ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿ ಪ್ರದೋಷ್ ಮಾಫಿ ಸಾಕ್ಷ್ಯ ಹೇಳಿಕೆಗೆ ತಡೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಸೋಮವಾರಕ್ಕೆ ಮುಂದೂಡಿದೆ.
ಇಂದು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ನಾಗಪ್ರಸನ್ನ ಅವರು, ಈಗ ಟ್ರಯಲ್ ಆಗಲ್ಲ, ಮೂರು ದಿನ ರಜೆ ಇದೆ. ಸೋಮವಾರಕ್ಕೆ ಆದೇಶ ಪ್ರಕಟ ಮಾಡುವುದಾಗಿ ತಿಳಿಸಿದ್ದಾರೆ.
14ನೇ ಆರೋಪಿ ಪ್ರದೋಷ್ ಮಾಫಿ ಸಾಕ್ಷ್ಯ ಹೇಳಿಕೆಗೆ ತಡೆ ಕೋರಿ ಅರ್ಜಿ ಸಲ್ಲಿಸಲಾಗಿತ್ತು. ಹೈಕೋರ್ಟ್‌ನಲ್ಲಿ ದರ್ಶನ್ ಪರ ವಕೀಲರು ನಿನ್ನೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿ ಇಂದಿಗೆ ಹೈಕೋರ್ಟ್ ಆದೇಶ ಕಾಯ್ದಿರಿಸಿತ್ತು.
ಸೋಮವಾರ ಆದೇಶ ನೀಡುವುದಾಗಿ ನ್ಯಾಯಾಧೀಶರು ತಿಳಿಸಿದ್ದಾರೆ.
Laxmi News 24×7