Breaking News
Home / ಜಿಲ್ಲೆ / ಪೊಲೀಸ್ ದಾಳಿಗೆ ಹೆದರಿ ಜೂಜಾಟದಲ್ಲಿ ತೊಡಗಿದ್ದ ಇಬ್ಬರು ನೀರು ಪಾಲು

ಪೊಲೀಸ್ ದಾಳಿಗೆ ಹೆದರಿ ಜೂಜಾಟದಲ್ಲಿ ತೊಡಗಿದ್ದ ಇಬ್ಬರು ನೀರು ಪಾಲು

Spread the love

ರಾಮದುರ್ಗ: ಯುವಕರ ಗುಂಪು ಜೂಜಾಟದಲ್ಲಿ ತೊಡಗಿದ್ದು, ಪೊಲೀಸ್ ದಾಳಿ ನಡೆಸಿದ್ದರಿಂದ ಇಬ್ಬರು ಮಲಪ್ರಭಾ ನದಿಗೆ ಹಾರಿದ ಘಟನೆ ನಡೆದಿದೆ.

ನದಿಯ ಪಕ್ಕದ ಪೊದೆಯ ಬಳಿ ಗುಂಪು ಪೊಲೀಸರು ಬಂದಿದ್ದರಿಂದ ಹೆದರಿ ಓಡಿಹೋಗಿದ್ದಾರೆ. ಈ ವೇಳೆ ಇಬ್ಬರು ನದಿ ನೀರಿಗೆ ಹಾರಿದ್ದಾರೆ. ಅವರ ಪತ್ತೆಗಾಗಿ ಕಾರ್ಯಾಚರಣೆ ನಡೆದಿದೆ.ಪೊಲೀಸರು, ಅಗ್ನಿಶಾಮಕ ದಳದವರು ಹಾಗೂ ಈಜು ತಜ್ಞರು ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

ಮಂಜುನಾಥ ಲಕ್ಷ್ಮಣ ಬಂಡಿವಡ್ಡರ (28) ಹಾಗೂ ಸಮೀರ ಮಹಮದಸಾಬ ಬಟಕುರ್ಕಿ (23) ನದಿಗೆ ಹಾರಿದವರು.

ನೀರಿನಲ್ಲಿ ಮುಳುಗುತ್ತಿದ್ದ ವೇಳೆ ಪೊಲೀಸರು ರಕ್ಷಣೆಗೆ ಮುಂದಾಗಲಿಲ್ಲ ಎಂದು ಆರೋಪಿಸಿ ಸ್ಥಳೀಯರಿಂದ ಆಕ್ರೋಶ ವ್ಯಕ್ತವಾಗಿದೆ.


Spread the love

About Laxminews 24x7

Check Also

ಬಜೆಟ್​ ವಿಚಾರದಲ್ಲಿ ಭಾರೀ ಟ್ರೋಲ್​ ಆದ ಪ್ರಭಾಸ್​ ನಟನೆಯ ಸಲಾರ್​ ಸಿನಿಮಾ

Spread the loveಪ್ರಭಾಸ್​ ನಟನೆಯ ಸಲಾರ್​ ಸಿನಿಮಾ 2022ರ ಏಪ್ರಿಲ್​ 14ರಂದು ತೆರೆಗೆ ಬರುತ್ತಿದೆ. ಪ್ರಭಾಸ ಸಿನಿಮಾ ಕೆರಿಯರ್​ನಲ್ಲಿ ಚಿತ್ರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ