Breaking News

ಪಾರ್ಕಿನಲ್ಲಿ ಆಟ ಆಡುವಾಗ ವಿದ್ಯುತ್ ತಗುಲಿ ಬಾಲಕ ಸಾವು

Spread the love

ಕಲಬುರಗಿ: ಪಾರ್ಕ್ ನಲ್ಲಿ ಆಟ ಆಡುತ್ತಿರುವಾಗ ವಿದ್ಯುತ್ ತಂತಿ ತಗುಲಿ ಬಾಲಕ ಸಾವನ್ನಪ್ಪಿದ ಆಘಾತಕಾರಿ ಘಟನೆ ನಗರದ ಎನ್.ಜಿ.ಓ. ಕಾಲೋನಿಯ ಹನುಮಾನ್ ಮಂದಿರದ ಉದ್ಯಾನವನದಲ್ಲಿ ನಡೆದಿದೆ.

ನಗರದ ಎನ್.ಜಿ.ಓ. ಕಾಲೋನಿಯ ಮಹಾದೇವಿ ಸುರೇಶ ದಂಪತಿ ಪುತ್ರ 6 ವರ್ಷದ ಸಿದ್ದು ಮೃತ ಬಾಲಕ. ವಿದ್ಯುತ್ ತಂತಿ ತಗಲಿ ಮೃತಪಟ್ಟಿದ್ದಾನೆ. ಹನುಮಾನ್ ಮಂದಿರದ ಉದ್ಯಾನವನದಲ್ಲಿನ ಹೈ ಮಾಸ್ಕ್ ದೀಪದ ವಿದ್ಯುತ್ ವೈರ್ ಕಟ್ ಆಗಿ ಬಿದ್ದ ಹಿನ್ನೆಲೆಯಲ್ಲಿ ಈ ಘಟನೆ ಸಂಭವಿಸಿದೆ.

 

ಆಟವಾಡುತ್ತಿದ್ದ ಬಾಲಕ ಆಕಸ್ಮಿಕವಾಗಿ ವಿದ್ಯುತ್ ತಂತಿ ತುಳಿದು ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಪಾಲಿಕೆಯಡಿಯಲ್ಲಿ ಬರುವ ಈ ಹೈ ಮಾಸ್ಕ್ ದೀಪದಿಂದಾಗಿ ಸಾವನ್ನಪ್ಪಿದ್ದ ಘಟನೆ ಬಗ್ಗೆ ಮಹಾನಗರ ಪಾಲಿಕೆ ಆಯುಕ್ತ ಸ್ನೇಹಾಲ್ ಲೋಖಂಡೆ ಖೇದ ವ್ಯಕ್ತ ಪಡಿಸಿದ್ದಾರೆ. ಈ ಬಗ್ಗೆ ಮಾತನಾಡಿ, ಆಟ ಆಡುವಾಗ ಅರ್ಥಿಂಗ್ ಕೇಬಲ್ ಮೇಲೆ ಮತ್ತು ಜಂಕ್ಷನ್ ಬಾಕ್ಸ್ ನಲ್ಲಿ ಕೈ ಇಟ್ಟಿದ್ದರಿಂದ ಅಕಸ್ಮಿಕವಾಗಿ 6 ವರ್ಷದ ಬಾಲಕ ಸಾವನ್ನಪ್ಪಿದ್ದಾನೆ. ಮೃತ ಬಾಲಕನ ಪಾಲಕರೊಂದಿಗೆ ಮಾತನಾಡಿದ್ದು, ಅವರಿಗೆ ಸಾಂತ್ವನ ಹೇಳಿದ್ದಲ್ಲದೇ, ಪರಿಹಾರ ಕೊಡುವ ಬಗ್ಗೆ ಮಾತನಾಡಿದ್ದೇನೆ ಎಂದು ತಿಳಿಸಿದರು.

 


Spread the love

About Laxminews 24x7

Check Also

ಪ್ರಧಾನಿ ಮೋದಿ ಒಂದು ದಿನ ತಮ್ಮ ಕೃತ್ಯಗಳಿಗೆ ಪಶ್ಚಾತ್ತಾಪ ಪಡುತ್ತಾರೆ: ಮಲ್ಲಿಕಾರ್ಜುನ ಖರ್ಗೆ

Spread the loveಕಲಬುರಗಿ: ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (MGNREGA) ಬದಲಾವಣೆ ಮಾಡಿರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸುವಂತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ