Breaking News

ಕೆಲಸದ ಸಮಯದಲ್ಲಿ ಪಾರ್ಟಿ – 6 ಮಂದಿ ಪಿಡಿಓಗಳು ಸಸ್ಪೆಂಡ್

Spread the love

ಬೆಂಗಳೂರು: ಕೆಲಸದ ಅವಧಿಯಲ್ಲಿ ಗ್ರಾಮ ಪಂಚಾಯತ್ ಅಧಿಕಾರಿ ಮತ್ತು ಸಿಬ್ಬಂದಿ ಸಿದ್ದರಬೆಟ್ಟದ ತಪ್ಪಲಲ್ಲಿ ಮದ್ಯ ಸಹಿತ ಪಾರ್ಟಿ ಮಾಡಿದ್ದ 6 ಜನ ಪಿಡಿಓಗಳನ್ನ  ಸಸ್ಪೆಂಡ್  ಮಾಡಲಾಗಿದೆ. ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರ್ ಖಂಡ್ರೆ  ಅಮಾನತು ಆದೇಶ ಮಾಡಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿವಿಧ ಗ್ರಾಮ ಪಂಚಾಯ್ತಿಗಳ ಅಭಿವೃದ್ಧಿ ಅಧಿಕಾರಿ, ಇಬ್ಬರು ಕಾರ್ಯದರ್ಶಿ ಮತ್ತು ಒಬ್ಬ ದ್ವಿತೀಯ ದರ್ಜೆ ಲೆಕ್ಕ ಸಹಾಯಕರು ಶುಕ್ರವಾರ (ಜು.24ರಂದು) ಸಂಜೆ ಸಿದ್ದರಬೆಟ್ಟದ ಬಳಿ ಮದ್ಯ, ಮಾಂಸ ಸೇವಿಸಿ ಮೋಜು ಮಸ್ತಿ ಮಾಡಿದ ಬಗ್ಗೆ ಹಲವು ಮಾಧ್ಯಮಗಳಲ್ಲಿ ದೃಶ್ಯ ಸಹಿತ ವರದಿ ಪ್ರಸಾರವಾಗಿದ್ದ ಹಿನ್ನೆಲೆಯಲ್ಲಿ ಪಾರ್ಟಿಯಲ್ಲಿ ಪಾಲ್ಗೊಂಡ ಎಲ್ಲರಿಗೂ ಕಾರಣ ಕೇಳಿ ನೋಟಿಸ್ ನೀಡಿ, ಕರ್ತವ್ಯದ ಸಮಯದಲ್ಲಿ ಒಂದು ಕಡೆ ಸೇರಿ ಪಾರ್ಟಿ ಮಾಡಿರುವುದು ಮೇಲ್ನೋಟಕ್ಕೆ ಸಾಬೀತಾದಲ್ಲಿ ಅಮಾನತು ಮಾಡುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದರು.

ಈ ಹಿನ್ನೆಲೆಯಲ್ಲಿ 6 ಪಿಡಿಓ ಹಾಗೂ ಸಿಬ್ಬಂದಿಗೆ ನೋಟಿಸ್ ನೀಡಿದ್ದ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ವಾಸಂತಿ ಅಮರ್ ಅವರು, ಇಂದು ಈ ಎಲ್ಲ ಸಿಬ್ಬಂದಿಯನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಶಿವಗಂಗೆ ಗ್ರಾ.ಪಂ.ನ ಗಿರೀಶ್, ಅಗಳಕುಪ್ಪೆ ಗ್ರಾ.ಪಂ.ನ ಹರೀಶ್, ಗೊಲ್ಲಹಳ್ಳಿ ಗ್ರಾ.ಪಂ.ನ ಪ್ರಶಾಂತ್ ಡಿ, ಮಣ್ಣೆ ಗ್ರಾ.ಪಂ.ನ ಚಿರಂಜೀವಿ, ಸೋಂಪುರ ಗ್ರಾ.ಪಂ. ರವಿಶಂಕರ್, ಬೆಟ್ಟಕೋಟೆ ಗ್ರಾ.ಪಂ.ನ ದಿನೇಶ್ ಬಿ.ಎಂ., ಅಗಳಕುಪ್ಪೆ ಗ್ರೇಡ್ 1 ಕಾರ್ಯದರ್ಶಿ ಕೆಂಪರಂಗಯ್ಯ, ಬೂದಿಹಾಲ್ ಗ್ರಾ.ಪಂ. ಗ್ರೇಡ್ 2 ಕಾರ್ಯದರ್ಶಿ ಗಂಗಾಧರ್, ಸೋಂಪುರ ಗ್ರಾ.ಪಂ. ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಮಂಜುನಾಥ್ ಇವರುಗಳನ್ನು ಇಲಾಖಾ ವಿಚಾರಣೆ ಕಾಯ್ದಿರಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತು ಮಾಡಲಾಗಿದೆ.

ಕರ್ನಾಟಕ ರಾಜ್ಯ ನಾಗರಿಕ ಸೇವಾ (ನಡತೆ) ನಿಯಮಗಳು 2021ರ ನಿಯಮ ಉಲ್ಲಂಘಿಸಿರುವುದು ಹಾಗೂ ಕರ್ತವ್ಯದ ಸಮಯದಲ್ಲಿ ಕಚೇರಿಯಲ್ಲಿ ಸಾರ್ವಜನಿಕರಿಗೆ ಲಭ್ಯವಿಲ್ಲದ ಕಾರಣದ ಮೇಲೆ ಈ ಅಮಾನತು ಆದೇಶ ಹೊರಡಿಸಲಾಗಿದೆ.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ