Breaking News

ಉಪಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ವಿಚಾರ ಇನ್ನೂ ಸ್ಪಷ್ಟ ಆಗಿಲ್ಲ.

Spread the love

ಪಟ್ನಾ: ಉಪಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ವಿಚಾರ ಇನ್ನೂ ಸ್ಪಷ್ಟ ಆಗಿಲ್ಲ. 2005ರಿಂದಲೂ (2013-17ರ ಅವಧಿ ಬಿಟ್ಟು) ಸುಶೀಲ್ ಕುಮಾರ್‌ ಮೋದಿ ಅವರು ಉಪಮುಖ್ಯಮಂತ್ರಿ ಆಗಿದ್ದರು. ಈ ಬಾರಿ, ಅವರನ್ನೇ ಆ ಹುದ್ದೆಯಲ್ಲಿ ಮುಂದುವರಿಸುವ ಬಗ್ಗೆ ಒಮ್ಮತ ಏರ್ಪಟ್ಟಿಲ್ಲ.

ಕತಿಹಾರ್‌ ಶಾಸಕ ತಾರಕೇಶ್ವರ ಪ್ರಸಾದ್‌ ಅವರನ್ನು ಬಿಜೆಪಿ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆ ಮಾಡಲಾಗಿದೆ. ರೇಣು ದೇವಿ ಅವರು ಉಪನಾಯಕಿ ಆಗಲಿದ್ದಾರೆ. ಈ ಇಬ್ಬರನ್ನು ಉಪಮುಖ್ಯಮಂತ್ರಿ ಸ್ಥಾನಕ್ಕೆ ಆಯ್ಕೆ ಮಾಡುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿವೆ. ಈ ಇಬ್ಬರೂ ಅತ್ಯಂತ ಹಿಂದುಳಿದ ವರ್ಗಗಳಿಗೆ ಸೇರಿದವರು. ಇವರು ನಾಲ್ಕನೇ ಬಾರಿಗೆ ಶಾಸಕರಾಗಿ ಆಯ್ಕೆ ಆಗಿದ್ದಾರೆ.

‘ಎನ್‌ಡಿಎ ಹೆಚ್ಚು ಕ್ಷೇತ್ರಗಳನ್ನು ಗೆಲ್ಲುವಲ್ಲಿ ಮಹಿಳೆಯರು ಮತ್ತು ಅತ್ಯಂತ ಹಿಂದುಳಿದ ವರ್ಗಗಳ ಪಾತ್ರ ಪ್ರಮುಖವಾಗಿದೆ.

ಸುಶೀಲ್‌ ಮೋದಿ ಅವರು ಟ್ವೀಟ್‌ ಮಾಡಿ, ಹುದ್ದೆಯಲ್ಲಿ ಮುಂದುವರಿಯುವ ಸಾಧ್ಯತೆ ಇಲ್ಲ ಎಂಬ ಸುಳಿವು ನೀಡಿದ್ದಾರೆ. ’40 ವರ್ಷಗಳಲ್ಲಿ ಪಕ್ಷವು ನನಗೆ ಬಹಳಷ್ಟನ್ನು ಕೊಟ್ಟಿದೆ. ಎಲ್ಲ ಜವಾಬ್ದಾರಿಗಳನ್ನು ನಾನು ಪೂರ್ಣಗೊಳಿಸಿದ್ದೇನೆ. ಮುಂದೆಯೂ ಯಾವುದೇ ಕೆಲಸ ವಹಿಸಿದರೆ ಅದನ್ನು ಮಾಡುತ್ತೇನೆ. ಏನೇ ಆದರೂ, ಬಿಜೆಪಿ ಕಾರ್ಯಕರ್ತನಾಗಿ ಸೇವೆ ಸಲ್ಲಿಸುವ ನನ್ನ ಅವಕಾಶವನ್ನು ಯಾರೂ ಕಿತ್ತುಕೊಳ್ಳಲಾಗದು’ ಎಂದು ಅವರು ಟ್ವೀಟ್‌ನಲ್ಲಿ ಹೇಳಿದ್ದಾರೆ.


Spread the love

About Laxminews 24x7

Check Also

ಮಹಿಳೆಯರನ್ನು ನಿಂದಿಸುವುದೇ ಬಿಜೆಪಿಗರ ಕೆಲಸ: ಸಚಿವೆ ಹೆಬ್ಬಾಳಕರ

Spread the love ಮಹಿಳೆಯರನ್ನು ನಿಂದಿಸುವುದೇ ಬಿಜೆಪಿಗರ ಕೆಲಸ: ಸಚಿವೆ ಹೆಬ್ಬಾಳಕರ ಎಂಎಲ್ಸಿ ರವಿಕುಮಾರ್ ವಿರುದ್ಧ ಲಕ್ಷ್ಮೀ ಹೆಬ್ಬಾಳಕರ್ ವಾಗ್ದಾಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ