Breaking News

ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ನರ್ಸ್‌ ಆತ್ಮಹತ್ಯೆ – ನಾಲ್ವರು ಅರೆಸ್ಟ್‌

Spread the love

ಶಿವಮೊಗ್ಗ: ಅತ್ತೆ, ಮಾವನ ಕಿರುಕುಳಕ್ಕೆ 4 ತಿಂಗಳ ಗರ್ಭಿಣಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಸೊರಬ (Soraba) ತಾಲೂಕಿನ ಹೊಡಬಟ್ಟೆ ಗ್ರಾಮದಲ್ಲಿ ನಡೆದಿದೆ.

ಆತ್ಮಹತ್ಯೆಗೆ ಶರಣಾದ ಮಹಿಳೆಯನ್ನು ಶ್ವೇತಾ (30) ಎಂದು ಗುರುತಿಸಲಾಗಿದೆ. ಮಹಿಳೆ ಸ್ಟಾಫ್‌ ನರ್ಸ್ (Nurse) ಆಗಿ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದರು. ಮಾರ್ಚ್ 29 ರಂದು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಮನೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದರು. ಸಾಗರದ ಖಾಸಗಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಬಳಿಕ ಮಣಿಪಾಲ್ ಆಸ್ಪತ್ರೆಗೆ ಸಾಗಿಸಲಾಗಿತ್ತು. ಚಿಕಿತ್ಸೆ ಫಲಿಸದೇ ಅವರು ಮೃತಪಟ್ಟಿದ್ದಾರೆ. 

ಅತ್ತೆ, ಮಾವನ ಕಿರುಕುಳದಿಂದ ಮಗಳು ಸಾವನ್ನಪ್ಪಿದ್ದಾಳೆ ಎಂದು ಶ್ವೇತಾ ಪೋಷಕರು ಆಕ್ರೋಶ ಹೊರಹಾಕಿದ್ದಾರೆ. ಮಗಳಿಗೆ ಮನೆ ಬಿಟ್ಟು ಹೋಗುವಂತೆ ಚಿತ್ರಹಿಂಸೆ ನೀಡುತ್ತಿದ್ದರು. ಇದೇ ಕಾರಣಕ್ಕೆ ಬೆಂಕಿ ಹಚ್ಚಿ ಕೊಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ಸಂಬಂಧ ಸೊರಬ ಠಾಣೆಯಲ್ಲಿ 6 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಆರೋಪಿಗಳಾದ ಅತ್ತೆ ಜಾನಕಿ, ಮಾವ ಸಣ್ಣಪ್ಪ, ಹಿರಿಯ ಪುತ್ರ ಹೇಮಂತ್, ಸೊಸೆ ದಿವ್ಯಳನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.


Spread the love

About Laxminews 24x7

Check Also

ವ್ಯಕ್ತಿಯ ಸಜೀವ ದಹನ – ಇಬ್ಬರಿಗೆ ಜೀವಾವಧಿ ಶಿಕ್ಷೆ

Spread the love ಶಿವಮೊಗ್ಗ: ವ್ಯಕ್ತಿಯ ಮೇಲೆ ಪೆಟ್ರೋಲ್‌ ಎರಚಿ ಬೆಂಕಿ ಹಚ್ಚಿ ಕೊಂದಿದ್ದ ಇಬ್ಬರು ಅಪರಾಧಿಗಳಿಗೆ ಶಿವಮೊಗ್ಗ  ನ್ಯಾಯಾಲಯ  …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ