Breaking News

ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ ಬಂಧಿಖಾನೆ ಡಿಜಿಪಿ ಅಲೋಕ ಕುಮಾರ ದಿಢೀರ್ ದಾಳಿ

Spread the love

ಬೆಳಗಾವಿ:ಜೈಲಿನಲ್ಲಿ ನಡೆಯುತ್ತಿರುವ ಅಕ್ರಮ ಚಟುವಟಿಕೆಗಳನ್ನು ತಡೆಯುವ ಉದ್ದೇಶದಿಂದ ಈ ಸರ್ಚ್ ಕಾರ್ಯಾಚರಣೆ ಕೈಗೊಳ್ಳಲಾಗಿದ್ದು, ಸುಮಾರು ಎರಡು ಗಂಟೆಗಳ ಕಾಲ ತೀವ್ರ ಪರಿಶೀಲನೆ ನಡೆಯಿತು.

52 ಜನ ಪೊಲೀಸ್ ಸಿಬ್ಬಂದಿಯೊಂದಿಗೆ ದಾಳಿ ನಡೆಸಲಾಗಿದ್ದು, ಬೆಳಗಾವಿ ನಗರ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಸಹ ಭಾಗಿಯಾಗಿದ್ದರು. ಎರಡು ಶ್ವಾನಗಳ ಸಹಾಯದಿಂದ ಕೈದಿಗಳ ಸೆಲ್‌ಗಳನ್ನು ಸಂಪೂರ್ಣವಾಗಿ ತಪಾಸಣೆ ಮಾಡಲಾಯಿತು.

ದಾಳಿಯ ವೇಳೆ ಒಂದು ಸಿಗರೆಟ್ ಪ್ಯಾಕೇಟ್ ಹಾಗೂ ಜಿಮ್ ಡಂಬೆಲ್ಸ್ ಪತ್ತೆಯಾಗಿವೆ. ಈ ಹಿನ್ನೆಲೆಯಲ್ಲಿ ಜೈಲು ಸಿಬ್ಬಂದಿಯನ್ನು ಡಿಜಿಪಿ ಅಲೋಕ ಕುಮಾರ ತರಾಟೆಗೆ ತೆಗೆದುಕೊಂಡಿದ್ದಾರೆ.
ದಾಳಿ ಬಳಿಕ ಮಾತನಾಡಿದ ಅವರು, ಜೈಲು ನಿರ್ವಹಣೆಯಲ್ಲಿ ಲೋಪ ಕಂಡುಬಂದಿರುವುದರಿಂದ ಜೈಲಾಧಿಕಾರಿಗಳಿಗೆ ಶೀಘ್ರದಲ್ಲೇ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ