ಮೂಡಲಗಿ: ಕೊರೊನಾ ವೈರಸ್ ತಡೆಗೆ ಕೇಂದ್ರ, ರಾಜ್ಯ ಸರ್ಕಾರ ಲಾಕ್ ಡೌನ್ ಜಾರಿಗೊಳಿಸಿದೆ. ಇದರ ನಡುವೆ ಕೆಲವು ಕಿಡಿಗೇಡಿಗಳು ಪೆಟ್ರೋಲ್ ಬಂಕ್ ಬಂದ್ ಆಗಲಿವೆ ಎಂದು ಸುಳ್ಳು ವದಂತಿ ಹಬ್ಬಿಸುತ್ತಿದ್ದಾರೆ.

ಹೌದು ಮೂಡಲಗಿ ತಾಲೂಕಾದ್ಯಂತ ಪೆಟ್ರೋಲ್ ಬಂಕ್ ಗಳು ಬಂದಿದೆ ಎಂದು ಮಂಗಳವಾರ ಸುಳ್ಳು ವದಂತಿ ಹಬ್ಬಿಸಿರುವ ಹಿನ್ನೆಲೆ ಬುಧವಾರ ಗುರ್ಲಾಪುರ ಹಾಗೂ ಮೂಡಲಗಿ ಪೆಟ್ರೋಲ್ ಬಂಕ್ ಗಳಲ್ಲಿ ಜನರು ಪೆಟ್ರೋಲ್, ಡಿಸೈಲ್ ಗಾಗಿ ಕ್ಯಾನ್ ಗಳನ್ನು ತಗೆದುಕಂಡು ಬಂದು ಬಂಕ್ ಗಳಲ್ಲಿ ಜನರು ಮುಗಿಬೀಳುವ ಪರಿಸ್ಥಿತಿ ನಿರ್ಮಾಣವಾಗಿದೆ.
ಜನರು ತಮ್ಮ ವಾಹನಗಳಿಗೆ ಫುಲ್ ಟ್ಯಾಂಕ್ ಮಾಡಿಸಿ, ಕ್ಯಾನ್ ಗಳಲ್ಲಿ ಪೆಟ್ರೋಲ್ ಡಿಸೈಲ್ ತೆಗೆದುಕೊಂಡು ಹೋಗುವುದು ಸರ್ವೇ ಸಾಮಾನ್ಯವಾಗಿತ್ತು.
ಈ ರೀತಿಯಾಗಿ ಸುಳ್ಳು ವದಂತಿಗಳು ಹಬ್ಬಿಸುತ್ತಿರುವ ವ್ಯಕ್ತಿಗಳ ವಿರುದ್ಧ ಪೊಲೀಸ್ ಅಧಿಕಾರಿಗಳು ಕಠಿಣ ಕ್ರಮ ಕೈಗೊಳ್ಳಬೇಕಾಗಿದೆ.
Laxmi News 24×7