Breaking News

ಡ್ರಗ್ ಪೆಡ್ಲರ್ ಬಂಧನಕ್ಕೆ ಹೋದ ಪೊಲೀಸರಿಗೆ ಶಾಕ್; 17 ಲಾಂಗು, 230 ಮೊಬೈಲ್ ಜಪ್ತಿ

Spread the love

ಬೆಂಗಳೂರು: ಡ್ರಗ್ ಪೆಡ್ಲರ್‌ನನ್ನು ಬಂಧಿಸಲು ತೆರಳಿದ್ದ ಬ್ಯಾಟರಾಯನಪುರ ಪೊಲೀಸರಿಗೆ ಶಾಕ್ ಎದುರಾಗಿದ್ದು. ಆರೋಪಿ ಮನೆಯ ಮೇಲೆ ದಾಳಿ ನಡೆಸಿದ ವೇಳೆ 17 ಮಾರಕಾಸ್ತ್ರಗಳು, 230 ಕಳವು ಮೊಬೈಲ್‌ಗಳು ಹಾಗೂ 600-700 ಗ್ರಾಂ ಗಾಂಜಾ ಪತ್ತೆಯಾಗಿದೆ.

ಜುಲೈ 1ರಂದು ರಾತ್ರಿ ಸುಮಾರು 10.50ಕ್ಕೆ ಬ್ಯಾಟರಾಯನಪುರ ಬಸ್ ನಿಲ್ದಾಣದ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ 37 ವರ್ಷದ ಅಕ್ಬರ್ ಶರೀಫ್‌ನನ್ನು ಗಸ್ತಿನಲ್ಲಿದ್ದ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ವಿಚಾರಣೆ ವೇಳೆ ಅಕ್ಬರ್ ನೀಡಿದ ಮಾಹಿತಿಯ ಆಧಾರದ ಮೇಲೆ ಪೊಲೀಸರು ಆತನ ಮನೆ ಮೇಲೆ ದಿಢೀರ್ ದಾಳಿ ನಡೆಸಿದರು. ಈ ವೇಳೆ ಮನೆಯ ವಿವಿಧ ಭಾಗಗಳಲ್ಲಿ 17 ವಿವಿಧ ರೀತಿಯ ಲಾಂಗ್, ಮಚ್ಚು ಸೇರಿದಂತೆ ಮಾರಕಾಸ್ತ್ರಗಳು ಪತ್ತೆಯಾಗಿವೆ. ಅಲ್ಲದೆ, 230 ಕಳವು ಮೊಬೈಲ್‌ಗಳು ಹಾಗೂ ಮಾರಾಟಕ್ಕೆ ಸಂಗ್ರಹಿಸಿಟ್ಟಿದ್ದ 600ರಿಂದ 700 ಗ್ರಾಂ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಪೊಲೀಸರ ತನಿಖೆಯಲ್ಲಿ ಅಕ್ಬರ್ ಶರೀಫ್ ಹಲವು ವರ್ಷಗಳಿಂದ ಡ್ರಗ್ಸ್ ದಂಧೆಯಲ್ಲಿ ತೊಡಗಿದ್ದ ಎಂಬುದು ಬೆಳಕಿಗೆ ಬಂದಿದೆ. ಮತ್ತೊಂದು ಅಚ್ಚರಿಯ ಸಂಗತಿ ಎಂದರೆ, ಆತನ ತಾಯಿ ಮೆಹರ್ ಉನ್ನಿಸಾ ಕೂಡ ಡ್ರಗ್ ಪೆಡ್ಲರ್ ಆಗಿದ್ದು, 2024ರಲ್ಲಿ ಗಾಂಜಾ ಮಾರಾಟ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಜೈಲು ಸೇರಿದ್ದರು ಎಂದು ತಿಳಿದುಬಂದಿದೆ.

ತಾಯಿ ಬಂಧನದ ಬಳಿಕ ಆಕೆಯ ಡ್ರಗ್ಸ್ ಜಾಲವನ್ನು ಅಕ್ಬರ್ ನಿರ್ವಹಿಸುತ್ತಿದ್ದ ಎನ್ನಲಾಗಿದೆ. ಬ್ಯಾಟರಾಯನಪುರ ರೈಲ್ವೆ ಹಳಿ ಸುತ್ತಮುತ್ತ ಯುವಕರು ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ ಎಂಬ ಮಾಹಿತಿ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಈ ಸಂಬಂಧ ಬ್ಯಾಟರಾಯನಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಡ್ರಗ್ಸ್ ಜಾಲದ ಬಗ್ಗೆ ಮತ್ತಷ್ಟು ತನಿಖೆ ಮುಂದುವರಿಸಿದ್ದಾರೆ.


Spread the love

About Laxminews 24x7

Check Also

ಮರದ ರೆಂಬೆ ಬಿದ್ದು ಎರಡು ಕಾರುಗಳು ಜಖಂ – ತಪ್ಪಿದ ಭಾರೀ ಅನಾಹುತ

Spread the loveಬೆಂಗಳೂರು: ರಸ್ತೆ ಪಕ್ಕದಲ್ಲಿದ್ದ ಬೃಹತ್‌ ಮರದ ರೆಂಬೆಯೊಂದು ಬಿದ್ದು ಎರಡು ಕಾರು ಹಾಗೂ ಒಂದು ಸ್ಕೂಟಿ ಜಖಂಗೊಂಡ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ