥಿಯಾಗಿದ್ದೆನು. ಗೀತಾ ಶಿವರಾಜಕುಮಾರ್ ಜೆಡಿಎಸ್ ಅಭ್ಯರ್ಥಿಯಾಗಿದ್ದರು. ಆಗ …

Read More »

ಲೋಕಸಭೆ ಚುನಾವಣೆ ಜನರ ಸಮ್ಮುಖದಲ್ಲೇ ನನ್ನ ನಿರ್ಧಾರ ಪ್ರಕಟಿಸುತ್ತೇನೆ- ಸುಮಲತಾ

ಬೆಂಗಳೂರು: ಮಂಡ್ಯ ನಗರದ ಕಾಳಿಕಾಂಬ ಸಮುದಾಯ ಭವನದ ಆವರಣದಲ್ಲಿ ನಾಳೆ (ಬುಧವಾರ) ಬೆಳಿಗ್ಗೆ 10 ಗಂಟೆಗೆ ಬೆಂಬಲಿಗರ ಸಭೆ ನಡೆಸಲಿದ್ದೇನೆ. ಆ ಬಳಿಕ ಲೋಕಸಭೆ ಚುನಾವಣೆ ಸಂಬಂಧ ಜನರ ಸಮ್ಮುಖದಲ್ಲೇ ನನ್ನ ನಿರ್ಧಾರವನ್ನು ಪ್ರಕಟಿಸುತ್ತೇನೆ ಎಂ ದು ಸಂಸದೆ ಸುಮಲತಾ ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋ ಸ್ಟ್ ಹಂ ಚಿಕೊಂಡಿರುವ ಅವರು, ನನ್ನ ಸ್ವಾಭಿಮಾನಿ ಮಂಡ್ಯದ ಬಂಧುಗಳೆ, ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ನಾನು ಕಳೆದ ಬಾರಿ ಐತಿಹಾಸಿಕ ಗೆಲುವು ಸಾಧಿಸಿದ …

Read More »

ಮಧ್ಯಾಹ್ನದ ಬಿಸಿಯೂಟಕ್ಕೆ ಚಿತ್ರಾನ್ನ ಸೇವಿಸಿದ್ದ 15 ಮಕ್ಕಳಿಗೆ ವಾಂತಿ, ಭೇದಿ

ಕೊಪ್ಪಳ, ಮಾರ್ಚ್​​ 02: ಮಧ್ಯಾಹ್ನದ ಬಿಸಿಯೂಟ ಸೇವಿಸಿದ್ದ 15 ಮಕ್ಕಳಿಗೆ(Childrens)ವಾಂತಿ, ಭೇದಿ ಉಂಟಾಗಿ ಅಸ್ವಸ್ಥರಾಗಿದ್ದ ಘಟನೆ ಜಿಲ್ಲೆಯ ಗಂಗಾವತಿ ತಾಲೂಕಿನ ಸಂಗಾಪುರ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮಕ್ಕಳು ಅಸ್ವಸ್ಥರಾಗಿದ್ದರು. ಮಧ್ಯಾಹ್ನ ಊಟಕ್ಕೆ ಚಿತ್ರಾನ್ನ ಸೇವಿಸಿದ ನಂತರ ಕೆಲಹೊತ್ತಿನಲ್ಲಿ ವಾಂತಿ ಭೇದಿಯಿಂದ ವಿದ್ಯಾರ್ಥಿಗಳು ಬಳಲಿದ್ದಾರೆ. ಕೂಡಲೇ ಅಸ್ವಸ್ಥ ಮಕ್ಕಳನ್ನು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಪಿಹೆಚ್​ಸಿಗೆ ಡಿಹೆಚ್​ಒ ಡಾ.ಲಿಂಗರಾಜ್​ ಭೇಟಿ ನೀಡಿ ಆರೋಗ್ಯ ವಿಚಾರಣೆ ಮಾಡಿದ್ದಾರೆ. ಸುದ್ದಿ …

Read More »

ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಗೆ ನುಗ್ಗಿದ ರೈತರು

ಬೆಳಗಾವಿ, ಮಾರ್ಚ್​ 2: ರಾಜ್ಯದಲ್ಲಿ ಲೋಕಸಭೆ ಚುನಾವಣೆ(Lok Sabha Elections)ಕಾವು ರಂಗೇರುತ್ತಿದೆ. ಇದೇ ವೇಳೆ ರೈತರ ಆಕ್ರೋಶ ಕೂಡ ಜೋರಾಗಿದೆ. ಸರ್ಕಾರ ಸೇರಿದಂತೆ ಅಧಿಕಾರಿಗಳು, ಜನಪ್ರತಿನಿಧಿಗಳು ಚುನಾವಣೆಯಲ್ಲಿ ಬಿಜಿ ಇದ್ದು ಜಾನುವಾರುಗಳಿಗೆ ಮೇವಿಲ್ಲ. ನೀರಿಲ್ಲದೇ ಪರಿತಪ್ಪಿಸುತ್ತಿವೆ. ಬರ ಪರಿಹಾರವೂ ಇಲ್ಲ, ರೈತರ (Farmers) ಕಷ್ಟ ಹೇಳತಿರದ್ದಾಗಿದ್ದು ಇದರಿಂದ ಬೆಳಗಾವಿಯಲ್ಲಿ ರೈತರು ಇಂದು ಬೀದಿಗಿಳಿದಿದ್ದರು. ಕೇಂದ್ರ, ರಾಜ್ಯ ಸರ್ಕಾರದ ವಿರುದ್ದ ಧಿಕ್ಕಾರ ಕೂಗಿ ಆಕ್ರೋಶ ಹೊರ ಹಾಕಿದ್ದು, ಕೊನೆ ಘಳಿಗೆಯಲ್ಲಿ ರೈತರ ಹೋರಾಟ ತೀವ್ರ ಸ್ವರೂಪ …

Read More »

ಶ್ರೀಶೈಲ ಮಲ್ಲಿಕಾರ್ಜುನನ ಭಕ್ತರಿಗೆ ವಿಶೇಷ ಬಸ್ ವ್ಯವಸ್ಥೆ

ಬಾಗಲಕೋಟೆ, ಮಾರ್ಚ್.31: ಆಂಧ್ರ ಪ್ರದೇಶದ ಶ್ರೀಶೈಲ ಮಲ್ಲಿಕಾರ್ಜುನ ಜಾತ್ರೆಗೆ (Sri Shaila Mallikarjuna Jatre) ಪ್ರತಿವರ್ಷ ಲಕ್ಷಾಂತರ ಭಕ್ತರು ನಾನಾ ಪ್ರದೇಶಗಳಿಂದ ಪಾದಯಾತ್ರೆ ಮೂಲಕ ಅಲ್ಲಿಗೆ ತೆರಳ್ತಾರೆ. ಸದ್ಯ ಭಕ್ತರ ಅನುಕೂಲಕ್ಕೆ ಸಾರಿಗೆ ಇಲಾಖೆ ಸಿಹಿ ಸುದ್ದಿ ನೀಡಿದೆ. ಬಾಗಲಕೋಟೆ ಘಟಕದಿಂದ ವಿಶೇಷ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ (Bus Service). ಭಕ್ತರ ಅನುಕೂಲಕ್ಕೆ ನಿತ್ಯವೂ ಎರಡು ಬಸ್ಸಿನ ವ್ಯವಸ್ಥೆ ಮಾಡಲಾಗಿದೆ. ಪ್ರತಿ ವರ್ಷದಂತೆ ಈ ವರ್ಷವೂ ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿದೆ. …

Read More »

ಕುಮಾರಸ್ವಾಮಿ ಸರ್ಕಾರ ಬರುವುದು ಖಚಿತ: ದೇವೇಗೌಡ

ಹಾಸನ: ‘ಈವರೆಗೂ ನಾನು ಪ್ರಾಮಾಣಿಕವಾಗಿ ನಡೆದುಕೊಂಡಿದ್ದೇನೆ. ಯಾರು ಏನೇ ಕುತಂತ್ರ ಮಾಡಿದರೂ, ಏನೇ ಹೋರಾಟ ಮಾಡಿದರೂ ರಾಜ್ಯದಲ್ಲಿ ಮತ್ತೆ ಕುಮಾರಸ್ವಾಮಿ ಸರ್ಕಾರ ಬರುವುದು ಖಚಿತ’ ಎಂದು ಜೆಡಿಎಸ್‌ ವರಿಷ್ಠ ಎಚ್‌.ಡಿ. ದೇವೇಗೌಡ ಹೇಳಿದರು. ತಾಲ್ಲೂಕಿನ ಕಟ್ಟಾಯದಲ್ಲಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ‘ಕಾವೇರಿ ನೀರಿಗಾಗಿ ಹೋರಾಡಿದ್ದೇನೆ.ಹೇಮಾವತಿ ನೀರನ್ನು ನಾವು ಬಳಸಬಾರದು ಎಂದು ಈಗ ಆದೇಶ ಮಾಡುತ್ತಾರೆ. ರಾಜ್ಯದಲ್ಲಿ ಅಧಿಕಾರದ ದರ್ಪ ಮಿತಿಮೀರಿದೆ. ಮೂರು ಸಲ ಬಂದು ಪ್ರಜ್ವಲ್ ರೇವಣ್ಣ ಅವರನ್ನು ಸೋಲಿಸುತ್ತೇನೆ ಎಂದು …

Read More »

200 ಸ್ಥಾನಗಳಲ್ಲಿ ಸ್ಪರ್ಧಿಸಿರುವ ಕಾಂಗ್ರೆಸ್ ದೇಶ ಆಳುತ್ತೇವೆ ಎನ್ನುತ್ತಿರುವುದು ಹಾಸ್ಯಾಸ್ಪದ

ಹಾವೇರಿ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 200 ಸೀಟು ಗೆಲ್ಲುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿರುವುದು ಹಾಸ್ಯಾಸ್ಪದವಾಗಿದ್ದು, ಕಾಂಗ್ರೆಸ್ ಸ್ಪರ್ಧೆ ಮಾಡಿದ್ದೇ 200 ಸ್ಥಾನಗಳಲ್ಲಿ, ಅದರಲ್ಲಿ ಕಾಂಗ್ರೆಸ್ ಎಷ್ಟು ಸ್ಥಾನ ಗೆಲ್ಲುತ್ತದೆ ಎನ್ನುವುದನ್ನು ಹೇಳಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ – ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ. ಅವರು ಇಂದು ಹಾವೇರಿ ಜಿಲ್ಲೆಯ ಹಿರೆಕೆರೂರು ವಿಧಾನಸಭಾ ಕ್ಷೇತ್ರದ ಮಡ್ಲೂರು ಗ್ರಾಮದಲ್ಲಿ ಚುನಾವಣಾ ಪ್ರಚಾರ ನಡೆಸಿ ಮಾತನಾಡಿದ …

Read More »