ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ( ನನ್ನ ಫೋನ್ ಟ್ಯಾಪ್ ಮಾಡುತ್ತಾರೆ ಎಂಬ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಆರೋಪ ದೇಶದ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿದೆ. ಆದರೆ, ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ, ‘ಪ್ರಧಾನಿ ಹಾಗೆ ಮಾಡುವುದಿಲ್ಲ’ ಎಂಬ ಹೇಳಿಕೆ ನೀಡಿ ಅಚ್ಚರಿ ಮೂಡಿಸಿದ್ದಾರೆ.
ಪ್ರಧಾನಿಯವರೊಂದಿಗೆ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಳ್ಳುವ ಮೂಲಕ ಇತ್ತೀಚಿನ ದಿನಗಳಲ್ಲಿ ಸುದ್ದಿಯಲ್ಲಿರುವ ಪಿತ್ರೋಡಾ, ಖಾಸಗಿ ವಾಹಿನಿಯೊಂದಕ್ಕೆ ನೀಡಿದ ವಿಶೇಷ ಸಂದರ್ಶನದಲ್ಲಿ ಪ್ರಧಾನಿ ಮೋದಿಯವರನ್ನು ಸಮರ್ಥಿಸಿಕೊಂಡಿದ್ದಾರೆ.
ರಾಹುಲ್ ಗಾಂಧಿಯವರ ಆರೋಪದಿಂದ ಅಂತರ ಕಾಯ್ದುಕೊಂಡ ಪಿತ್ರೋಡಾ, ಪ್ರಧಾನಿ ಹಾಗೆ ಮಾಡುತ್ತಾರೆಂದು ನಂಬುವುದಿಲ್ಲ ಎಂದು ಹೇಳಿದ್ದಾರೆ. ಪ್ರಧಾನಿ ಹಾಗೆ ಮಾಡುವುದಿಲ್ಲ. ಪ್ರಧಾನಿ ಸ್ಕ್ರೂಡ್ರೈವರ್ ತೆಗೆದುಕೊಂಡು ಕಂಪ್ಯೂಟರ್‌ಗೆ ಹೋಗುವುದಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ
ಇದೇ ವೇಳೆ, ತಮ್ಮ ಫೋನ್ ಟ್ಯಾಪ್ ಮಾಡಲಾಗಿದೆ ಎಂಬ ವಿಚಾರವನ್ನು ಪಿತ್ರೋಡಾ ತಿಳಿಸಿದ್ದಾರೆ. ನನ್ನ ಫೋನ್ ಅನ್ನು ಟ್ಯಾಪ್ ಮಾಡಲಾಗಿದೆ. ನನ್ನ ಬ್ಯಾಂಕ್ ಖಾತೆಗಳ ಮೇಲೆ ಕಣ್ಗಾವಲು ಇಡಲಾಗಿದೆ. ನಾನು ತಜ್ಞರೊಂದಿಗೆ ಸಮಾಲೋಚಿಸಿದ್ದೇನೆ. ಅವರು ನನ್ನ ಸಾಧನಗಳನ್ನು ಪರಿಶೀಲಿಸಿದ ನಂತರ, ಟ್ಯಾಪಿಂಗ್ ಬಗ್ಗೆ ನನಗೆ ಎಚ್ಚರಿಕೆ ನೀಡಿದ್ದಾರೆ ಎಂದು ಪಿತ್ರೋಡಾ ತಿಳಿಸಿದ್ದಾರೆ. ಆದರೆ, ಅವರ ಫೋನ್ ಅನ್ನು ಯಾರು ಟ್ಯಾಪ್ ಮಾಡಿದ್ದಾರೆಂದು ಹೇಳಲು ನಿರಾಕರಿಸಿದ್ದಾರೆ.
ಯಾರೋ ಹಾಗೆ ಮಾಡುತ್ತಿದ್ದಾರೆ. ನನಗೆ ಗೊತ್ತಿಲ್ಲ. ಅದರ ಬಗ್ಗೆ ತಲೆಕೆಡಿಸಿಕೊಳ್ಳಲ್ಲ. ನಾನು ಅದರೊಂದಿಗೆ ಬದುಕುತ್ತೇನೆ. ನನಗೆ ಯಾವುದೇ ಸಮಸ್ಯೆ ಇಲ್ಲ ಎಂದು ಮಾತನಾಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ನನ್ನ ಫೋನ್ ಕದ್ದಾಲಿಕೆ ಮಾಡುತ್ತಿದ್ದಾರೆ. ಕೇಂದ್ರ ಸರ್ಕಾರ ನನ್ನ ಮೇಲೆ ನಿಗಾ ಇಟ್ಟಿದೆ ಎಂದು ರಾಹುಲ್ ಗಾಂಧಿ ಶುಕ್ರವಾರ ಗಂಭೀರ ಆರೋಪ ಮಾಡಿದ್ದಾರೆ.
Laxmi News 24×7