Breaking News

ಚುನಾವಣಾ ಆಯೋಗದ ಪರ ಸಮರ್ಥನೆ – ಬಿಜೆಪಿ ವಿರುದ್ಧ ಪ್ರಿಯಾಂಕ್ ಖರ್ಗೆ ಕಿಡಿ

Spread the love

ಬೆಂಗಳೂರು: ಕೇಂದ್ರ ಚುನಾವಣಾ ಆಯೋಗದ ಆಯುಕ್ತರ ನಡುವೆ ಭಿನ್ನಾಭಿಪ್ರಾಯವಿರುವ ಕಾರಣ ಚುನಾವಣಾ ಆಯೋಗವನ್ನು ಸಮರ್ಥನೆ ಮಾಡಿಕೊಳ್ತಿರುವ ಬಿಜೆಪಿ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ  ಕಿಡಿಕಾರಿದ್ದಾರೆ.

ಎಕ್ಸ್‌ನಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಚುನಾವಣಾ ಆಯೋಗ ಬಿಜೆಪಿಯ “ಎಲೆಕ್ಷನ್ ಮೋರ್ಚಾವೇ? ಎಂದು ಬಿಜೆಪಿ ವಿರುದ್ದ ವಾಗ್ದಾಳಿ ನಡೆಸಿದ್ದಾರೆ. 

ಎಕ್ಸ್‌ನಲ್ಲಿ ಏನಿದೆ?
ಒಂದು ಉತ್ತರ ಸಿಗದ ಪ್ರಶ್ನೆ. ಸ್ವಾಯುತ್ತ ಸಂಸ್ಥೆ ಎನಿಸಿಕೊಳ್ಳುವ ಚುನಾವಣಾ ಆಯೋಗವನ್ನು ಪ್ರಶ್ನಿಸಿದಾಗಲೆಲ್ಲಾ ಅದರ ಪರವಾಗಿ ಸಮರ್ಥನೆಗೆ ಬಿಜೆಪಿ ಮುನ್ನುಗ್ಗಿ ಬರುವುದೇಕೆ? ಚುನಾವಣಾ ಆಯೋಗ ಬಿಜೆಪಿಯ “ಎಲೆಕ್ಷನ್ ಮೋರ್ಚಾ”ವೇ? ಬಿಜೆಪಿಗೂ ಸ್ವಾಯುತ್ತ ಸಂಸ್ಥೆಯಾದ ಚುನಾವಣಾ ಆಯೋಗಕ್ಕೂ ಏನು ಅವಿನಾಭಾವ ಸಂಬಂಧ? ಎಂದು ಪ್ರಶ್ನಿಸಿದ್ದಾರೆ.

ಆಯೋಗ ಎಂದರೆ ಒಬ್ಬ ವ್ಯಕ್ತಿಯಲ್ಲ, ಆ ಸಂಸ್ಥೆಯಲ್ಲಿರುವ ಸದಸ್ಯರೆಲ್ಲರೂ ಸೇರಿ ಆಯೋಗ ಎನಿಸಿಕೊಳ್ಳುತ್ತದೆ, ಸರ್ವಾನುಮತದ ನಿರ್ಧಾರಗಳು ಮಾತ್ರ ಆಯೋಗದ ನಿರ್ಧಾರ ಎನಿಸಿಕೊಳ್ಳುತ್ತದೆ. ಆದರೆ, ಪ್ರಸ್ತುತ ಕೇಂದ್ರ ಚುನಾವಣಾ ಆಯೋಗದ ನಿರ್ಧಾರಗಳು ಕೇವಲ ಒಬ್ಬ ವ್ಯಕ್ತಿಯ ನಿರ್ಧಾರವಾಗಿರುವುದು ಬಯಲಾಗಿದೆ. ಹೀಗಾಗಿ ಆ ಎಲ್ಲಾ ನಿರ್ಧಾರಗಳ ಆಧಾರದಲ್ಲಿ ನಡೆಯುತ್ತಿರುವ ಪ್ರಕ್ರಿಯೆಗಳು ಕಾನೂನು ಬಾಹಿರ ಮತ್ತು ಅನರ್ಹ ಪ್ರಕ್ರಿಯೆಗಳಾಗಿವೆ.

ಇದರ ಹೊರತಾಗಿ, ಈ ಹಿಂದೆ ರಾಹುಲ್ ಗಾಂಧಿಯವರು  ವೋಟ್ ಚೋರಿಯನ್ನು ಸಾಕ್ಷಿ ಸಮೇತ ದೇಶದ ಮುಂದಿಟ್ಟಾಗ ತಕ್ಷಣವೇ ರಾಜಕೀಯ ಪಕ್ಷದಂತೆ ಪತ್ರಿಕಾಗೋಷ್ಠಿ ನಡೆಸಿದ CEC ಜ್ಞಾನೇಶ್ ಕುಮಾರ್ ಚುನಾವಣಾ ಆಯೋಗದ ವಿಶ್ವಾಸಾರ್ಹತೆಯ ಪ್ರಶ್ನೆ ಎದ್ದಿರುವಾಗ ನಾಪತ್ತೆಯಾಗಿದ್ದಾರೆ. ಅವರು ಪತ್ರಿಕಾಗೋಷ್ಠಿ ಮಾಡುವ ಬದಲು ಬಿಜೆಪಿ ವಕ್ತಾರಿಕೆ ನಡೆಸುತ್ತಿದೆ. ಬಿಜೆಪಿಗೆ ಕೇಳುವ ಒಂದು ಬಹುಮುಖ್ಯ ಪ್ರಶ್ನೆ ಜ್ಞಾನೇಶ್ ಕುಮಾರ್ ರನ್ನು ಎಲ್ಲಿ ಬಚ್ಚಿಟ್ಟಿದ್ದೀರಿ? ಎಂದು ಆಕ್ರೋಶ ಹೊರಹಾಕಿದ್ದಾರೆ.


Spread the love

About Laxminews 24x7

Check Also

ಕಾನ್‌ಸ್ಟೆಬಲ್ ಮೇಲೆ ಗುಂಡು ಹಾರಿಸಿ ಪರಾರಿಯಾಗಿದ್ದ ಆರೋಪಿ ಎನ್‌ಕೌಂಟರ್‌ನಲ್ಲಿ ಸಾವು

Spread the loveಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿರ್ಭುಮ್ ಜಿಲ್ಲೆಯಲ್ಲಿ ಪೊಲೀಸ್ ಕಾನ್‌ಸ್ಟೆಬಲ್ ಮೇಲೆ ಗುಂಡು ಹಾರಿಸಿ ಪರಾರಿಯಾಗಿದ್ದ ಆರೋಪಿ, ಭಾನುವಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ