Breaking News

ನೀಟ್‌ ಪ್ರತಿಭಟನೆ ವೇಳೆ ಉಮರ್ ಖಾಲಿದ್‌ ಪರ ಪೋಸ್ಟರ್ – ಕೇಸ್ ದಾಖಲಿಸಲು ಕಾನೂನು ತಜ್ಞರ ಮೊರೆಹೋದ ಪೊಲೀಸ್‌

Spread the love

ಬೆಂಗಳೂರು: ನೀಟ್  ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಖಂಡಿಸಿ ಬೆಂಗಳೂರಿನಲ್ಲಿ ನಡೆಯುತ್ತಿದ್ದ ವಿದ್ಯಾರ್ಥಿ ಪ್ರತಿಭಟನೆ ವೇಳೆ ಪ್ರಚೋದನಕಾರಿ ಪೋಸ್ಟರ್‌ ಪ್ರದರ್ಶಿಸಿದ‌ ಸಂಬಂಧ ತನಿಖೆಯನ್ನು ಪೊಲೀಸರು ಚುರುಕುಗೊಳಿಸಿದ್ದಾರೆ.

ವಿವಾದಾತ್ಮಕ ಹಾಗೂ ಪ್ರಚೋದನಕಾರಿ ಪೋಸ್ಟರ್‌ ಪ್ರದರ್ಶಿಸಿದ ವಿದ್ಯಾರ್ಥಿನಿ ವಿರುದ್ಧ ಕೇಸ್‌ ದಾಖಲಿಸಲು ಕಾನೂನು ತಜ್ಞರ ಅಭಿಪ್ರಾಯ ಸಂಗ್ರಹಕ್ಕೆ ಬೆಂಗಳೂರು ಪೊಲೀಸರು ಮುಂದಾಗಿದ್ದಾರೆ. ಕಾನೂನು ತಜ್ಞರ ಅಭಿಪ್ರಾಯ ಬಂದ ಕೂಡಲೇ ಕೇಸ್ ದಾಖಲಿಸಿ ಮುಂದಿನ ಕ್ರಮ ಕೈಗೊಳ್ಳಲು ಪೊಲೀಸರು ಚಿಂತನೆ ನಡೆಸಿದ್ದಾರೆ.

ಏನಿದು ವಿವಾದ?
ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಶುಕ್ರವಾರ (ಜು.24) ವಿದ್ಯಾರ್ಥಿನಿಯೊಬ್ಬಳು ಹಿಡಿದಿದ್ದ ಪೋಸ್ಟರ್‌ ಭಾರೀ ವಿವಾದಕ್ಕೆ ಕಾರಣವಾಹಿದೆ. ಪ್ರತಿಭಟನೆಗೆ ಬಂದಿದ್ದ ಆಕೆ ಗಲಭೆ ಪ್ರಕರಣದ ಆರೋಪಿಗಳಾದ ಉಮರ್‌ ಖಾಲಿದ್‌ ಹಾಗೂ ಶಾರ್ಜೀಲ್ ಇಮಾಮ್ ಪರವಾಗಿ ಘೋಷಣೆಗಳಿರುವ ಪೋಸ್ಟರ್‌ಗಳನ್ನ ಪ್ರದರ್ಶಿಸಿದ್ದಾಳೆ. ಅಷ್ಟೇ ಅಲ್ಲದೇ ʻUkhad Le BLR Policeʼ ಎಂಬ ಬರಹವನ್ನು ಪೋಸ್ಟರ್‌ನಲ್ಲಿ ಪ್ರದರ್ಶಿಸಿ, ಬೆಂಗಳೂರು ಪೊಲೀಸರ ವಿರುದ್ಧ ನಾಲಿಗೆ ಹರಿಬಿಟ್ಟಿದ್ದಳು.

ಈ ಪೋಸ್ಟರ್‌ಗಳು ಅಲ್ಲಿದ್ದ ಪೊಲೀಸರ ಗಮನ ಸೆಳೆದು, ಪರಿಸ್ಥಿತಿ ಉದ್ವಿಗ್ನವಾಗದಂತೆ ಪೊಲೀಸರು ತಕ್ಷಣವೇ ಪೋಸ್ಟರ್‌ಗಳನ್ನ ವಶಪಡಿಸಿಕೊಂಡಿದ್ದರು. ಇದೇ ವೇಳೆ ಅಲ್ಲಿದ್ದ ಇತರ ವಿದ್ಯಾರ್ಥಿಗಳು ಆಕೆಗೆ ಕ್ಲಾಸ್‌ ತೆಗದುಕೊಂಡು, ಪ್ರತಿಭಟನಾ ಸ್ಥಳದಿಂದ ಕಳುಹಿಸಿದ್ದರು. ಇದೀಗ ಈ ಸಂಬಂಧ ಪೊಲೀಸರು ಕಾನೂನು ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ.

ಉಮರ್‌ ಖಾಲಿದ್‌ ಯಾರು?
ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ 2020ರ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆ ಪ್ರಕರಣದ ಆರೋಪಿಗಳು.


Spread the love

About Laxminews 24x7

Check Also

ʻನೀಟ್ ಪರೀಕ್ಷೆಗೂ ಮುಲ್ಲಾಗಳಿಗೂ ಏನ್ ಸಂಬಂಧ?ʼ ಎಂದಿದ್ದ ಸಿ.ಟಿ.ರವಿ ವಿರುದ್ಧ FIR

Spread the loveಚಿಕ್ಕಮಗಳೂರು: ನೀಟ್ ಪರೀಕ್ಷೆಗೂ ಮುಲ್ಲಾಗಳಿಗೂ ಏನ್ ಸಂಬಂಧ? ಎಂಬ ಹೇಳಿಕೆ ನೀಡಿದ್ದ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ವಿರುದ್ಧ ಚಿಕ್ಕಮಗಳೂರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ