Breaking News

ದಾವಣಗೆರೆ, ಬಾಗಲಕೋಟೆ ಉಪಸಮರ – ಜವಾಬ್ದಾರಿ ಹಂಚಿಕೆಗೆ ಸಿದ್ಧತೆ; ಬುಧವಾರ ಸಿಎಲ್‌ಪಿ ಸಭೆ

Spread the love

ಬೆಂಗಳೂರು: ಕಾಂಗ್ರೆಸ್ ಪಾಲಿಗೆ ಬಾಗಲಕೋಟೆ, ದಾವಣಗೆರೆ ಎರಡು ಕ್ಷೇತ್ರದ ಉಪ ಚುನಾವಣೆ  ಸವಾಲಾಗಿದೆ. ಎಲ್ಲಾ 140 ಶಾಸಕರು ಹಾಗೂ ಸಚಿವರಿಗೂ ಚುನಾವಣಾ ಜವಾಬ್ದಾರಿ ಹಂಚಿಕೆಗೆ ಸಿದ್ಧತೆ ನಡೆಸಿದೆ. ನಾಳೆ (ಮಾ.25) ಈ ಸಂಬಂಧ ಸಿಎಂ ಸಿದ್ದರಾಮಯ್ಯ  ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ.

ಸಿಎಂ ಸಿದ್ದರಾಮಯ್ಯ ಶತಾಯ ಗತಾಯ ಉಪ ಚುನಾವಣೆ ಗೆಲ್ಲುವ ಲೆಕ್ಕಾಚಾರದಲ್ಲಿ ಶಾಸಕರು, ಸಚಿವರನ್ನ ಅಖಾಡಕ್ಕೆ ಇಳಿಸಲು ಕಾರ್ಯತಂತ್ರ ರೂಪಿಸಿದ್ದಾರೆ ಎನ್ನಲಾಗಿದೆ.

 

ಇನ್ನು ಬಾಗಲಕೋಟೆ ವಿಧಾನಸಭಾ ಉಪ ಚುನಾವಣೆ ಹಿನ್ನೆಲೆ ಒಟ್ಟು 16 ಅಭ್ಯರ್ಥಿಗಳಿಂದ 26 ನಾಮಪತ್ರ ಸಲ್ಲಿಕೆಯಾಗಿವೆ. ನಿನ್ನೆ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದರಿಂದ 13 ಅಭ್ಯರ್ಥಿಗಳಿಂದ 19 ನಾಮಪತ್ರ ಸಲ್ಲಿಕೆಯಾಗಿವೆ ದಾವಣಗೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸ್ ಕರಿಯಪ್ಪ ಪರ ಪತ್ನಿ ಸಂಧ್ಯಾ ಪ್ರಚಾರ ಮಾಡುವ ವೇಳೆ ಮುಸ್ಲಿಂ ಮಹಿಳೆಯರು ಹಿಂದೂ ಸಂಪ್ರದಾಯದಂತೆ ಉಡಿತುಂಬಿವ ಮೂಲಕ ಬೆಂಬಲ ಕೊಟ್ಟಿದ್ದಾರೆ.

ಇನ್ನು, ಸಿದ್ದರಾಮೋತ್ಸವ ಸಮಾವೇಶದ ಮಾದರಿಯಲ್ಲೇ ಯಡಿಯೂರಪ್ಪ ಉತ್ಸವಕ್ಕೆ ಪ್ಲ್ಯಾನ್ ನಡೆದಿದೆ. ಯಡಿಯೂರಪ್ಪ ಸುದೀರ್ಘ ರಾಜಕೀಯ ಯಾನದ ನೆನಪಿಗಾಗಿ ಮೇ ಮೊದಲ ವಾರದಲ್ಲಿ ಚಿತ್ರದುರ್ಗದಲ್ಲಿ ಯಡಿಯೂರಪ್ಪ ಉತ್ಸವ ಮಾಡಲು ಬಿಜೆಪಿ ನಾಯಕರ ಚಿಂತನೆ ನಡೆಸಿದ್ದಾರೆ.


Spread the love

About Laxminews 24x7

Check Also

ರಾಜ್ಯದ 368 ನ್ಯಾಯಾಧೀಶರ ವರ್ಗಾವಣೆ! ವಿನಯ್ ಕುಲಕರ್ಣಿ ದೋಷಿ ಆದೇಶಿಸಿದ ಜಡ್ಜ್ ಕೂಡ ಟ್ರಾನ್ಸ್​ಫರ್​

Spread the loveಬೆಂಗಳೂರು: ಆಡಳಿತಾತ್ಮಕ ಉದ್ದೇಶಗಳಿಗಾಗಿ ರಾಜ್ಯದ್ಯಂತ 368 ನ್ಯಾಯಾಧೀಶರನ್ನು ವರ್ಗಾವಣೆ ಮಾಡಿ ಎಂದು ಹೈಕೋರ್ಟ್​ ಗುರುವಾರ (ಏ.16) ಆದೇಶ ಹೊರಡಿಸಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ