Breaking News

ಧಿಡೀರಣೆ ರಾಜಕೀಯ ಲೆಕ್ಕಾಚಾರಗಳು ಬದಲಾಗಿದ್ದು, ಇನ್ನೊಬ್ಬ ಪ್ರಬಲ ಆಕಾಂಕ್ಷಿ ಅನಹ೯ ಶಾಸಕ ಆರ್. ಶಂಕರ ಹೆಸರು ಮುನ್ನೆಲೆಗೆ

Spread the love

ಬೆಳಗಾವಿ: ರಿಜ್ವಾನ್ ಅಷ೯ದ್ ವಿಧಾನಸಭೆಗೆ ಆಯ್ಕೆಯಾಗುವ ಮೂಲಕ ಖಾಲಿಯಾಗಿರುವ ವಿಧಾನ ಪರಿಷತ್ ಸ್ಥಾನಕ್ಕೆ  ಚುನಾವಣಾ ಆಯೋಗ ಫೆಬ್ರುವರಿ ೧೭ರಂದು ಉಪಚುನಾವಣೆ ಘೋಷಣೆ ಮಾಡಿದ ಬಳಿಕ ನಿರಾಳವಾಗಿದ್ದ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರಿಗೆ ಮತ್ತೆ ಆತಂಕ ಶುರುವಾಗಿದೆ.

ಮೊನ್ನೆಯವರೆಗೆ ಖಾಲಿಯಾಗಿರುವ ಸ್ಥಾನ ತುಂಬಲು ಸವದಿ ಅವರ ಹೆಸರು ಮುಂಚೂಣಿಯಲ್ಲಿ ಕೇಳಿ ಬರುತ್ತಿತ್ತು. ಆದರೆ, ಧಿಡೀರಣೆ ರಾಜಕೀಯ ಲೆಕ್ಕಾಚಾರಗಳು ಬದಲಾಗಿದ್ದು, ಇನ್ನೊಬ್ಬ ಪ್ರಬಲ ಆಕಾಂಕ್ಷಿ ಅನಹ೯ ಶಾಸಕ ಆರ್. ಶಂಕರ ಹೆಸರು ಮುನ್ನೆಲೆಗೆ ಬಂದಿದೆ. ಎರಡ್ಮೂರು ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆ ಇದ್ದು, ಆ ಸಂದಭ೯ದಲ್ಲಿ ಉಪಚುನಾವಣೆಯಲ್ಲಿ ಆಯ್ಕೆಯಾಗಿ ಬಂದಿರುವ ೧೧ ಶಾಸಕರ ಜೊತೆಗೆ ಆರ್.ಶಂಕರ ಅವರಿಗೂ ಸಚಿವ ಸ್ಥಾನ ನೀಡಬೇಕೆಂದು ರಮೇಶ ಜಾರಕಿಹೊಳಿ ನೇತೃತ್ವದ ಬಣ ಪಟ್ಟು ಹಿಡಿದಿದೆ ಎನ್ನಲಾಗಿದೆ.

ಆರ್ ಶಂಕರ ಕುರುಬ ಸಮುದಾಯದವರಾಗಿದ್ದು, ಅವರನ್ನು ಸಚಿವರನ್ನಾಗಿಸುವ ಮೂಲಕ ಆ ಸಮುದಾಯಕ್ಕೆ ಪ್ರಾತಿನಿಧ್ಯ ಕೊಡಬೇಕೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮೇಲೆ ಒತ್ತಡ ಹಾಕಲಾಗುತ್ತಿದೆ. ಸಚಿವ ಕೆ.ಎಸ್.ಈಶ್ವರಪ್ಪ ಕೂಡ ಆರ್ ಶಂಕರ ಪರವಾಗಿ ಲಾಬಿ ನಡೆಸುತ್ತಿದ್ದಾರೆ. ಸಚಿವ ಸಂಪುಟದಲ್ಲಿ ಲಿಂಗಾಯತರ ಸಂಖ್ಯೆ ಅಧಿಕವಾಗುವ ಸಾಧ್ಯತೆ ಇರುವುದರಿಂದ ಯಾರನ್ನು ತೆಗೆದುಕೊಳ್ಳಬೇಕು, ಯಾರನ್ನು ಬಿಡಬೇಕು ಎನ್ನುವ ಇಕ್ಕಟ್ಟಿನಲ್ಲಿ ಯಡಿಯೂರಪ್ಪ ಸಿಲುಕಿಕೊಂಡಿದ್ದಾರೆ. ಆರ್ ಶಂಕರ ಮೊನ್ನೆಯಿಂದ ರಮೇಶ ಜಾರಕಿಹೊಳಿ ಅವರ ಕಾರಿನಲ್ಲಿಯೇ ಅಡ್ಡಾಡುತ್ತಿದ್ದಾರೆ.

ಉಪಚುನಾವಣೆಯಲ್ಲಿ ಬಿಜೆಪಿಯಿಂದ ಆಯ್ಕೆಯಾಗಿರುವ ಬಹುತೇಕರಿಗೆ ಸಚಿವ ಸ್ಥಾನ ನೀಡುವ ಮೂಲಕ ಮಾತು ಉಳಿಸಿಕೊಳ್ಳಲು ಯಡಿಯೂರಪ್ಪ ಮುಂದಾಗಿದ್ದಾರೆ ಎನ್ನಲಾಗಿದೆ. ಇದರ ಜೊತೆ ಉಮೇಶ ಕತ್ತಿ ಅವರಿಗೂ ಸಚಿವ ಸ್ಥಾನ ಬಹುತೇಕ ಪಕ್ಕಾ ಆಗಿದೆ. ಮಹೇಶ ಕುಮಠಳ್ಳಿ ಅವರಿಗೂ ಸಚಿವ ಸ್ಥಾನ ಸಿಗಲಿರುವುದರಿಂದ, ಲಕ್ಷ್ಮಣ ಸವದಿಯೂ ಉಳಿದರೆ, ಒಂದೇ ವಿಧಾನಸಭಾ ಕ್ಷೇತ್ರಕ್ಕೆ ಎರಡು ಸಚಿವ ಸ್ಥಾನ ನೀಡಿದಂತಾಗುತ್ತದೆ. ಇದು ಪ್ರಾದೇಶಿಕ ಅಸಮಾನತೆಗೆ ಕಾರಣವಾಗಬಹುದು. ಇವೆಲ್ಲ ಕಾರಣಗಳಿಂದ ಲಕ್ಷ್ಮಣ ಸವದಿ ಅವರಿಗೆ ಆತಂಕ ಹೆಚ್ಚಾಗಿದ್ದು, ತಮ್ಮ ಸ್ಥಾನ ಉಳಿಸಿಕೊಳ್ಳಲು ಲಾಬಿ ಆರಂಭಿಸಿದ್ದಾರೆ.

ಲಕ್ಷ್ಮಣ ಸವದಿ ಅವರಿಗೆ ಸಂಘ ಪರಿವಾರದ ಬೆಂಬಲ ಇದೆ ಎಂದು ಹೇಳಲಾಗುತ್ತಿದೆಯಾದರೂ, ಅದು ಎಲ್ಲಿಯ ವರೆಗೆ ಅವರನ್ನು ಕಾಪಾಡುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ.


Spread the love

About Laxminews 24x7

Check Also

ಪೀರಣವಾಡಿಯ ಅನಧಿಕೃತ ಲೇಔಟ ತೆರುವುಗೊಳಿಸಿದ ಬುಡಾ.

Spread the loveಬೆಳಗಾವಿ:  ಪೀರಣವಾಡಿಯಲ್ಲಿ ತಲೆ ಎತ್ತುತ್ತಿದ್ದ ಅನಧಿಕೃತ ಲೇಔಟನ್ನು ಬುಡಾ ಅಧಿಕಾರಿಗಳು ಪೊಲೀಸರ ಭದ್ರತೆಯಲ್ಲಿ ತೆರುವುಗೊಳಿಸಿದರು. ಬೆಳಗಾವಿಯ ಪೀರಣವಾಡಿಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ