Breaking News

ಬಸ್​​ನಲ್ಲಿ ವಿದ್ಯಾರ್ಥಿನಿಯರಿಗೆ ಗುಪ್ತಾಂಗ ತೋರಿಸಿ ವಿಕೃತಿ – ಕಂಡಕ್ಟರ್ ಇರ್ಫಾನ್ ಅರೆಸ್ಟ್‌

Spread the love

ಮಂಗಳೂರು: ಚಲಿಸುತ್ತಿದ್ದ ಬಸ್​ನಲ್ಲೇ ಕಾಲೇಜು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದಲ್ಲದೇ, ಗುಪ್ತಾಂಗ ತೋರಿಸಿ ವಿಕೃತಿ ಮೆರೆದ ಖಾಸಗಿ ಬಸ್ ಕಂಡಕ್ಟರ್‌ನನ್ನು ಮಂಗಳೂರು ದಕ್ಷಿಣ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಕಾಮುಕ ಕಂಡಕ್ಟರ್ ಇರ್ಫಾನ್ (32) ಬಂಧಿತ ಆರೋಪಿ. ಈತ ದಕ್ಷಿಣ ಕನ್ನಡ ಜಿಲ್ಲೆ ಉಪ್ಪಿನಂಗಡಿಯ ಕಲ್ಲೇರಿ ನಿವಾಸಿಯಾಗಿದ್ದು, ಪ್ರಸ್ತುತ ಉಪ್ಪಿನಂಗಡಿಯ ಕರ್ವೇಲು ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದಾನೆ. ಈತ ಮಂಗಳೂರು ಮತ್ತು ವಿಟ್ಲ ನಡುವೆ ಸಂಚರಿಸುವ ಖಾಸಗಿ ಬಸ್​​ನಲ್ಲಿ (Private Bus) ಕಂಡಕ್ಟರ್ ಆಗಿ ಕೆಲಸ ಮಾಡುತ್ತಿದ್ದ.

ಏನಿದು ಕೇಸ್‌?
ಜುಲೈ 9 ರ ಗುರುವಾರ ಸಂಜೆ ಸುಮಾರು 5 ಗಂಟೆ ಸುಮಾರಿಗೆ ಮಂಗಳೂರು – ವಿಟ್ಲ ನಡುವೆ ಸಂಚರಿಸುವ ವೇಳೆ ಸೆಲಿನ ಬಸ್ ನಲ್ಲಿ ಘಟನೆ ನಡೆದಿದೆ. ಬಸ್​ನಲ್ಲಿದ್ದ ಕಾಲೇಜು ವಿದ್ಯಾರ್ಥಿನಿಯರನ್ನ ಗುರಿಯಾಗಿಸಿಕೊಂಡು ಕಂಡಕ್ಟರ್ ಇರ್ಫಾನ್, ವಿಕೃತವಾಗಿ ವರ್ತಿಸಲು ಆರಂಭಿಸಿದ್ದಾನೆ. ವಿದ್ಯಾರ್ಥಿನಿಯರ ಮುಂದೆ ತನ್ನ ಗುಪ್ತಾಂಗ ಪ್ರದರ್ಶನ ಮಾಡಿದ ಆರೋಪಿ, ಅತ್ಯಂತ ಅಸಭ್ಯವಾಗಿ ಸನ್ನೆ ಮಾಡಿದ್ದಾನೆ. ಅಷ್ಟೇ ಅಲ್ಲದೇ, ವಿದ್ಯಾರ್ಥಿನಿಯರನ್ನು ಬಸ್​ನ ಹಿಂದಿನ ಸೀಟಿಗೆ ಬರುವಂತೆ ಕರೆದು ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ದೂರಲಾಗಿದೆ.

ಕಂಡಕ್ಟರ್‌ನ ವಿಕೃತ ವರ್ತನೆಯಿಂದ ಆಘಾತಕ್ಕೊಳಗಾದ ವಿದ್ಯಾರ್ಥಿನಿಯರು ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ. ಈ ದೂರಿನ ಅನ್ವಯ ಮಂಗಳೂರು ದಕ್ಷಿಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಕಾಮುಕ ಕಂಡಕ್ಟರ್‌ನನ್ನ ಬಂಧಿಸಿದ್ದಾರೆ. ತನಿಖೆ ಮುಂದುವರಿದಿದೆ.


Spread the love

About Laxminews 24x7

Check Also

ರೇಷ್ಮೆ ಉತ್ಪಾದನೆಯಲ್ಲಿ ಭಾರತ ಅಗ್ರಸ್ಥಾನಕ್ಕೇರಲಿ: ಗೋವಿಂದ ಕಾರಜೋಳ

Spread the loveಚಿತ್ರದುರ್ಗ: ವಿಶ್ವದ ರೇಷ್ಮೆ ಉತ್ಪಾದನೆಯಲ್ಲಿ ಚೀನಾ ಮೊದಲ ಸ್ಥಾನದಲ್ಲಿದ್ದರೆ, ಭಾರತ ಎರಡನೇ ಸ್ಥಾನದಲ್ಲಿದೆ. ನಮ್ಮ ದೇಶದಲ್ಲಿ ಕರ್ನಾಟಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ