ನವದೆಹಲಿ: ಕರ್ನಾಟಕದಲ್ಲಿ ಬಿರುಗಾಳಿ ಎಬ್ಬಿಸಿರುವ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ರಾಷ್ಟ್ರ ಮಟ್ಟದಲ್ಲಿ ಸುದ್ದಿಯಾಗುತ್ತಿದ್ದು, ಇದೀಗ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಿಚಿತ್ರ ಟ್ವೀಟ್ ಮಾಡಿದ್ದಾರೆ.
ರಾಜ್ಯದಲ್ಲಿನ ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಟ್ವೀಟ್ ಮಾಡಿರುವ ಪ್ರಿಯಾಂಕಾ ಗಾಂಧಿ, ಹೆಣ್ಣುಮಕ್ಕಳಿಗೆ ಕಿರುಕುಳ ನೀಡುವುದನ್ನು ನಿಲ್ಲಿಸಿ. ಬಟ್ಟೆ ಧರಿಸುವುದು ಹೆಣ್ಣು ಮಕ್ಕಳ ವಿವೇಚನಗೆ ಬಿಟ್ಟದ್ದು ಎಂದು ಹೇಳಿದ್ದಾರೆ.
ಅಲ್ಲದೇ ಬಿಕಿನಿಯಾದರೂ ಧರಿಸಲಿ, ಮುಸುಕು ಆದರೂ ಧರಿಸಲಿ, ಜೀನ್ಸ್ ಆದರೂ ಹಾಕಲಿ ಇಲ್ಲವೇ ಹಿಜಾಬ್ ಆದರೂ ಹಾಕಲಿ. ಅವರಿಗೆ ಬೇಕಾದ ಬಟ್ಟೆ ಧರಿಸುವುದು ಅವರ ಹಕ್ಕಾಗಿರುತ್ತದೆ. ಭಾರತ ಸಂವಿಧಾನವೇ ಇಂತಹ ಹಕ್ಕು ನೀಡಿದೆ. ಹಾಗಾಗಿ ಹೆಣ್ಣುಮಕ್ಕಳಿಗೆ ಕಿರುಕುಳ ನೀಡುವಂತಿಲ್ಲ ಎಂದು ತಿಳಿಸಿದ್ದಾರೆ.