Breaking News

ರಾಜಕೀಯ ಬೇರೆ, ಕೆಲಸ ಬೇರೆ – ಕೃಷ್ಣ ಬೈರೇಗೌಡ ಕಾರ್ಯವೈಖರಿಗೆ ಹೆಚ್‌ಡಿಡಿ ಶ್ಲಾಘನೆ

Spread the love

ಬೆಂಗಳೂರು: ಸಚಿವ ಕೃಷ್ಣ ಬೈರೇಗೌಡ ಅವರ ಕಾರ್ಯವೈಖರಿಯನ್ನು ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡರು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ.

ಇಂದು ಬಿಡದಿ ಟೌನ್‌ಶಿಪ್‌  ವಿಚಾರದ ಬಗ್ಗೆ ಜೆಪಿ ಭವನದಲ್ಲಿ ಹೆಚ್‌ಡಿಡಿ ತುರ್ತು ಸುದ್ದಿಗೋಷ್ಠಿ ನಡೆಸಿದರು. ಈ ವೇಳೆ ಕೇಳಲಾದ ಪ್ರಶ್ನೆಗೆ, “ರಾಜಕೀಯವೇ ಬೇರೆ, ಮಾಡುವ ಕೆಲಸವೇ ಬೇರೆ. ಕೃಷ್ಣ ಬೈರೇಗೌಡ ಅವರು ಬೆಂಗಳೂರು ನಗರ ಜಿಲ್ಲಾ ಉಸ್ತುವಾರಿ ಅಧಿಕಾರ ವಹಿಸಿಕೊಂಡಾಗಿನಿಂದಲೂ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ವಿಶೇಷವಾಗಿ ಬೀದಿ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವ ಮತ್ತು ಅವರನ್ನು ಸೂಕ್ತ ಜಾಗಕ್ಕೆ ಸ್ಥಳಾಂತರಿಸುವ ನಿಟ್ಟಿನಲ್ಲಿ ಅವರು ಮಾಡುತ್ತಿರುವ ಕೆಲಸಗಳು ಶ್ಲಾಘನೀಯ ಎಂದು ಹೇಳಿದರು.

ಸಾಮಾನ್ಯವಾಗಿ ಆಡಳಿತ ಪಕ್ಷದ ವಿರುದ್ಧ ತೀಕ್ಷ್ಣ ವಾಗ್ದಾಳಿ ನಡೆಸುವ ದೇವೇಗೌಡರು, ವಿಪಕ್ಷದಲ್ಲಿದ್ದರೂ ಸಚಿವರೊಬ್ಬರ ಸಾರ್ವಜನಿಕ ಹಿತಾಸಕ್ತಿಯ ಕೆಲಸವನ್ನು ಗುರುತಿಸಿ ಬೆನ್ನುತಟ್ಟಿರುವುದು ವಿಶೇಷ.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ