Breaking News

ಪಾಶ್ಚಾಪುರ ಜಿಪಂ ವ್ಯಾಪ್ತಿಯ ಗ್ರಾಮಗಳಲ್ಲಿ ಪ್ರವಾಹದಿಂದಾದ ಹಾನಿ ಪರಿಶೀಲನೆ ಮಾಡಿದ ಪ್ರಿಯಾಂಕಾ ಜಾರಕಿಹೊಳಿ

Spread the love

 

 

ಬೆಳಗಾವಿ: ಕಾಂಗ್ರೆಸ್ ಯುವ ನಾಯಕಿ ಪ್ರಿಯಾಂಕಾ ಜಾರಕಿಹೊಳಿ ಅವರು ಯಮಕನಮರಡಿ ಮತಕ್ಷೇತ್ರದ ಪಾಶ್ಚಾಪುರ ಜಿಲ್ಲಾ ಪಂಚಾಯತ ವ್ಯಾಪ್ತಿಯ ಪಾಶ್ಚಾಪುರ, ಮಾವನೂರ, ಪರಕನಟ್ಟಿ, ಗುಮಚಿನಮರಡಿ, ಕಣವಿನಹಟ್ಟಿ ಗ್ರಾಮಗಳಿಗೆ ಇಂದು ಭೇಟಿ ನೀಡಿ, ಮಳೆ ಹಾಗೂ ಪ್ರವಾಹದಿಂದಾದ ಹಾನಿಯನ್ನು ಪರಿಶೀಲಿಸಿದರು.

ಪ್ರಿಯಾಂಕಾ ಅವರು ಹಾನಿಗೀಡಾಗಿರುವ ಮನೆಗಳನ್ನು ಪರಿಶೀಲಿಸಿ ಸಂತ್ರಸ್ತರಿಗೆ ಸಾಂತ್ವನ ಹೇಳಿದರು. ಬೆಳೆ ಹಾನಿಯನ್ನು ಪರಿಶೀಲಿಸಿ ರೈತರಿಗೆ ಧೈರ್ಯ ತುಂಬಿದರು. ಹದಗೆಟ್ಟಿರುವ ರಸ್ತೆ ಹಾಗೂ ಸೇತುವೆಗಳನ್ನು ವೀಕ್ಷಿಸಿದರು.

 

ಹಾನಿಯ ಬಗ್ಗೆ ಶಾಸಕ ಸತೀಶ ಜಾರಕಿಹೊಳಿ ಅವರ ಗಮನಕ್ಕೆ ತಂದು, ಸಂತ್ರಸ್ತರಿಗೆ ಸರ್ಕಾರದಿಂದ ಸೂಕ್ತ ಪರಿಹಾರ ಕೊಡಿಸಲು ಪ್ರಯತ್ನಿಸಲಾಗುವುದು ಎಂದು ಪ್ರಿಯಾಂಕಾ ಅವರು ಸಂತ್ರಸ್ತರಿಗೆ ಭರವಸೆ ನೀಡಿದರು.

 

ಈ ಸಂದರ್ಭದಲ್ಲಿ ಮುಖಂಡರಾದ ಕುಮಾರ ಗುಡಗನಟ್ಟಿ, ಶಿವಪ್ಪ ಈರನಟ್ಟಿ, ಯಲ್ಲನಾಯ್ಕ ಲಟ್ಟೆ, ಮಂಜುಗೌಡ ಪಾಟೀಲ ಸೇರಿ ಗ್ರಾಮಸ್ಥರು ಹಾಜರಿದ್ದರು.


Spread the love

About Laxminews 24x7

Check Also

ನಮ್ಮದು ಸಣ್ಣ ಪಕ್ಷ, ನಾವ್ಯಾಕೆ ಕಾಂಗ್ರೆಸ್ ಶಾಸಕರನ್ನ ಆಪರೇಷನ್ ಮಾಡೋಣ: ಹೆಚ್‌ಡಿಕೆ

Spread the loveಬೆಂಗಳೂರು: ನಮ್ಮದು ಸಣ್ಣ ಪಕ್ಷ ನಾವ್ಯಾಕೆ ಕಾಂಗ್ರೆಸ್  ಶಾಸಕರನ್ನ ಆಪರೇಷನ್ ಮಾಡೋಣ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ  …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ