ರಾಮದುರ್ಗ: ಯುವಕರ ಗುಂಪು ಜೂಜಾಟದಲ್ಲಿ ತೊಡಗಿದ್ದು, ಪೊಲೀಸ್ ದಾಳಿ ನಡೆಸಿದ್ದರಿಂದ ಇಬ್ಬರು ಮಲಪ್ರಭಾ ನದಿಗೆ ಹಾರಿದ ಘಟನೆ ನಡೆದಿದೆ.
ನದಿಯ ಪಕ್ಕದ ಪೊದೆಯ ಬಳಿ ಗುಂಪು ಪೊಲೀಸರು ಬಂದಿದ್ದರಿಂದ ಹೆದರಿ ಓಡಿಹೋಗಿದ್ದಾರೆ. ಈ ವೇಳೆ ಇಬ್ಬರು ನದಿ ನೀರಿಗೆ ಹಾರಿದ್ದಾರೆ. ಅವರ ಪತ್ತೆಗಾಗಿ ಕಾರ್ಯಾಚರಣೆ ನಡೆದಿದೆ.ಪೊಲೀಸರು, ಅಗ್ನಿಶಾಮಕ ದಳದವರು ಹಾಗೂ ಈಜು ತಜ್ಞರು ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.
ಮಂಜುನಾಥ ಲಕ್ಷ್ಮಣ ಬಂಡಿವಡ್ಡರ (28) ಹಾಗೂ ಸಮೀರ ಮಹಮದಸಾಬ ಬಟಕುರ್ಕಿ (23) ನದಿಗೆ ಹಾರಿದವರು.
ನೀರಿನಲ್ಲಿ ಮುಳುಗುತ್ತಿದ್ದ ವೇಳೆ ಪೊಲೀಸರು ರಕ್ಷಣೆಗೆ ಮುಂದಾಗಲಿಲ್ಲ ಎಂದು ಆರೋಪಿಸಿ ಸ್ಥಳೀಯರಿಂದ ಆಕ್ರೋಶ ವ್ಯಕ್ತವಾಗಿದೆ.
Laxmi News 24×7