Breaking News

ಬೃಹತ್ ಕಳ್ಳಭಟ್ಟಿ ಜಾಲ ಭೇಧಿಸಿದ ಪೊಲೀಸರು

Spread the love

 ಬೆಳಗಾವಿ: ಕಳ್ಳಭಟ್ಟಿ ತಯಾರಿಸಿ ಮಾರಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಜಿಲ್ಲಾ ಪೊಲೀಸರು ಅಪಾರ ಪ್ರಮಾಣದ ಕಳ್ಳಭಟ್ಟಿ ಹಾಗೂ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

ಬೆಳಗಾವಿ ಜಿಲ್ಲೆಯ ಕುಡಚಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೊರಬ ಗ್ರಾಮದಲ್ಲಿ ಭರ್ಜರಿ ಕಾರ್ಯಾಚರಣೆ ನಡೆದಿದೆ. ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಬೃಹತ್ ಪ್ರಮಾಣದ ಕಳ್ಳಭಟ್ಟಿ ಮತ್ತು ಕಚ್ಚಾ ವಸ್ತುಗಳು ಸಹ ಜಪ್ತಿ ಮಾಡಲಾಗಿದೆ.

ಕುಡಚಿ ಪೊಲೀಸ್ ಠಾಣೆಯ ಸಿಬ್ಬಂದಿ  ದಾಳಿ ವೇಳೆ ಆರೋಪಿಯ ಮನೆಯಲ್ಲಿ ಸಂಗ್ರಹಿಸಿದ ಕೊಳೆ 1790 ಲೀಟರ್ ಮತ್ತು ಕಳ್ಳಭಟ್ಟಿ ಸಾರಾಯಿ, 10 ಲೀಟ‌ರ್ ಕಳ್ಳಭಟ್ಟಿ ಹಾಗೂ ಕಳ್ಳಭಟ್ಟಿ ತಯಾರು ಮಾಡಲು ಉಪಯೋಗಿಸುತ್ತಿದ್ದು ಬ್ಯಾರಲ್ ಗಳನ್ನು ಜಪ್ತ ಮಾಡಲಾಗಿದೆ.

ಜಿಲ್ಲೆಯಲ್ಲಿ ಯಾವುದೇ ರೀತಿಯ ಕಾನೂನು ಬಾಹಿರ ಚಟುವಟಿಕೆಗಳು, ರೌಡಿಸಂ ಅಥವಾ ಸಾರ್ವಜನಿಕರಿಗೆ ಭಯ ಹುಟ್ಟಿಸುವಂತಹ ಕೃತ್ಯಗಳಲ್ಲಿ ತೊಡಗಿದರೆ ಅಂತವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಮಾನ್ಯ ಪೊಲೀಸ್ ಅಧೀಕ್ಷಕರು ಈ ಮೂಲಕ ಎಚ್ಚರಿಕೆ ನೀಡಿದ್ದಾರೆ.


Spread the love

About Laxminews 24x7

Check Also

ಈ ವಾರದೊಳಗೆ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಡಿಕೆಶಿ

Spread the loveಬೆಂಗಳೂರು: ಈ ವಾರದೊಳಗೆ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಸಿಎಂ ಡಿ.ಕೆ ಶಿವಕುಮಾರ್  ತಿಳಿಸಿದರು. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ