Breaking News

ಬೆಳಗಾವಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಿದ ಪೊಲೀಸ್ ಕಮಿಷನರ್: ಆದೇಶ ಉಲ್ಲಂಘಿಸಿದರೆ ಕಠಿಣ ಕ್ರಮ

Spread the love

ಬೆಳಗಾವಿ: ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ ನವೆಂಬರ್ 15ರಂದು ನಡೆಯಲಿರುವ 2026-27ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ ‘ಎ’ ಮತ್ತು ‘ಬಿ’ ವೃಂದದ ಹುದ್ದೆಗಳ ಪೂರ್ವಭಾವಿ ಪರೀಕ್ಷೆಯ ಹಿನ್ನೆಲೆಯಲ್ಲಿ ಬೆಳಗಾವಿ ನಗರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ನಗರದ ಒಟ್ಟು 34 ಪರೀಕ್ಷಾ ಕೇಂದ್ರಗಳಲ್ಲಿ ನವೆಂಬರ್ 15ರಂದು ಬೆಳಿಗ್ಗೆ 10.30ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಹಾಗೂ ಮಧ್ಯಾಹ್ನ 2.30ರಿಂದ ಸಂಜೆ 4 ಗಂಟೆಯವರೆಗೆ ಪರೀಕ್ಷೆಗಳು ನಡೆಯಲಿವೆ.

ಈ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ನವೆಂಬರ್ 15ರ ಬೆಳಿಗ್ಗೆ 9ರಿಂದ ಸಂಜೆ 5 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತ ಪ್ರಕಾಶ ನಿಕಮ್ ಆದೇಶ ಹೊರಡಿಸಿದ್ದಾರೆ.

ನಿಷೇಧಿತ ಅವಧಿಯಲ್ಲಿ ಸಾರ್ವಜನಿಕರು ಗುಂಪು ಗುಂಪಾಗಿ ಸೇರುವುದನ್ನು ನಿರ್ಬಂಧಿಸಲಾಗಿದೆ. ಆದೇಶ ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಪೊಲೀಸ್ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ.


Spread the love

About Laxminews 24x7

Check Also

ಪತ್ನಿಯ ಎದುರೇ ರಿಯಲ್ ಎಸ್ಟೇಟ್ ಉದ್ಯಮಿ ಬರ್ಬರ ಹತ್ಯೆ: ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳಿಂದ ಕೃತ್ಯ

Spread the loveರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರನ್ನು ಪತ್ನಿಯ ಎದುರೇ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಭೀಕರ ಘಟನೆ ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ