Breaking News

ಪ್ರೀತಿ, ಮದುವೆ ಹೆಸರಲ್ಲಿ ಸರ್ಕಾರಿ ಮಹಿಳಾ ಅಧಿಕಾರಿಗಳೊಂದಿಗೆ ದೈಹಿಕ ಸಂಪರ್ಕ

Spread the love

ಬೆಂಗಳೂರು: ಕಸ್ಟಮ್ಸ್ ಮಹಿಳಾ ಅಧಿಕಾರಿಗೆ  ಬ್ಲ್ಯಾಕ್‌ಮೇಲ್  ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಕೃಪಾಲನಿ ಪ್ರೀತಿ, ಮದುವೆ ಹೆಸರಲ್ಲಿ ದೈಹಿಕ ಸಂಪರ್ಕ ಬೆಳೆಸಿ 50 ಮಂದಿಗೆ ವಂಚಿಸಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಕಸ್ಟಮ್ಸ್ ಮಹಿಳಾ ಅಧಿಕಾರಿಗೆ ಬ್ಲ್ಯಾಕ್‌ಮೇಲ್ ಕೇಸಲ್ಲಿ ಪುಲಕೇಶಿ ನಗರ ಪೊಲೀಸರು ಕೃಪಾಲನಿಯನ್ನು ಬಂಧಿಸಿದ್ದರು. ಆರೋಪಿ ವಿಚಾರಣೆ ವೇಳೆ 50 ಜನರಿಗೆ ಬ್ಲಾಕ್‌ಮೇಲ್ ಮಾಡಿರೋದು ಪತ್ತೆಯಾಗಿದೆ. ಸರ್ಕಾರಿ ಮಹಿಳಾ ಅಧಿಕಾರಿಗಳನ್ನೇ ಆರೋಪಿ ಕೃಪಾಲನಿ ಟಾರ್ಗೆಟ್ ಮಾಡುತ್ತಿದ್ದ. ಉದ್ಯಮಿ ಎಂದು ಸರ್ಕಾರಿ ಮಹಿಳಾ ಅಧಿಕಾರಿಗಳನ್ನ ಪರಿಚಯ ಮಾಡಿಕೊಳ್ಳುತ್ತಿದ್ದ. ಕಸ್ಟಮ್ಸ್, ಜಿಎಸ್ಟಿ ಅಧಿಕಾರಿಗಳೇ ಈತನ ಟಾರ್ಗೆಟ್ ಆಗಿದ್ದರು.

ಪರಿಚಯ ಮಾಡಿಕೊಂಡು ಲಂಚ್, ಡಿನ್ನರ್, ಪಾರ್ಟಿ ಅಂತಾ ಸಲುಗೆ ಬೆಳಸಿಕೊಳ್ಳುತ್ತಿದ್ದ ಈತ, ಬಳಿಕ ಪ್ರೀತಿ, ಮದುವೆ ಹೆಸರಲ್ಲಿ ದೈಹಿಕ ಸಂಪರ್ಕ ಮಾಡುತ್ತಿದ್ದ. ನಂತರ ಅದನ್ನ ವೀಡಿಯೋ ಮಾಡಿಕೊಂಡು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಸ್ಫೋಟಕ ವಿಚಾರ ತನಿಖೆಯಲ್ಲಿ ಗೊತ್ತಾಗಿದೆ. ಸದ್ಯ ಪುಲಕೇಶಿ ನಗರ ಪೊಲೀಸರು ಈ ಕುರಿತು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.


Spread the love

About Laxminews 24x7

Check Also

ಘಟಿಕೋತ್ಸವದಲ್ಲಿ ವಂದೇ ಮಾತರಂ ಪೂರ್ಣ ಹಾಡು – ವಿಟಿಯು ಕುಲಪತಿ

Spread the loveಬೆಳಗಾವಿ: ರಾಷ್ಟ್ರೀಯ ಗೀತೆಯಾಗಿರುವ ವಂದೇ ಮಾತರಂ ಹಾಡುವ ವಿಚಾರವಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಡುವೆ ಈಗಾಗಲೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ