Breaking News

ಪೆಟ್ರೋಲ್/ ಡಿಸೇಲ್ ಸೇವೆಯಲ್ಲಿ ವ್ಯತ್ಯಯ..!

Spread the love

ಬೆಂಗಳೂರು:  ಮಾರ್ಚ್31ರವರೆಗೆ ಕರ್ನಾಟಕ ಲಾಕ್‌ ಡೌನ್ ಆಗಲಿರುವ ಹಿನ್ನೆಲೆ, ನಾಳೆಯಿಂದ ಪೆಟ್ರೋಲ್/ ಡಿಸೇಲ್ ಸೇವೆಯಲ್ಲಿ ವ್ಯತ್ಯಯ ಕಂಡು ಬರಲಿದೆ.

ಬೆಳಿಗ್ಗೆ 7ರಿಂದ ಸಂಜೆ 7ಗಂಟೆಯವರೆಗೆ ಮಾತ್ರ ಪೆಟ್ರೋಲ್ ಬಂಕ್ ಓಪನ್ ಇರಲಿದೆ. ಪೆಟ್ರೋಲ್ ಬಂಕ್ ಸಿಬ್ಬಂದಿಗಳ ಆರೋಗ್ಯ ದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಇನ್ನು ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಈ ನಿಯಮ ಅನ್ವಯವಾಗಲಿದೆ.

ಬೆಳಗ್ಗೆ 7ರಿಂದ ಸಂಜೆ 7ರವರೆಗೆ ಮಾತ್ರ ಪೆಟ್ರೋಲ್ ಡೀಸಲ್ ಸೇವೆ ಲಭ್ಯವಿದ್ದು, ಕೇವಲ ಆ್ಯಂಬ್ಯುಲೆನ್ಸ್ ಹಾಗೂ ತುರ್ತು ಸರ್ಕಾರಿ ವಾಹನಗಳಿಗೆ ಎಂದಿನಂತೆ ಸೇವೆ ನೀಡಲಾಗುತ್ತದೆ. ಸರ್ಕಾರದ ಮುಂದಿನ ಆದೇಶದವರೆಗೆ ಈ ಬದಲಾವಣೆ ಅನ್ವಯವಾಗಲಿದ್ದು, ರಾಜ್ಯ ಪೆಟ್ರೋಲ್ ಬಂಕ್ ಮಾಲೀಕರ ಸಂಘದವರು ಆದೇಶ ಹೊರಡಿಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ