Breaking News

ಪರೀಕ್ಷಾ ಪೆ ಚರ್ಚಾ ಕಾರ್ಯಕ್ರಮಕ್ಕೆ ದಾಖಲೆಯ 6.76 ಕೋಟಿ ಅಭ್ಯರ್ಥಿಗಳು ನೋಂದಣಿ

Spread the love

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಪ್ರತಿವರ್ಷ ನಡೆಸುವ ಪರೀಕ್ಷಾ ಪೆ ಚರ್ಚಾ ಕಾರ್ಯಕ್ರಮದಲ್ಲಿ ಭಾಗಿಯಾಗಲು 6.76 ಕೋಟಿ ಅಭ್ಯರ್ಥಿಗಳು ನೋಂದಣಿ ಮಾಡಿ, ದಾಖಲೆ ನಿರ್ಮಿಸಿದ್ದಾರೆ.

2026ರ ಪರೀಕ್ಷಾ ಪೆ ಚರ್ಚಾ ಕಾರ್ಯಕ್ರಮದಲ್ಲಿ ಭಾಗಿಯಾಗಲು ಬರೋಬ್ಬರಿ 6 ಕೋಟಿ 76 ಲಕ್ಷ ಅಭ್ಯರ್ಥಿಗಳು ತಮ್ಮ ಹೆಸರನ್ನ ನೊಂದಾಯಿಸಿದ್ದಾರೆ. ದೇಶದ ವಿವಿಧ ಪ್ರದೇಶಗ ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸುತ್ತಿದ್ದ ಪ್ರಧಾನಿ ಮೋದಿ, ಪರೀಕ್ಷೆ ವಿಚಾರದಲ್ಲಿ ಅವರಿಗೆ ಮಾರ್ಗದರ್ಶನ ಹಾಗೂ ಪ್ರೇರಣಾದಾಯಕ ಮಾತುಗಳನ್ನ ಹೇಳುತ್ತಿದ್ದರು.

2026ರ ಪರೀಕ್ಷಾ ಪೆ ಚರ್ಚಾ ಈಗ ಪ್ಯಾನ್ ಇಂಡಿಯಾ ಮಟ್ಟದ ಚರ್ಚಾ ವೇದಿಕೆಯಾಗಿ ಮಾರ್ಪಟ್ಟಿದೆ. ಇದು ಹೊಸ ಗಿನ್ನಿಸ್ ದಾಖಲೆಯನ್ನೇ ಬರೆದಿದೆ. 2026ರ ಪರೀಕ್ಷಾ ಪೆ ಚರ್ಚಾ ವಿಶ್ವದಲ್ಲಿಯೇ ಅತಿದೊಡ್ಡ ವಿದ್ಯಾರ್ಥಿಗಳೊಂದಿಗೆ ನಡೆದ ಸಂವಾದ ಕಾರ್ಯಕ್ರಮ ಎಂಬ ಹೆಗ್ಗಳಿಕೆ ಪಡೆಯಲಿದೆ. ಮುಖ್ಯ ಕಾರ್ಯಕ್ರಮ ಈಗಾಗಲೇ ನಡೆದಿದ್ದು, ರೆಕಾರ್ಡ್ ಕೂಡ ಮಾಡಲಾಗಿದೆ. ಸದ್ಯದಲ್ಲಿಯೇ ವಿವಿಧ ಪ್ಲಾಟ್‌ಫಾರ್ಮ್ಗಳಲ್ಲಿ ಕಾರ್ಯಕ್ರಮ ಪ್ರಸಾರವಾಗಲಿದೆ.


Spread the love

About Laxminews 24x7

Check Also

ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ

Spread the loveಬೆಂಗಳೂರು: ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಸಿ ನಡುವೆಯೂ ಬಂಗಾರ ಪ್ರಿಯರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಸತತ ಏರುಗತಿಯಲ್ಲಿ ಸಾಗುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ