Breaking News

ಸಾರ್ವಜನಿಕ ಸ್ಥಳಗಳಲ್ಲಿ ಕಾನೂನು ಬಾಹಿರ ಮದ್ಯ ಸೇವಿಸುವವರ ವಿರುದ್ಧ ಪೊಲೀಸ ಕಠಿಣ ಕ್ರಮ

Spread the love

ಬೆಳಗಾವಿ ನಗರದ ಸಾರ್ವಜನಿಕ ಸ್ಥಳಗಳಲ್ಲಿ ಕಾನೂನು ಬಾಹಿರವಾಗಿ ಮದ್ಯ ಸೇವಿಸುವವರ ವಿರುದ್ಧ ಉದ್ಯಮಬಾಗ ಠಾಣೆ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ನಿನ್ನೆ ಸಾರ್ವಜನಿಕ ಸ್ಥಳದಲ್ಲಿ ಕುಳಿತು ಮದ್ಯಪಾನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ದಾಳಿ ನಡೆಸಿ ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.
ದಿನಾಂಕ 28/06/2026 ರಂದು ಬೆಳಗಾವಿಯ ಉದ್ಯಮಬಾಗ ಪೊಲೀಸ್ ವ್ಯಾಪ್ತಿಯ ಸರ್ವೋ ಕಂಟ್ರೋಲ್ ಫ್ಯಾಕ್ಟರಿ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಕಾನೂನು ಬಾಹಿರವಾಗಿ ಮದ್ಯಪಾನ ಮಾಡುತ್ತಿದ್ದ ಆರೋಪಿಗಳಾದ ತಾನಾಜಿ ಗಲ್ಲಿಯ ಯಲ್ಲಪ್ಪ ಭರಮಪ್ಪ ನಾಯಕ (45) ಹಾಗೂ ಅನಗೋಳದ ಆನಂದ ದೀಪಕ ಪಾಟೀಲ (39) ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ. ಉದ್ಯಮಬಾಗ ಪೊಲೀಸ್ ಠಾಣೆ ಪಿ.ಎಸ್.ಐ ಪ್ರವೀಣ ಬಿರಾದಾರ ಮತ್ತು ಅವರ ಸಿಬ್ಬಂದಿ ವರ್ಗದವರು ಖಚಿತ ಮಾಹಿತಿ ಮೇರೆಗೆ ಈ ದಾಳಿ ನಡೆಸಿದ್ದು, ಆರೋಪಿಗಳಿಂದ ಖಾಲಿ ಸರಾಯಿ ಬಾಟಲಿ, ಪ್ಲಾಸ್ಟಿಕ್ ಗ್ಲಾಸ್ ಹಾಗೂ ನೀರಿನ ಬಾಟಲಿಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ. ಸದ್ಯ ಆರೋಪಿಗಳ ವಿರುದ್ಧ ಉದ್ಯಮಬಾಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ಸಂಖ್ಯೆ: 69/2026 ಕಲಂ. 15(A), 32(3) ಅಬಕಾರಿ ಕಾಯ್ದೆಯಡಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಜರುಗಿಸಲಾಗಿದೆ. ಈ ಯಶಸ್ವಿ ದಾಳಿ ನಡೆಸಿದ ಹೆಚ್‌ಎಸ್‌ಐ, ಎಸ್‌ಐ ಹಾಗೂ ಸಿಬ್ಬಂದಿಯ ಕಾರ್ಯವನ್ನು ಬೆಳಗಾವಿ ನಗರ ಪೊಲೀಸ್ ಆಯುಕ್ತರು ಮತ್ತು ಡಿಸಿಪಿಯವರು ಮುಕ್ತ ಕಂಠದಿಂದ ಶ್ಲಾಘಿಸಿದ್ದಾರೆ.


Spread the love

About Laxminews 24x7

Check Also

80ನೇ ಸ್ವಾತಂತ್ರ‍್ಯ ದಿನಾಚರಣೆ – ಮಾಣೆಕ್ ಷಾ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ಸಿಎಂ ಡಿಕೆಶಿ

Spread the loveಬೆಂಗಳೂರು: ಇಂದು ದೇಶದೆಲ್ಲೆಡೆ 80ನೇ ಸ್ವಾತಂತ್ರ‍್ಯ ದಿನಾಚರಣೆಯ ಸಂಭ್ರಮ. ಇದರ ಅಂಗವಾಗಿ ಬೆಂಗಳೂರಿನ ಮಾಣೆಕ್ ಷಾ ಮೈದಾನದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ