Breaking News

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the love

ಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ ಆಯ್ಕೆ ಮಾಡಿಕೊಂಡಿದ್ದು, ಇದಕ್ಕೆ  ಪೂರಕವಾದ ಕ್ರಿಯಾ ಯೋಜನೆಯನ್ನು ರೂಪಿಸುವಂತೆ ಸಂಬಂಧಿತ ಇಲಾಖೆಗಳ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ನಿರ್ದೇಶನ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಜರುಗಿದ ರಾಷ್ಟ್ರೀಯ ಯೋಜನಾ ಸಮನ್ವಯಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮೂರು ವರ್ಷಗಳ ಈ ಯೋಜನೆ ಕುರಿತು ವಿಸ್ತೃತ ಕ್ರಿಯಾಯೋಜನೆ ರೂಪಿಸಿ ಇತರೆ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ನಿರಂತರ ಸಭೆಗಳನ್ನು ಆಯೋಜಿಸುವಂತೆ ಸೂಚಿಸಿದರು.
ಈ ಅಧ್ಯಯನದ ಬಗ್ಗೆ ಗ್ರಾಮಿಣ ಪ್ರದೇಶಗಳಲ್ಲಿ ಜಾಗೃತಿ ಮೂಡಿಸಲು ಕಾರ್ಯಾಗಾರಗಳನ್ನು ಆಯೋಜಿಸಬೇಕು. ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ, ಉದ್ಯೋಗದಾತರು, ಉದ್ಯೋಗಸ್ಥರು ಹಾಗೂ ಗುತ್ತಿಗೆದಾರರಿಗೂ ಹೆಚ್ಚಿನ ಅರಿವು ಮೂಡಿಸಬೇಕು. ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆ ಪ್ರತಿನಿಧಿ ಜತೆ ನಿರಂತರ ಸಂಪರ್ಕದಲ್ಲಿರಬೇಕು. ಇದಕ್ಕಾಗಿ ರಚಿಸಲಾದ ಸಮಿತಿಯ ಜತೆಗೆ ಉಪಸಮಿತಿಯನ್ನೂ ಮಾಡಬೇಕು ಎಂದು ಸಲಹೆ ನೀಡಿದರು.
ರಾಷ್ಟ್ರೀಯ ಯೋಜನಾ ಸಂಯೋಜಕ ರಂಜಿತ ಪ್ರಕಾಶ ಮಾತನಾಡಿ, ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಸಾಮಾಜಿಕ ನ್ಯಾಯ ಮತ್ತು ಅಂತಾರಾಷ್ಟ್ರೀಯವಾಗಿ ಗುರುತಿಸಲ್ಪಟ್ಟ ಮಾನವ ಮತ್ತು ಕಾರ್ಮಿಕ ಹಕ್ಕುಗಳನ್ನು ಉತ್ತೇಜಿಸಲು ಮೀಸಲಾಗಿರುವ ವಿಶೇಷ ಸಂಸ್ಥೆಯಾಗಿದೆ. ಯೋಗ್ಯ ಕೆಲಸವನ್ನು ಉತ್ತೇಜಿಸುವುದು, ಉತ್ಪಾದಕ, ಸುರಕ್ಷಿತ ಮತ್ತು ನ್ಯಾಯಯುತ ಕೆಲಸದ ವಾತಾವರಣಗಳನ್ನು ರಚಿಸುವತ್ತ ಗಮನಹರಿಸಲಾಗುತ್ತಿದೆ ಎಂದು ವಿವರಿಸಿದರು.
ಸಹಾಯಕ ಕಾರ್ಮಿಕ ಆಯುಕ್ತ ಕೆ.ಬಿ.ನಾಗರಾಜ, ಜಿಪಂ ಯೋಜನಾ ನಿರ್ದೆಶಕ ರವಿಕುಮಾರ ಬಂಗಾರಪ್ಪನವರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಐ.ಪಿ.ಗಡಾದ, ಜಿಲ್ಲಾ ಕಾರ್ಮಿಕ ಅಧಿಕಾರಿ ಮಲ್ಲಿಕಾರ್ಜುನ ಜೋಗುರ, ರಾಜೇಶ ಜಾಧವ ಇತರರಿದ್ದರು.

Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ