Breaking News

ಚಾಕೊಲೇಟ್ ಕೊಡುವ ನೆಪದಲ್ಲಿ ಹೇಯ ಕೃತ್ಯ: 8 ವರ್ಷದ ಬಾಲಕಿ ಮೇಲೆ ವೃದ್ಧನಿಂದ ಲೈಂಗಿಕ ದೌರ್ಜನ್ಯ

Spread the love

ಹುಬ್ಬಳ್ಳಿ: ಕ್ಯಾನ್ಸರ್ ಪೀಡಿತ 75 ವರ್ಷದ ವೃದ್ಧನಿಂದ 8 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವಂತಹ ಘಟನೆ ಹುಬ್ಬಳ್ಳಿಯ  ಅಶೋಕನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜನವರಿ 29ರಂದು ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಚಾಕೊಲೇಟ್ ಕೊಡುವುದಾಗಿ ಹೇಳಿ ಪಕ್ಕದ ಮನೆಯ ಬಾಲಕಿಯನ್ನ ಮನೆಗೆ ಕರೆಸಿಕೊಂಡು ವೃದ್ಧ ಕೃತ್ಯವೆಸಗಿದ್ದಾನೆ. ಹುಬ್ಬಳ್ಳಿಯ ಅಶೋಕನಗರ ಠಾಣೆಯಲ್ಲಿ ಪೋಕ್ಸೋ ಕೇಸ್  ದಾಖಲಾಗಿದ್ದು, ಸದ್ಯ ಆರೋಪಿ ವೃದ್ಧನನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.

ಚಾಕುವಿನಿಂದ ಪತ್ನಿಯ ಕತ್ತು ಕೊಯ್ದು ಪತಿ ಕೊಲೆಗೈದಿರುವಂತಹ ಘಟನೆ ಹುಬ್ಬಳ್ಳಿಯ ರಾಮಲಿಂಗೇಶ್ವರ ನಗರದಲ್ಲಿ ನಡೆದಿದೆ. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಮನೆ ಮುಂದೆಯೇ ಪತ್ನಿ ತೆಹಸಿನ್(28)ರನ್ನು ಪತಿ ಇರ್ಫಾನ್ ಬರ್ಬರವಾಗಿ ಹತ್ಯೆಗೈದಿದ್ದಾರೆ. ಗೋಕುಲ್​ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೊಲೆ ಮಾಡಿ ಕೆಲ ಹೊತ್ತು ತಲೆ ಮರೆಸಿಕೊಂಡಿದ್ದ ಇರ್ಫಾನ್, ಬಳಿಕ ತಾವೇ ಮಗುವಿನೊಂದಿಗೆ ಬಂದು ಕೇಶ್ವಾಪುರ ಪೊಲೀಸ್ ಠಾಣೆಗೆ ಶರಣಾಗಿದ್ದಾರೆ. ತೆಗೆದುಕೊಂಡಿದ್ದ ಸಾಲವನ್ನು ದುಡಿದು ತುಂಬುವಂತೆ ತೆಹಸಿನ್​​ ಹೇಳಿದ್ದಾರೆ. ಇದೇ ವಿಚಾರವಾಗಿ ದಂಪತಿ ಮಧ್ಯೆ ಪದೇ ಪದೇ ಜಗಳ ಕೂಡ ನಡೆದಿದೆ. ಹೀಗಾಗಿ ಆಕ್ರೋಶಗೊಂಡು ಕೊಲೆ ಮಾಡಲಾಗಿದೆ. ಕುತ್ತಿಗೆ ಸೇರಿದಂತೆ ನಾಲ್ಕೈದು ಕಡೆಗಳಲ್ಲಿ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾರೆ.

 


Spread the love

About Laxminews 24x7

Check Also

ಎಂಟು ವರ್ಷದ ಊರು ಬಿಟ್ಟು ಹುಬ್ಬಳ್ಳಿಗೆ ಹಾರಿಬಂದ ಒಂದೇ ಬಡಾವಣೆಯ ಜೋಡಿ ಹಕ್ಕಿ

Spread the loveಹುಬ್ಬಳ್ಳಿ: ಅವರಿಬ್ಬರು ಒಂದೇ ಬಡಾವಣೆಯವರು. ಹೀಗಾಗಿ ಇಬ್ಬರು ಕಳೆದ ಎಂಟು ವರ್ಷಗಳಿಂದ ಪ್ರೀತಿಸುತ್ತಿದ್ದರು. ಇಬ್ಬರ ಜಾತಿ ಬೇರೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ