ಬೆಂಗಳೂರು: ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ಪ್ರವೇಶಕ್ಕೆ ಮೊದಲ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶ ಪ್ರಕಟಿಸಿದ್ದು, ಪ್ರವೇಶ ಪ್ರಕ್ರಿಯೆಯ ವೇಳಾಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿದೆ.
ಈ ಸುತ್ತಿನಲ್ಲಿ ಒಟ್ಟು 4,388 ಸೀಟುಗಳ ಪೈಕಿ 3,268 ಸೀಟು ಹಂಚಿಕೆಯಾಗಿವೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದ್ದಾರೆ.
ಸೀಟು ಹಂಚಿಕೆಯಾದವರು ನ.11ರವರೆಗೆ ಚಾಯ್ಸ್ ದಾಖಲಿಸಲು ಅವಕಾಶ ನೀಡಲಾಗಿದೆ. ಚಾಯ್ಸ್- 1 ಮತ್ತು 2 ದಾಖಲಿಸಿದವರು ನ.11ರವರೆಗೆ ಚಲನ್ ಡೌನ್ಲೋಡ್ ಮಾಡಿಕೊಂಡು ಶುಲ್ಕ ಪಾವತಿಸಬೇಕು. ನ.12ರೊಳಗೆ ಶುಲ್ಕ ಪಾವತಿಸಬೇಕು ಎಂದು ಅವರು ತಿಳಿಸಿದ್ದಾರೆ.
ಚಾಯ್ಸ್-1 ದಾಖಲಿಸಿದವರು, ಶುಲ್ಕ ಪಾವತಿ ನಂತರ ನ.13ರವರೆಗೆ ಕೆಇಎ ಕಚೇರಿಯಲ್ಲಿ ಮೂಲ ದಾಖಲೆ ಸಲ್ಲಿಸಿದ ನಂತರ ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಂಡು, ನ.14ರೊಳಗೆ ಕಾಲೇಜುಗಳಲ್ಲಿ ವರದಿ ಮಾಡಿಕೊಳ್ಳಬೇಕು ಎಂದು ಅವರು ವಿವರಿಸಿದ್ದಾರೆ.
Laxmi News 24×7