Breaking News

ಇಂದು ಬಿಜೆಪಿ ಶಾಸಕಾಂಗ ಪಕ್ಷದ ಸಭೆ

ಬೆಂಗಳೂರು,ಫೆ.22- ರಾಜ್ಯಸಭಾ ಚುನಾವಣೆಯಲ್ಲಿ ಎನ್‍ಡಿಎ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಜೆಡಿಎಸ್‍ನ ಕುಪೇಂದ್ರ ರೆಡ್ಡಿ ಅವರನ್ನು ಗೆಲ್ಲಿಸುವ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿಯ ಮಹತ್ವದ ಶಾಸಕಾಂಗ ಸಭೆ ಸಂಜೆ ನಡೆಯಲಿದೆ. ಸಂಜೆ ಏಳು ಗಂಟೆಗೆ ಖಾಸಗಿ ಹೋಟೆಲ್‍ನಲ್ಲಿ ನಡೆಯಲಿರುವ ಸಭೆಯಲ್ಲಿ ಪಕ್ಷದ ಎಲ್ಲ ಶಾಸಕರ ಭಾಗವಹಿಸಬೇಕೆಂದು ಸೂಚಿಸಲಾಗಿದೆ. ಸಭೆಯಲ್ಲಿ ರಾಜ್ಯಸಭಾ ಚುನಾವಣೆಗೆ ಅನುಸರಿಸಬೇಕಾದ ಕಾರ್ಯತಂತ್ರಗಳು ಹಾಗೂ ಎನ್‍ಡಿಎ ಅಭ್ಯರ್ಥಿ ಗೆಲುವಿನ ಕುರಿತು ರಣತಂತ್ರ ರೂಪಿಸಲಾಗುತ್ತದೆ ಎನ್ನಲಾಗಿದೆ. ರಾಜ್ಯಸಭಾ ಚುನಾವಣೆ ಹಿನ್ನೆಲೆಯಲ್ಲಿ …

Read More »

ರಾಜ್ಯಸಭೆ ಚುನಾವಣೆ : ಅಮಿತ್ ಷಾ ಜೊತೆ ಕುಮಾರಸ್ವಾಮಿ ಮಾತುಕತೆ

ದೆಹಲಿ,ಫೆ.22- ಮುಂಬರುವ ಲೋಕಸಭೆ ಚುನಾವಣೆ ಹಾಗೂ ಪ್ರಸಕ್ತ ರಾಜ್ಯಸಭೆ ಚುನಾವಣೆ ಕಾರ್ಯತಂತ್ರ ಕುರಿತಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಕೇಂದ್ರ ಗೃಹಸಚಿವ ಅಮಿತ್ ಷಾ ಇಂದು ಮಾತುಕತೆ ನಡೆಸಿದ್ದಾರೆ. ನವದೆಹಲಿ ನಿವಾಸದಲ್ಲಿ ಅಮಿತ್ ಷಾ ಕುಮಾರಸ್ವಾಮಿ ಭೇಟಿಯಾಗಿ ಸುಮಾರು ಅರ್ಧಗಂಟೆ ಕಾಲ ರಾಜ್ಯಸಭೆ ಚುನಾವಣೆ ಕಾರ್ಯತಂತ್ರ, ಲೋಕಸಭೆ ಚುನಾವಣೆ ಸಿದ್ಧತೆ, ಬಿಜೆಪಿ-ಜೆಡಿಎಸ್ ನಡುವೆ ಕ್ಷೇತ್ರಗಳ ಹಂಚಿಕೆ, ಪ್ರಚಲಿತ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಸಿದ್ದಾರೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ. …

Read More »

ಮಲ್ಲಿಕಾರ್ಜುನ ಖರ್ಗೆಯವರೇ ಬಿಜೆಪಿಗೆ ಬರುವ ಸಾಧ್ಯತೆ ಇದೆ : ಯತ್ನಾಳ್

ಬೆಂಗಳೂರು, ಫೆ.22- ವಿಧಾನಸಭೆಯಲ್ಲಿ ಬಜೆಟ್ ಮೇಲೆ ಚರ್ಚೆಯ ನಡುವೆ ಬಿಜೆಪಿಯ ಶಾಸಕ ಬಸನಗೌಡ ಪಾಟೀಲ್ ಮತ್ತೊಮ್ಮೆ ಗಮನ ಸೆಳೆಯುವ ಹೇಳಿಕೆ ನೀಡಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೂಡ ಬಿಜೆಪಿಗೆ ಬರುವ ಸಾಧ್ಯತೆ ಇದೆ ಎಂದು ಹೇಳಿದರು. ಬಿಜೆಪಿ ಉಪನಾಯಕ ಅರವಿಂದ ಬೆಲ್ಲದ್ ಬಜೆಟ್ ಮೇಲೆ ಚರ್ಚೆ ಮಾಡುವಾಗ, ಸಿದ್ದರಾಮಯ್ಯ ಅವರ ಸರ್ಕಾರ ಸಾಲ ಮಾಡಿ ತುಪ್ಪ ತಿನ್ನುವಂತಹ ಬಜೆಟ್ ಮಂಡಿಸಿದೆ.   ರೈತರ ಮೇಲಷ್ಟೆ ಅಲ್ಲ ಮುಖ್ಯಮಂತ್ರಿಯವರು ಡಿ.ಕೆ.ಶಿವಕುಮಾರ್ …

Read More »

ಸಿದ್ದಗಂಗಾ ಮಠದಿಂದ ಅಕ್ಕಿ ಎರವಲು ಪ್ರಕರಣ: ಮತ್ತೋರ್ವ ಅಧಿಕಾರಿ ತಲೆದಂಡ

ತುಮಕೂರು,: ತುಮಕೂರು (Tumkur) ಜಿಲ್ಲೆಯ ಹಿಂದುಳಿದ ವರ್ಗಗಳ ಹಾಸ್ಟೆಲ್​ಗೆ (BCM Hostel) ಸಿದ್ದಂಗಾ ಮಠದಿಂದ(Siddaganga Matt) ಅಕ್ಕಿ ಎರವಲು ಪಡೆದು ವಿತರಿಸಿದ್ದ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಗೀತಮ್ಮ ಅವರನ್ನು ಅಮಾನತು ಮಾಡಿ ಸರ್ಕಾರ (Karnataka Government) ಆದೇಶ ಹೊರಡಿಸಿತ್ತು. ಇದೀಗ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಗಂಗಪ್ಪ ಅವರನ್ನು ಎತ್ತಂಗಡಿ ಮಾಡಿದೆ. ಈ ಮೂಲಕ ಕರ್ತವ್ಯ ನಿರ್ಲಕ್ಷ್ಯ ಆರೋಪದಡಿ ಜಿಲ್ಲಾ …

Read More »

ಈ ಅವಧಿಯ ಕೊನೆ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಕಬ್ಬು ಬೆಳೆಗಾರರಿಗೆ ಗುಡ್​ ನ್ಯೂಸ್​

ನವದೆಹಲಿ, (ಫೆಬ್ರವರಿ 21): ಕೇಂದ್ರ ಸರ್ಕಾರ ಕಬ್ಬು ಬೆಳೆಗಾರರಿಗೆ ಸಿಹಿ ಸುದ್ದಿ ನೀಡಿದೆ. ಕಬ್ಬಿನ(sugarcane) ಖರೀದಿ ದರ ಹೆಚ್ಚಳಕ್ಕೆ ಕೇಂದ್ರ ಸಂಪುಟ ಸಭೆ ಅನುಮತಿ ನೀಡಿದೆ. ಪ್ರತಿ ಕ್ವಿಂಟಲ್‌ಗೆ 315 ರೂಪಾಯಿದಿಂದ 340 ರೂ.ಗೆ ಏರಿಕೆ ಮಾಡಿದೆ. ಇದರೊಂದಿಗೆ ಕಬ್ಬಿನ ಎಫ್​ಆರ್​ಪಿ ಪ್ರತಿ ಕ್ವಿಂಟಲ್​ಗೆ 25 ರೂ. ಹೆಚ್ಚಿಸಿದಂತಾಗಿದೆ. ಈ ಬಗ್ಗೆ ಕೇಂದ್ರ ಪ್ರಸಾರ ಮತ್ತು ಕ್ರೀಡಾ ಖಾತೆ ಸಚಿವ ಅನುರಾಗ್ ಠಾಕೂರ್ ಮಾಹಿತಿ ನೀಡಿದ್ದಾರೆ. ಸಂಪುಟ ಸಭೆ ಬಳಿಕ ಸುದ್ದಿಗಾರೊಂದಿಗೆ …

Read More »

ಆನೇಕಲ್: ಮದ್ಯಕ್ಕೆ ಮಿಕ್ಸ್ ಮಾಡಲು ನೀರು ಬೇಗ ಕೊಡದ ವ್ಯಕ್ತಿಗೆ ಚಾಕು ಇರಿದ ಸ್ನೇಹಿತರು

ಆನೇಕಲ್, ಫೆ.22: ಮದ್ಯದ ಪಾರ್ಟಿಯಲ್ಲಿ ಕೊಲೆ, ಕೊಲೆ ಯತ್ನ, ಹಲ್ಲೆ ಪ್ರಕರಣಗಳು ನಡೆಯುತ್ತಲೇ ಇರುತ್ತವೆ. ಇದೀಗ, ಬೆಂಗಳೂರು (Bengaluru) ಹೊರವಲಯದ ಆನೇಕಲ್ (Anekal) ಬಳಿಯ ನಾರಾಯಣಪುರದಲ್ಲಿ ಮದ್ಯಕ್ಕೆ ಮಿಕ್ಸ್ ಮಾಡಲು ನೀರು ಬೇಗ ಕೊಡದ ಯುವಕನಿಗೆ ಸ್ನೇಹಿತರೇಚಾಕು ಇರಿದಘಟನೆ ನಡೆದಿದೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ನಾರಾಯಣಪುರ ನಿವಾಸಿ ಮುರುಗೇಶ್ (42) ಇರಿತಕ್ಕೊಳಗಾದ ವ್ಯಕ್ತಿ. ಇದೇ ಊರಿನ ನಿವಾಸಿಗಳಾದ ಸತೀಶ್ ಮತ್ತು ನವೀನ್ ಎಂಬುವವರು ಚಾಕು ಇರಿದ ಆರೋಪಿಗಳಾಗಿದ್ದಾರೆ. ನಾರಾಯಣಪುರ ಸಮೀಪದ ಗುಲ್ಲಣ್ಣ ಲೇವೇಟ್ ಬಡಾವಣೆಯೊಂದರಲ್ಲಿ …

Read More »

ತಪ್ಪಿಲ್ಲದೆ ಸಂವಿಧಾನ ಪೀಠಿಕೆ ಬೋಧಿಸಿದ 4 ವರ್ಷದ ಬಾಲಕ, ಎಲ್ಲೆಡೆ ಭಾರೀ ಮೆಚ್ಚುಗೆ

ಕೊಪ್ಪಳ, ಫೆ.22: ವಿಶ್ವದಲ್ಲೇ ಅತಿ ದೊಡ್ಡ ಪ್ರಜಾಪ್ರಭುತ್ವ ದೇಶವಾಗಿರುವ ನಮ್ಮ ಭಾರತವು ವೈವಿಧ್ಯತೆಯಲ್ಲಿ ಏಕತೆಯನ್ನು ಜಗತ್ತಿಗೆ ಸಾರುತ್ತಿದೆ. ಸದ್ಯ ನಾಲ್ಕು ವರ್ಷದ ಭದ್ರೇಶ್ ಎಂಬ ಅಂಗನವಾಡಿ ಬಾಲಕ ಸಂವಿಧಾನದ ಪೀಠಿಕೆಯನ್ನು ಬೋಧಿಸುವ ಮೂಲಕ ಜನರ ಮೆಚ್ಚುಗೆಗೆ ಪಾತ್ರನಾಗಿದ್ದಾನೆ. ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹೇರೂರು ಗ್ರಾಮದ ಭದ್ರೇಶ್, ನಿನ್ನೆ ಗ್ರಾಮದಲ್ಲಿ ನಡೆದ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಎರಡೂವರೆ ನಿಮಿಷಗಳ ಕಾಲ ಸಂವಿಧಾನ ಪೀಠಿಕೆ ಬೋಧಿಸಿದ್ದಾನೆ. ಬಾಲಕ ತಪ್ಪುಗಳಿಲ್ಲದೆ ಸಂವಿಧಾನ ಪೀಠಿಕೆ …

Read More »

ಬೆಂಗಳೂರು: ಹಪ್ತಾ, ಫ್ರೀ ಐಟಂಗಳಿಗಾಗಿ ವೃದ್ಧನ ಮುಂದೆ ಪುಂಡಾಟ

ಬೆಂಗಳೂರು, ಫೆ.22: ನಗರದ (Bengaluru) ಡಿಜೆ ಹಳ್ಳಿಯ ಪ್ರಿಯಾ ನಗರದಲ್ಲಿರುವ ಮೆಡಿಕಲ್ ಶಾಪ್​ವೊಂದರಲ್ಲಿ ನಡೆದಿದೆ ಎನ್ನಲಾದ ಹಫ್ತಾ (Hafta) ವಸೂಲಿ ಹಾಗೂ ಉಚಿತ ಐಟಂಗಳಿಗಾಗಿ ಯುವಕನಹೈಡ್ರಾಮದವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral Video) ಆಗುತ್ತಿದೆ. ಡಿಜೆ ಹಳ್ಳಿ ಬಳಿ ಇರುವ ಪ್ರಿಯಾ ನಗರ ಮುಖ್ಯರಸ್ತೆಯಲ್ಲಿರುವ ರಿಝ್ವಾನ್ ಮೆಡಿಕಲ್​ನಲ್ಲಿ ಈ ಘಟನೆ ನಡೆದಿದೆ ಎನ್ನಲಾಗುತ್ತಿದೆ. ಹಪ್ತಾ ಹಾಗೂ ಫ್ರೀ ಐಟಂಗಳಿಗಾಗಿ ಯುವಕನೊಬ್ಬ ಹುಚ್ಚನಂತೆ ವರ್ತನೆ ಮಾಡಿದ್ದಾನೆ. ರೋಲ್ ಕಾಲ್ ಕೊಡದಿದ್ದರೆ ಹಲ್ಲೆ ನಡೆಸುವುದಾಗಿ ಬೆದರಿಕೆ ಹಾಕಿದ್ದಾನೆ. ಮೆಡಿಕಲ್ ಶಾಪ್​ನಲ್ಲಿದ್ದ ವೃದ್ಧನ ಮುಂದೆ …

Read More »

ಲಂಚ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ: ಮರು ತನಿಖೆಗೆ ಲೋಕಾಯುಕ್ತಕ್ಕೆ ಕೋರ್ಟ್ ಸೂಚನೆ

ಬೆಂಗಳೂರು, ಫೆಬ್ರವರಿ 22: ಹಿಂದಿನ ಕಾಂಗ್ರೆಸ್ ಸರ್ಕಾರದಲ್ಲಿ (Congress Government) ಮುಖ್ಯಮಂತ್ರಿಯಾಗಿದ್ದಾಗ ಲಂಚ ಪಡೆದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯಗೆ (Siddaramaiah)ಈಗ ಸಂಕಷ್ಟ ಎದುರಾಗಿದೆ. ಸಿದ್ದರಾಮಯ್ಯ ವಿರುದ್ಧದ ಆರೋಪ ಸಾಬೀತಾಗಿಲ್ಲವೆಂದು ಸಲ್ಲಿಸಿದ್ದ ಬಿ ರಿಪೋರ್ಟ್ ಅನ್ನು ಜನಪ್ರತಿನಿಧಿಗಳ ನ್ಯಾಯಾಲಯ ತಿರಸ್ಕರಿಸಿದೆ. ಅಲ್ಲದೆ, ಮರುತನಿಖೆ ನಡೆಸಿ ಆರು ತಿಂಗಳಲ್ಲಿ ವರದಿ ಸಲ್ಲಿಸುವಂತೆ ಲೋಕಾಯುಕ್ತಕ್ಕೆ (Lokayukta) ಸೂಚನೆ ನೀಡಿದೆ. ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲೇ ಈ ವಿದ್ಯಮಾನ ನಡೆದಿರುವುದು ರಾಜಕೀಯವಾಗಿ ಪ್ರತಿಪಕ್ಷ ಬಿಜೆಪಿಗೆ ಪ್ರಮುಖ ಅಸ್ತ್ರವಾಗುವ …

Read More »

ಪ್ಯಾಂಟ್ ಒಳಗಡೆ ಪೌಡರ್ ರೂಪದ ಚಿನ್ನ ಸಾಗಿಸುತ್ತಿದ್ದ ಪ್ರಯಾಣಿಕ

ಬೆಂಗಳೂರು, ಫೆ.22: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಕೆಂಪೇಗೌಡ ಏರ್​ಪೋರ್ಟ್​​ನಲ್ಲಿ (Kempegowda International Airport Bengaluru) 22.5 ಲಕ್ಷ ಮೌಲ್ಯದ ಚಿನ್ನ (Gold Powder) ಜಪ್ತಿ ಮಾಡಲಾಗಿದೆ. ಏರ್ಪೋಟ್ ಕಸ್ಟಮ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಪ್ಯಾಂಟ್ ಒಳಗಡೆ ಪೌಡರ್ ರೂಪದ ಚಿನ್ನ ಸಾಗಿಸುತ್ತಿದ್ದ ಪ್ರಯಾಣಿಕನಿಂದ ಚಿನ್ನ ಜಪ್ತಿ ಮಾಡಿದ್ದಾರೆ. ಹಾಗೂ ಪ್ರಯಾಣಿಕನನ್ನು ವಶಕ್ಕೆ ಪಡೆಯಲಾಗಿದೆ.   ಶಾರ್ಜಾದಿಂದ ಕೆಐಎಬಿಗೆ ವಿಮಾನದಲ್ಲಿ ಬಂದಿಳಿದಿದ್ದ ಆರೋಪಿ ಕಸ್ಟಮ್ ಅಧಿಕಾರಿಗಳ ಕಣ್ತಪ್ಪಿಸಲು ಡಿಸೈನ್ ಪ್ಯಾಂಟ್ …

Read More »