Breaking News

ಜಿಲ್ಲಾಸ್ಪತ್ರೆಯಲ್ಲಿ ಕೊರೊನಾ ಸೋಂಕಿತರ ವಿಡಿಯೋ, ಆಡಿಯೋ ಕ್ಲಿಪ್ ವೈರಲ್ ಮಾಡಿದ ಪ್ರಮುಖ ಆರೋಪಿಯನ್ನು ಎಪಿಎಂಸಿ ಪೊಲೀಸರು ಬಂಧಿಸಿದ್ದಾರೆ.

Spread the love

 

ಬೆಳಗಾವಿ:ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ಕೊರೊನಾ ಸೋಂಕಿತರ ವಿಡಿಯೋ, ಆಡಿಯೋ ಕ್ಲಿಪ್ ವೈರಲ್ ಮಾಡಿದ ಪ್ರಮುಖ ಆರೋಪಿಯನ್ನು ಎಪಿಎಂಸಿ ಪೊಲೀಸರು ಬಂಧಿಸಿದ್ದಾರೆ.


ಬೆಳಗಾವಿ ತಾಲೂಕಿನ ಕಣಬರಗಿ ನಿವಾಸಿ ಅಮಿರ್ ಹಮ್ಜಾ ಬೀಡಿಕರ್ ಬಂಧಿತ ಆರೋಪಿ. ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ಏಳು ಕೊರೊನಾ ಸೋಂಕಿತರ ಮೇಲೆ ನಿಗಾ ಇಡಲಾಗಿದೆ. ಮೊದಲು ಮೂವರಲ್ಲಿ ಕೊರೊನಾ ಸೋಂಕು ಪತ್ತೆಯಾಗಿತ್ತು. ಈ ಮೂವರ ಬಗ್ಗೆ ಆಡಿಯೋ, ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಲಾಗಿತ್ತು. ಸಮಾಜಕ್ಕೆ ತಪ್ಪು ಸಂದೇಶ ಸಾರುವ ಉದ್ದೇಶದಿಂದ ಆರೋಪಿ ವಿಡಿಯೋ ವೈರಲ್ ಮಾಡಿದ್ದನು

.

ವಿಡಿಯೋ ವೈರಲ್ ಮಾಡಿದ ಆರೋಪಿ ವಿರುದ್ಧ ಪ್ರಕರಣ ದಾಖಲಿಸುವಂತೆ ಡಿಸಿ ಸೂಚಿಸಿದ್ದರು. ಈ ಕುರಿತು ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಪ್ರಕರಣ ದಾಖಲಿಸಿಕೊಂಡ ಎಪಿಎಂಸಿ ಪೊಲೀಸರು ಆರೋಪಿ ಬಂಧಿಸಿ
ಆತನ ವಿರುದ್ಧ ಐಪಿಸಿ ಸೆಕ್ಷನ್ 153(A), 188, 504, 505(1) ಸಹಕಲಂ 34ರಡಿ ಕೇಸ್ ದಾಖಲಿಸಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ