Breaking News

ಬಿಡದಿಗೆ ಹೊರಟಿದ್ದ ನೂರಾರು ರೈತರನ್ನ ಕೊಡಗಿನ ಗಡಿಭಾಗದಲ್ಲೇ ತಡೆದ ಪೊಲೀಸರು

Spread the love

ಮಡಿಕೇರಿ: ಬಿಡದಿ ಟೌನ್‌ಶಿಪ್ ವಿರುದ್ಧದ ಹೋರಾಟದಲ್ಲಿ ಭಾಗವಹಿಸಲು ತೆರಳುತ್ತಿದ್ದ ಕೊಡಗಿನ ರೈತರನ್ನ ಜಿಲ್ಲೆಯ ಗಡಿಭಾಗದಲ್ಲೇ ಪೊಲೀಸರು ತಡೆದಿದ್ದಾರೆ.

ಪೋನ್ನಂಪೇಟೆ ತಾಲೂಕಿನ ತಿತಿಮತಿ ಗ್ರಾಮದಲ್ಲಿ ನಡೆದ ಈ ಬೆಳವಣಿಗೆ ಕೆಲಕಾಲ ಉದ್ವಿಗ್ನ ವಾತಾವರಣಕ್ಕೆ ಕಾರಣವಾಯಿತು. ಪೊಲೀಸರ ಕ್ರಮಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ರೈತರು  ತಿತಿಮತಿ – ಗೋಣಿಕೊಪ್ಪ ಮುಖ್ಯರಸ್ತೆಯಲ್ಲೇ ಕುಳಿತು ಪ್ರತಿಭಟನೆ ಆರಂಭಿಸಿದರು.

ಪ್ರತಿಭಟನೆಯಿಂದ ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡು ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ. ಪ್ರತಿಭಟನಾ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ರೈತರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು. ಆದರೂ, ಪ್ರತಿಭಟನೆ ಮುಂದುವರಿಸುವುದಾಗಿ ರೈತ ಸಂಘಟನೆಯ ಪ್ರಮುಖರು ಪಟ್ಟು ಹಿಡಿದರು.

ರೈತ ಮುಖಂಡ ಸುಜಯ್ ಬೋಪಯ್ಯ ಹಾಗೂ ಸುಭಾಶ್ ಸುಬ್ಬಯ್ಯ ಅವರ ನೇತೃತ್ವದಲ್ಲಿ ನೂರಾರು ರೈತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದು, ತಿತಿಮತಿ ಪಟ್ಟಣವನ್ನು ಪೊಲೀಸರು ಸರ್ಪಗಾವಲಿನಲ್ಲಿ ಇಟ್ಟಿದ್ದಾರೆ. ಪರಿಸ್ಥಿತಿ ಉದ್ವಿಗ್ನವಾಗಿದ್ದರೂ, ಸ್ಥಳದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ