Breaking News

ನಾಟಿ ಕೋಳಿ, ಮುದ್ದೆ, ಚಿಕನ್‌ ಚಾಪ್ಸ್‌ – ಬಾಯಿ ಚಪ್ಪರಿಸಿ ತಿಂದ ಸಿದ್ರಾಮಯ್ಯ

Spread the love

ಮೈಸೂರು: ಮಾಜಿ ಸಿಎಂ ಸಿದ್ದರಾಮಯ್ಯ ಅವರ ಮೈಸೂರಿನ ನಿವಾಸದಲ್ಲಿ ಕಾಂಗ್ರೆಸ್ ನಾಯಕರು ಇಂದು ಭರ್ಜರಿ ಬಾಡೂಟ ಸವಿದರು.

ಸಿಎಂ ಸ್ಥಾನದಿಂದ ಕೆಳಗಿಳಿದ ಮೇಲೆ ಮೊದಲ ಬಾರಿಗೆ ಮೈಸೂರಿಗೆ ಆಗಮಿಸಿದ್ದ ಸಿದ್ದರಾಮಯ್ಯ ಅವರು ಎಸ್‌ಐಆರ್ ಕುರಿತ ಕಾಂಗ್ರೆಸ್ ಪಕ್ಷದ ಜಾಗೃತಿ ಸಮಾವೇಶದಲ್ಲಿ ಪಾಲ್ಗೊಂಡಿದ್ದರು. ಬಳಿಕ ಕಾಂಗ್ರೆಸ್‌ನ ನಾಯಕರಿಗೆ ತಮ್ಮ ಮನೆಯಲ್ಲೇ ಬಾಡೂಟದ ವ್ಯವಸ್ಥೆ ಮಾಡಿದ್ದರು. ನಾಟಿಕೋಳಿ ಸಾರು, ಮುದ್ದೆ, ಚಿಕನ್‌ ಚಾಪ್ಸ್‌, ಪಲಾವ್‌ ಹಾಗೂ ಸಸ್ಯಾಹಾರದ ಊಟ ವ್ಯವಸ್ಥೆಯನ್ನೂ ಮಾಡಿದ್ದರು.

ಮೈಸೂರಿನ ಟಿ.ಕೆ ಬಡಾವಣೆಯಲ್ಲಿರುವ ಸಿದ್ದರಾಮಯ್ಯ ನಿವಾಸ ಮುಂದೆ ಜರ್ಮನ್ ಟೆಂಟ್ ಹಾಕಿ ಊಟದ ವ್ಯವಸ್ಥೆ ಮಾಡಲಾಗಿತ್ತು. ತಾವು ಕೂಡ ಕಾಂಗ್ರೆಸ್‌ ಶಾಸಕರು ಹಾಗೂ ಸಂಸದರೊಟ್ಟಿಗೆ ಕುಳಿತು ಊಟ ಸವಿದಿದ್ದಾರೆ.


Spread the love

About Laxminews 24x7

Check Also

ರಾಜ್ಯದಲ್ಲಿ ಬರ – 177 ತಾಲೂಕುಗಳಲ್ಲಿ 46,324 ಕೋಟಿ ಬೆಳೆ ನಷ್ಟ , 7,142 ಕೋಟಿ ನೆರವಿಗೆ ಮನವಿ

Spread the loveಬೆಂಗಳೂರು: ರಾಜ್ಯದ 240 ತಾಲೂಕುಗಳ ಪೈಕಿ 217 ತಾಲೂಕುಗಳನ್ನ ಬರಪೀಡಿತ  ಎಂದು ಘೋಷಿಸಲಾಗಿದ್ದು, ಬರ ಪರಿಸ್ಥಿತಿ ಹಿನ್ನೆಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ