Breaking News

ಮೇ 10ಕ್ಕೆ ಬೆಂಗಳೂರಿಗೆ ಪ್ರಧಾನಿ ಮೋದಿ – ಬಿಜೆಪಿಯಿಂದ ಬೃಹತ್ ಅಭಿನಂದನಾ ಸಮಾರಂಭ

Spread the love

ಬೆಂಗಳೂರು: ಪಶ್ಚಿಮ ಬಂಗಾಳ, ಅಸ್ಸಾಂ, ಪುದುಚೇರಿ ವಿಧಾನಸಭಾ ಚುನಾವಣೆಗಳಲ್ಲಿ ಬಿಜೆಪಿ  ನೇತೃತ್ವದ ಎನ್‌ಡಿಎ ಮೈತ್ರಿಕೂಟ ದಿಗ್ವಿಜಯ ಸಾಧಿಸಿದ ನಂತರ ಇದೇ ಮೊದಲ ಬಾರಿಗೆ ಮೇ 10ರಂದು ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ವತಿಯಿಂದ ಬೃಹತ್ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ.

ಈ ಕುರಿತು ಇಂದು ಪೂರ್ವಭಾವಿ ಸಭೆ ನಡೆಸಲಾಯಿತು. ವಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ಕಚೇರಿಯಲ್ಲಿ ಸಭೆ ನಡೆಯಿತು. ಬೆಂಗಳೂರು ಬಿಜೆಪಿ ಶಾಸಕರು ಸಭೆಯಲ್ಲಿ ಭಾಗಿಯಾಗಿದ್ದರು. ವಿಪಕ್ಷ ನಾಯಕ ಅಶೋಕ್ ಮಾತಾಡಿ, ಪಂಚ ರಾಜ್ಯ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ಗೆದ್ದಿರೋದು ಐತಿಹಾಸಿಕ ದಾಖಲೆ. ಟ್ರಂಪ್ ಸಹ ಅಭಿನಂದನೆ ಸಲ್ಲಿಸಿದ್ದಾರೆ. ಇದರ ನೇತೃತ್ವ ವಹಿಸಿರೋದು ನರೇಂದ್ರ ಮೋದಿ ಅಮಿತ್ ಶಾ. ಮೇ 10ರಂದು ಮೋದಿ ಬೆಂಗಳೂರಿಗೆ ಬರುತ್ತಿದ್ದಾರೆ. ಬೆಂಗಳೂರಿಗೆ ಬಂದಾಗ ನಾವು ಬೆಂಗಳೂರಿನ ಜನ ಅಭಿನಂದನೆ ಸಲ್ಲಿಸುತ್ತೇವೆ ಎಂದರು.

ಮೋದಿ ಅವರಿಗೆ ಬೆಂಗಳೂರು ಕಾರ್ಯಕರ್ತರಿಂದ ಅಭಿನಂದನೆ ಸಲ್ಲಿಸುತ್ತೇವೆ. ಅಭಿನಂದನೆ ಕಾರ್ಯಕ್ರಮದ ಕುರಿತು ಒಂದು ಸಭೆ ಮಾಡಿದ್ದೇನೆ. ಪೂರ್ವ ಸಭೆಯನ್ನ ಬಿಜೆಪಿ ಕಚೇರಿಯಲ್ಲಿ ಮಾಡಿದ್ದೇವೆ. ಬಿಜೆಪಿ ಕಾರ್ಯಕ್ರಮ ಆಗಿರುತ್ತದೆ. ಅರ್ಧ ಗಂಟೆ ಮೋದಿ ಇರಲಿದ್ದಾರೆ, ಭಾಷಣವನ್ನು ಮಾಡುತ್ತಾರೆ. ಸುಮಾರು 15 ಸಾವಿರ ಜನ ಸೇರಲಿದ್ದಾರೆ. ಹೆಚ್‌ಎಎಲ್ ಏರ್‌ಪೋರ್ಟ್ ಪಾರ್ಕಿಂಗ್ ಲಾಟ್‌ನಲ್ಲಿ ಕಾರ್ಯಕ್ರಮ ಮಾಡುತ್ತಿದ್ದೇವೆ ಅಂತ ತಿಳಿಸಿದರು.


Spread the love

About Laxminews 24x7

Check Also

ಹೈಕೋರ್ಟ್‌ನ ಎಸ್‌ಐಟಿ ಆದೇಶ ಪ್ರಶ್ನಿಸಿ ಸುಪ್ರೀಂನಲ್ಲಿ ಮೇಲ್ಮನವಿ ಸಲ್ಲಿಸಲು ಮುಂದಾದ ಸರ್ಕಾರ

Spread the loveಬೆಂಗಳೂರು: ಕೆಪಿಎಸ್‌ಸಿ (KPSC) ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ  ರಚಿಸಿ ಧಾರವಾಡ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ