Breaking News

ಯುವ ನಾಯಕಿ ಪ್ರಿಯಂಕಾ ಜಾರಕಿಹೊಳಿ ನೇತೃತ್ವದಲ್ಲಿ ಕಾಂಗ್ರೆಸ್ ಮಹಿಳಾ ಮೋರ್ಚಾ ಪ್ರತಿಭಟನೆ

Spread the love

 

 

ಬೆಳಗಾವಿ: ಕೇಂದ್ರ, ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರ, ಜನ ವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಮಹಿಳಾ ಮೋರ್ಚಾ ಕಾರ್ಯಕರ್ತರು ಯುವ ನಾಯಕಿ ಪ್ರಿಯಂಕಾ ಜಾರಕಿಹೊಳಿಯವರ ನೇತೃತ್ವದಲ್ಲಿ ನಗರದ ಕಾಂಗ್ರೆಸ್ ಭವನದಿಂದ ಸುವರ್ಣ ಸೌಧದ ವರಿಗೆ ಟ್ರ್ಯಾಕ್ಟರ್ ಮೂಲಕ ಸಾಗಿ ಬುಧವಾರ ಬೃಹತ್ ಪ್ರತಿಭಟನೆ ನಡೆಸಿದರು.

 

ಈ ಸಂದರ್ಭದಲ್ಲಿ ಯುವ ನಾಯಕಿ ಪ್ರಿಯಂಕಾ ಜಾರಕಿಹೊಳಿ ಮಾತನಾಡಿ, ಇವತ್ತು ಕೇಂದ್ರ ಸರ್ಕಾರ ಸಿಲಿಂಡರ್, ಅಡುಗೆ ಏಣ್ಣೆ ಸೇರಿದಂತೆ ವಿವಿಧ ಆಹಾರ ಪದಾರ್ಥಗಳ ಬೆಲೆ ಹೆಚ್ಚಿಗೆ ಮಾಡಿದ್ದು, ಸಾಮಾನ್ಯ ಜನ ಜೀವನ ನಡೆಸಲು ಕಷ್ಟವಾಗಿದೆ ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

 

ಕರೋನಾ ಬಂದು ಸಾಕಷ್ಟು ಜನ ಕೆಲಸ ಕಳೆದುಕೊಂಡಿದ್ದಾರೆ. ಆದರೆ ಸರ್ಕಾರ ಮಾತ್ರ ಆಹಾರ ಪದಾರ್ಥಗಳ ಬೆಲೆ ಹೆಚ್ಚಿಸಿ ಜನರ ಜೀವನ ಜತೆ ಚೆಲ್ಲಾಟ ಆಡುತ್ತಿದೆ ಎಂದು ದೂರಿದರು.

 

ಶಾಸಕಿ ಅಂಜಲಿ ನಿಂಬಾಳಕರ್ ಪ್ರತಿಭಟನೆಗೆ ಸಾಥ್ ನೀಡಿದರು. ಈ ಸಂದರ್ಭದಲ್ಲಿ ಕೆಪಿಸಿಸಿ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ, ಜಯಶ್ರೀ ಮಾಳಗಿ, ಕಲ್ಪನಾ ದೋಶಿ, ರಕ್ಷಿತಾ ಇಟಿ ಸೇರಿದಂತೆ ಅನೇಕ ಮಹಿಳಾ ಕಾರ್ಯಕರ್ತರು ಇದ್ದರು.


Spread the love

About Laxminews 24x7

Check Also

ಜನರ ಆರೋಗ್ಯ ಕಾಪಾಡುವ ಸರಕಾರದ ಸಂಕಲ್ಪಕ್ಕೆ ಕೈಜೋಡಿಸಿ: ಲಕ್ಷ್ಮೀ ಹೆಬ್ಬಾಳಕರ್

Spread the loveಜನರ ಆರೋಗ್ಯ ಕಾಪಾಡುವ ಸರ್ಕಾರದ ಸಂಕಲ್ಪ ಸಾಕಾರಗೊಳ್ಳಬೇಕಾದರೆ ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳು ಕೈಜೋಡಿಸುವುದು ಅಗತ್ಯ ಎಂದು ಮಹಿಳಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ