ಕೋಲಾರ: ಜಿಲ್ಲೆಯ ಗಡಿ ಭಾಗದಲ್ಲಿ ಪೆಟ್ರೋಲ್ ಮಾಫಿಯಾ ಎಗ್ಗಿಲ್ಲದೆ ನಡೆಯುತ್ತಿದೆ. ಮಾಲೂರು ತಾಲೂಕು ಆಲಂಬಾಡಿ ಬಳಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಗುಂದಿಯಿಂದ ಬರುವ ಪೆಟ್ರೋಲ್ ಟ್ಯಾಂಕರ್ಗಳಿಂದ ಪೆಟ್ರೋಲ್ ಕಳ್ಳತನ ನಡೆಯುತ್ತಿದೆ.
ಪೆಟ್ರೋಲ್ ಟ್ಯಾಂಕರ್ಗಳನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿ ಪೆಟ್ರೋಲ್ ಹಾಗೂ ಡೀಸೆಲ್ನ್ನು ದುಷ್ಕರ್ಮಿಗಳ ಗ್ಯಾಂಗ್ ಕಳ್ಳತನ ಮಾಡುತ್ತಿದೆ. ಪ್ರತಿನಿತ್ಯ ಪೆಟ್ರೋಲ್ ಬಂಕ್ಗಳಿಗೆ ಬರುವ ಟ್ಯಾಂಕರ್ಗಳಿಂದ ಹೀಗೆ ವ್ಯವಸ್ಥಿತವಾಗಿ ಕಳ್ಳತನ ಮಾಡಲಾಗುತ್ತಿದೆ ಎಂದು ಆರೋಪಿಸಲಾಗಿದೆ.
ಕಳ್ಳತನ ಮಾಡಿದ ಪೆಟ್ರೋಲ್ ಹಾಗೂ ಡೀಸೆಲ್ ಕಡಿಮೆ ಬೆಲೆಗೆ ಮಾರಾಟ ಮಾಡಲಾಗುತ್ತಿದೆ. ಈ ಕಳ್ಳ ದಂಧೆಗೆ ಕಡಿವಾಣ ಹಾಕುವಂತೆ ಪೆಟ್ರೋಲ್ ಬಂಕ್ ಮಾಲೀಕರು ಆಗ್ರಹಿಸಿದ್ದಾರೆ.
Laxmi News 24×7